Homeಮುಖಪುಟಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

- Advertisement -
- Advertisement -

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

ದೆಹಲಿಯ ರಫಿ ಮಾರ್ಗದಲ್ಲಿರುವ ಪ್ರಮುಖ ಆಸ್ತಿ ವಿವಾದದಲ್ಲಿ ಕೇಂದ್ರ ಸರ್ಕಾರದ ಪರವಾಗಿ ತೀರ್ಪು ನೀಡಿದ ದೆಹಲಿ ಹೈಕೋರ್ಟ್ ಆದೇಶದಂತೆ ಕಾರ್ಯಪ್ರವೃತ್ತರಾದ ಪೊಲೀಸರು ಮತ್ತು ಕೇಂದ್ರ ಪಡೆಗಳು, ಪತ್ರಕರ್ತರೊಂದಿಗೆ ನೂಕಾಟ-ತಳ್ಳಾಟದ ನಡುವೆಯೇ ಮಾಧ್ಯಮ ಕಚೇರಿಗೆ ಬೀಗ ಜಡಿದು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ.

ಭದ್ರತಾ ಸಿಬ್ಬಂದಿಯ ವರ್ತನೆಯನ್ನು ಖಂಡಿಸಿರುವ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ, “ಹೈಕೋರ್ಟ್ ಆದೇಶವನ್ನು ಜಾರಿಗೆ ತರುವ ಅಗತ್ಯವನ್ನು ಗಿಲ್ಡ್ ಪ್ರಶ್ನಿಸುವುದಿಲ್ಲ, ಆದರೆ, ಸರಿಯಾದ ಪ್ರಕ್ರಿಯೆಯ ಕೊರತೆ ಮತ್ತು ನ್ಯಾಯಾಲಯದ ನಿರ್ದೇಶನಗಳನ್ನು ಜಾರಿಗೊಳಿಸುವಲ್ಲಿ ಅಧಿಕಾರಿಗಳು ಪ್ರದರ್ಶಿಸಿದ ಅತಿಯಾದ ಬಲಪ್ರಯೋಗ ಇಲ್ಲಿ ಆತಂಕಕಾರಿ ವಿಷಯ” ಎಂದಿದೆ.

“ಹೈಕೋರ್ಟ್ ಆದೇಶವು ಅದರ ವೆಬ್‌ಸೈಟ್‌ನಲ್ಲಿ ಪ್ರಕಟಗೊಳ್ಳುವ ಮೊದಲೇ, ನೂರಾರು ಪೊಲೀಸರು ಮತ್ತು ಅರೆಸೇನಾ ಪಡೆಗಳ ಸಿಬ್ಬಂದಿ ಯುಎನ್‌ಐ ಆವರಣಕ್ಕೆ ಆಗಮಿಸಿದ್ದರು. ಮಹಿಳಾ ಸಿಬ್ಬಂದಿ ಸೇರಿದಂತೆ ಪತ್ರಕರ್ತರು ತಮ್ಮ ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಅವರನ್ನು ಬಲವಂತವಾಗಿ ಹೊರಹಾಕಿದ್ದಾರೆ” ಎಂದು ಎಡಿಟರ್ಸ್ ಗಿಲ್ಡ್ ಹೇಳಿದೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಕೂಡ ಭದ್ರತಾ ಸಿಬ್ಬಂದಿಯ ದಮನಕಾರಿ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿದೆ.

ಶನಿವಾರ ಸಿಪಿಎಂ ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿ, “ಇಂತಹ ದಬ್ಬಾಳಿಕೆ, ಮುನ್ಸೂಚನೆಯ ನಿರಾಕರಣೆ, ವೈಯಕ್ತಿಕ ವಸ್ತುಗಳನ್ನು ಸಂಗ್ರಹಿಸಿಕೊಳ್ಳಲು ಸಮಯ ನೀಡದಿರುವುದು ಮತ್ತು ಮಹಿಳಾ ಸಿಬ್ಬಂದಿ ಸೇರಿದಂತೆ ಎಲ್ಲರನ್ನೂ ನಡೆಸಿಕೊಂಡ ರೀತಿ ವರದಿಯಾಗಿರುವುದು ಪ್ರಜಾಪ್ರಭುತ್ವದಲ್ಲಿ ಸ್ವೀಕಾರಾರ್ಹವಲ್ಲ. ನ್ಯಾಯಾಲಯದ ಆದೇಶದ ನೆಪದಲ್ಲಿ ಇದನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಬೆದರಿಕೆಯ ನೆರಳಿನಲ್ಲಿ ಮುಕ್ತ ಪತ್ರಿಕೋದ್ಯಮ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ” ಎಂದಿದ್ದಾರೆ.

ಪತ್ರಕರ್ತರ ಮೇಲೆ ದಬ್ಬಾಳಿಕೆ ನಡೆಸಿರುವ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿರುವ ಪ್ರೆಸ್ ಕ್ಲಬ್ ಆಫ್ ಇಂಡಿಯಾ, ಇಂತಹ ದುರ್ನಡತೆಗೆ ಕಾರಣರಾದವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳನ್ನು ಒತ್ತಾಯಿಸಿದೆ. ಇದು “ಪತ್ರಿಕಾರಂಗದ ಕೆಲಸ ಮಾಡುವ ಹಕ್ಕು ಪ್ರಜಾಪ್ರಭುತ್ವದ ಪ್ರಮುಖ ಭಾಗವಾಗಿದೆ ಎಂಬ ವಿಶ್ವಾಸವನ್ನು ಪತ್ರಕರ್ತರ ಸಮುದಾಯದಲ್ಲಿ ಮೂಡಿಸಲು ಸಹಾಯ ಮಾಡುತ್ತದೆ” ಎಂದು ಅದು ಹೇಳಿದೆ.

ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಇತ್ತೀಚಿನ ವರ್ಷಗಳಲ್ಲಿ ಮಾಧ್ಯಮಗಳ ಮೇಲೆ ನಡೆದ ದಮನಕಾರಿ ಕ್ರಮಗಳ ಹಲವಾರು ನಿದರ್ಶನಗಳನ್ನು ಪಟ್ಟಿ ಮಾಡಿದ್ದಾರೆ. ಇದರಲ್ಲಿ ಎನ್‌ಡಿಟಿವಿ ಮತ್ತು ಬಿಬಿಸಿ ವಿರುದ್ಧದ ಪ್ರಕರಣಗಳು ಹಾಗೂ ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದ ಮೇಲೆ 2022ರಲ್ಲಿ ಜಾರ್ಖಂಡ್‌ನಲ್ಲಿ ಪತ್ರಕರ್ತ ರೂಪೇಶ್ ಸಿಂಗ್ ಅವರ ಬಂಧನವನ್ನೂ ಅವರು ಉಲ್ಲೇಖಿಸಿದ್ದಾರೆ.

ರಣದೀಪ್ ಸುರ್ಜೇವಾಲಾ ಅವರು ತಮ್ಮ ಎಕ್ಸ್ ಪೋಸ್ಟ್‌ನಲ್ಲಿ “ಯುಎನ್‌ಐ (ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ) ಆವರಣದಲ್ಲಿ ಪತ್ರಕರ್ತರೊಂದಿಗೆ ಪೊಲೀಸರು ಮತ್ತು ಅರೆಸೇನಾ ಪಡೆಗಳು ವರ್ತಿಸಿದ ರೀತಿ ಒಂದು ವಿಷಯವನ್ನು ಸ್ಪಷ್ಟಪಡಿಸುತ್ತದೆ: ಇದು ಬಿಜೆಪಿ ಸರ್ಕಾರದ ಹಿಟ್ಲರ್ ಮಾದರಿಯ ಸರ್ವಾಧಿಕಾರಿ ಆದೇಶ. ನೀವು ಅತಿಯಾಗಿ ಮಾತನಾಡಿದರೆ ನಿಮ್ಮನ್ನು ಹತ್ತಿಕ್ಕಲಾಗುತ್ತದೆ, ನಿಮ್ಮನ್ನು ಹೊಸುಕಿ ಹಾಕಲಾಗುತ್ತದೆ…. ಇದು ಕೇವಲ ಒಂದು ಬಾರಿ ನಡೆದ ಘಟನೆಯಲ್ಲ, ಇದೊಂದು ಕ್ರಮಬದ್ಧ ವಿಧಾನ. ಶರಣಾಗಿ, ಸಾಷ್ಟಾಂಗ ನಮಸ್ಕಾರ ಮಾಡಿ, ಇಲ್ಲದಿದ್ದರೆ ಅಧಿಕಾರದ ದಂಡವು ನಿಮ್ಮ ಮೇಲೆ ಪ್ರಹಾರ ಮಾಡುತ್ತದೆ” ಎಂದು ಬರೆದುಕೊಂಡಿದ್ದಾರೆ.

2025ರ ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ 180 ದೇಶಗಳ ಪೈಕಿ ಭಾರತವು 151ನೇ ಸ್ಥಾನದಲ್ಲಿದೆ ಮತ್ತು 2024ರಲ್ಲಿ 159ನೇ ಸ್ಥಾನದಲ್ಲಿತ್ತು ಎಂದು ಅವರು ಹೇಳಿದ್ದಾರೆ. ಮುಂದುವರಿದು, “ಭಾರತದಲ್ಲಿ ನಿಷ್ಪಕ್ಷಪಾತ ಮಾಧ್ಯಮಗಳಿಗೆ ಅವಕಾಶವೇ ಇಲ್ಲ ಎಂದು ಇಡೀ ಜಗತ್ತು ಏಕಕಂಠದಿಂದ ಹೇಳುತ್ತಿದೆ” ಎಂದಿದ್ದಾರೆ.

ಪ್ರೆಸ್ ಕ್ಲಬ್ ಆಫ್ ಇಂಡಿಯಾ ಮತ್ತು ಇತರ ಮಾಧ್ಯಮ ಸಂಸ್ಥೆಗಳು ಸಹ ಈ ದಮನಕಾರಿ ಕ್ರಮವನ್ನು ತೀವ್ರವಾಗಿ ಖಂಡಿಸಿವೆ.

ಇಂಡಿಯನ್ ವುಮೆನ್ಸ್ ಪ್ರೆಸ್ ಕಾರ್ಪ್ಸ್ ತನ್ನ ಹೇಳಿಕೆಯಲ್ಲಿ, “ಈ ಪ್ರಕರಣದ ಕಾನೂನು ಅಂಶಗಳು ಮತ್ತು ಹೈಕೋರ್ಟ್‌ನ ತೀರ್ಪು ಸಾರ್ವಜನಿಕ ವಲಯದಲ್ಲಿ ಲಭ್ಯವಿದೆ ಮತ್ತು ಅದು ತನ್ನದೇ ಆದ ಹಾದಿಯನ್ನು ಅನುಸರಿಸುತ್ತದೆ ಎಂಬುದು ಅರ್ಥವಾಗುವಂತಹ ವಿಷಯ. ಆದರೆ, ರಾಷ್ಟ್ರ ರಾಜಧಾನಿಯ ಅತ್ಯಂತ ಹಳೆಯ ಮತ್ತು ಅತ್ಯಂತ ಗೌರವಾನ್ವಿತ ಮಾಧ್ಯಮ ಸಂಸ್ಥೆಗಳಲ್ಲಿ ಒಂದಾದ ಯುಎನ್‌ಐನ ಸುದ್ದಿಮನೆಯು ಇಂತಹ ದೃಶ್ಯಗಳಿಗೆ ಸಾಕ್ಷಿಯಾಗುತ್ತಿರುವುದು ನಿಜಕ್ಕೂ ಆಘಾತಕಾರಿ ಸಂಗತಿಯಾಗಿದೆ” ಎಂದು ಹೇಳಿದೆ.

“ಇವುಗಳು ಸಂಸ್ಥೆಯ ಘನತೆಯನ್ನು ಕುಂದಿಸುತ್ತವೆ, ಪತ್ರಿಕಾ ಸ್ವಾತಂತ್ರ್ಯವನ್ನು ಅಪಾಯಕ್ಕೆ ಸಿಲುಕಿಸುತ್ತವೆ ಮತ್ತು ಇದನ್ನು ಒಂದು ಗಂಭೀರ ಲೋಪ ಎಂದು ಪರಿಗಣಿಸಬಹುದು, ಅದರಲ್ಲೂ ವಿಶೇಷವಾಗಿ ಈ ವೃತ್ತಿಯಲ್ಲಿರುವ ಮಹಿಳೆಯರ ಸುರಕ್ಷತೆ ಮತ್ತು ಗೌರವದ ವಿಷಯದಲ್ಲಿ ಇದು ದೊಡ್ಡ ಹಿನ್ನಡೆಯಾಗಿದೆ” ಎಂದಿದೆ.

ದೆಹಲಿ ಪತ್ರಕರ್ತರ ಸಂಘವು ಸಹ ಪೊಲೀಸರ ದಬ್ಬಾಳಿಕೆಯನ್ನು ತೀವ್ರವಾಗಿ ಖಂಡಿಸಿದೆ.

“ದೆಹಲಿಯ ಹೃದಯಭಾಗದಲ್ಲಿರುವ ಯುಎನ್‌ಐನ ಗುತ್ತಿಗೆ ಭೂಮಿ ಮತ್ತು ಕಚೇರಿಯು ದೀರ್ಘಕಾಲದಿಂದಲೂ ಪ್ರಮುಖ ಗುರಿಯಾಗಿದೆ, ವಿವಿಧ ಮಾಧ್ಯಮ ಸಂಸ್ಥೆಗಳು ಅದರ ನಿಯಂತ್ರಣ ಮತ್ತು ಮಾಲೀಕತ್ವಕ್ಕಾಗಿ ಪೈಪೋಟಿ ನಡೆಸುತ್ತಿವೆ. ಕೇಂದ್ರ ಸರ್ಕಾರವು ಗುತ್ತಿಗೆಯನ್ನು ರದ್ದುಗೊಳಿಸುವ ಮೂಲಕ ಈ ಸುದ್ದಿ ಸಂಸ್ಥೆಗೆ ಮರಣಾಂತಿಕ ಹೊಡೆತ ನೀಡಿದೆ….” ಎಂದು ಹೇಳಿದೆ.

“ಪ್ರಸ್ತುತ ಹೊಸ ಸವಾಲನ್ನು ಎದುರಿಸುತ್ತಿರುವ ಯುಎನ್‌ಐ ಉದ್ಯೋಗಿಗಳ ಬಗ್ಗೆ ನಮಗೆ ಅಪಾರ ಅನುಕಂಪವಿದೆ. ಈ ಸುದ್ದಿ ಸಂಸ್ಥೆಯನ್ನು ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿಯನ್ನು ಹೊರಲು, ಹಾಗೂ ಪತ್ರಕರ್ತರಿಗೆ ಮತ್ತು ಇತರ ಉದ್ಯೋಗಿಗಳಿಗೆ ಬರಬೇಕಾದ ಸಂಪೂರ್ಣ ಬಾಕಿ ಹಣವನ್ನು ಪಾವತಿಸಲು ನಾವು ‘ದಿ ಸ್ಟೇಟ್ಸ್‌ಮನ್’ ಆಡಳಿತ ಮಂಡಳಿಗೆ ಕರೆ ನೀಡುತ್ತೇವೆ” ಎಂದು ಅದು ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...