Homeಮುಖಪುಟಪತ್ರಿಕಾ ಸ್ವಾತಂತ್ರ್ಯ ಕಿತ್ತುಕೊಳ್ಳುವ ಮಸೂದೆ ಅಂಗೀಕರಿಸಿದ ಕೇಂದ್ರ ಸರ್ಕಾರ

ಪತ್ರಿಕಾ ಸ್ವಾತಂತ್ರ್ಯ ಕಿತ್ತುಕೊಳ್ಳುವ ಮಸೂದೆ ಅಂಗೀಕರಿಸಿದ ಕೇಂದ್ರ ಸರ್ಕಾರ

- Advertisement -
- Advertisement -

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಆಗಸ್ಟ್ 1ರಂದು ’ಪತ್ರಿಕೆಗಳು ಮತ್ತು ನಿಯತಕಾಲಿಕಗಳ ನೋಂದಣಿ ಮಸೂದೆ-2023’ನ್ನು ರಾಜ್ಯಸಭೆಯಲ್ಲಿ ಮಂಡಿಸಿ, ಎರಡು ದಿನಗಳ ನಂತರ ಧ್ವನಿ ಮತದಿಂದ ಅಂಗೀಕರಿಸಿತು. ಇದು ಅಸ್ತಿತ್ವದಲ್ಲಿರುವ ’ಪ್ರೆಸ್ ಅಂಡ್ ರಿಜಿಸ್ಟ್ರೇಶನ್ ಆಫ್ ಬುಕ್ಸ್ ಆಕ್ಟ್, 1867’ಅನ್ನು ಬದಲಿಸುತ್ತದೆ.

ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು, ’ಈ ಮಸೂದೆಯಿಂದ ಮಾಧ್ಯಮ ಮತ್ತು ಪ್ರಕಾಶನ ಕಂಪನಿಗಳಿಗೆ ವ್ಯವಹಾರವನ್ನು ಸುಲಭಗೊಳಿಸಲು ಕಾರಣವಾಗುತ್ತದೆ, ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸುತ್ತದೆ ಮತ್ತು ವಸಾಹತುಶಾಹಿ ಯುಗದ ಹಲವಾರು ದಂಡದ ನಿಬಂಧನೆಗಳನ್ನು ತೊಡೆದುಹಾಕುತ್ತದೆ’ ಎಂದು ಹೇಳಿದ್ದಾರೆ. ಆದರೆ ಎಡಿಟರ್ಸ್ ಗಿಲ್ಡ್ ಮಾತ್ರ ಈ ಮಸೂದೆ ಅನಗತ್ಯವಾದ ಕಠಿಣ ನಿಬಂಧನೆಗಳನ್ನು ಒಳಗೊಂಡಿದೆ ಎಂದು ಕಳವಳ ವ್ಯಕ್ತಪಡಿಸಿದೆ.

ಅನುರಾಗ್ ಠಾಕೂರ್

ಭಯೋತ್ಪಾದಕ ಚಟುವಟಿಕೆಗಳು ಅಥವಾ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವವರಿಗೆ ಪತ್ರಿಕೆ ಅಥವಾ ನಿಯತಕಾಲಿಕವನ್ನು ಪ್ರಾರಂಭಿಸಲು ಅನುಮತಿ ನೀಡಲಾಗುವುದಿಲ್ಲ ಎಂದು ಮಸೂದೆ ಹೇಳುತ್ತದೆ. ಆದರೆ ಈ ನಿಬಂಧನೆಯು ಸರ್ಕಾರವನ್ನು ಟೀಕಿಸುವ ವ್ಯಕ್ತಿಗಳಿಗೆ ಸುದ್ದಿಪತ್ರಿಕೆಗಳನ್ನು ಹೊರತರುವ ಹಕ್ಕನ್ನು ಕಿತ್ತುಕೊಳ್ಳಲು ದಾರಿ ಮಾಡಿಕೊಡುತ್ತದೆ ಎಂದು ದೆಹಲಿ ಮೂಲದ ಸಂಪಾದಕರ ಸಮೂಹ ಭಾರತದ ಎಡಿಟರ್ಸ್ ಗಿಲ್ಡ್ ತೀವ್ರ ಆತಂಕ ವ್ಯಕ್ತಪಡಿಸಿದೆ.

“ಭಯೋತ್ಪಾದಕ ಕೃತ್ಯ ಅಥವಾ ಕಾನೂನುಬಾಹಿರ ಚಟುವಟಿಕೆ” ಅಥವಾ “ರಾಜ್ಯದ ಭದ್ರತೆಯ ವಿರುದ್ಧ ಕೆಲಸ ಮಾಡಿದ್ದಕ್ಕಾಗಿ” ಅಪರಾಧಿಗಳಿಗೆ ನಿಯತಕಾಲಿಕವನ್ನು ಹೊರತರುವ ಹಕ್ಕನ್ನು ನಿರಾಕರಿಸಲು ಮಸೂದೆಯ ಸೆಕ್ಷನ್ 4(1) ಮತ್ತು 11(4) ಸರ್ಕಾರಕ್ಕೆ ಅವಕಾಶ ನೀಡುತ್ತದೆ. ಆದರೆ PRB ಕಾಯಿದೆ 1867 ಅಂತಹ ಯಾವುದೇ ನಿಬಂಧನೆಗಳನ್ನು ಹೊಂದಿರಲಿಲ್ಲ ಎಂದು ಎಡಿಟರ್ಸ್ ಗಿಲ್ಡ್ ಹೇಳುತ್ತದೆ.

ಭಯೋತ್ಪಾದಕರಿಗೆ ಪತ್ರಿಕೆ ನೋಂದಣಿಗೆ ಅವಕಾಶವಿಲ್ಲ ಎನ್ನುವುದು ಸರಿ ಎನಿಸಿದರೂ ಈ ಕಾನೂನುಬಾಹಿರ ಚಟುವಟಿಕೆ ಎಂಬುದನ್ನು ಹೇಗೆ ಅರ್ಥೈಸಬೇಕು ಎನ್ನುವ ಪ್ರಶ್ನೆ ಮೂಡುತ್ತದೆ. ಈ ಕಾನೂನುಬಾಹಿರ ಪ್ರಕರಣಗಳನ್ನು ದಾಖಲು ಮಾಡುವವರು ಪೊಲೀಸರು. ಸರ್ಕಾರದ ಅಣತಿಯಂತೆ ಕೆಲಸ ಮಾಡುವ ಪೊಲೀಸ್ ಅಧಿಕಾರಿಗಳು ಸರ್ಕಾರವನ್ನು ಟೀಕಿಸಿದರೆ ಸುಮ್ಮನಿರುವವರೇ? ಸರ್ಕಾರವು ಈ ಮಸೂದೆಯ ನಿಯಮಗಳಿಂದಲೇ ಪತ್ರಿಕೆಗಳನ್ನು ಕಟ್ಟಿಹಾಕುತ್ತದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ವಾಕ್ ಸ್ವಾತಂತ್ರ್ಯದ ಅಡಿಯಲ್ಲಿ ಪತ್ರಕರ್ತರು ಸರ್ಕಾರವನ್ನು ಟೀಕಿಸಿ ಲೇಖನಗಳನ್ನು ಬರೆಯುತ್ತಾರೆ. ಅವರ ವಿರುದ್ಧ ಸಾಕಷ್ಟು ಪ್ರಕರಣಗಳು ಕೂಡ ದಾಖಲಾಗಿರುತ್ತವೆ. ಅಂತ ಪತ್ರಕರ್ತರನ್ನು ನಿಯಂತ್ರಿಸಲು ಮತ್ತು ಅವರಿಗೆ ನಿರ್ಬಂಧ ಹೇರುವ ಹುನ್ನಾರದ ಭಾಗವಾಗಿ ಈ ಮಸೂದೆಯನ್ನು ಕೇಂದ್ರ ಸರ್ಕಾರ ತರಲು ಮುಂದಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.

ಇದನ್ನೂ ಓದಿ: ಕರ್ನಾಟಕದಲ್ಲಿ ತೀವ್ರ ಏರಿಕೆ ಕಂಡ ಫೇಕ್ ನ್ಯೂಸ್‌ಗಳ ಹರಿದಾಟ; ಕಡಿವಾಣಕ್ಕೆ ಸಿದ್ಧವಾಗಿದೆಯೇ ಸರ್ಕಾರ?

ಇತ್ತಿಚೆಗೆ ಸರ್ಕಾರಗಳು ಈ UAPA (ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ) ಕಾನೂನನ್ನು ಉದಾರವಾಗಿ ಮತ್ತು ಅನಿಯಂತ್ರಿತವಾಗಿ ಬಳಕೆ ಮಾಡುತ್ತವೆ. ಹಾಗೆಯೇ ವಾಕ್ ಸ್ವಾತಂತ್ರ್ಯವನ್ನು ನಿಗ್ರಹಿಸಲು ಪತ್ರಕರ್ತರು ಮತ್ತು ಮಾಧ್ಯಮ ಸಂಸ್ಥೆಗಳ ವಿರುದ್ಧ ದೇಶದ್ರೋಹ ಸೇರಿದಂತೆ ಇತರ ಕ್ರಿಮಿನಲ್ ಕಾನೂನುಗಳನ್ನು ಎಗ್ಗಿಲ್ಲದೆ ಬಳಸಲಾಗುತ್ತಿದೆ. ಸಿದ್ದಿಕ್ ಕಪ್ಪನ್‌ರಂತಹ ಪತ್ರಕರ್ತರು ವರ್ಷಗಳ ಕಾಲ ಜೈಲು ವಾಸ ಅನುಭವಿಸಿದ್ದಾರೆ. ದೈನಿಕ್ ಭಾಸ್ಕರ್ ಪತ್ರಿಕೆಯ ಮೇಲೆ ಐಟಿ, ಇಡಿ ದಾಳಿ ಮಾಡಿ ಬೆದರಿಸಲಾಗಿದೆ. 2023ರ ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತದ ಶ್ರೇಯಾಂಕವು 180 ದೇಶಗಳಲ್ಲಿ 161ಕ್ಕೆ ಕುಸಿದಿದೆ ಎಂದು ಜಾಗತಿಕ ಮಾಧ್ಯಮ ವಾಚ್‌ಡಾಗ್ ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ ಹೇಳಿದೆ. ಇಂತಹ ಸಂದರ್ಭದಲ್ಲಿ ಸರ್ಕಾರಗಳನ್ನು ಟೀಕಿಸುವ ವ್ಯಕ್ತಿಗಳಿಗೆ ಸುದ್ದಿ ಪ್ರಕಟಣೆಯ ಹಕ್ಕನ್ನು ಕಿತ್ತುಕೊಳ್ಳಲು ಈ ಹೊಸ ನಿಬಂಧನೆಗಳು ದುರುಪಯೋಗಪಡಿಸಿಕೊಳ್ಳಲು ಅವಕಾಶ ಮಾಡಿಕೊಡುತ್ತವೆ.

ಹೊಸ ಮಸೂದೆಯು ಪ್ರೆಸ್ ರಿಜಿಸ್ಟ್ರಾರ್ ಹೊರತುಪಡಿಸಿ ಸರ್ಕಾರಿ ಏಜೆನ್ಸಿಗಳಿಗೆ ತನ್ನ ಕಾರ್ಯಗಳನ್ನು ನಿರ್ವಹಿಸಲು ಅನುವು ಮಾಡಿಕೊಡುತ್ತದೆ. ಅಂದರೆ ಒಂದು ಪತ್ರಿಕೆ ನೋಂದಣಿ ಆಗಬೇಕಾದರೆ ಆ ಪ್ರಕ್ರಿಯೆಯಲ್ಲಿ ಜಿಲ್ಲಾಧಿಕಾರಿ ಮಾತ್ರವಲ್ಲದೇ ಪೊಲೀಸ್ ಇಲಾಖೆಯೂ ಒಳಗೊಳ್ಳಬೇಕಾಗುತ್ತದೆ. ಈ ಕ್ರಮವು ಅತ್ಯಂತ ಖೇದಕರ ಎಂದು ಎಡಿಟರ್ ಗಿಲ್ಡ್ ಹೇಳುತ್ತದೆ.

ಈ ಹೊಸ ಮಸೂದೆಯು ಪತ್ರಿಕೆಗಳು ಮತ್ತು ನಿಯತಕಾಲಿಕೆಗಳ ಕಾರ್ಯಚಟುವಟಿಕೆಗಳ ಮೇಲೆ ಅನಿಯಂತ್ರಿತ ತಪಾಸಣೆಗಳನ್ನು ನಡೆಸಲು ಸರ್ಕಾರಕ್ಕೆ ಅಧಿಕಾರವನ್ನು ವಿಸ್ತರಿಸುತ್ತದೆ. ಪ್ರೆಸ್ ರಿಜಿಸ್ಟ್ರಾರ್‌ನ ಅಧಿಕಾರವನ್ನು ವಿಸ್ತರಣೆ ಮಾಡುವುದರಿಂದ ಪತ್ರಿಕೆಗಳನ್ನು ಹೊರತರಲು ಸಾಧ್ಯವಾಗುವುದಿಲ್ಲ ಮಾತ್ರವಲ್ಲ ಚಾಲ್ತಿಯಲ್ಲಿರುವ ಸುದ್ದಿ ಪ್ರಕಟಣೆಗಳಲ್ಲೂ ಸರ್ಕಾರ ಹಸ್ತಕ್ಷೇಪ ಮಾಡಬಹುದಾಗಿದ್ದು, ಇದು ಪತ್ರಿಕಾ ಸ್ವಾತಂತ್ರ್ಯಕ್ಕೆ ಅಡ್ಡಿಮಾಡುವ ಉದ್ದೇಶ ಹೊಂದಿದೆ.

ಈ ಮಸೂದೆಯಲ್ಲಿ ಅನೇಕ ನಿಬಂಧನೆಗಳು ಸರ್ಕಾರಿ ನಿಯಂತ್ರಣ ಸಂಸ್ಥೆಗಳ ಅಧಿಕಾರದ ಕುರಿತು ಅಸ್ಪಷ್ಟವಾಗಿವೆ. ಇದು ಪತ್ರಿಕಾ ಸ್ವಾತಂತ್ರ್ಯದ ಮೇಲೆ ವ್ಯತಿರಿಕ್ತ ಪರಿಣಾಮಗಳನ್ನು ಬೀರುವ ನಿಯಮಗಳನ್ನು ಹೊಂದಿದೆ ಎಂದು ಎಡಿಟರ್ಸ್ ಗಿಲ್ಡ್ ಸಂಸ್ಥೆಯು ತನ್ನ ಹೇಳಿಕೆಯಲ್ಲಿ ಹೇಳಿದೆ.

“ನಿರ್ದಿಷ್ಟ ಅಧಿಕಾರ” ಎಂಬ ಪದವು ಪತ್ರಿಕಾ ರಿಜಿಸ್ಟ್ರಾರ್‌ಅನ್ನು ಹೊರತುಪಡಿಸಿ ಸರ್ಕಾರಿ ಏಜೆನ್ಸಿಗಳಿಗೆ ತನ್ನ ಕಾರ್ಯವನ್ನು ನಡೆಸಲು ಅನುವು ಮಾಡಿಕೊಡುತ್ತದೆ. ಇದು ಪೊಲೀಸ್ ಮತ್ತು ಇತರ ಕಾನೂನು ಜಾರಿ ಸಂಸ್ಥೆಗಳನ್ನು ಸಹ ಒಳಗೊಂಡಿರುತ್ತದೆ. ಹಾಗಿದ್ದಾಗ ಪತ್ರಿಕೆಗಳು ವಿರೋಧ ಪಕ್ಷವಾಗಿ ಕೆಲಸ ಮಾಡಲು ಹೇಗೆ ಸಾಧ್ಯವಾಗುತ್ತದೆ ಎನ್ನುವ ಪ್ರಶ್ನೆ ಮೂಡುತ್ತದೆ.

ಇದನ್ನೂ ಓದಿ: ಫೇಕ್ ನ್ಯೂಸ್ ತಡೆಗಟ್ಟುವಿಕೆಗೆ ಕ್ರಮಗಳು ಅಗತ್ಯ- ಬೆಕ್ಕಿಗೆ ಗಂಟೆ ಕಟ್ಟುವವರ್‍ಯಾರು? ಹೇಗೆ?

ಇಷ್ಟೇ ಅಲ್ಲದೇ ಬಿಲ್‌ನ ಸೆಕ್ಷನ್ 6(ಬಿ) ಪ್ರೆಸ್ ರಿಜಿಸ್ಟ್ರಾರ್‌ಗೆ ಪತ್ರಿಕೆಗಳನ್ನು “ಪರಿಶೀಲಿಸಲು ಅಥವಾ ಸಂಬಂಧಿತ ದಾಖಲೆಗಳು ಅಥವಾ ದಾಖಲೆಗಳ ಪ್ರತಿಗಳನ್ನು ತೆಗೆದುಕೊಳ್ಳಲು” ಅಧಿಕಾರವನ್ನು ನೀಡುತ್ತದೆ. ಪತ್ರಿಕಾ ಸಂಸ್ಥೆಯನ್ನು ಪ್ರವೇಶಿಸುವ ಈ ಅಧಿಕಾರವು ಅತಿಯಾಗಿ ಒಳನುಗ್ಗುವಿಕೆಗೆ ಅವಕಾಶ ಕೊಟ್ಟಿರುವುದನ್ನು ತೋರುತ್ತದೆ.

ಹಾಗಾಗಿ ಪತ್ರಿಕಾ ಸ್ವಾತಂತ್ರ್ಯಕ್ಕೆ ನಿರ್ಣಾಯಕವಾಗಿರುವ ವಿಷಯಗಳ ಬಗ್ಗೆ ಆಳವಾದ ಚರ್ಚೆಗೆ ಅವಕಾಶ ಮಾಡಿಕೊಡಲು, ಸಂಸತ್ತಿನ ಆಯ್ಕೆ ಸಮಿತಿಗೆ ಮಸೂದೆಯನ್ನು ಉಲ್ಲೇಖಿಸುವಂತೆ ಲೋಕಸಭೆಯ ಸ್ಪೀಕರ್ ಅವರನ್ನು ಎಡಿಟರ್ಸ್ ಗಿಲ್ಡ್ ಒತ್ತಾಯಿಸಿದೆ.

ಈ ಮಸೂದೆಯ ಸೆಕ್ಷನ್ 19, ಭಾರತದಲ್ಲಿ ಸುದ್ದಿ ಪ್ರಕಟಣೆಯನ್ನು ಮಾಡಬೇಕಾದ ನಿಯಮಗಳನ್ನು ರೂಪಿಸುವ ಅಧಿಕಾರವನ್ನು ಕೇಂದ್ರ ಸರ್ಕಾರಕ್ಕೆ ನೀಡುತ್ತದೆ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಮಾಧ್ಯಮಗಳನ್ನು ಕಟ್ಟಿಹಾಕಲು ಕೇಂದ್ರ ಸರ್ಕಾರ ನಂತರ ಪ್ರಯತ್ನ ಮಾಡುತ್ತಿರುವುದು ದೇಶದ ದುರಂತದ ಸಂಗತಿಯಾಗಿದೆ.

ಶಿವಾನಂದ ತಗಡೂರು

ಈ ಬಗ್ಗೆ ನ್ಯಾಯಪಥದೊಂದಿಗೆ ಮಾತನಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ನೂತನ ಮಸುದೆ ಮಾಧ್ಯಮ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವ ಪ್ರಯತ್ನ ಎಂದು ಟೀಕಿಸಿದ್ದಾರೆ.

“ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮ ಸ್ವಾತಂತ್ರ್ಯ ಎನ್ನುವುದು ಬಹಳ ಪ್ರಾಮುಖ್ಯತೆಯನ್ನು ಪಡೆಯುತ್ತದೆ. ಆರೋಗ್ಯಕರ ಸಮಾಜ ನಿರ್ಮಾಣವಾಗಲು ಪತ್ರಿಕಾ ಸ್ವಾತಂತ್ರ್ಯ ಬಹಳ ಮುಖ್ಯ. ಏಕೆಂದರೆ ಪ್ರಜಾಪ್ರಭುತ್ವದ ಸ್ವಾಸ್ಥ್ಯವನ್ನು ಕಾಪಾಡುವುದು ಮಾಧ್ಯಮಗಳ ಜವಾಬ್ದಾರಿ. ಮಾಧ್ಯಮಗಳಲ್ಲಿ ಸರ್ಕಾರದ ಮೂಗು ತೂರಿಸುವಿಕೆ ಇರಬಾರದು. ಕೇಂದ್ರ ಸರ್ಕಾರದ ಈ ಹೊಸ ಮಸೂದೆಯಲ್ಲಿನ ಮುಖ್ಯ ಉದ್ದೇಶ, ಆಕ್ಷೇಪಾರ್ಹ ಅಂಶಗಳನ್ನ ಹಾಕಿ ಪತ್ರಿಕೆಗಳನ್ನು ಹೊರತರದಂತೆ ನೋಡಿಕೊಳ್ಳುವ ಹುನ್ನಾರವಾಗಿದೆ. ಹಾಗಾಗಿ ಮಸೂದೆಯನ್ನು ಮತ್ತೊಮ್ಮೆ ಪರಾಮರ್ಶಿಸಬೇಕು. ಮಾಧ್ಯಮದಲ್ಲಿ ಕೆಲಸ ಮಾಡಿದ ಹಿರಿಯ ಪತ್ರಕರ್ತರ ಸಲಹೆಗಳನ್ನು ಪಡೆದು ತಿದ್ದುಪಡಿ ಮಾಡಬೇಕು. ತರಾತುರಿಯಲ್ಲಿ ಈ ಮಸೂದೆ ತಂದಿರುವುದು ಸರಿಯಾದ ಕ್ರಮವಲ್ಲ, ಹಾಗಾಗಿ ಈ ಮಸೂದೆಯನ್ನು ಹಿಂಪಡೆಯಬೇಕು” ಎಂದು ಶಿವಾನಂದ ತಗಡೂರು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...