Homeಮುಖಪುಟಪಂಜಾಬ್ ಮುಖ್ಯಮಂತ್ರಿಗಳನ್ನೆ 'ಮದ್ಯ ಪರೀಕ್ಷೆ'ಗೆ ಒಳಪಡಿಸಬೇಕು ಎಂದು ಟೀಕಿಸಿದ ಕೇಂದ್ರ ಬಿಜೆಪಿ ಸಚಿವ

ಪಂಜಾಬ್ ಮುಖ್ಯಮಂತ್ರಿಗಳನ್ನೆ ‘ಮದ್ಯ ಪರೀಕ್ಷೆ’ಗೆ ಒಳಪಡಿಸಬೇಕು ಎಂದು ಟೀಕಿಸಿದ ಕೇಂದ್ರ ಬಿಜೆಪಿ ಸಚಿವ

- Advertisement -
- Advertisement -

ಅಕ್ರಮ ಭಾರತೀಯ ವಲಸಿಗರನ್ನು ಅಮೆರಿಕದಿಂದ ಕರೆತಂದ ವಿಮಾನಗಳು ಅಮೃತಸರದಲ್ಲಿ ಇಳಿಯಲು ಅವಕಾಶ ನೀಡುವ ಕೇಂದ್ರದ ನಿರ್ಧಾರವನ್ನು ಟೀಕಿಸಿದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ಖಂಡಿಸಿದ್ದಾರೆ. “ಪಂಜಾಬ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಳಪೆಯಾಗಿದೆ, ಮುಖ್ಯಮಂತ್ರಿಯನ್ನೇ ಮದ್ಯ ಪರೀಕ್ಷೆಗೆ ಒಳಪಡಿಸಬೇಕು” ಎಂದು ಬಿಟ್ಟು ಟೀಕಿಸಿದ್ದಾರೆ.

“ವಲಸೆ ವಿಮಾನಗಳ ಲ್ಯಾಂಡಿಂಗ್ ಸೈಟ್ ಆಗಿ ಅಮೃತಸರವನ್ನು ಕೇಂದ್ರ ಆಯ್ಕೆ ಮಾಡಿರುವುದು ಪಂಜಾಬ್ ಅನ್ನು ದೂಷಿಸಲು ಉದ್ದೇಶಪೂರ್ವಕ ಪ್ರಯತ್ನವಾಗಿದೆ. ಎರಡು ದಿನಗಳ ಅಮೆರಿಕ ಭೇಟಿಯನ್ನು ಮುಗಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ ಉಡುಗೊರೆಯೇ” ಎಂದು ಮಾನ್ ಪ್ರಶ್ನಿಸಿದ್ದಾರೆ.

116 ಅಕ್ರಮ ಭಾರತೀಯ ವಲಸಿಗರ ಎರಡನೇ ಬ್ಯಾಚ್ ಅನ್ನು ಹೊತ್ತ ಯುಎಸ್ ಮಿಲಿಟರಿ ವಿಮಾನವು ಶನಿವಾರ ರಾತ್ರಿ ಪಂಜಾಬ್ ನಗರದಲ್ಲಿ ಇಳಿಯುವ ಕೆಲವೇ ಗಂಟೆಗಳ ಮೊದಲು ಮುಖ್ಯಮಂತ್ರಿಯವರ ಹೇಳಿಕೆಗಳು ಬಂದಿವೆ.

ಫೆಬ್ರವರಿ 5 ರಂದು ಅಮೃತಸರದಲ್ಲಿ ಬಂದಿಳಿದ ಮೊದಲ ಗಡೀಪಾರು ವಿಮಾನವನ್ನು ಅಹಮದಾಬಾದ್‌ಗೆ ಏಕೆ ನಿರ್ದೇಶಿಸಲಿಲ್ಲ ಎಂದು ಅವರು ಪ್ರಶ್ನಿಸಿದರು. ಏಕೆಂದರೆ, ಹೆಚ್ಚಿನ ಗಡೀಪಾರುದಾರರು ಗುಜರಾತ್‌ನವರಾಗಿದ್ದರೆ.

ಮಾನ್ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವರು, “ಇನ್ನೂ ಸಾವಿರಾರು ಜನರನ್ನು ಗಡೀಪಾರು ಮಾಡಲಾಗುತ್ತದೆ. ಪಂಜಾಬ್‌ನಲ್ಲಿ ವಿಮಾನ ಇಳಿದರೆ, ಅದು ನಮ್ಮ ರಾಜ್ಯವನ್ನು ಹೇಗೆ ದೂಷಿಸುತ್ತದೆ” ಎಂದು ಅವರು ಪ್ರಶ್ನಿಸಿದ್ದಾರೆ.

“ಮಾನ್ ಇಂದು ಅಕ್ರಮ ವಲಸಿಗರನ್ನು (ಗಡೀಪಾರು ಮಾಡಿದವರನ್ನು) ಸ್ವೀಕರಿಸಲು ಬರುವುದಿಲ್ಲ. ಅವರು ಇಲ್ಲಿದೆ ಬಂದರೆ ಮದ್ಯದ ಪರೀಕ್ಷೆಗೆ ಒಳಪಡಿಸಬೇಕು” ಎಂದು ಬಿಟ್ಟು ಹೇಳಿದ್ದಾರೆ.

ಪಂಜಾಬ್‌ನಲ್ಲಿ ಟ್ರಾವೆಲ್ ಏಜೆಂಟ್‌ಗಳ ವಿರುದ್ಧ ಕ್ರಮ ಕೈಗೊಳ್ಳಲು ಆಮ್ ಆದ್ಮಿ ಪಕ್ಷದ ನಾಯಕ ವಿಫಲರಾಗಿದ್ದಾರೆ ಎಂದು ಅವರು ಆರೋಪಿಸಿದರು. ಏಜೆಂಟ್‌ಗಳು ತಿಂಗಳುಗಟ್ಟಲೆ ವ್ಯಕ್ತಿಗಳನ್ನು ವಂಚಿಸಿ ಅಕ್ರಮ “ಡಂಕಿ ಮಾರ್ಗಗಳ” ಮೂಲಕ ಅಮೆರಿಕಕ್ಕೆ ಕರೆದೊಯ್ದಿದ್ದಾರೆ.

ಗಡೀಪಾರು ಮಾಡಿದವರಿಗೆ ಸರ್ಕಾರಿ ಉದ್ಯೋಗಗಳನ್ನು ಒದಗಿಸಬೇಕು, ಅವರನ್ನು ಅಮೆರಿಕಕ್ಕೆ ಕರೆದೊಯ್ಯಲು ಟ್ರಾವೆಲ್ ಏಜೆಂಟ್‌ಗಳಿಗೆ ನೀಡಿದ ಬೃಹತ್ ಮೊತ್ತದ ಹಣವನ್ನು ಹಿಂದಿರುಗಿಸಬೇಕು ಎಂದು ಕೇಂದ್ರ ಸಚಿವ ಬಿಟ್ಟು ಅವರು ಮಾನ್ ಅವರನ್ನು ಒತ್ತಾಯಿಸಿದರು.

ಈ ಮಧ್ಯೆ, ಕೇಂದ್ರವು ಪಿತೂರಿಯ ಭಾಗವಾಗಿ ಪಂಜಾಬ್‌ ಅನ್ನು ದೂಷಿಸಲು ಪ್ರಯತ್ನಿಸುತ್ತಿದೆ ಎಂಬ ಮಾನ್ ಅವರ ಆರೋಪಗಳನ್ನು ಕೇಂದ್ರ ಸಚಿವರು ತಳ್ಳಿಹಾಕಿದರು.

“ಅರವಿಂದ್ ಕೇಜ್ರಿವಾಲ್ ಅವರ ಆದೇಶದ ಮೇರೆಗೆ ಮಾನ್ ಪ್ರಧಾನಿಯವರ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ನನ್ನ ಬಳಿ ದೃಢವಾದ ಮಾಹಿತಿ ಇದೆ” ಎಂದು ಅವರು ಯಾವುದೇ ವಿವರಗಳನ್ನು ನೀಡದೆ ಹೇಳಿದರು.

ಮಾನ್ ಅವರ ಹೇಳಿಕೆಗಳನ್ನು ಟೀಕಿಸಿದ ಕಾಂಗ್ರೆಸ್ ಶಾಸಕ ಪ್ರತಾಪ್ ಸಿಂಗ್ ಬಜ್ವಾ, ಮುಖ್ಯಮಂತ್ರಿ ಮತ್ತು ಅವರ ಎಎಪಿ ನೇತೃತ್ವದ ಸರ್ಕಾರವು ಕಳೆದ ಮೂರು ವರ್ಷಗಳಿಂದ ಮಾನವ ಕಳ್ಳಸಾಗಣೆಯನ್ನು ಪರಿಹರಿಸಲು ವಿಫಲವಾಗಿದೆ ಎಂದು ಆರೋಪಿಸಿದರು.

157 ಗಡೀಪಾರುಗೊಂಡವರನ್ನು ಹೊತ್ತ ಮೂರನೇ ವಿಮಾನವು ಭಾನುವಾರ ಅಮೃತಸರದಲ್ಲಿ ಇಳಿಯುವ ನಿರೀಕ್ಷೆಯಿದೆ. ಆದರೆ, ಆಗಮನದ ಸಮಯದ ಬಗ್ಗೆ ತಕ್ಷಣದ ಮಾಹಿತಿ ಇಲ್ಲ.

ಇದನ್ನೂ ಓದಿ; ಪ್ರಧಾನಿ ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ ವೆಬ್‌ಸೈಟ್ ನಿರ್ಬಂಧ; ಕೇಂದ್ರ ಸರ್ಕಾರದ ನಡೆ ಖಂಡಿಸಿದ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...