Homeಕರ್ನಾಟಕಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಲ್ಲ; ವಿದ್ಯಾರ್ಥಿಗಳು ತಮ್ಮ ಇಷ್ಟದ ಉಡುಪು ಧರಿಸಬಹುದು: ಉನ್ನತ ಶಿಕ್ಷಣ ಸಚಿವ...

ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಲ್ಲ; ವಿದ್ಯಾರ್ಥಿಗಳು ತಮ್ಮ ಇಷ್ಟದ ಉಡುಪು ಧರಿಸಬಹುದು: ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ

- Advertisement -
- Advertisement -

ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಲ್ಲ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಅವರು ಮಂಗಳವಾರ ಹೇಳಿದ್ದು, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಿದೆ ಎಂದು ತಿಳಿಸಿದ್ದಾರೆ.

ಚಾಮರಾಜನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅಶ್ವತ್ಥನಾರಾಯಣ, “ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಲ್ಲ. ವಿದ್ಯಾರ್ಥಿಗಳು ತಮ್ಮ ಇಷ್ಟದ ಉಡುಪನ್ನು ಧರಿಸಿಕೊಂಡು ಹೋಗಬಹುದು. ನಮ್ಮ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯವಿದೆ. ಆದರೆ, ಇದನ್ನು ಯಾರೂ ದುರ್ಬಳಕೆ ಮಾಡಿಕೊಳ್ಳಬಾರದು” ಎಂದು ಹೇಳಿದ್ದಾರೆ.

“ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಿದೆ. ಹಾಗಾಗಿ, ಇಲ್ಲಿ ಹಿಜಾಬ್ ಧರಿಸಲು ಅವಕಾಶ ಇಲ್ಲ, ಧರಿಸುವುದಕ್ಕೆ ಬಿಡುವುದು ಇಲ್ಲ. ಈ ಬಗ್ಗೆ ಬಹಳ ಸ್ಪಷ್ಟವಾಗಿ ಕಾನೂನು ಇದೆ” ಎಂದು ಸಚಿವರು ಹೇಳಿದ್ದಾರೆ.

ಕಾಲೇಜುಗಳು ಪ್ರಾರಂಭವಾಗುವ ಬಗ್ಗೆ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ ಅವರು, “ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ವಿಶ್ವವಿದ್ಯಾಲಯ, ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಕಾಲೇಜು, ಡಿಪ್ಲೋಮಾ ಕಾಲೇಜುಗಳು ಫೆಬ್ರವರಿ 16 ರಿಂದ ಪುನರಾರಂಭಗೊಳ್ಳಲಿವೆ. ಉಚ್ಛ ನ್ಯಾಯಾಲಯದ ಆದೇಶ ಪಾಲಿಸುವ ಜತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಂಡು ತರಗತಿಗಳನ್ನು ನಡೆಸಲಾಗುವುದು” ಎಂದು ಹೇಳಿದ್ದಾರೆ.

 

ಇದನ್ನೂ ಓದಿ:ರಾಜ್ಯದಲ್ಲಿ ಕ್ರಿಶ್ಚಿಯನ್ನರ ಮೇಲೆ ದಾಳಿ: ಕಳೆದ 11 ತಿಂಗಳಲ್ಲಿ 39 ಪ್ರಕರಣ ದಾಖಲು- ಪಿಯುಸಿಎಲ್‌ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...

‘ಆಳವಾದ ಅಪನಂಬಿಕೆ ರಾತ್ರೋರಾತ್ರಿ ಬಗೆಹರಿಯುವುದಿಲ್ಲ..’; ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ ಭರವಸೆ ವ್ಯಕ್ತಪಡಿಸಿದ ಜೆಡಿ ವ್ಯಾನ್ಸ್

ಅಮೆರಿಕ ಮತ್ತು ಇರಾನ್ ನಡುವೆ ಸಾಕಷ್ಟು ಅಪನಂಬಿಕೆ ಇದೆ, ಅದನ್ನು ರಾತ್ರೋರಾತ್ರಿ ಪರಿಹರಿಸಲು ಸಾಧ್ಯವಿಲ್ಲ ಎಂದು ಟೆಹ್ರಾನ್ ಜೊತೆಗಿನ ಕದನ ವಿರಾಮ ಮಾತುಕತೆಗಳ ಕುರಿತು ನಿಯೋಗದ ನೇತೃತ್ವ ವಹಿಸಿದ್ದ ಉಪಾಧ್ಯಕ್ಷ ಜೆಡಿ ವ್ಯಾನ್ಸ್...

ನ್ಯಾ. ಶರ್ಮಾ ಪೀಠದ ಮುಂದೆ ಅರವಿಂದ್ ಕೇಜ್ರಿವಾಲ್ ವಾದಿಸಿದ ವಿಡಿಯೋಗಳನ್ನು ತೆಗೆದುಹಾಕುವಂತೆ ಪೊಲೀಸರಿಗೆ ಸೂಚಿಸಿದ ದೆಹಲಿ ಹೈಕೋರ್ಟ್-ವರದಿ

ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ಮುಂದೆ ಅರವಿಂದ್ ಕೇಜ್ರಿವಾಲ್ ವಾದಿಸಿದ್ದಕ್ಕೆ ಸಂಬಂಧಿಸಿದ ಅನಧಿಕೃತ ವಿಡಿಯೋಗಳನ್ನು ತೆಗೆದುಹಾಕುವಂತೆ ದೆಹಲಿ ಹೈಕೋರ್ಟ್ ಪೊಲೀಸರಿಗೆ ಸೂಚಿಸಿದೆ ಎಂದು ಕಾನೂನು ಸುದ್ದಿ...

ತಮಿಳುನಾಡು ವಿಧಾನಸಭಾ ಚುನಾವಣೆ 2026| ದಕ್ಷಿಣ ರಾಜ್ಯಗಳು ‘ದೆಹಲಿ ತಂಡ’ವನ್ನು ಓಡಿಸಬೇಕು: ಉದಯನಿಧಿ ಸ್ಟಾಲಿನ್

ತಮಿಳುನಾಡು: ಮುಂಬರುವ ವಿಧಾನಸಭಾ ಚುನಾವಣೆಗಳು ತಮಿಳುನಾಡು ತಂಡ ಮತ್ತು ದೆಹಲಿ ತಂಡದ ನಡುವಿನ ಹೋರಾಟವಾಗಿದ್ದು, ದಕ್ಷಿಣ ರಾಜ್ಯವು ದೆಹಲಿಯನ್ನು "ಓಡಿಸಬೇಕು" ಎಂದು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಬುಧವಾರ ಮತ್ತೊಮ್ಮೆ ಒತ್ತಾಯಿಸಿದ್ದಾರೆ. "ನಮ್ಮ ನಾಯಕ (ಎಂ.ಕೆ....

ಮರ್ಯಾದೆಗೇಡು ಹತ್ಯೆ: ಅನ್ಯಜಾತಿ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದ ಮಹಿಳೆಗೆ ಸಂಬಂಧಿಕರಿಂದ ವಿಷಪ್ರಾಶನ

ಹಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಪತ್ತೆ ಪ್ರಕರಣದ ತನಿಖೆಯಲ್ಲಿ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಮರ್ಯಾದೆಗೇಡು ಹತ್ಯೆಯ ಶಂಕಿತ ಪ್ರಕರಣದಲ್ಲಿ ಮಹಿಳೆಯನ್ನು ಆಕೆಯ ಕುಟುಂಬದವರೇ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ...

ನ್ಯಾ. ಶರ್ಮಾರ ಇಬ್ಬರು ಮಕ್ಕಳು ಕೇಂದ್ರ ಸರ್ಕಾರದ ವಕೀಲರು : ಹೊಸ ಅಫಿಡವಿಟ್ ಸಲ್ಲಿಸಿದ ಕೇಜ್ರಿವಾಲ್, ವಿಚಾರಣೆಯಿಂದ ಹಿಂದೆ ಸರಿಯಲು ಆಗ್ರಹ

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ವಿರುದ್ಧ ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ (ಏ.15) ಹೊಸ ಹೆಚ್ಚುವರಿ ಅಫಿಡವಿಟ್ ಸಲ್ಲಿಸಿದ್ದಾರೆ.  ಅಬಕಾರಿ ನೀತಿ...

ಉತ್ತರ ಪ್ರದೇಶ: ಅಂಬೇಡ್ಕರ್ ಜಯಂತಿಯಂದು ಪ್ರತಿಮೆ ಸ್ಥಾಪನೆಗೆ ವಿರೋಧ: ಲಖಿಂಪುರ ಖೇರಿಯಲ್ಲಿ ಭುಗಿಲೆದ್ದ ಘರ್ಷಣೆ 

ಸರ್ಕಾರಿ ಭೂಮಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಗೆ ಸಂಬಂಧಿಸಿದ ವಿವಾದವು ಎರಡು ಗುಂಪುಗಳ ನಡುವೆ ಹಿಂಸಾತ್ಮಕ ಘರ್ಷಣೆಗೆ ಕಾರಣವಾದ ನಂತರ ಮಂಗಳವಾರ ಸಂಜೆ ಮೈಲಾನಿ ಪೊಲೀಸ್ ಠಾಣೆ ವ್ಯಾಪ್ತಿಯ ಬಂಕೆಗಂಜ್...

‘ನಮಗೆ ಮುಸ್ಲಿಂ ಮತಗಳ ಅಗತ್ಯವಿಲ್ಲ..’; ಬಂಗಾಳ ಚುನಾವಣೆಗೆ ಮುನ್ನ ಬಿಜೆಪಿಯ ದಿಲೀಪ್ ಘೋಷ್ ವಿವಾದಾತ್ಮಕ ಹೇಳಿಕೆ

2011 ರ ಜನಗಣತಿಯ ಪ್ರಕಾರ ರಾಜ್ಯದ ಒಟ್ಟು ಜನಸಂಖ್ಯೆಯ ಶೇಕಡಾ 27 ರಷ್ಟಿರುವ ಮತ್ತು ರಾಜ್ಯದಲ್ಲಿ ಸರ್ಕಾರವನ್ನು ನಿರ್ಧರಿಸುವಲ್ಲಿ ಮಹತ್ವದ ಪಾತ್ರ ವಹಿಸುವ ಮುಸ್ಲಿಂ ಸಮುದಾಯದ ಮತಗಳನ್ನು ಕೇಳುವ ಅಗತ್ಯವಿಲ್ಲ ಎಂದು ಬಂಗಾಳ...

ಅಸ್ಸಾಂ ಸಿಎಂ ಪತ್ನಿ ವಿರುದ್ಧ ಬಹು ಪಾಸ್‌ಪೋರ್ಟ್ ಆರೋಪ : ಪವನ್ ಖೇರಾ ನಿರೀಕ್ಷಣಾ ಜಾಮೀನಿಗೆ ಸುಪ್ರೀಂ ಕೋರ್ಟ್ ತಡೆ

ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ನೀಡಿದ್ದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನಿಗೆ ಸುಪ್ರೀಂ ಕೋರ್ಟ್ ಬುಧವಾರ (ಏ.15) ತಡೆ ನೀಡಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ...