Homeಮುಖಪುಟಅಮಿತ್ ಶಾ ಭಾಷಣದ ವಿಡಿಯೋ ಡಿಲಿಟ್ ಮಾಡುವಂತೆ ಎಕ್ಸ್‌ಗೆ ಸೂಚಿಸಿದ ಕೇಂದ್ರ ಸರ್ಕಾರ : ಕಾಂಗ್ರೆಸ್...

ಅಮಿತ್ ಶಾ ಭಾಷಣದ ವಿಡಿಯೋ ಡಿಲಿಟ್ ಮಾಡುವಂತೆ ಎಕ್ಸ್‌ಗೆ ಸೂಚಿಸಿದ ಕೇಂದ್ರ ಸರ್ಕಾರ : ಕಾಂಗ್ರೆಸ್ ಆರೋಪ

- Advertisement -
- Advertisement -

ರಾಜ್ಯಸಭೆಯಲ್ಲಿ ಅಂಬೇಡ್ಕರ್ ಕುರಿತು ಅಮಿತ್ ಶಾ ನೀಡಿರುವ ವಿವಾದಾತ್ಮಕ ಹೇಳಿಕೆಯ ವಿಡಿಯೋವನ್ನು ತೆಗೆದು ಹಾಕುವಂತೆ ಸಾಮಾಜಿಕ ಜಾಲತಾಣ ಎಕ್ಸ್‌ಗೆ ಕೇಂದ್ರ ಸರ್ಕಾರ ಸೂಚಿಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಈ ಕುರಿತು ದೆಹಲಿಯ ವಿಜಯ್ ಚೌಕ್ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ವಕ್ತಾರೆ ಹಾಗೂ ಪಕ್ಷದ ಸಾಮಾಜಿಕ ಮಾಧ್ಯಮ ಮತ್ತು ಡಿಜಿಟಲ್ ಪ್ಲಾಟ್‌ಫಾರ್ಮ್‌ ವಿಭಾಗದ ಅಧ್ಯಕ್ಷೆ ಸುಪ್ರಿಯಾ ಶ್ರಿನೇಟ್, ” ಅಮಿತ್ ಶಾ ಅವರ ಭಾಷಣದ ವಿಡಿಯೋವನ್ನು ಡಿಲಿಟ್ ಮಾಡುವಂತೆ ಕೇಂದ್ರ ಸರ್ಕಾರ ಸೂಚಿಸಿರುವುದಾಗಿ ಕಾಂಗ್ರೆಸ್‌ ಸಂಸದರು, ಪದಾಧಿಕಾರಿಗಳು, ಪಕ್ಷದ ಅಧಿಕೃತ ಹ್ಯಾಂಡಲ್‌ ಮತ್ತು ವಿಪಕ್ಷದ ಕೆಲ ನಾಯಕರಿಗೆ ಎಕ್ಸ್‌ನಿಂದ ಈ-ಮೇಲ್ ಬಂದಿದೆ” ಎಂದು ಹೇಳಿದರು.

“ಬಾಬಾ ಸಾಹೇಬರ ಕುರಿತು ಅಮಿತ್ ಶಾ ಅವರು ನೀಡಿರುವ ಹೇಳಿಕೆ ಅಕ್ಷ್ಯಮ್ಯ ಅಪರಾಧ. ಅವರು ಈ ಪಾಪಕೃತ್ಯಕ್ಕೆ ಕ್ಷಮೆ ಯಾಚಿಸಬೇಕು. ಅವರನ್ನು ಗೃಹಮಂತ್ರಿ ಹುದ್ದೆಯಿಂದ ವಜಾ ಮಾಡಬೇಕು ಎಂದು ದೇಶ ಆಗ್ರಹಿಸುತ್ತಿದೆ. ಈ ನಡುವೆ ಪ್ರಧಾನಿ ಮೋದಿ ಮತ್ತು ಇಡೀ ಆಡಳಿತಯಂತ್ರ ಅವರನ್ನು ರಕ್ಷಣೆ ಮಾಡುತ್ತಿದೆ” ಎಂದು ವಾಗ್ದಾಳಿ ನಡೆಸಿದರು.

“ಅಮಿತ್ ಶಾ ಅವರು ಅಂಬೇಡ್ಕರ್ ಕುರಿತು ನೀಡಿರುವ ಅವಮಾನಕರ ಹೇಳಿಕೆಯ ವಿಡಿಯೋವನ್ನು ಪೋಸ್ಟ್‌ ಮಾಡುವುದು ದೇಶದ ಕಾನೂನಿನ ಉಲ್ಲಂಘನೆಯಾಗಿದೆ. ಅದನ್ನು ತೆಗೆದು ಹಾಕಬೇಕು ಎಂದು ಎಕ್ಸ್‌ಗೆ ಸರ್ಕಾರ ಸೂಚನೆ ನೀಡಿದೆ. ಆದರೆ, ಎಕ್ಸ್‌ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿ ಹಿಡಿದು ವಿಡಿಯೋ ಡಿಲಿಟ್ ಮಾಡಲು ನಿರಾಕರಿಸಿದೆ. ಈ ಸಂಬಂಧ ನಮಗೆ ಈ-ಮೇಲ್ ಕಳುಹಿಸಿದೆ” ಎಂದು ತಿಳಿಸಿದರು.

“ನೀವು ವಿಡಿಯೋ ಡಿಲಿಟ್ ಮಾಡಲು ಏಕೆ ಸೂಚಿಸುತ್ತಿದ್ದೀರಿ? ನೀವು ಯಾವ ಮುಖ ಇಟ್ಟುಕೊಂಡು ವಿಡಿಯೋ ಕಾನೂನು ಉಲ್ಲಂಘಿಸುತ್ತಿದೆ ಎಂದಿದ್ದೀರಿ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ : ‘ಬಿಜೆಪಿ ಸಂಸದರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ’ : ತನಿಖೆಗೆ ಆಗ್ರಹಿಸಿ ಸ್ಪೀಕರ್‌ಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...