Homeಮುಖಪುಟಉತ್ತರಾಖಂಡ ವಿಧಾನಸಭೆಯಲ್ಲಿ ಸಮಾನ ನಾಗರಿಕ ಸಂಹಿತೆ ಮಸೂದೆ ಮಂಡನೆ

ಉತ್ತರಾಖಂಡ ವಿಧಾನಸಭೆಯಲ್ಲಿ ಸಮಾನ ನಾಗರಿಕ ಸಂಹಿತೆ ಮಸೂದೆ ಮಂಡನೆ

- Advertisement -
- Advertisement -

ಉತ್ತರಾಖಂಡ ವಿಧಾನಸಭೆಯಲ್ಲಿ ಇಂದು (ಫೆ.6) ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆ ಮಂಡಿಸಲಾಗಿದೆ. ನಿನ್ನೆ ಮಸೂದೆ ಕುರಿತು ಮಾತನಾಡಿದ್ದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ “ಯುಸಿಸಿಯು ರಾಜ್ಯದ ಎಲ್ಲಾ ವರ್ಗಗಳ ಒಳಿತಿಗಾಗಿ ಮಾತ್ರವಲ್ಲದೆ ಪ್ರಧಾನಿ ನರೇಂದ್ರ ಮೋದಿಯವರ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಮತ್ತು ‘ಏಕ್ ಭಾರತ್, ಶ್ರೇಷ್ಠ ಭಾರತ್’ ದೃಷ್ಟಿಗೆ ಹೊಂದಿಕೆಯಾಗಲಿದೆ ಎಂದು ಹೇಳಿದ್ದಾರೆ.

ವರದಿಗಳ ಪ್ರಕಾರ, ಯುಸಿಸಿ ಅನುಷ್ಠಾನ ಸಂಬಂಧ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇತೃತ್ವದಲ್ಲಿ ಸರ್ಕಾರ ನೇಮಿಸಿದ್ದ ಸಮಿತಿಯು ನಾಲ್ಕು ಸಂಪುಟಗಳ 749 ಪುಟಗಳ ವರದಿಯನ್ನು ಸಲ್ಲಿಸಿತ್ತು. ಇದಕ್ಕೂ ಮುನ್ನ ಸಮಿತಿಯು ಆನ್‌ಲೈನ್‌ನಲ್ಲಿ 2.33 ಲಕ್ಷ ಲಿಖಿತ ಅಭಿಪ್ರಾಯಗಳನ್ನು ಸಂಗ್ರಹಿಸಿದೆ ಮತ್ತು 70ಕ್ಕೂ ಹೆಚ್ಚು ಸಾರ್ವಜನಿಕ ವೇದಿಕೆಗಳ ಮೂಲಕ ಜನರ ಪ್ರತಿಕ್ರಿಯೆ ಪಡೆದಿದೆ. ಕರಡು ಮಸೂದೆ ಸಿದ್ದಪಡಿಸಲು ಸಮಿತಿ ಸದಸ್ಯರು ಸರಿಸುಮಾರು 60,000 ಜನರ ಸಹಾಯ ಪಡೆದುಕೊಂಡಿದ್ದಾರೆ.

ಯುಸಿಸಿ ಮಸೂದೆಯಲ್ಲಿ ಬಹುಪತ್ನಿತ್ವ ಮತ್ತು ಬಾಲ್ಯ ವಿವಾಹದ ಸಂಪೂರ್ಣ ನಿಷೇಧ, ಎಲ್ಲಾ ಜಾತಿ, ಧರ್ಮಗಳ ಹುಡುಗಿಯರಿಗೆ ಪ್ರಮಾಣಿತ ವಿವಾಹದ ವಯಸ್ಸು ಮತ್ತು ವಿಚ್ಛೇದನಕ್ಕೆ ಏಕರೂಪದ ಪ್ರಕ್ರಿಯೆ. ಲಿಂಗ ಸಮಾನತೆ ಮತ್ತು ಸಾಮಾಜಿಕ ಒಗ್ಗಟ್ಟು ಪ್ರತಿಪಾದಿಸಲಾಗಿದೆ. ನಿನ್ನೆ ಆರಂಭವಾದ ನಾಲ್ಕು ದಿನಗಳ ವಿಶೇಷ ವಿಧಾನಸಭೆ ಅಧಿವೇಶನದಲ್ಲಿ ಈ ವಿಚಾರಗಳು ಚರ್ಚೆಯಾಗಲಿದೆ ಎಂದು ವರದಿಗಳು ತಿಳಿಸಿವೆ.

ಯುಸಿಸಿ ಕರಡು ಮಸೂದೆ ನಾಗರಿಕ ಜೀವನದ ವಿವಿಧ ಅಂಶಗಳನ್ನು ಒಳಗೊಂಡಿದೆ. ಉತ್ತರಾಧಿಕಾರ ಹಕ್ಕುಗಳು, ಕಡ್ಡಾಯ ವಿವಾಹ ನೋಂದಣಿ, ಮತ್ತು ಮದುವೆಯ ಮೊದಲು ಅವರ ಶಿಕ್ಷಣದ ಅನ್ವೇಷಣೆಗೆ ಅನುಕೂಲವಾಗುವಂತೆ ಹುಡುಗಿಯರಿಗೆ ಮದುವೆಯ ವಯಸ್ಸನ್ನು ಹೆಚ್ಚಿಸುವ ಶಿಫಾರಸು. ತಮ್ಮ ವಿವಾಹಗಳನ್ನು ನೋಂದಾಯಿಸಲು ವಿಫಲರಾದ ದಂಪತಿಗಳಿಗೆ ಸರ್ಕಾರಿ ಸೌಲಭ್ಯಗಳ ನಿರಾಕರಣೆ ಇತ್ಯಾದಿ ಮಸೂದೆಯಲ್ಲಿ ಸೇರಿವೆ ಎಂದು ತಿಳಿದು ಬಂದಿದೆ.

ಯುಸಿಸಿ ಕರಡು ಮಸೂದೆ ಸಾರ್ಜವಜನಿಕರಿಗೆ ಲಭ್ಯವಾಗದಿದ್ದರೂ, ಇದು ಧಾರ್ಮಿಕ ಸಂಬಂಧಗಳ ಹೊರತಾಗಿಯೂ ಮದುವೆ, ವಿಚ್ಛೇದನ,ಆಸ್ತಿ ಮತ್ತು ಪಿತ್ರಾರ್ಜಿತ ವಿಷಯಗಳನ್ನು ಒಳಗೊಂಡಿರುವ ಕಾನೂನು ಚೌಕಟ್ಟನ್ನು ಸ್ಥಾಪಿಸಲಿದೆ. ಇದನ್ನು ಜಾರಿಗೊಳಿಸಿದರೆ, ಉತ್ತರಾಖಂಡವು ಪೋರ್ಚುಗೀಸ್ ಆಳ್ವಿಕೆಯ ದಿನಗಳಿಂದಲೂ ಕಾರ್ಯನಿರ್ವಹಿಸುತ್ತಿರುವ ಗೋವಾದ ಹೆಜ್ಜೆಗಳನ್ನು ಅನುಸರಿಸಿ, ಯುಸಿಸಿಯನ್ನು ಅಳವಡಿಸಿಕೊಂಡ ಸ್ವಾತಂತ್ರ್ಯೋತ್ತರ ಭಾರತದ ಮೊದಲ ರಾಜ್ಯ ಎನಿಸಿಕೊಳ್ಳಲಿದೆ ಎಂದು ವರದಿಗಳು ಹೇಳಿವೆ.

ಇದನ್ನೂ ಓದಿ : ಭಾರತ್ ಜೋಡೋ ನ್ಯಾಯ ಯಾತ್ರೆ: ಜಾತಿವಾರು ಜನಸಂಖ್ಯೆ, ತೆರಿಗೆ ಪಾವತಿ ಬಗ್ಗೆ ಬಹಿರಂಗಪಡಿಸಬೇಕು; ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...