Homeಕರ್ನಾಟಕಅನೈತಿಕ ಪೊಲೀಸ್‌ಗಿರಿ: ಮುಸ್ಲಿಂ ಎಂದು ಭಾವಿಸಿ ಪೊಲೀಸ್ ಸಿಬ್ಬಂದಿ-ಪತ್ನಿ ಮೇಲೆ ಸಂಘಪರಿವಾರದ ಕಾರ್ಯಕರ್ತರಿಂದ ಹಲ್ಲೆ

ಅನೈತಿಕ ಪೊಲೀಸ್‌ಗಿರಿ: ಮುಸ್ಲಿಂ ಎಂದು ಭಾವಿಸಿ ಪೊಲೀಸ್ ಸಿಬ್ಬಂದಿ-ಪತ್ನಿ ಮೇಲೆ ಸಂಘಪರಿವಾರದ ಕಾರ್ಯಕರ್ತರಿಂದ ಹಲ್ಲೆ

- Advertisement -
- Advertisement -

ಮುಸ್ಲಿಂ ಎಂದು ಭಾವಿಸಿ ಪೊಲೀಸ್ ಸಿಬ್ಬಂದಿ ಹಾಗೂ ಅವರ ಪತ್ನಿಯ ಮೇಲೆ ಸಂಘಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿದ ಘಟನೆ ಬಂಟ್ವಾಳದ ಬಿ.ಸಿ.ರೋಡ್ ನಲ್ಲಿ ನಡೆದಿದೆ. ಅನೈತಿಕ ಪೊಲೀಸ್ ಗಿರಿ ನಡೆಸಿದ ಸಂಘಪರಿವಾರದ ಇಬ್ಬರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ತುಂಬೆ ನಿವಾಸಿಗಳಾದ ಮನೀಶ್ ಪೂಜಾರಿ ಮತ್ತು ಮಂಜುನಾಥ್ ಆಚಾರ್ಯ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ.

ಬಂಟ್ವಾಳ ಸಂಚಾರ ಠಾಣೆಯ ಪೊಲೀಸ್ ಸಿಬ್ಬಂದಿ, ಪ್ರಸಕ್ತ ಒಒಡಿ ನೆಲೆಯಲ್ಲಿ ಎನ್‌ಐವಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕುಮಾರ್ ಹನಮಂತಪ್ಪ ಅವರ ಕುಟುಂಬದ ಮೇಲೆ ಈ ದಾಳಿ ನಡೆದಿದೆ. ಈ ಬಗ್ಗೆ ಕುಮಾರ್ ಅವರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಮಾರ್ ಅವರ ದೂರಿನ ಮೇರೆಗೆ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 341, 504, 035(ಡಿ), 354(ಎ) ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಘಟನೆಯ ವಿವರ:

ಜು.27ರಂದು ರಾತ್ರಿ ಪತ್ನಿ ಹಾಗೂ ನಾದಿನಿ ಜೊತೆ ಬಿ.ಸಿ.ರೋಡಿನ ಹೊಟೇಲ್ ಒಂದರಲ್ಲಿ ಊಟ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಬಿ.ಸಿ.ರೋಡ್-ಕೈಕುಂಜೆ ರಸ್ತೆಯಲ್ಲಿ ಕುಟುಂಬದೊಟ್ಟಿಗೆ ಕುಮಾರ್ ನಡೆದುಬರುತ್ತಿರುವಾಗ, ಬಾರ್ ಒಂದರ ಮುಂಭಾಗದಲ್ಲಿ ನಿಂತುಕೊಂಡಿದ್ದ ಆರೋಪಿಗಳು ಬೈಕ್‌ನಲ್ಲಿ ಹಿಂಬಾಲಿಸಿದ್ದಾರೆ. ಆಬಳಿಕ ಕುಮಾರ್ ಪತ್ನಿ ಮತ್ತು ನಾದಿನಿಯನ್ನು ವಸತಿಗೃಹದ ಬಳಿ ಬಿಟ್ಟು ಕರ್ತವ್ಯಕ್ಕೆ ಹಿಂತಿರುಗುತ್ತಿದ್ದಂತೆ ಬೈಕ್‌ನಲ್ಲಿ ಬಂದ ಆರೋಪಿಗಳು ಅಡ್ಡಗಟ್ಟಿದ್ದಾರೆ. ಆಗ ಕುಮಾರ್ ಅವರು ತಾನು ಪೊಲೀಸ್ ಎಂದು ಹೇಳಿದರೂ ಕೇಳದ ಆರೋಪಿಗಳು, ”ನೀನು ಪೊಲೀಸ್ ಅಲ್ಲ, ನೀನು ಬ್ಯಾರಿ. ಈಕೆಯನ್ನು ಎಲ್ಲಿಗೆ ಕರೆದುಕೊಂಡು ಹೋಗುತ್ತೀಯಾ?” ಎಂದು ಅಸಭ್ಯವಾಗಿ ವರ್ತಿಸಿದ್ದಾರೆ. ಇಲ್ಲಿನ ವಿಚಾರ ನಿನಗೆ ಗೊತ್ತಿಲ್ಲ ಎಂದು ಬೆದರಿಕೆ ಹಾಕಿ, ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಪತ್ನಿ ಅಲ್ಲಿಗೆ ಓಡಿಬಂದಾಗ ಆಕೆಯ ಮೇಲೂ ಹಲ್ಲೆ ನಡೆಸಲಾಗಿದೆ” ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಗಲಾಟೆಯು ಜೋರಾಗುತ್ತಿದ್ದಂತೆ ಪೊಲೀಸ್  ವಸತಿ ಗೃಹದಲ್ಲಿದ್ದ ಸಹೋದ್ಯೋಗಿಗಳು ಹೊರಬಂದು ಆರೋಪಿಗಳನ್ನು ಸೆರೆಹಿಡಿದಿದ್ದಾರೆ.

ಈ ವೇಳೆ ಕುಮಾರ್ ಅವರ ಪತ್ನಿಯ ವಿಡಿಯೋ ಚಿತ್ರೀಕರಣ ಮಾಡಿರುವ ಆರೋಪಿಗಳು ಅವರ ಮಾನಭಂಗಕ್ಕೆ ಯತ್ನಿಸಿದ್ದಾರೆ ಎಂದು ದೂರು ದಾಖಲಾಗಿದೆ.

ಪೊಲೀಸ್ ಕುಟುಂಬದ ಮಾನಭಂಗಕ್ಕೆ ಯತ್ನಿಸಿದಲ್ಲದೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ: ಹರಿದ್ವಾರ: ಮುಸ್ಲಿಂ ವ್ಯಕ್ತಿಯೆಂದು ಭಾವಿಸಿ RSS-ಬಿಜೆಪಿ ಸದಸ್ಯನ ಮೇಲೆ ಹಲ್ಲೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...