ಬಜೆಟ್

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2021–22ನೇ ಸಾಲಿನ ಕೇಂದ್ರ ಬಜೆಟ್‌ ಮಂಡಿಸಲು ಸಂಸತ್‌ಗೆ ಆಗಮಿಸಿದ್ದಾರೆ. ಪ್ರಧಾನಿ ಮೋದಿ ಕೂಡಾ ಸಂಸತ್ತಿಗೆ ಪ್ರವೇಸಿದ್ದು ಬಹುನಿರೀಕ್ಷಿತ ಕೇಂದ್ರ ಬಜೆಟ್ ಅನ್ನು ನಾನುಗೌರಿ.ಕಾಮ್‌‌ನ ಫೇಸ್‌‌ಬುಕ್‌ನಲ್ಲಿ ಪ್ರಸಾರವಾಗಲಿದೆ.

ಕೊರೊನಾ ಹಿನ್ನಲೆಯಲ್ಲಿ ಎಂದಿನ ಸಂಪ್ರದಾಯವನ್ನು ಮುರಿದು ಈ ಬಾರಿ ಕಾಗದ ರಹಿತ ಬಜೆಟ್ ಮಂಡನೆಯಾಗಲಿದೆ. ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರದ ಎರಡನೇ ಅವಧಿಯ ಮೂರನೆ ಬಜೆಟ್ ಇದಾಗಲಿದೆ. ಅಲ್ಲದೆ, ಹಣಕಾಸು ಸಚಿವೆಯಾಗಿ ಇದು ನಿರ್ಮಲಾ ಸೀತಾರಾಮ್ ಮಂಡಿಸುವ ಮೂರನೆ ಬಜೆಟ್ ಆಗಿದೆ.

ಕೊರೊನಾ ನಂತರ ಮಂಡನೆಯಾಗುತ್ತಿರುವ ಮೊದಲ ಬಜೆಟ್ ಇದಾಗಿದ್ದರಿಂದ ಕೊರೊನಾದಿಂದ ಕುಸಿತಕ್ಕೊಳಗಾದ ಕ್ಷೇತ್ರಗಳ ಮೇಲೆ ಗಮನ ಹರಿಸಲಾಗುತ್ತದೆ ಎನ್ನಲಾಗಿದೆ. ಅಲ್ಲದೆ ಕೃಷಿ ಕಾನೂನಿನ ವಿರುದ್ದ ದೆಹಲಿಯ ಗಡಿಗಳಲ್ಲಿ ರೈತರು ಹೋರಾಟ ಮಾಡುತ್ತಿರುವುದರಿಂದ ರೈತರನ್ನು ಕೂಡಾ ಈ ಬಜೆಟ್ ಕೇಂದ್ರೀಕರಿಸಲಿದೆ ಎಂದು ನಿರೀಕ್ಷಿಸಲಾಗಿದೆ.

ಈ ನಡುವೆ ರೈತರ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದು, ದೆಹಲಿ ಗಡಿಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ರೈತರು ಬ್ಯಾರಿಕೇಡ್‌ಗಳನ್ನು ದಾಟಿ ಬರದಂತೆ ತಡೆಯಲು ಪ್ರತಿಭಟನಾ ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

ಲೈವ್‌ ವಿಡಿಯೋ ನೋಡಿ►►

LEAVE A REPLY

Please enter your comment!
Please enter your name here