Homeಮುಖಪುಟರೈತರನ್ನು 'ದೇಶವಿರೋಧಿ' ಎಂದು ಕರೆಯುತ್ತಿರುವುದು ದುರದೃಷ್ಟಕರ: ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿ

ರೈತರನ್ನು ‘ದೇಶವಿರೋಧಿ’ ಎಂದು ಕರೆಯುತ್ತಿರುವುದು ದುರದೃಷ್ಟಕರ: ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿ

- Advertisement -
- Advertisement -

ಈ ದೇಶದ ರೈತರನ್ನು ‘ದೇಶವಿರೋಧಿ’ ಎಂದು ಕರೆಯುತ್ತಿರುವುದು ದುರದೃಷ್ಟಕರ ಎಂದು ಪಂಜಾಬ್ ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ ಪ್ರಧಾನ ಕಾರ್ಯದರ್ಶಿ ಸರ್ವಣ್ ಸಿಂಗ್ ಪಂಧೇರ್ ಹೇಳಿದ್ದಾರೆ.

ದೇಶಾದ್ಯಂತ ಕೋಟ್ಯಂತರ ರೈತರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಾಳೆ ರಾಷ್ಟ್ರ ರಾಜಧಾನಿಗೆ ಪಾದಯಾತ್ರೆ ನಡೆಸಲಿದ್ದಾರೆ. ಮೆರವಣಿಗೆಗೆ ಮುಂಚಿತವಾಗಿ, ದೆಹಲಿ ಪೊಲೀಸರು ಗಾಜಿಪುರ, ಟಿಕ್ರಿ ಮತ್ತು ಸಿಂಘ್‌ ಗಡಿಗಳಲ್ಲಿ ಸೆಕ್ಷನ್ 144ರಡಿಯಲ್ಲಿ ನಿಷೇಧಾಜ್ಞೆ ಹೊರಡಿಸಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಘಾಜಿಪುರ ಗಡಿ ಪ್ರದೇಶದ ಬಳಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ಹರ್ಯಾಣದ ಅಧಿಕಾರಿಗಳು ಫೆಬ್ರವರಿ 13ರವರೆಗೆ ಹರಿಯಾಣದ ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಸೇರಿ ಏಳು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸ್ಥಗಿತಗೊಳಿಸಿದ್ದಾರೆ ಮತ್ತು SMS ಸೇವೆಗಳಿಗೆ ನಿರ್ಬಂಧ ವಿಧಿಸಿದ್ದಾರೆ.

ರೈತರು ನಾಳೆ ಮಧ್ಯಪ್ರದೇಶ, ಕೇರಳ, ಬಿಹಾರ, ಹರ್ಯಾಣ, ಪಂಜಾಬ್ ಮತ್ತು ರಾಜಸ್ಥಾನದಿಂದ ರಾಷ್ಟ್ರ ರಾಜಧಾನಿಗೆ ತಮ್ಮ ಬೇಡಿಕೆಗಳಿಗಾಗಿ ಒತ್ತಾಯಿಸಲು ಕರೆ ನೀಡಲಾದ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪಂಧೇರ್ ಅಮೃತಸರದಲ್ಲಿ ‘ದೆಹಲಿ ಚಲೋ’ಗೆ ಮುಂಚಿತವಾಗಿ ತಿಳಿಸಿದ್ದಾರೆ.

ನಾವು ಇಂದು ಪಂಜಾಬ್‌ನ ಬಿಯಾಸ್ ಪಟ್ಟಣದಿಂದ ಹೊರಟು ಫತೇಘರ್ ಸಾಹಿಬ್‌ನಲ್ಲಿ ಉಳಿಯುತ್ತೇವೆ. ಈ ದೇಶದ ರೈತರನ್ನು ದೇಶವಿರೋಧಿ ಎಂದು ಕರೆಯುತ್ತಿರುವುದು ದುರದೃಷ್ಟಕರ, ಇದನ್ನು ಒಪ್ಪಲಾಗದು. ನಾವು ಈ ದೇಶದ ಪ್ರಜೆಗಳು, ನಾವು ನಮ್ಮ ಬೇಡಿಕೆಗಳನ್ನು ಮುಂದಿಡಲಿದ್ದೇವೆ. ಕಳೆದ ಹಲವು ವರ್ಷಗಳಿಂದ ನಮ್ಮ ಬೇಡಿಕೆಗಳನ್ನು ಈಡೇರಿಸಲಾಗಿಲ್ಲ ಎಂದು ಹೇಳಿದ್ದಾರೆ.

ಪ್ರತಿಭಟನಾನಿರತ ರೈತರು 2021ರಲ್ಲಿ ಈಗ ರದ್ದಾದ ಕೃಷಿ ಕಾನೂನುಗಳ ವಿರುದ್ಧ ತಮ್ಮ ಆಂದೋಲನವನ್ನು ಹಿಂತೆಗೆದುಕೊಳ್ಳುವಾಗ MSP ಬಗ್ಗೆ ಭರವಸೆ ನೀಡಲಾಗಿತ್ತು, ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ, ರೈತರು ಮತ್ತು ರೈತ ಕಾರ್ಮಿಕರಿಗೆ ಪಿಂಚಣಿ, ಕೃಷಿ ಸಾಲ ಮನ್ನಾ, ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದು ಮತ್ತು ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ “ನ್ಯಾಯ” ಕ್ಕಾಗಿ ಒತ್ತಾಯಿಸಿ ಪ್ರತಿಭಟನೆ ನಡೆಯಲಿದೆ. ರೈತರು ಶಾಂತಿಯುತವಾಗಿ ಮೆರವಣಿಗೆ ನಡೆಸುತ್ತಾರೆ, ನಾವು ನಮ್ಮ ಬೇಡಿಕೆಗಳಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲಿದ್ದೇವೆ ಎಂದು ಹೇಳಿದ್ದಾರೆ.

‘ದೆಹಲಿ ಚಲೋ’ ಮೆರವಣಿಗೆಗೆ ಮುಂಚಿತವಾಗಿ ಅಂಬಾಲಾ, ಜಿಂದ್ ಮತ್ತು ಫತೇಹಾಬಾದ್ ಜಿಲ್ಲೆಗಳಲ್ಲಿ ಪಂಜಾಬ್-ಹರಿಯಾಣ ಗಡಿಗಳನ್ನು ಮುಚ್ಚಲು  ವ್ಯವಸ್ಥೆಗಳು ನಡೆಯುತ್ತಿವೆ. ದೆಹಲಿಯ ಮೂರು ಗಡಿ ಪ್ರದೇಶಗಳಲ್ಲಿ ಕೇಂದ್ರ ಸಶಸ್ತ್ರ ಪಡೆಗಳನ್ನು ನಿಯೋಜಿಸಲಾಗಿದೆ. ದೆಹಲಿ ಪೊಲೀಸರು ಈಶಾನ್ಯ ದೆಹಲಿಯಲ್ಲಿ ಮತ್ತು ನೆರೆಯ ಉತ್ತರಪ್ರದೇಶದ ಗಡಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಪ್ಪಿಸಲು ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಲು 144ಸೆಕ್ಸನ್‌ನ್ನು ವಿಧಿಸಿದ್ದಾರೆ.

ಇದನ್ನು ಓದಿ: ರೈತರ ‘ದಿಲ್ಲಿ ಚಲೋ’: 2 ಕ್ರೀಡಾಂಗಣಗಳನ್ನು ಜೈಲನ್ನಾಗಿ ಸಿದ್ಧಪಡಿಸಿದ ಬಿಜೆಪಿ ಸರಕಾರ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪನ್ನೂನ್‌ ಹತ್ಯೆ ಸಂಚು: ವಾಷಿಂಗ್ಟನ್ ಪೋಸ್ಟ್ ವರದಿಗೆ ಅಮೆರಿಕ ಪ್ರತಿಕ್ರಿಯೆ

0
ಸಿಖ್ ಪ್ರತ್ಯೇಕತಾವಾದಿ ನಾಯಕ ಗುರುಪತ್ವಂತ್ ಸಿಂಗ್ ಪನ್ನೂನ್‌ ಹತ್ಯೆಯ ಸಂಚಿಗೆ ಸಂಬಂಧಿಸಿದ 'ದಿ ವಾಷಿಂಗ್ಟನ್ ಪೋಸ್ಟ್ ವರದಿ' ಬೆನ್ನಲ್ಲಿ ಆರೋಪಗಳ ಬಗ್ಗೆ ತನಿಖೆಗೆ ಭಾರತ ಸರ್ಕಾರದೊಂದಿಗೆ ನಿಯಮಿತವಾಗಿ ಕೆಲಸ ಮಾಡುತ್ತಿದೆ ಎಂದು ಅಮೆರಿಕ...