Homeಮುಖಪುಟಕೇಂದ್ರ ಬಜೆಟ್ 2024: ಎನ್‌ಡಿಎ ಮಿತ್ರಪಕ್ಷಗಳ ಆಡಳಿತವಿರುವ ಬಿಹಾರ, ಆಂಧ್ರಪ್ರದೇಶಕ್ಕೆ ಸಿಕ್ಕಿದ್ದೇನು?

ಕೇಂದ್ರ ಬಜೆಟ್ 2024: ಎನ್‌ಡಿಎ ಮಿತ್ರಪಕ್ಷಗಳ ಆಡಳಿತವಿರುವ ಬಿಹಾರ, ಆಂಧ್ರಪ್ರದೇಶಕ್ಕೆ ಸಿಕ್ಕಿದ್ದೇನು?

- Advertisement -
- Advertisement -

ಪ್ರಧಾನಮಂತ್ರಿ ನರೇಂದ್ರ ಮೋದಿ 3.0 ಸರ್ಕಾರದ ಮೊದಲ ಬಜೆಟ್‌ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ವಿಶೇಷ ಘೋಷಣೆ ಮಾಡಿದ್ದಾರೆ. ಎರಡೂ ರಾಜ್ಯಗಳ ಆಡಳಿತ ಪಕ್ಷಗಳು ಪ್ರಸ್ತುತ ಎನ್‌ಡಿಎ ಸರ್ಕಾರದ ಮಿತ್ರಪಕ್ಷಗಳಾಗಿವೆ.

ಜೆಡಿಯು ಆಡಳಿತವಿರುವ ಬಿಹಾರಕ್ಕೆ ಸರ್ಕಾರವು ಹಲವಾರು ಮೂಲಸೌಕರ್ಯ ಯೋಜನೆಗಳನ್ನು ಮೀಸಲಿಡುವುದರೊಂದಿಗೆ ಬಿಹಾರಕ್ಕೆ ಉತ್ತಮ ಆರ್ಥೀಕ ನೆರವು ಸಿಗುವ ಸಾಧ್ಯತೆ ಇದೆ. ಬಿಹಾರದ ವಿವಿಧ ರಸ್ತೆ ಯೋಜನೆಗಳಿಗೆ ಬಜೆಟ್‌ನಲ್ಲಿ ₹20,000 ಕೋಟಿ ನೀಡಲಾಗಿದೆ.

ಪಾಟ್ನಾ-ಪೂರ್ಣಿಯಾ, ಬಕ್ಸರ್-ಭಾಗಲ್ಪುರ್ ಮತ್ತು ಬೋಧಗಯಾ-ರಾಜ್ಗೀರ್-ವೈಶಾಲಿ-ದರ್ಭಾಂಗ ಎಕ್ಸ್‌ಪ್ರೆಸ್‌ವೇ ಮತ್ತು ಬಕ್ಸಾರ್‌ನಲ್ಲಿ ಗಂಗಾ ನದಿಯ ಮೇಲೆ ಹೆಚ್ಚುವರಿ ಎರಡು-ಪಥದ ಸೇತುವೆ ಸೇರಿದಂತೆ, ರಾಜ್ಯದಲ್ಲಿ ವಿಮಾನ ನಿಲ್ದಾಣಗಳು, ವೈದ್ಯಕೀಯ ಕಾಲೇಜುಗಳು ಮತ್ತು ಕ್ರೀಡಾ ಮೂಲಸೌಕರ್ಯಗಳನ್ನು ಸ್ಥಾಪಿಸಲು ಕೇಂದ್ರವು ಯೋಜಿಸಿದೆ. ಬಹುಪಕ್ಷೀಯ ಅಭಿವೃದ್ಧಿ ಏಜೆನ್ಸಿಗಳ ನೆರವಿನ ಮೂಲಕ ಬಿಹಾರಕ್ಕೆ ಹಣಕಾಸಿನ ನೆರವು ವ್ಯವಸ್ಥೆ ಮಾಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದರು.

“ಅಮೃತಸರ-ಕೋಲ್ಕತ್ತಾ ಕೈಗಾರಿಕಾ ಕಾರಿಡಾರ್‌ನಲ್ಲಿ, ಬಿಹಾರದ ಗಯಾದಲ್ಲಿ ಕೈಗಾರಿಕಾ ಅಭಿವೃದ್ದಿಯನ್ನು ನಾವು ಬೆಂಬಲಿಸುತ್ತೇವೆ. ಇದು ಪೂರ್ವ ಪ್ರದೇಶದ ಅಭಿವೃದ್ಧಿಗೆ ವೇಗವನ್ನು ನೀಡುತ್ತದೆ” ಎಂದು ಹಣಕಾಸು ಸಚಿವರು ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದರು.

ರಾಜ್ಯದ ಪ್ರವಾಸೋದ್ಯಮ ವಲಯವು ವಿಷ್ಣುಪಾದ್ ಮತ್ತು ಮಹಾಬೋಧಿ ದೇವಸ್ಥಾನದ ಕಾರಿಡಾರ್‌ಗಳನ್ನು ವಿಶ್ವದರ್ಜೆಯ ಯಾತ್ರಿಗಳು ಮತ್ತು ಪ್ರವಾಸಿ ತಾಣಗಳಾಗಿ ಅಭಿವೃದ್ಧಿಪಡಿಸುವ ಯೋಜನೆಗಳೊಂದಿಗೆ ಪ್ರಮುಖ ಹಂಚಿಕೆಗಳನ್ನು ಹೊಂದಿದೆ. ಕೇಂದ್ರವು ರಾಜಗೀರ್ ಮತ್ತು ನಳಂದಾವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಯೋಜಿಸಿದೆ. ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ ಮತ್ತು ಆಂಧ್ರಪ್ರದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ನಾವು ಪೂರ್ವೋದಯ ಯೋಜನೆಯನ್ನು ರೂಪಿಸುತ್ತೇವೆ ಎಂದು ಹಣಕಾಸು ಸಚಿವರು ಹೇಳಿದರು.

ಪ್ರತಿ ವರ್ಷ 1 ಲಕ್ಷ ವಿದ್ಯಾರ್ಥಿಗಳಿಗೆ ಸಾಲದ ಮೊತ್ತದ ಶೇಕಡಾ 3 ರ ಬಡ್ಡಿ ರಿಯಾಯಿತಿಯೊಂದಿಗೆ ಸರ್ಕಾರವು ನೇರವಾಗಿ ಇ-ವೋಚರ್‌ಗಳನ್ನು ನೀಡುತ್ತದೆ ಎಂದು ಹಣಕಾಸು ಸಚಿವರು ಹೇಳಿದರು.

ಆಂಧ್ರಪ್ರದೇಶ

ಟಿಡಿಪಿ ಆಡಳಿತದಲ್ಲಿರುವ ಆಂಧ್ರಪ್ರದೇಶಕ್ಕೆ ಅದರ ರಾಜಧಾನಿ ಅಮರಾವತಿಯ ಅಭಿವೃದ್ಧಿಗೆ ₹15,000 ಕೋಟಿ  ಆರ್ಥಿಕ ನೆರವು ನೀಡಲಾಗುವುದು. ಕೇಂದ್ರವು ಆರ್ಥಿಕ ನೆರವು ನೀಡುವ ಭರವಸೆಯೊಂದಿಗೆ ಪೋಲಾವರಂ ನೀರಾವರಿ ಯೋಜನೆಗೆ ಹೆಚ್ಚಿನ ಉತ್ತೇಜನ ಸಿಕ್ಕಿದೆ. ಈ ಯೋಜನೆಯನ್ನು ಆಂಧ್ರದ ರೈತರಿಗೆ ಜೀವನಾಡಿ ಎಂದು ಪರಿಗಣಿಸಲಾಗಿದೆ.

“ಆಂಧ್ರ ಪ್ರದೇಶ ಮರುಸಂಘಟನೆ ಕಾಯಿದೆಯಲ್ಲಿನ ಬದ್ಧತೆಗಳನ್ನು ಪೂರೈಸಲು ನಮ್ಮ ಸರ್ಕಾರವು ಸಂಘಟಿತ ಪ್ರಯತ್ನಗಳನ್ನು ಮಾಡಿದೆ. ನಾವು ರಾಜ್ಯದ ಬಂಡವಾಳದ ಅಗತ್ಯವನ್ನು ಗುರುತಿಸುತ್ತಿದ್ದೇವೆ. ನಾವು ಬಹುಪಕ್ಷೀಯ ಅಭಿವೃದ್ಧಿ ಏಜೆನ್ಸಿಗಳ ಮೂಲಕ ವಿಶೇಷ ಹಣಕಾಸಿನ ನೆರವು ನೀಡುತ್ತೇವೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ₹15,000 ಕೋಟಿ ಮುಂದಿನ ವರ್ಷಗಳಲ್ಲಿ ಹೆಚ್ಚುವರಿ ಮೊತ್ತ ನೀಡಲಾಗುವುದು” ಎಂದು ಅವರು ಹೇಳಿದರು.

ಎಪಿ ಮರುಸಂಘಟನೆ ಕಾಯಿದೆಯಡಿಯಲ್ಲಿ ರಾಯಲಸೀಮಾ, ಪ್ರಕಾಶಂ ಉತ್ತರ ಕರಾವಳಿ ಆಂಧ್ರಪ್ರದೇಶದ ಹಿಂದುಳಿದ ಪ್ರದೇಶಗಳಿಗೆ ನೀರು, ವಿದ್ಯುತ್, ರೈಲ್ವೆ ಮತ್ತು ರಸ್ತೆಗಳಂತಹ ಕೈಗಾರಿಕೆಗಳ ಅಭಿವೃದ್ಧಿ ಮತ್ತು ಅಗತ್ಯ ಮೂಲಸೌಕರ್ಯಗಳಿಗೆ ಸಹ ಹಣವನ್ನು ಒದಗಿಸಲಾಗುವುದು. ವಿಶಾಖಪಟ್ಟಣಂ-ಚೆನ್ನೈ ಮತ್ತು ಹೈದರಾಬಾದ್-ಬೆಂಗಳೂರು ಕೈಗಾರಿಕಾ ಕಾರಿಡಾರ್‌ಗಳನ್ನೂ ಸಹ ಸಚಿವರು ಘೋಷಿಸಿದರು.

ಇದನ್ನೂ ಓದಿ; ಕೇಂದ್ರ ಬಜೆಟ್ | ವಿತ್ತ ಸಚಿವರು ಕಾಂಗ್ರೆಸ್ ಪ್ರಣಾಳಿಕೆ ಓದಿರುವುದು ಖುಷಿ ತಂದಿದೆ: ಪಿ. ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...