ಕೇಂದ್ರ ಸಚಿವೆ ಹಾಗೂ ಶಿರೋಮಣಿ ಅಕಾಲಿ ದಳದ ನಾಯಕಿ ಹರ್ಸಿಮ್ರತ್ ಕೌರ್ ಬಾದಲ್, ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ತಂದಿರುವ ಹೊಸ ಕೃಷಿ ಮಸೂದೆಗಳನ್ನು ವಿರೋಧಿಸಿ ರಾಜೀನಾಮೆ ನೀಡಿದ್ದಾರೆ.
ಮೂರು ಕೃಷಿ ಮಸೂದೆಗಳನ್ನು ಲೋಕಸಭೆಯಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು ಇದಕ್ಕೆ ಅಂಕಿತ ಸಿಗುವಂತೆ ವಿಪ್ ಜಾರಿ ಮಾಡಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಹರ್ಸಿಮ್ರತ್ ಕೌರ್ ಬಾದಲ್ ಸಚಿವೆ ಸ್ಥಾನ ತೊರೆಯಲು ನಿರ್ಧರಿಸಿದ್ದಾರೆ. ವಿರೋಧ ಪಕ್ಷಗಳು ಕೂಡಾ ಈ ಮಸೂದೆಗೆ ಲೋಕಸಭೆಯಲ್ಲಿ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಇದನ್ನೂ ಓದಿ: ಬಿಜೆಪಿ ಸರಕಾರ ಕೃಷಿ ಉತ್ಪನ್ನ ಮಾರಾಟದಲ್ಲಿಯೂ ಮಾಫಿಯ ಸೃಷ್ಠಿ ಮಾಡುತ್ತಿದೆ: ಕರ್ನಾಟಕ ಪ್ರಾಂತ ರೈತ ಸಂಘ ಆರೋಪ
ಈ ಬಗ್ಗೆ ಅಕಾಲಿದಳ ಪಕ್ಷದ ನಾಯಕ ಸುಖ್ ಬೀರ್ ಬಾದಲ್ ಪ್ರತಿಕ್ರಿಯಿಸಿ, ಅಕಾಲಿ ದಳ ಬಿಜೆಪಿ ಮತ್ತು ಕೇಂದ್ರ ಸರಕಾರಕ್ಕೆ ಬೆಂಬಲವನ್ನು ಮುಂದುವರಿಸಲಿದೆ, ಆದರೆ ಸರಕಾರದ ‘ರೈತ ವಿರೋಧಿ ರಾಜಕೀಯ’ವನ್ನು ವಿರೋಧಿಸುವುದಾಗಿ ತಿಳಿಸಿದ್ದಾರೆ.
ಅವರು ತನ್ನ ಟ್ವೀಟ್‌ನಲ್ಲಿ, ಅಕಾಲಿ ದಳ ಎಲ್ಲಾ ಮೂರು ಕೃಷಿ ಮಸೂದೆಯನ್ನು ವಿರೋಧಿಸುವುದಾಗಿ ಬರೆದಿದ್ದಾರೆ.
ਸ਼੍ਰੋਮਣੀ ਅਕਾਲੀ ਦਲ ਕੇਂਦਰ ਸਰਕਾਰ ਦੇ ਤਿੰਨਾਂ ਖੇਤੀ ਆਰਡੀਨੈਂਸਾਂ ਦਾ ਵਿਰੋਧ ਕਰਦਾ ਹੈ।@Akali_Dal_ opposes all the three agriculture #ordinances of the Central Government.#ParliamentSession pic.twitter.com/ioiKGQk9jM
— Sukhbir Singh Badal (@officeofssbadal) September 17, 2020
ಮಸೂದೆಯು ಕೃಷಿ ಕ್ಷೇತ್ರದ ಶ್ರೇಯೋಭಿವೃದ್ಧಿಗಾಗಿ ಎಂದು ಕೇಂದ್ರ ಸರಕಾರ ಹೇಳುತ್ತಿದ್ದು, ಈ ಮಸೂದೆಯನ್ನು ವಿರೋಧಿಸಿ ಪಂಜಾಬ್ ಮತ್ತು ಹರಿಯಾಣದ ರೈತರು ತೀವ್ರ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ.
ಇದನ್ನೂ ಓದಿ: ಕೋಆಪರೇಟೀಕರಣದತ್ತ ಹೊರಳಬೇಕಿದ್ದ ಕೃಷಿ ಕಾರ್ಪೋರೇಟೀಕರಣದತ್ತ: ಈ ವಿನಾಶದ ಪರಿಣಾಮಗಳೇನು?


