ರಾಂಚಿ ಸಂಸದ ಮತ್ತು ಕೇಂದ್ರ ರಕ್ಷಣಾ ಖಾತೆ ರಾಜ್ಯ ಸಚಿವ ಸಂಜಯ್ ಸೇಠ್ ಅವರು ನವದೆಹಲಿಯಲ್ಲಿ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಿದ್ದಾಗಲೆ ದುಷ್ಕರ್ಮಿಗಳು ಬೆದರಿಕೆ ಪತ್ರ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳು ಕಳುಹಿಸಿದರುವ ಪಠ್ಯದಲ್ಲಿ ಸಚಿವರೊಂದಿಗೆ 50 ಲಕ್ಷ ನೀಡಬೇಕು ಎಂಬ ಬೇಡಿಕೆಯನ್ನು ಸಲ್ಲಿಸಿದ್ದಾರೆ. ಕೇಂದ್ರ ರಕ್ಷಣಾ ಸಚಿವರಿಗೆ
ಬೆದರಿಕೆ ಸಂದೇಶದ ಹಿಂದಿರುವ ಆರೋಪಿಗಳು, ಮೂರು ದಿನಗಳಲ್ಲಿ 50 ಲಕ್ಷ ಮೊತ್ತವನ್ನು ಪಾವತಿಸುವಂತೆ ಹೇಳಿದ್ದು, ಇಲ್ಲದಿದ್ದರೆ ತೀವ್ರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಸಚಿವರನ್ನು ಎಚ್ಚಿರಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ದುಷ್ಕರ್ಮಿಗಳು ಸಚಿವರ ಫೋನ್‌ಗೆ ಸಂದೇಶ ಕಳುಹಿಸಿದ್ದಾಗ ಅವರು ದೆಹಲಿಯಲ್ಲಿದ್ದರು ಎಂದು ವರದಿಯಾಗಿದೆ. ಘಟನೆ ಕುರಿತು ಮಾತನಾಡಿದ ಅವರು, ನಾನು ಪೊಲೀಸರಿಗೆ ಮಾಹಿತಿ ನೀಡಿದ್ದೇನೆ. ಇಂದು ನಾನು ನನ್ನ ಕ್ಷೇತ್ರದಲ್ಲಿದ್ದೇನೆ. ಪೊಲೀಸರು ತನಿಖೆಯ ಕೆಲಸವನ್ನು ಮಾಡುತ್ತಿದ್ದಾರೆ, ನಾನು ನನ್ನ ಕೆಲಸವನ್ನು ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.
ಬೆದರಿಕೆಯ ನಂತರ, ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ, ದೆಹಲಿ ಮತ್ತು ಜಾರ್ಖಂಡ್ ಎರಡರಲ್ಲೂ ತನಿಖೆ ನಡೆಯುತ್ತಿದೆ. ಸಚಿವರಿಗೆ ಎಚ್ಚರಿಕೆ ನೀಡಿದ ನಂತರ ದೆಹಲಿ ಪೊಲೀಸರು ಪ್ರಾಥಮಿಕ ತನಿಖೆಯನ್ನು ಪ್ರಾರಂಭಿಸಿದ್ದರು. ಪೊಲೀಸ್ ಕಮಿಷನರ್ ಸೇರಿದಂತೆ ಉನ್ನತ ಅಧಿಕಾರಿಗಳು ದೆಹಲಿಯಲ್ಲಿರುವ ಅವರ ನಿವಾಸಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ವಿವರಗಳನ್ನು ಸಂಗ್ರಹಿಸಿದ್ದಾರೆ.
ದೆಹಲಿ ಪೊಲೀಸರು ನಡೆಸಿದ ತನಿಖೆಯಲ್ಲಿ, ಆರೋಪಿಗಳು ರಾಂಚಿಯ ಹೊಸಿರ್‌ನಿಂದ ಸಂದೇಶ ಕಳುಹಿಸಿದ್ದಾರೆ ಎಂಬುವುದನ್ನು ಪತ್ತೆಹಚ್ಚಿದ್ದರು. ನಂತರ, ದೆಹಲಿ ಪೊಲೀಸರು ಜಾರ್ಖಂಡ್ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅನುರಾಗ್ ಗುಪ್ತಾ ಅವರಿಗೆ ತನಿಖೆಯ ಬಗ್ಗೆ ಮಾಹಿತಿ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಗುಪ್ತಾ ಅವರು ಈ ಬಗ್ಗೆ ತಕ್ಷಣದ ತನಿಖೆಗೆ ಆದೇಶಿಸಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ದೆಹಲಿ ಪೊಲೀಸರು ಮತ್ತು ರಾಂಚಿ ಪೊಲೀಸರ ಜಂಟಿ ತಂಡವು ಕಂಕೆ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಿರ್‌ನಲ್ಲಿ ತನಿಖೆ ನಡೆಸುತ್ತಿದೆ. ಇಲ್ಲಿಯವರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ. ಕೇಂದ್ರ ಮಟ್ಟದ ಸಚಿವರೊಬ್ಬರು ಪಠ್ಯ ಸಂದೇಶದ ಮೂಲಕ ಸುಲಿಗೆ ಬೆದರಿಕೆಯನ್ನು ಸ್ವೀಕರಿಸಿದ ಮೊದಲ ನಿದರ್ಶನ ಇದಾಗಿದೆ ಎಂದು ವರದಿಯಾಗಿದೆ. ಕೇಂದ್ರ ರಕ್ಷಣಾ ಸಚಿವರಿಗೆ
ಇದನ್ನೂ ಓದಿ: ಮದ್ಯ & ತಂಬಾಕಿನೊಂದಿಗೆ ‘ಮಾಂಸಾಹಾರ’ವನ್ನು ಹೋಲಿಸಿದ ಕನ್ನಡ ಸಾಹಿತ್ಯ ಪರಿಷತ್ – ಆಕ್ರೋಶ
ಮದ್ಯ & ತಂಬಾಕಿನೊಂದಿಗೆ ‘ಮಾಂಸಾಹಾರ’ವನ್ನು ಹೋಲಿಸಿದ ಕನ್ನಡ ಸಾಹಿತ್ಯ ಪರಿಷತ್ – ಆಕ್ರೋಶ


