Homeಮುಖಪುಟನಾಳೆಯಿಂದ ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ

ನಾಳೆಯಿಂದ ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ

- Advertisement -
- Advertisement -

ಉತ್ತರಾಖಂಡದಲ್ಲಿ ಜನವರಿ 27ರಿಂದ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶನಿವಾರ (ಜ.25) ತಿಳಿಸಿದ್ದಾರೆ.

ಸೋಮವಾರ (ನಾಳೆ) ಮಧ್ಯಾಹ್ನ 12.30ಕ್ಕೆ ಮುಖ್ಯಮಂತ್ರಿಗಳು ಸಚಿವಾಲಯದಲ್ಲಿ ಏಕರೂಪ ನಾಗರಿಕ ಸಂಹಿತೆ ಪೋರ್ಟಲ್ ಅನ್ನು ಉದ್ಘಾಟಿಸಲಿದ್ದಾರೆ ಮತ್ತು ಕಾನೂನಿನಡಿಯಲ್ಲಿ ನಿಯಮಗಳನ್ನು ಅದೇ ದಿನ ಗೆಜೆಟ್‌ನಲ್ಲಿ ತಿಳಿಸಲಾಗುವುದು ಎಂದು ಗೃಹ ಕಾರ್ಯದರ್ಶಿ ಶೈಲೇಶ್ ಬಗೌಲಿ ತಿಳಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಏಕರೂಪ ನಾಗರಿಕ ಸಂಹಿತೆಯು ಎಲ್ಲಾ ನಾಗರಿಕರ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ದತ್ತು ಸ್ವೀಕಾರವನ್ನು ನಿಯಂತ್ರಿಸುವ ಕಾನೂನುಗಳ ಸಾಮಾನ್ಯ ಗುಂಪಾಗಿದೆ.
ಪ್ರಸ್ತುತ, ವಿವಿಧ ಧಾರ್ಮಿಕ ಮತ್ತು ಬುಡಕಟ್ಟು ಗುಂಪುಗಳ ಅವರವರ ವೈಯಕ್ತಿಕ, ಸಮುದಾಯದ ನಿರ್ದಿಷ್ಟ ಕಾನೂನುಗಳನ್ನು ಆಧರಿಸಿವೆ. ಹೆಚ್ಚಾಗಿ ಧಾರ್ಮಿಕ ಗ್ರಂಥಗಳನ್ನು ಅನುಸರಿಸಲಾಗಿದೆ.

ಏಕರೂಪ ನಾಗರಿಕ ಸಂಹಿತೆ ಒಮ್ಮೆ ಜಾರಿಗೆ ಬಂದರೆ, ಉತ್ತರಾಖಂಡ ಸ್ವಾತಂತ್ರ್ಯದ ನಂತರ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಿದ ಮೊದಲ ಭಾರತೀಯ ರಾಜ್ಯವಾಗಲಿದೆ. 1867ರಲ್ಲಿ ಪೋರ್ಚುಗೀಸ್ ನಾಗರಿಕ ಸಂಹಿತೆಯನ್ನು ಅಳವಡಿಸಿಕೊಂಡಾಗಿನಿಂದ ಗೋವಾದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಲ್ಲಿದೆ.

“ಏಕರೂಪ ನಾಗರಿಕ ಸಂಹಿತೆ ಸಮಾಜದಲ್ಲಿ ಏಕರೂಪತೆಯನ್ನು ತರುತ್ತದೆ. ಎಲ್ಲಾ ನಾಗರಿಕರಿಗೆ ಸಮಾನ ಹಕ್ಕುಗಳು ಮತ್ತು ಜವಾಬ್ದಾರಿಗಳನ್ನು ಖಚಿತಪಡಿಸುತ್ತದೆ” ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

“ಏಕರೂಪ ನಾಗರಿಕ ಸಂಹಿತೆಯಡಿಯಲ್ಲಿ, ಜಾತಿ, ಧರ್ಮ, ಪ್ರದೇಶ ಮತ್ತು ಲಿಂಗದ ಆಧಾರದ ಮೇಲೆ ತಾರತಮ್ಯ ಮಾಡುವ ವೈಯಕ್ತಿಕ ನಾಗರಿಕ ವಿಷಯಗಳಿಗೆ ಸಂಬಂಧಿಸಿದ ಎಲ್ಲಾ ಕಾನೂನುಗಳಲ್ಲಿ ಏಕರೂಪತೆಯನ್ನು ತರಲು ಪ್ರಯತ್ನಿಸಲಾಗಿದೆ” ಎಂದಿದೆ.

ಫೆಬ್ರವರಿ 5, 2024 ರಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉತ್ತರಾಖಂಡ ಸಚಿವ ಸಂಪುಟವು ಏಕರೂಪ ನಾಗರಿಕ ಸಂಹಿತೆಯ ಕರಡು ವರದಿಯನ್ನು ಅನುಮೋದಿಸಿತು.

ನಂತರ ಎರಡು ದಿನಗಳ ಕಾಲ ಚರ್ಚೆ ನಡೆಸಿ ವಿಧಾನಸಭೆಯಲ್ಲಿ ಧ್ವನಿ ಮತದ ಮೂಲಕ ಮಸೂದೆಗೆ ಅಂಗೀಕಾರ ಪಡೆಯಲಾಗಿತ್ತು. ರಾಜ್ಯದ ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ ಗುರ್ಮಿತ್ ಸಿಂಗ್ ಅವರು ಕಳೆದ ವರ್ಷ ಫೆಬ್ರವರಿ 28ರಂದು ಮಸೂದೆಗೆ ಅಂಕಿತ ಹಾಕಿದ್ದರು.

ನಂತರ, ರಾಜ್ಯ ಸರ್ಕಾರವು ನಿಯಮಗಳ ರಚನೆ ಮತ್ತು ಅನುಷ್ಠಾನ ಸಮಿತಿಯನ್ನು ರಚಿಸಿತ್ತು. ಮಾರ್ಚ್ 14ರಂದು, ರಾಷ್ಟ್ರಪತಿ ದ್ರೌಪದಿ ಮುರ್ಮು ಉತ್ತರಾಖಂಡದ ಏಕರೂಪ ನಾಗರಿಕ ಸಂಹಿತೆ ಮಸೂದೆಯನ್ನು ಅನುಮೋದಿಸಿದ್ದಾರೆ ಎಂದು ಸಿಎಂ ಧಾಮಿ ಘೋಷಿಸಿದ್ದರು.

2025ರ ಜನವರಿ 20ರಂದು ರಾಜ್ಯ ಸಚಿವ ಸಂಪುಟವು ಏಕರೂಪ ನಾಗರಿಕ ಸಂಹಿತೆಯ ನಿಯಮಗಳ ಕೈಪಿಡಿಯನ್ನು ಅನುಮೋದಿಸಿತ್ತು.

ಪಿತೃಪ್ರಧಾನ ವೈಯಕ್ತಿಕ ಕಾನೂನುಗಳ ಅಡಿಯಲ್ಲಿ ತಮ್ಮ ಹಕ್ಕುಗಳಿಂದ ವಂಚಿತರಾಗಿರುವ ಮಹಿಳೆಯರಿಗೆ ಸಮಾನತೆ ಮತ್ತು ನ್ಯಾಯವನ್ನು ಒದಗಿಸುವುದು ಏಕರೂಪ ನಾಗರಿಕ ಸಂಹಿತೆಯ ಉದ್ದೇಶವಾಗಿದೆ ಎಂದು ಉತ್ತರಾಖಂಡದ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಹೇಳಿಕೊಂಡಿದೆ.

ಸಾಮಾನ್ಯ ವೈಯಕ್ತಿಕ ಕಾನೂನನ್ನು ಪರಿಚಯಿಸುವುದು ಬಹಳ ಹಿಂದಿನಿಂದಲೂ ಬಿಜೆಪಿಯ ಕಾರ್ಯಸೂಚಿಯಲ್ಲಿದೆ ಮತ್ತು ಪಕ್ಷದ ಆಳ್ವಿಕೆಯಲ್ಲಿರುವ ಹಲವಾರು ರಾಜ್ಯಗಳು ಅದನ್ನು ಜಾರಿಗೆ ತರುವತ್ತ ಹೆಜ್ಜೆ ಹಾಕುತ್ತಿವೆ. ಉತ್ತರಾಖಂಡದಲ್ಲಿ ನಿಯಮಗಳ ಅನುಷ್ಠಾನವು ಬಿಜೆಪಿ ಆಡಳಿತವಿರುವ ಇತರ ರಾಜ್ಯಗಳು ಇದನ್ನು ಅನುಸರಿಸಲು ಒಂದು ಪೂರ್ವನಿದರ್ಶನವಾಗಬಹುದು.

ಏಕರೂಪ ನಾಗರಿಕ ಸಂಹಿತೆಯ ವಿಷಯದಲ್ಲಿ ಬಿಜೆಪಿ ಮುಖ್ಯವಾಗಿ ಮುಸ್ಲಿಂ ವೈಯಕ್ತಿಕ ಕಾನೂನನ್ನು ಗುರಿಯಾಗಿಸಿಕೊಂಡಿದೆ. ಮುಸ್ಲಿಂ ಪುರುಷರು ಬಹುಪತ್ನಿತ್ವವನ್ನು ಅನುಸರಿಸಲು, ಹೆಚ್ಚಿನ ಆಸ್ತಿಯನ್ನು ಆನುವಂಶಿಕವಾಗಿ ಪಡೆಯಲು, ವಿಚ್ಛೇದನ ನೀಡಲು ಮತ್ತು ಜೀವನಾಂಶ ನಿರಾಕರಿಸಲು ಅವಕಾಶ ನೀಡುವ ಮೂಲಕ ವೈಯಕ್ತಿಕ ಕಾನೂನು ಮಹಿಳೆಯರ ವಿರುದ್ಧ ತಾರತಮ್ಯ ಮಾಡುತ್ತಿದೆ ಎಂದು ಬಿಜೆಪಿ ವಾದಿಸಿದೆ.

ಆದಾಗ್ಯೂ, ಕಾನೂನು ತಜ್ಞರು ಈ ಮಸೂದೆಯನ್ನು ಪ್ರಾಥಮಿಕವಾಗಿ ಹಿಂದೂ ವೈಯಕ್ತಿಕ ಕಾನೂನಿನಿಂದ ಪಡೆಯಲಾಗಿದ್ದು, ಅಲ್ಪಸಂಖ್ಯಾತ ಸಮುದಾಯಗಳ ವೈಯಕ್ತಿಕ ಕಾನೂನು ಪದ್ಧತಿಗಳನ್ನು ಅಳಿಸಿಹಾಕಲು ಕಾರಣವಾಗಬಹುದು ಎಂದು ಹೇಳಿದ್ದಾರೆ.

ಮಹಿಳಾ ಗುಂಪುಗಳ ಸಮೂಹವಾದ ಉತ್ತರಾಖಂಡ ಮಹಿಳಾ ಮೋರ್ಚಾ, ಈ ಮಸೂದೆಯು “ಹಿಂದೂ ಕಾನೂನು ಮಾದರಿಯನ್ನು ಅನುಸರಿಸುತ್ತಿದೆ” ಎಂದು ಟೀಕಿಸಿತ್ತು. ಸಾರ್ವಜನಿಕ ಹೇಳಿಕೆಯಲ್ಲಿ, ಮಸೂದೆಯು “ಕ್ರಿಶ್ಚಿಯನ್ ಕುಟುಂಬ ಕಾನೂನು ಮತ್ತು ಪಾರ್ಸಿ ಕುಟುಂಬ ಕಾನೂನಿನ ಅನ್ವಯದ ಬಗ್ಗೆ ಸಂಪೂರ್ಣವಾಗಿ ಮೌನವಾಗಿದೆ”. ಇದು ಕಾನೂನುಬದ್ಧವಾಗಿ ಸಮರ್ಥನೀಯವಲ್ಲ ಎಂದಿದೆ.

ಲೈಂಗಿಕ ಕಿರುಕುಳ ಆರೋಪಿ ಬ್ರಿಜ್ ಭೂಷಣ್ ಮನೆಯಲ್ಲೇ ಕುಸ್ತಿ ಒಕ್ಕೂಟದ ಕಚೇರಿ : ವಿವಾದದ ಬಳಿಕ ಸ್ಥಳಾಂತರಕ್ಕೆ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮರ್ಯಾದೆಗೇಡು ಹತ್ಯೆ | ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆಗೆ ಚಿಂತನೆ : ಸಚಿವ ಹೆಚ್‌.ಸಿ ಮಹದೇವಪ್ಪ

ಮರ್ಯಾದೆಗೇಡು ಹತ್ಯೆ ತಡೆಗೆ ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ ತರುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಹೆಚ್‌.ಸಿ ಮಹದೇವಪ್ಪ ಹೇಳಿದರು. ಮರ್ಯಾದೆಗೇಡು ಹತ್ಯೆ ನಡೆದ ಹುಬ್ಬಳ್ಳಿಯ ಇನಾಂ ವೀರಾಪುರ ಗ್ರಾಮಕ್ಕೆ...

ತಮಿಳುನಾಡು: ಪ್ರತಿಭಟನಾ ನಿರತ ಶಿಕ್ಷಕರು, ನೈರ್ಮಲ್ಯ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದ ಪ್ರೇಮಲತಾ ವಿಜಯಕಾಂತ್

ತಮಿಳುನಾಡು ಸರ್ಕಾರವು ಪ್ರತಿಭಟನಾ ನಿರತ ಮಾಧ್ಯಮಿಕ ದರ್ಜೆಯ ಶಿಕ್ಷಕರು ಮತ್ತು ನೈರ್ಮಲ್ಯ ಕಾರ್ಮಿಕರ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ತುರ್ತಾಗಿ ಪರಿಹರಿಸಬೇಕು ಎಂದು ಡಿಎಂಡಿಕೆ ಪ್ರಧಾನ ಕಾರ್ಯದರ್ಶಿ ಪ್ರೇಮಲತಾ ವಿಜಯಕಾಂತ್ ಗುರುವಾರ ಹೇಳಿದ್ದಾರೆ.  ತಮ್ಮ...

ಸ್ವಿಟ್ಜರ್‌ಲ್ಯಾಂಡ್‌ನ ಸ್ಕೀ ರೆಸಾರ್ಟ್‌ನಲ್ಲಿ ಬೆಂಕಿ ಅವಘಡ: ಕನಿಷ್ಠ 40 ಮಂದಿ ಸಾವನ್ನಪ್ಪಿರುವ ಶಂಕೆ, ಹಲವರಿಗೆ ಗಾಯ

ನೈಋತ್ಯ ಸ್ವಿಟ್ಜರ್‌ಲ್ಯಾಂಡ್‌ನ ಕ್ರಾನ್ಸ್-ಮೊಂಟಾನಾದ ಸ್ಕೀ ರೆಸಾರ್ಟ್‌ನಲ್ಲಿರುವ "ಲೆ ಕಾನ್ಸ್ಟೆಲೇಷನ್" ಎಂಬ ಬಾರ್‌ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಹಲವಾರು ಜನರು ಸಾವನ್ನಪ್ಪಿದ್ದಾರೆ ಮತ್ತು ಇತರರು ಗಾಯಗೊಂಡಿದ್ದಾರೆ ಎಂದು ಸ್ವಿಸ್ ಪೊಲೀಸರು ಗುರುವಾರ ತಿಳಿಸಿರುವುದಾಗಿ...

ಭಾರತದ ನಾಲ್ವರು ಸೇರಿ 2025ರಲ್ಲಿ ಜಾಗತಿಕವಾಗಿ 128 ಪತ್ರಕರ್ತರ ಹತ್ಯೆ : ವರದಿ

ಜಾಗತಿಕವಾಗಿ 2025ರಲ್ಲಿ ನೂರಾ ಇಪ್ಪತ್ತೆಂಟು ಪತ್ರಕರ್ತರು ಕೊಲ್ಲಲ್ಪಟ್ಟಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ಒಕ್ಕೂಟ ಬುಧವಾರ (ಡಿ.31) ತಿಳಿಸಿದೆ. ಪತ್ರಕರ್ತರ ಹತ್ಯೆಗಳಲ್ಲಿ ಅರ್ಧಕ್ಕಿಂತ ಹೆಚ್ಚು (74) ಪಶ್ಚಿಮ ಏಷ್ಯಾದಲ್ಲಿ ಸಂಭವಿಸಿವೆ ಎಂದು ಬೆಲ್ಜಿಯಂ ಮೂಲದ ಒಕ್ಕೂಟ...

ಸನಾತನ ರಾಷ್ಟ್ರ ಮಹೋತ್ಸವ : ಕೇಂದ್ರ ಸಂಸ್ಕೃತಿ ಸಚಿವಾಲಯ, ದೆಹಲಿ ಸರ್ಕಾರದ ಪ್ರಾಯೋಜಕತ್ವದಲ್ಲಿ ನಡೆದ ಇಸ್ಲಾಮೋಫೋಬಿಯಾ ಕಾರ್ಯಕ್ರಮ

ಹಿಂದುತ್ವ ಗುಂಪುಗಳು ಹಿಂದೂ ರಾಷ್ಟ್ರ ರಚನೆಗೆ ಕರೆ ನೀಡುವ ಮತ್ತು ಅಲ್ಪಸಂಖ್ಯಾತರಿಗೆ ನೇರ ಅಥವಾ ಪರೋಕ್ಷ ಬೆದರಿಕೆಗಳನ್ನು ಹಾಕುವ ಕಾರ್ಯಕ್ರಮಗಳನ್ನು ಆಯೋಜಿಸುವುದು ಭಾರತದಲ್ಲಿ ಸಾಮಾನ್ಯವಾಗಿದೆ. ಆದರೆ, ದೆಹಲಿಯ ಭಾರತ್ ಮಂಟಪದಲ್ಲಿ ಆಯೋಜಿಸಲಾಗಿದ್ದ 'ಸನಾತನ...

ಜಮ್ಮು-ಕಾಶ್ಮೀರ| 17 ಹಳ್ಳಿಗಳ 150 ಜನರಿಗೆ ‘ರಕ್ಷಣಾ ತರಬೇತಿ’ ನೀಡುತ್ತಿರುವ ಸೇನಾ ಪಡೆ

ಜಮ್ಮು ಕಾಶ್ಮೀರದ ದೋಡಾ ಜಿಲ್ಲೆಯ ಚೆನಾಬ್ ಕಣಿವೆಯ ಎತ್ತರದ ಪ್ರದೇಶಗಳಲ್ಲಿ ನಡೆಯುತ್ತಿರುವ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳ ಭಾಗವಾಗಿ, ಗ್ರಾಮ ಮಟ್ಟದ ಭದ್ರತೆಯನ್ನು ಬಲಪಡಿಸಲು ಸೇನೆಯು ತನ್ನ ಪ್ರಯತ್ನಗಳನ್ನು ಹೆಚ್ಚಿಸಿದೆ. ದೋಡಾ-ಚಂಬಾ ಗಡಿಯುದ್ದಕ್ಕೂ 17...

ಬೆಸ್ಕಾಂ ವ್ಯಾಪ್ತಿಯಲ್ಲಿ ಟ್ರಾನ್ಸ್‌ಫಾರ್ಮರ್‌ಗಳ ಸ್ಥಿತಿ ಮೇಲ್ವಿಚಾರಣೆಗೆ ಹೊಸ ಮೊಬೈಲ್ ಆ್ಯಪ್ 

ಬೆಂಗಳೂರು: ಬೆಸ್ಕಾಂ ತನ್ನ ವ್ಯಾಪ್ತಿಯಲ್ಲಿ ಬರುವ ಟ್ರಾನ್ಸ್‌ಫಾರ್ಮರ್‌ಗಳ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು 'ಡಿಸ್ಟ್ರಿಬ್ಯೂಷನ್ ಟ್ರಾನ್ಸ್‌ಫಾರ್ಮರ್ ಲೈಫ್ ಸೈಕಲ್ ಮ್ಯಾನೇಜ್‌ಮೆಂಟ್ ಸಿಸ್ಟಮ್' (DTLMS) ಎಂಬ ಹೊಸ ಮೊಬೈಲ್ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಿದೆ. ಈ ಕ್ರಮವು...

ಇಂದೋರ್‌ ಕಲುಷಿತ ನೀರು ಸೇವನೆ ಪ್ರಕರಣ: ಹತ್ತಕ್ಕೇರಿದ ಸಾವಿನ ಸಂಖ್ಯೆ; ಇಬ್ಬರು ಅಧಿಕಾರಿಗಳು ಅಮಾನತು

ಮಧ್ಯಪ್ರದೇಶದ ಇಂದೋರ್‌ನಲ್ಲಿ ಕಲುಷಿತ ನೀರು ಸೇವನೆಯಿಂದ ಕನಿಷ್ಠ 10 ಮಂದಿ ಸಾವನ್ನಪ್ಪಿದ ಕಾರಣ ಓರ್ವ ಅಧಿಕಾರಿಯನ್ನು ವಜಾಗೊಳಿಸಲಾಗಿದ್ದು, ಇತರ ಇಬ್ಬರನ್ನು ಅಮಾನತುಗೊಳಿಸಲಾಗಿದೆ. ಪುರಸಭೆಯಿಂದ ಸರಬರಾಜು ಮಾಡಲಾದ ಕಲುಷಿತ ಕುಡಿಯುವ ನೀರನ್ನು ಸೇವಿಸಿ 2,000...

ಪತ್ರಕರ್ತನ ಪ್ರಶ್ನೆಗೆ ಬೇಜವಬ್ದಾರಿ ಉತ್ತರ ಕೊಟ್ಟ ಬಿಜೆಪಿ ಸಚಿವ : ತೀವ್ರ ಆಕ್ರೋಶದ ಬಳಿಕ ಕ್ಷಮೆಯಾಚನೆ

ಕಲುಷಿತ ನೀರು ಕುಡಿದು ಜನರು ಸಾವನ್ನಪ್ಪಿದ್ದಕ್ಕೆ ಸಂಬಂಧಿಸಿದಂತೆ ಪ್ರಶ್ನೆ ಕೇಳಿದ ಎನ್‌ಡಿಟಿವಿಯ ವರದಿಗಾರನನ್ನು ನಿಂದಿಸಿದ ಮತ್ತು ಬೇಜವಬ್ದಾರಿ ಹೇಳಿಕೆ ನೀಡಿದ ಮಧ್ಯಪ್ರದೇಶ ನಗರಾಭಿವೃದ್ದಿ ಮತ್ತು ವಸತಿ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ...

‘ಚೀನೀ-ಮೋಮೋ ಎಂದು ನಿಂದಿಸುತ್ತಾರೆ..’; ನೋವು ತೋಡಿಕೊಂಡ ಈಶಾನ್ಯ ಭಾರತದ ವಿದ್ಯಾರ್ಥಿಗಳು

ತ್ರಿಪುರಾ ವಿದ್ಯಾರ್ಥಿ ಅಂಜೆಲ್ ಚಕ್ಮಾ ಅವರ ಜನಾಂಗೀಯ ದ್ವೇಷದ ಹತ್ಯೆ ಖಂಡಿಸಿ ನಡೆದ ಪ್ರತಿಭಟನೆ ಮತ್ತು ಈಶಾನ್ಯ ಭಾರತದ ವಿದ್ಯಾರ್ಥಿಗಳಿಗೆ ಸುರಕ್ಷತೆಗೆ ಒತ್ತಾಯಿಸಲು ಬುಧವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ನೂರಾರು ಜನರು ಮೇಣದಬತ್ತಿ...