Homeಮುಖಪುಟಏಕರೂಪ ನಾಗರಿಕ ಸಂಹಿತೆ ಭಾರತದ ಕಲ್ಪನೆಗೆ ವಿರುದ್ಧವಾಗಿದೆ: ಬಿಜೆಪಿ ಮಿತ್ರ ಪಕ್ಷದಿಂದಲೂ ವಿರೋಧ

ಏಕರೂಪ ನಾಗರಿಕ ಸಂಹಿತೆ ಭಾರತದ ಕಲ್ಪನೆಗೆ ವಿರುದ್ಧವಾಗಿದೆ: ಬಿಜೆಪಿ ಮಿತ್ರ ಪಕ್ಷದಿಂದಲೂ ವಿರೋಧ

- Advertisement -
- Advertisement -

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿ ಮಾಡುವ ಕುರಿತು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ ಬಳಿಕ ವಿರೋಧ ಪಕ್ಷಗಳಲ್ಲಿ ಮಾತ್ರವಲ್ಲದೆ ಬಿಜೆಪಿಯ ಮಿತ್ರಪಕ್ಷಗಳು ವಿರೋಧ ವ್ಯಕ್ತಪಡಿಸಿವೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗಮಾ ಅವರು, ಏಕರೂಪ ನಾಗರಿಕ ಸಂಹಿತೆಯು ಭಾರತದ ಕಲ್ಪನೆಗೆ ವಿರುದ್ಧವಾಗಿ ಎಂದು ಹೇಳಿದ್ದಾರೆ.

ನ್ಯಾಷನಲ್ ಪೀಪಲ್ಸ್ ಪಾರ್ಟಿ ಸುಪ್ರಿಮೊ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ, ”ವೈವಿಧ್ಯತೆಯು ಭಾರತದ ಶಕ್ತಿಯಾಗಿದೆ ಮತ್ತು UCC ತನ್ನ ಪ್ರಸ್ತುತ ರೂಪದಲ್ಲಿ ಈ ಕಲ್ಪನೆಗೆ ವಿರುದ್ಧವಾಗಿ ಹೋಗುತ್ತದೆ” ಎಂದು ಹೇಳಿತು.

ಏಕರೂಪ ನಾಗರಿಕ ಸಂಹಿತೆಯು ಎಲ್ಲಾ ನಾಗರಿಕರ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ದತ್ತು ಪಡೆಯುವುದು ಮುಂತಾದ ವೈಯಕ್ತಿಕ ವಿಷಯಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನುಗಳನ್ನು ಸೂಚಿಸುತ್ತದೆ.

ಈಶಾನ್ಯ ರಾಜ್ಯಗಳು ವಿಶಿಷ್ಟ ಸಂಸ್ಕೃತಿಯನ್ನು ಹೊಂದಿದೆ ಮತ್ತು ಅಸನ್ನು ಉಳಿಸಿಕೊಳ್ಳಲು ಬಯಸುತ್ತದೆ ಎಂದು ಸಂಗ್ಮಾ ಹೇಳಿದರು.

”ಮೇಘಾಲಯದಲ್ಲಿ ವಿಭಿನ್ನ ಸಂಸ್ಕೃತಿಗಳಿವೆ ಇವುಗಳನ್ನು ಬದಲಾಯಿಸಲಾಗುವುದಿಲ್ಲ. ಭಾರತವು ವೈವಿಧ್ಯಮಯ ರಾಷ್ಟ್ರ ಎಂಬ ಕಲ್ಪನೆಗೆ ವಿರುದ್ಧವಾಗಿ ಯುಸಿಸಿ ಹೋಗುತ್ತದೆ ಎಂದು ಎನ್‌ಪಿಪಿ ಭಾವಿಸುತ್ತದೆ, ವೈವಿಧ್ಯತೆಯು ನಮ್ಮ ಶಕ್ತಿ ಮತ್ತು ಗುರುತಾಗಿದೆ” ಎಂದು ಅವರು ಹೇಳಿದರು.

ಏಕರೂಪ ನಾಗರಿಕ ಸಂಹಿತೆ ಜಾರಿ ಕುರಿತು ಪ್ರಧಾನ ಮಂತ್ರಿಯವರ ಹೇಳಿಕೆಗೆ ಭೋಪಾಲ್‌ನಲ್ಲಿ ನಡೆದ ರ್ಯಾಲಿಯಲ್ಲಿ ವಿರೋಧ ಮತ್ತು ಟೀಕೆಗಳು ವ್ಯಕ್ತವಾದವು. ಇದು “ಧ್ರುವೀಕರಣ”ದ ತಂತ್ರ ಎಂದು ಟೀಕಿಸಲಾಯಿತು.

ಇದನ್ನೂ ಓದಿ: ಯುಸಿಸಿ ಜಾರಿ ಮುನ್ನ ಮರುಚಿಂತಿಸದಿದ್ರೆ ಪ್ರತಿರೋಧ ಎದುರಿಸಬೇಕಾಗುತ್ತದೆ: ಕೇಂದ್ರಕ್ಕೆ ಫಾರೂಕ್ ಅಬ್ದುಲ್ಲಾ ಎಚ್ಚರಿಕೆ

ವಿರೋಧ ಪಕ್ಷಗಳಿಂದಲೂ ಟೀಕೆ: 

”ಏಕರೂಪ ನಾಗರಿಕ ಸಂಹಿತೆಯಂತಹ ಕಾನೂನು ಜಾರಿಗೆ ಬಂದರೆ ಬುಡಕಟ್ಟು ಜನಾಂಗದವರ ಸಂಸ್ಕೃತಿ ಮತ್ತು ಸಂಪ್ರದಾಯಗಳಿಗೆ ಹೊಡೆತ ಬೀಳುತ್ತದೆ” ಎಂದು ಕಾಂಗ್ರೆಸ್ ನಾಯಕ ಮತ್ತು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹೇಳಿದ್ದಾರೆ.

”ನೀವು [ಬಿಜೆಪಿ] ಯಾವಾಗಲೂ ಹಿಂದೂ-ಮುಸ್ಲಿಂ ದೃಷ್ಟಿಕೋನದಿಂದ ಏಕೆ ಯೋಚಿಸುತ್ತೀರಿ?” ಎಂದು ಬಾಘೆಲ್ ಕೇಳಿದ್ದಾರೆ. ”ಛತ್ತೀಸ್‌ಗಢದಲ್ಲಿ ನಮ್ಮಲ್ಲಿ ಬುಡಕಟ್ಟು ಜನರಿದ್ದಾರೆ. ಅವರು ನಂಬಿಕೆಗಳು ಮತ್ತು ಸಾಂಪ್ರದಾಯಿಕ ನಿಯಮಗಳಿಗೆ ತೊಂದರೆಯಾಗುವುದಿಲ್ಲವೇ? ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಂದರೆ ಅವರ ಸಂಪ್ರದಾಯಕ್ಕೆ ಏನಾಗುಬಹುದು? ಎಂದು ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿದ ರಾಷ್ಟ್ರೀಯ ಜನತಾ ದಳ ಸಂಸದ ಮನೋಜ್ ಝಾ ಅವರು, ”ಮಾತನಾಡುವ ಮೊದಲು, ಪ್ರಧಾನ ಮಂತ್ರಿಯವರು 21 ನೇ ಕಾನೂನು ಆಯೋಗವು ಏನು ಹೇಳಿದೆ ಎಂಬುದನ್ನು ಪರಿಶೀಲಿಸಬೇಕು ಮತ್ತುಸಂವಿಧಾನ ಸಭೆಯ ಚರ್ಚೆಗಳನ್ನು ಆಳವಾಗಿ ವಿಶ್ಲೇಷಿಸಬೇಕು. ಏಕೆಂದರೆ ನಿಮಗೆ ಸಹಾಯ ಮಾಡಲು ಹೊರಟವರು ನಿಮಗೆ ಹಾನಿಯನ್ನುಂಟುಮಾಡುತ್ತಾರೆ” ಎಂದು ಎಚ್ಚರಿಸಿದರು.

21ನೇ ಕಾನೂನು ಆಯೋಗವು ಆಗಸ್ಟ್ 31, 2018ರಂದು ಸಮಾಲೋಚನಾ ಪತ್ರವನ್ನು ಬಿಡುಗಡೆ ಮಾಡಿತು, “ಈ ಹಂತದಲ್ಲಿ ಏಕರೂಪ ನಾಗರಿಕ ಸಂಹಿತೆ ಅಗತ್ಯವೂ ಅಲ್ಲ ಅಥವಾ ಅಪೇಕ್ಷಣೀಯವೂ ಅಲ್ಲ” ಎಂದು ಹೇಳಿದೆ. ತಾರತಮ್ಯ ತಡೆಯಲು ವಿವಿಧ ಧರ್ಮಗಳ ವೈಯಕ್ತಿಕ ಕಾನೂನುಗಳನ್ನು ತಿದ್ದುಪಡಿ ಮಾಡಿ ಕ್ರೋಡೀಕರಿಸಬೇಕು ಎಂದು ಶಿಫಾರಸು ಮಾಡಿತ್ತು.

ದ್ರಾವಿಡ ಮುನ್ನೇತ್ರ ಕಳಗಂ ನಾಯಕ ಟಿಕೆಎಸ್ ಇಳಂಗೋವನ್ ಅವರು ಮಾತನಾಡಿ, ”ಹಿಂದೂಗಳಿಗೆ ಈ ಏಕರೂಪ ನಾಗರಿಕ ಸಂಹಿತೆಯನ್ನು ಅನ್ವಯಿಸಬೇಕು. ಆಗ ”ಎಲ್ಲಾ ಜಾತಿಯ ಜನರಿಗೂ ದೇವಾಲಯಗಳಲ್ಲಿ ಪ್ರಾರ್ಥನೆ ಮಾಡಲು ಅವಕಾಶ ಸಿಗುತ್ತದೆ” ಎಂದು ಹೇಳಿದ್ದಾರೆ.

”ದೇಶದ ಎಲ್ಲಾ ದೇವಸ್ಥಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ಸೇರಿದಂತೆ ಪ್ರತಿಯೊಬ್ಬರಿಗೂ ಪೂಜೆ ಮಾಡಲು ಅವಕಾಶ ನೀಡಬೇಕು ಹಾಗಾಗಿ ಹಿಂದೂ ಧರ್ಮದಲ್ಲಿ ಮೊದಲು ಏಕರೂಪ ನಾಗರಿಕ ಸಂಹಿತೆ ಜಾರಿಯಾಗಬೇಕು. ನಮಗೆ ಏಕರೂಪ ನಾಗರಿಕ ಸಂಹಿತೆ ಬೇಡ ಏಕೆಂದರೆ ಸಂವಿಧಾನವು ಪ್ರತಿಯೊಂದು ಧರ್ಮಕ್ಕೂ ರಕ್ಷಣೆ ನೀಡಿದೆ” ಎಂದರು.

ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು, ”ದೇಶದ ಬಹುತ್ವ ಮತ್ತು ವೈವಿಧ್ಯತೆಯನ್ನು “ಕಿತ್ತುಕೊಳ್ಳುತ್ತಾರೆಯೇ?” ಎಂದು ಕೇಳುವ ಮೂಲಕ ಮೋದಿಯವರ ಹೇಳಿಕೆಯನ್ನು ಟೀಕಿಸಿದ್ದಾರೆ.

”ಮೋದಿ ಜಿ ಪಾಕಿಸ್ತಾನದ ಕಾನೂನಿನಿಂದ ಏಕೆ ಸ್ಫೂರ್ತಿ ಪಡೆಯುತ್ತಿದ್ದಾರೆ?” ಎಂದು ಓವೈಸಿ ಕೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ”ಅವರು [ಮೋದಿ] ಇಲ್ಲಿ ತ್ರಿವಳಿ ತಲಾಖ್ ವಿರುದ್ಧ ಕಾನೂನನ್ನು ಸಹ ಮಾಡಿದರು, ಆದರೆ ನೆಲದ ಮಟ್ಟದಲ್ಲಿ ಯಾವುದೇ ವ್ಯತ್ಯಾಸವನ್ನು ಮಾಡಲಿಲ್ಲ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...