Homeಮುಖಪುಟ8ನೇ ತಿಂಗಳಿಗೆ ಕಾಲಿಟ್ಟ ರೈತ ಹೋರಾಟ: ಪ್ರತಿಭಟನೆ ಕೈಬಿಡುವಂತೆ ಕೇಂದ್ರ ಕೃಷಿ ಮಂತ್ರಿ ಮನವಿ

8ನೇ ತಿಂಗಳಿಗೆ ಕಾಲಿಟ್ಟ ರೈತ ಹೋರಾಟ: ಪ್ರತಿಭಟನೆ ಕೈಬಿಡುವಂತೆ ಕೇಂದ್ರ ಕೃಷಿ ಮಂತ್ರಿ ಮನವಿ

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಇಂದು 7 ತಿಂಗಳು ಕಳೆದು 8ನೇ ತಿಂಗಳಿಗೆ ಕಾಲಿಟ್ಟಿದೆ. ಇದೇ ಸಂದರ್ಭದಲ್ಲಿ ದೇಶಾದ್ಯಂತ ರೈತರು ರಾಜಭವನಗಳಿಗೆ ತೆರಳಿ ಕೃಷಿ ಕಾನೂನುಗಳನ್ನು ರದ್ದು ಮಾಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ದೆಹಲಿಯ ಸಿಂಘು, ಟಿಕ್ರಿ, ಗಾಜಿಯಾಬಾದ್‌ಗಳಲ್ಲೂ ನೂರಾರು ರೈತರು ಸೇರಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಗಳನ್ನು ನಡೆಸಿದ್ದಾರೆ.

ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಹೋರಾಟಗಳನ್ನು ಕೈಬಿಡುವಂತೆ ರೈತರಲ್ಲಿ ಮನವಿ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “ಸರ್ಕಾರ ರೈತರೊಂದಿಗೆ ಚರ್ಚೆಗೆ ಯಾವಾಗಲೂ ಸಿದ್ಧವಿದೆ. ಕೃಷಿ ಕಾನೂನುಗಳಲ್ಲಿನ ಯಾವುದೇ ಅಂಶಗಳನ್ನು ಕೈಬಿಡಲು ಸರ್ಕಾರ ಸಿದ್ಧವಿದೆ” ಎಂದು ಕೃಷಿ ಸಚಿವರು ಟ್ವೀಟ್ ಮೂಲಕ ರೈತ ಸಂಘಟನೆಗಳಲ್ಲಿ ಮನವಿ ಮಾಡಿದ್ದಾರೆ.

ಕೆಂದ್ರ ಸರ್ಕಾರ ಮತ್ತು ರೈತ ಸಂಘಟನೆಗಳು ಇದುವರೆಗೆ 11 ಸುತ್ತಿನ ಮಾತುಕತೆಗಳನ್ನು ನಡೆಸಿದ್ದು ಯಾವುದೇ ಮಾತುಕತೆಗಳು ಫಲಪ್ರಧವಾಗಿಲ್ಲ. ರೈತರು 3 ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವವರೆಗೆ ಹೋರಾಟವನ್ನು ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದರೆ ಕೆಂದ್ರ ಸರ್ಕಾರ ರೈತರ ಬೇಡಿಕೆಗಳಿಗೆ ಸ್ಪಂದಿಸಲು ಸಿದ್ಧವಿಲ್ಲ. ಕೇಂದ್ರ ಸರ್ಕಾರ ಎಲ್ಲಿಯವರೆಗೆ ತನ್ನ ಸರ್ವಾಧಿಕಾರಿ ಧೋರಣೆಯನ್ನು ಕೈಬಿಡುವುದಿಲ್ಲವೋ ಅಲ್ಲಿಯವರೆಗೆ ರೈತ ಹೋರಾಟವನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ರೈತರು ಕೃಷಿ ಸಚಿವರ ಆಹ್ವಾನವನ್ನು ತಿರಸ್ಕರಿಸಿದ್ದಾರೆ.


ಇದನ್ನೂ ಓದಿ : ‘ಯುದ್ಧವಿಲ್ಲದೆ ವಿಜಯವಿಲ್ಲ!’ – 8 ನೇ ತಿಂಗಳಿಗೆ ಕಾಲಿಟ್ಟ ರೈತ ಹೋರಾಟ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...