Homeಮುಖಪುಟಅನ್ಯಾಯದ ಕ್ಷೇತ್ರ ಪುನರ್‌ವಿಂಗಡನೆ ರಾಜ್ಯಗಳನ್ನು ರಾಜಕೀಯವಾಗಿ ದುರ್ಬಲಗೊಳಿಸುತ್ತದೆ: ಎಂ.ಕೆ ಸ್ಟಾಲಿನ್

ಅನ್ಯಾಯದ ಕ್ಷೇತ್ರ ಪುನರ್‌ವಿಂಗಡನೆ ರಾಜ್ಯಗಳನ್ನು ರಾಜಕೀಯವಾಗಿ ದುರ್ಬಲಗೊಳಿಸುತ್ತದೆ: ಎಂ.ಕೆ ಸ್ಟಾಲಿನ್

- Advertisement -
- Advertisement -

ಚೆನ್ನೈನಲ್ಲಿ ಶನಿವಾರ (ಮಾ.22) ನಡೆದ ನ್ಯಾಯಯುತ ಕ್ಷೇತ್ರ ಪುನರ್‌ವಿಂಗಡನೆಗಾಗಿ ‘ಜಂಟಿ ಕ್ರಿಯಾ ಸಮಿತಿ’ (ಜೆಎಸಿ) ಸಭೆಯಲ್ಲಿ ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, “ರಾಷ್ಟ್ರದ ಗಮನ ಸೆಳೆಯುವಷ್ಟು ರಾಜಕೀಯ ಶಕ್ತಿ ಇಲ್ಲದ ಕಾರಣ ನ್ಯಾಯಕ್ಕಾಗಿ ಎತ್ತಿರುವ ರಾಜ್ಯದ ಧ್ವನಿಯನ್ನು ನಿರ್ಲಕ್ಷಿಸಲಾಗಿದೆ. ಸಂಸತ್ತಿನಲ್ಲಿ ನಮ್ಮ ಪ್ರಾತಿನಿಧ್ಯ ಕಡಿಮೆಯಾಗುವುದರಿಂದ ನಮ್ಮ ರಾಜಕೀಯ ಶಕ್ತಿ ಕಡಿಮೆಯಾಗುತ್ತದೆ” ಎಂದು ಹೇಳಿದರು.

ಮಣಿಪುರದಲ್ಲಿ ಎರಡು ವರ್ಷಗಳಿಗೂ ಹೆಚ್ಚು ಸಮಯದಿಂದ ಹಿಂಸಾಚಾರ ನಡೆಯುತ್ತಿದ್ದರೂ, ಕೇಂದ್ರ ಸರ್ಕಾರ ಮೌನ ವಹಿಸಿದೆ. ರಾಜಕೀಯ ಬಲ ಇಲ್ಲದ ರಾಜ್ಯಗಳಲ್ಲಿ ಸರ್ಕಾರದ ನಿಷ್ಕ್ರಿಯತೆಗೆ ಇದು ಉದಾಹರಣೆ ಎಂದರು.

“ನಮ್ಮ ಹೋರಾಟ ಕ್ಷೇತ್ರ ಪುನರ್‌ವಿಂಗಡನೆಯ ವಿರುದ್ದವಲ್ಲ, ನ್ಯಾಯಯುತ ಕ್ಷೇತ್ರ ಪುನರ್‌ವಿಂಗಡನೆಗಾಗಿ. ಇದು ಸೀಟುಗಳ ಸಂಖ್ಯೆಯ ವಿಷಯವಲ್ಲ. ಬದಲಾಗಿ, ಇದು ನಮ್ಮ ಅಧಿಕಾರ, ನಮ್ಮ ಹಕ್ಕುಗಳು ಮತ್ತು ನಮ್ಮ ಭವಿಷ್ಯದ ವಿಷಯ” ಎಂದು ಸ್ಟಾಲಿನ್ ಸ್ಪಷ್ಟಪಡಿಸಿದರು.

ರಾಜ್ಯಗಳ ಸ್ವಾಯತ್ತತೆಯನ್ನು ಖಚಿತಪಡಿಸಿಕೊಂಡರೆ ಮಾತ್ರ ಭಾರತದಲ್ಲಿ ಒಕ್ಕೂಟ ವ್ಯವಸ್ಥೆ ಮೇಲುಗೈ ಸಾಧಿಸುತ್ತದೆ ಎಂದು ಅವರು ಒತ್ತಿ ಹೇಳಿದರು.

“ಈ ಹಿಂದೆ ಒಕ್ಕೂಟ ವ್ಯವಸ್ಥೆಗೆ ಬೆದರಿಕೆಗಳು ಬಂದಾಗಲೆಲ್ಲಾ, ವಿವಿಧ ಪ್ರಜಾಪ್ರಭುತ್ವ ಶಕ್ತಿಗಳು ಅವುಗಳನ್ನು ತಡೆಯುತ್ತಿದ್ದವು. ಈಗ, ನಾವು ಅದೇ ರೀತಿಯ ಸವಾಲುಗಳು ಮತ್ತು ಬೆದರಿಕೆಗಳನ್ನು ಎದುರಿಸುತ್ತಿದ್ದೇವೆ” ಎಂದರು.

ಜನಸಂಖ್ಯೆ ಆಧಾರಿತ ಕ್ಷೇತ್ರ ಪುನರ್‌ವಿಂಗಡನೆಯಿಂದಾಗುವ ಹಾನಿಗಳನ್ನು ಪಟ್ಟಿ ಮಾಡಿದ ಸ್ಟಾಲಿನ್ “ಪ್ರಾತಿನಿಧ್ಯ ಕಡಿಮೆಯಾಗುವುದರಿಂದ ರಾಜ್ಯಗಳು ಕೇಂದ್ರದಿಂದ ತಮ್ಮ ಹಣವನ್ನು ಪಡೆಯಲು ಹೆಣಗಾಡುತ್ತವೆ. ಕೇಂದ್ರ ಅನಗತ್ಯ ಕಾನೂನುಗಳನ್ನು ಜಾರಿಗೆ ತರುತ್ತದೆ. ನಮ್ಮ ಜನರ ಮೇಲೆ ಪರಿಣಾಮ ಬೀರುವ ನಿರ್ಧಾರಗಳನ್ನು ನಮ್ಮನ್ನು ಅರ್ಥಮಾಡಿಕೊಳ್ಳದವರು ತೆಗೆದುಕೊಳ್ಳುತ್ತಾರೆ. ಮಹಿಳಾ ಸಬಲೀಕರಣವು ಹಿನ್ನಡೆ ಅನುಭವಿಸುತ್ತದೆ. ವಿದ್ಯಾರ್ಥಿಗಳು ತಮ್ಮ ಅವಕಾಶಗಳನ್ನು ಕಳೆದುಕೊಳ್ಳುತ್ತಾರೆ. ರೈತರು ತಮ್ಮ ಬೆಂಬಲವನ್ನು ಕಳೆದುಕೊಳ್ಳುತ್ತಾರೆ. ನಮ್ಮ ಸಂಸ್ಕೃತಿ, ಗುರುತು, ಪ್ರಗತಿಗೆ ಧಕ್ಕೆಯಾಗುತ್ತದೆ. ಸಾಮಾಜಿಕ ನ್ಯಾಯವು ದುರ್ಬಲಗೊಳ್ಳುತ್ತದೆ. ಎಸ್‌ಸಿ/ಎಸ್‌ಟಿ ಸಮುದಾಯಗಳ ಮೇಲೆ ಪರಿಣಾಮ ಬೀರುತ್ತದೆ” ಎಂದು ವಿವರಿಸಿದರು. “ನಮ್ಮ ದೇಶದಲ್ಲಿಯೇ ನಾವು ರಾಜಕೀಯವಾಗಿ ದುರ್ಬಲರಾಗುತ್ತೇವೆ” ಎಂದರು.

ಭಾರತದ ಒಕ್ಕೂಟ ವ್ಯವಸ್ಥೆಯನ್ನು ರಕ್ಷಿಸುವ ನಿಟ್ಟಿನಲ್ಲಿ ಇಂದಿನ ದಿನ ಮಹತ್ವದ ದಿನವಾಗಿ ಇತಿಹಾಸದ ಪುಟ ಸೇರಲಿದೆ ಎಂದು ಸಿಎಂ ಸ್ಟಾಲಿನ್ ಪುನರುಚ್ಚರಿಸಿದರು.

ಜಾತಿ ಆಧಾರಿತ ಜನಗಣತಿ ಮತ್ತು ಆ ಆಧಾರದ ಮೇಲೆ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡಬೇಕೆಂದು ಕಾಂಗ್ರೆಸ್ ಒತ್ತಾಯಿಸಿದಾಗ, ಜನಸಂಖ್ಯೆಯ ಆಧಾರದ ಮೇಲೆ ಕ್ಷೇತ್ರ ಪುನರ್‌ವಿಂಗಡನೆ ನಡೆದರೆ ದಕ್ಷಿಣ ರಾಜ್ಯಗಳು ಸುಮಾರು 100 ಸ್ಥಾನಗಳನ್ನು ಕಳೆದುಕೊಳ್ಳುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ 2023ರಲ್ಲಿ ತೆಲಂಗಾಣದಲ್ಲಿ ಮಾತನಾಡುತ್ತಾ ಹೇಳಿದ್ದಾರೆ. ‘ದಕ್ಷಿಣದ ರಾಜ್ಯಗಳು ಅದನ್ನು ಸ್ವೀಕರಿಸುತ್ತವೆಯೇ?” ಸ್ಟಾಲಿನ್ ಪ್ರಶ್ನಿಸಿದರು.

ದಕ್ಷಿಣ ರಾಜ್ಯಗಳಲ್ಲಿ ಸ್ಥಾನಗಳ ಸಂಖ್ಯೆ ಕಡಿಮೆಯಾಗಲಿದೆ ಎಂದು ಮೋದಿ ಒಪ್ಪಿಕೊಂಡಿದ್ದಾರೆ. ಆದರೂ, ಕ್ಷೇತ್ರ ಪುನರ್‌ವಿಂಗಡನೆಗೆ ಒತ್ತಾಯಿಸುತ್ತಲೇ ಇದ್ದಾರೆ ಎಂದು ಹೇಳಿದರು. ಬಿಜೆಪಿ ಯಾವಾಗಲೂ ರಾಜ್ಯಗಳ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಈಗಲೂ ತಮ್ಮ ಉದ್ದೇಶಗಳನ್ನು ಪೂರೈಸಲು ಕ್ಷೇತ್ರ ಪುನರ್‌ವಿಂಗಡನೆ ತರುತ್ತಿದ್ದಾರೆ ಎಂದು ಆರೋಪಿಸಿದರು.

ಈ ಬೆದರಿಕೆಯನ್ನು ಅರ್ಥಮಾಡಿಕೊಂಡು, ತಮಿಳುನಾಡು ದೊಡ್ಡ ಒಗ್ಗಟ್ಟಿನಿಂದ ಅದರ ವಿರುದ್ಧ ನಿಂತಿದೆ. ದೇಶದ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಯನ್ನು ರಕ್ಷಿಸುವಲ್ಲಿ ಇದೇ ರೀತಿಯ ಒಗ್ಗಟ್ಟಿಗಾಗಿ ಜೆಎಸಿ ಸಭೆಯಲ್ಲಿ ನಾಯಕರಿಗೆ ನಾನು ಮನವಿ ಮಾಡಿತ್ತಿದ್ದೇನೆ” ಎಂದರು.

ಕ್ಷೇತ್ರ ಪುನರ್‌ವಿಂಗಡನೆಯ ರಾಜಕೀಯ ವಿರೋಧಗಳನ್ನು ಕಾನೂನು ವೇದಿಕೆಗೆ ವಿಸ್ತರಿಸಲು ನಾಯಕರ ಸಲಹೆಗಳನ್ನು ಸ್ಟಾಲಿನ್ ಆಹ್ವಾನಿಸಿದ್ದು, ರಾಜಕೀಯ ಮತ್ತು ಕಾನೂನು ಕ್ರಮಗಳನ್ನು ಕೈಗೊಳ್ಳಲು ‘ತಜ್ಞರ ಸಮಿತಿ’ಯನ್ನು ಪ್ರಸ್ತಾಪಿಸಿದರು.

“ಜನಸಂಖ್ಯೆ ಆಧಾರಿತ ಕ್ಷೇತ್ರ ಪುನರ್‌ವಿಂಗಡನೆ ಅನುಮತಿಸಬಾರದು ಎಂದು ನಾವೆಲ್ಲರೂ ದೃಢಸಂಕಲ್ಪ ಮಾಡಬೇಕು. ಜನಸಂಖ್ಯೆಯನ್ನು ನಿಯಂತ್ರಣದಲ್ಲಿಟ್ಟುಕೊಂಡ ರಾಜ್ಯಗಳನ್ನು ಶಿಕ್ಷಿಸಲು ನಾವು ಬಿಡಬಾರದು” ಎಂದು ಹೇಳಿದರು. ನ್ಯಾಯಯುತವಾದ ಕ್ಷೇತ್ರ ಪುನರ್‌ವಿಂಗಡನೆ ಸಾಧಿಸುವವರೆಗೆ ಹೋರಾಟವನ್ನು ಮುಂದುವರೆಸುವುದಾಗಿ ಸ್ಟಾಲಿನ್ ಒತ್ತಿ ಹೇಳಿದರು.

“ಯಾವುದೇ ಬೆಲೆ ತೆತ್ತಾದರೂ, ಈ ಸಭೆಯಲ್ಲಿ ಉಪಸ್ಥಿತರಿರುವ ರಾಜ್ಯಗಳು ನಮ್ಮ ಸಂಸದೀಯ ಪ್ರಾತಿನಿಧ್ಯ ಕಡಿಮೆಯಾಗಲು ಬಿಡಬಾರದು” ಎಂದು ಅವರು ಮನವಿ ಮಾಡಿದರು.

ಕ್ಷೇತ್ರ ಪುನರ್‌ವಿಂಗಡನೆಯಿಂದ ಪರಿಣಾಮ ಬೀರುವ ಸಾಧ್ಯತೆ ಇರುವ ರಾಜ್ಯಗಳ ರಾಜಕೀಯ ನಾಯಕರಾದ ಕೇರಳ ಸಿಎಂ ಪಿಣರಾಯಿ ವಿಜಯನ್, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಪಂಜಾಬ್ ಸಿಎಂ ಭಗವಂತ್ ಮಾನ್, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೆಎಸಿ ಸಭೆಯಲ್ಲಿ ಭಾಗವಹಿಸಿದ್ದರು.

ಪ್ರಚೋದನಕಾರಿ & ನಿಂದನಾತ್ಮಕ ಹೇಳಿಕೆ | ಯತಿ ನರಸಿಂಹಾನಂದ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...