ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಲ್ಲ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಅವರು ಮಂಗಳವಾರ ಹೇಳಿದ್ದು, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಿದೆ ಎಂದು ತಿಳಿಸಿದ್ದಾರೆ.
ಚಾಮರಾಜನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅಶ್ವತ್ಥನಾರಾಯಣ, “ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಲ್ಲ. ವಿದ್ಯಾರ್ಥಿಗಳು ತಮ್ಮ ಇಷ್ಟದ ಉಡುಪನ್ನು ಧರಿಸಿಕೊಂಡು ಹೋಗಬಹುದು. ನಮ್ಮ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯವಿದೆ. ಆದರೆ, ಇದನ್ನು ಯಾರೂ ದುರ್ಬಳಕೆ ಮಾಡಿಕೊಳ್ಳಬಾರದು” ಎಂದು ಹೇಳಿದ್ದಾರೆ.
“ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಿದೆ. ಹಾಗಾಗಿ, ಇಲ್ಲಿ ಹಿಜಾಬ್ ಧರಿಸಲು ಅವಕಾಶ ಇಲ್ಲ, ಧರಿಸುವುದಕ್ಕೆ ಬಿಡುವುದು ಇಲ್ಲ. ಈ ಬಗ್ಗೆ ಬಹಳ ಸ್ಪಷ್ಟವಾಗಿ ಕಾನೂನು ಇದೆ” ಎಂದು ಸಚಿವರು ಹೇಳಿದ್ದಾರೆ.
ಕಾಲೇಜುಗಳು ಪ್ರಾರಂಭವಾಗುವ ಬಗ್ಗೆ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ ಅವರು, “ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ವಿಶ್ವವಿದ್ಯಾಲಯ, ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಕಾಲೇಜು, ಡಿಪ್ಲೋಮಾ ಕಾಲೇಜುಗಳು ಫೆಬ್ರವರಿ 16 ರಿಂದ ಪುನರಾರಂಭಗೊಳ್ಳಲಿವೆ. ಉಚ್ಛ ನ್ಯಾಯಾಲಯದ ಆದೇಶ ಪಾಲಿಸುವ ಜತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಂಡು ತರಗತಿಗಳನ್ನು ನಡೆಸಲಾಗುವುದು” ಎಂದು ಹೇಳಿದ್ದಾರೆ.
ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ವಿಶ್ವವಿದ್ಯಾಲಯ, ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಕಾಲೇಜು, ಡಿಪ್ಲೋಮಾ ಕಾಲೇಜುಗಳು ಫೆಬ್ರವರಿ 16 ರಿಂದ ಪುನರಾರಂಭಗೊಳ್ಳಲಿವೆ.
ಉಚ್ಛ ನ್ಯಾಯಾಲಯದ ಆದೇಶ ಪಾಲಿಸುವ ಜತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಂಡು ತರಗತಿಗಳನ್ನು ನಡೆಸಲಾಗುವುದು. ಮಾಹಿತಿಗಾಗಿ: pic.twitter.com/vftgic80Yl
— Dr. Ashwathnarayan C. N. (@drashwathcn) February 15, 2022
ಇದನ್ನೂ ಓದಿ:ರಾಜ್ಯದಲ್ಲಿ ಕ್ರಿಶ್ಚಿಯನ್ನರ ಮೇಲೆ ದಾಳಿ: ಕಳೆದ 11 ತಿಂಗಳಲ್ಲಿ 39 ಪ್ರಕರಣ ದಾಖಲು- ಪಿಯುಸಿಎಲ್ ವರದಿ