Homeಮುಖಪುಟಕೇಂದ್ರ ಬಜೆಟ್ 2024-ಬಂಡವಾಳ ಲಾಭದ ಮೇಲಿನ ತೆರಿಗೆ ದರ ಹೆಚ್ಚಳ ಪ್ರಸ್ತಾಪ; ರೂಪಾಯಿ ಮೌಲ್ಯ ಕುಸಿತ

ಕೇಂದ್ರ ಬಜೆಟ್ 2024-ಬಂಡವಾಳ ಲಾಭದ ಮೇಲಿನ ತೆರಿಗೆ ದರ ಹೆಚ್ಚಳ ಪ್ರಸ್ತಾಪ; ರೂಪಾಯಿ ಮೌಲ್ಯ ಕುಸಿತ

- Advertisement -
- Advertisement -

ಸಾರ್ವಕಾಲಿಕ ಕನಿಷ್ಠ ಮಟ್ಟದಲ್ಲಿರುವ ಭಾರತೀಯ ರೂಪಾಯಿ ಮೌಲ್ಯವು ಯುಎಸ್ ಡಾಲರ್ ಎದುರು ಮಂಗಳವಾರ ಮತ್ತಷ್ಟು ಕುಸಿದಿದೆ. ಕೇಂದ್ರ ಬಜೆಟ್‌ನಲ್ಲಿ ಸರ್ಕಾರವು ಬಂಡವಾಳ ಲಾಭದ ಮೇಲಿನ ತೆರಿಗೆ ದರವನ್ನು ಹೆಚ್ಚಿಸುವ ಪ್ರಸ್ತಾಪವನ್ನು ಮಾಡಿದ ನಂತರ ಸ್ಥಳೀಯ ಷೇರುಗಳ ಕುಸಿತದಿಂದ ಒತ್ತಡಕ್ಕೆ ರೂಪಾಯಿ ಮೌಲ್ಯ ಒಳಗಾಯಿತು.

ಮಧ್ಯಮ ಮತ್ತು ಮೇಲ್ಮಧ್ಯಮ ವರ್ಗದವರಿಗೆ ಕೆಲವು ಹಣಕಾಸು ಆಸ್ತಿಗಳ ಮೇಲಿನ ಬಂಡವಾಳ ಲಾಭದ ವಿನಾಯಿತಿ ಮಿತಿಯನ್ನು ವರ್ಷಕ್ಕೆ ₹1.25 ಲಕ್ಷಕ್ಕೆ ಹೆಚ್ಚಿಸಲು ಸರ್ಕಾರ ಯೋಜಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಹೇಳಿದ್ದಾರೆ.

ನಂತರ, ರೂಪಾಯಿಯು ಡಾಲರ್‌ ಮುಂದೆ 83.69 ಕ್ಕೆ ಕುಸಿಯಿತು. ಬಜೆಟ್ ಘೋಷಣೆಯ ಮೊದಲು 83.6275 ಗೆ ಹೋಲಿಸಿದರೆ, ಹಿಂದಿನ ಸಾರ್ವಕಾಲಿಕ ಕನಿಷ್ಠ 83.6775 ಅನ್ನು ದಾಟಿದೆ. ಬಜೆಟ್ ಪ್ರಕಟಣೆಗಳ ನಂತರ ಷೇರು ಮಾರುಕಟ್ಟೆಯು ಕುಸಿದಿದ್ದು, ಇದು ಅಲ್ಪಾವಧಿಯಲ್ಲಿ ಮಾರುಕಟ್ಟೆಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು ಎಂದು ವಿಶ್ಲೇಷಕರು ಹೇಳಿದ್ದಾರೆ.

ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್‌ಐಐ) ಸೋಮವಾರ ಬಂಡವಾಳ ಮಾರುಕಟ್ಟೆಗಳಲ್ಲಿ ನಿವ್ವಳ ಖರೀದಿದಾರರಾಗಿದ್ದಾರೆ. ಅವರು ವಿನಿಮಯ ಮಾಹಿತಿಯ ಪ್ರಕಾರ ₹ 3,444.06 ಕೋಟಿ ಮೌಲ್ಯದ ಷೇರುಗಳನ್ನು ಖರೀದಿಸಿದ್ದಾರೆ.

ಸೋಮವಾರ ಸಂಸತ್ತಿನಲ್ಲಿ ಮಂಡಿಸಲಾದ ಆರ್ಥಿಕ ಸಮೀಕ್ಷೆ 2023-24, 2024-25ರಲ್ಲಿ ಭಾರತದ ಜಿಡಿಪಿಯು ಶೇಕಡಾ 6.5-7 ರಷ್ಟು ಬೆಳವಣಿಗೆಯಾಗಲಿದೆ ಎಂದು ಅಂದಾಜಿಸಿದೆ. ಇದು ಹಿಂದಿನ ಹಣಕಾಸು ವರ್ಷದಲ್ಲಿ ಶೇಕಡಾ 8.2 ರಷ್ಟಿತ್ತು. ಆರ್ಥಿಕ ಸಮೀಕ್ಷೆಯಲ್ಲಿನ ಪ್ರಕ್ಷೇಪಣವು ರಿಸರ್ವ್ ಬ್ಯಾಂಕ್‌ನ ಬೆಳವಣಿಗೆಯ ಅಂದಾಜಿನ 7.2 ಶೇಕಡಾಕ್ಕಿಂತ ಸ್ವಲ್ಪ ಕಡಿಮೆಯಾಗಿದೆ.

ಇದನ್ನೂ ಓದಿ; ಜನಗಣತಿಯ ಬಗ್ಗೆ ಬಜೆಟ್‌ನಲ್ಲಿ ಪ್ರಸ್ತಾಪಿಸದ ನಿರ್ಮಲಾ ಸೀತಾರಾಮನ್; ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...