Homeಮುಖಪುಟಗಣರಾಜ್ಯೋತ್ಸವ ದಿನ 'ಸೆಕ್ಯುಲರ್', 'ಸಮಾಜವಾದಿ' ಪದವಿಲ್ಲದೆ ಸಂವಿಧಾನದ ಪೀಠಿಕೆ ಹಂಚಿಕೊಂಡ ಕೇಂದ್ರ ಸರಕಾರ

ಗಣರಾಜ್ಯೋತ್ಸವ ದಿನ ‘ಸೆಕ್ಯುಲರ್’, ‘ಸಮಾಜವಾದಿ’ ಪದವಿಲ್ಲದೆ ಸಂವಿಧಾನದ ಪೀಠಿಕೆ ಹಂಚಿಕೊಂಡ ಕೇಂದ್ರ ಸರಕಾರ

- Advertisement -
- Advertisement -

ಭಾರತದ 75ನೇ ಗಣರಾಜ್ಯ ದಿನದ ಸಂದರ್ಭದಲ್ಲಿ ಭಾರತ ಸರ್ಕಾರದ ಅಧಿಕೃತ ಸಾಮಾಜಿಕ ವೇದಿಕೆ  MyGovIndia ದಲ್ಲಿ ಹಂಚಿಕೊಳ್ಳಲಾದ ಸಂವಿಧಾನದ ಮೂಲ ಪೀಠಿಕೆಯು ‘ಸೆಕ್ಯುಲರ್’ ಮತ್ತು ‘ಸಮಾಜವಾದಿ’ ಪದಗಳನ್ನು ಒಳಗೊಂಡಿರಲಿಲ್ಲ. ಇದು ಮೋದಿ ಆಡಳಿತದ ಭಾರತದಲ್ಲಿ ಸಾರ್ವಭೌಮತ್ವ, ಪ್ರಜಾಪ್ರಭುತ್ವ, ಸ್ವಾತಂತ್ರ್ಯ, ಸಮಾನತೆ ಕುರಿತ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಸಂವಿಧಾನದ ಪೀಠಿಕೆಯನ್ನು ಭಾರತೀಯ ಸಂವಿಧಾನದ ಜೊತೆಗೆ ನವೆಂಬರ್ 26, 1949ರಂದು ಅಂಗೀಕರಿಸಲಾಯಿತು ಮತ್ತು ಜನವರಿ 26, 1950ರಿಂದ ಜಾರಿಗೆ ಬಂದಿದೆ. ಜ.26ರಂದು ಗಣರಾಜ್ಯೋತ್ಸವ ದಿನವಾಗಿ ಆಚರಿಸಲಾಗುತ್ತದೆ. ಸಂವಿಧಾನದ ಪೀಠಿಕೆಯನ್ನು 1976ರಲ್ಲಿ ತಿದ್ದುಪಡಿ ಮಾಡಲಾಗಿದೆ. ಇದು ಭಾರತದ ಸಂವಿಧಾನದ ಪೀಠಿಕೆಗೆ ಮಾಡಿದ ಏಕೈಕ ತಿದ್ದುಪಡಿಯಾಗಿದೆ.

42ನೇ ತಿದ್ದುಪಡಿ ಅಥವಾ ಸಂವಿಧಾನ (42ನೇ ತಿದ್ದುಪಡಿ) ಕಾಯಿದೆ-1976 ತುರ್ತು ಪರಿಸ್ಥಿತಿಯ ಅವಧಿಯಲ್ಲಿ 1976ರಲ್ಲಿ ಜಾರಿಗೆ ತರಲಾಯಿತು. ಈ ತಿದ್ದುಪಡಿಯ ವೇಳೆ ಸಂವಿಧಾನದ ಪೀಠಿಕೆ, ಹಲವಾರು ಆರ್ಟಿಕಲ್‌ಗಳು ಮತ್ತು ಏಳನೇ ಶೆಡ್ಯೂಲ್‌ (ಇದು ಒಕ್ಕೂಟ ಮತ್ತು ರಾಜ್ಯ ಶಾಸಕಾಂಗಗಳ ನಡುವಿನ ಅಧಿಕಾರ ಮತ್ತು ಕಾರ್ಯಗಳ ಬಗ್ಗೆ ಸೂಚಿಸುತ್ತದೆ). ಕಾಯಿದೆಯ ಪರಿಚ್ಛೇದ 2 (ಪೀಠಿಕೆಯ ತಿದ್ದುಪಡಿ), ಎರಡು ಬದಲಾವಣೆಗಳನ್ನು ಮುಂದಿಟ್ಟಿದೆ “ಸಾರ್ವಭೌಮ ಪ್ರಜಾಸತ್ತಾತ್ಮಕ ಗಣರಾಜ್ಯ” ಪದಗಳನ್ನು “ಸಾರ್ವಭೌಮ ಸಮಾಜವಾದಿ ಜಾತ್ಯತೀತ ಪ್ರಜಾಸತ್ತಾತ್ಮಕ ಗಣರಾಜ್ಯ” ಎಂದು ಬದಲಿಸಲಾಗಿದೆ ಮತ್ತು “ರಾಷ್ಟ್ರದ ಏಕತೆ” ಎಂಬ ಪದಗುಚ್ಛವನ್ನು “ರಾಷ್ಟ್ರದ ಏಕತೆ ಮತ್ತು ಸಮಗ್ರತೆ” ಯೊಂದಿಗೆ ಬದಲಿಸಲಾಗಿದೆ.

ಜನವರಿ 25ರಂದು ಭಾರತೀಯ ಸರ್ಕಾರದ ಅಧಿಕೃತ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ MyGovIndia  ಸಂವಿಧಾನದ ಮೂಲ ಪೀಠಿಕೆಯ ಚಿತ್ರವನ್ನು ಪೋಸ್ಟ್ ಮಾಡಿದೆ. ಪೋಸ್ಟ್‌ನಲ್ಲಿ ನಾವು ಭಾರತ ಗಣರಾಜ್ಯದ 75 ನೇ ವರ್ಷವನ್ನು ಆಚರಿಸುತ್ತಿರುವಾಗ, ನಮ್ಮ ಸಂವಿಧಾನದ ಮೂಲ ಪೀಠಿಕೆಯನ್ನು ಮರುಪರಿಶೀಲಿಸೋಣ. ಈ ಮೂಲಭೂತ ತತ್ವಗಳೊಂದಿಗೆ ನವ ಭಾರತ ಎಷ್ಟು ಚೆನ್ನಾಗಿ ಪ್ರತಿಧ್ವನಿಸುತ್ತದೆ? ಎಂಬುವುದನ್ನು ಪೋಸ್ಟ್‌ನಲ್ಲಿ ಬರೆಯಲಾಗಿದೆ.

ಮುನ್ನುಡಿ ವಿವಾದ;

ಸಂವಿಧಾನದ ಮೂಲ ಮುನ್ನುಡಿಯನ್ನು ಆಡಳಿತ ಪಕ್ಷವು ಹಂಚಿಕೊಳ್ಳುತ್ತಿರುವುದು ಇದೇ ಮೊದಲಲ್ಲ. ಸೆಪ್ಟೆಂಬರ್ 2023ರಲ್ಲಿ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ, ಸಂಸದ ಅಧೀರ್ ರಂಜನ್ ಚೌಧರಿ ಅವರು ಹೊಸ ಸಂಸತ್ತಿನ ಕಟ್ಟಡದಲ್ಲಿ ಮೊದಲ ಅಧಿವೇಶನದಲ್ಲಿ ಸಂಸತ್ತಿನ ಸದಸ್ಯರಿಗೆ ವಿತರಿಸಿದ ಸಂವಿಧಾನದ ಪ್ರತಿಗಳು ಅದರ ಮುನ್ನುಡಿಯಲ್ಲಿ ಸಮಾಜವಾದಿ ಮತ್ತು ಜಾತ್ಯತೀತ ಪದಗಳನ್ನು ಹೊಂದಿಲ್ಲ ಎಂದು ಹೇಳಿದ್ದರು. ಈ ಬೆಳವಣಿಗೆಯು ಉದ್ದೇಶಪೂರ್ವಕ ಎಂದು ಅಧೀರ್‌ ರಂಜನ್‌ ಚೌದರಿ ಹೇಳಿದ ಬಳಿ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.

ಆದರೆ ಈ ಆರೋಪವನ್ನು ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ಅರ್ಜುನ್ ರಾಮ್ ಮೇಘವಾಲ್ ತಳ್ಳಿಹಾಕಿದ್ದರು. ಮೂಲ ಸಂವಿಧಾನವನ್ನು ಮುದ್ರಿಸಿದ್ದು, ಹಾಗಾಗಿ ಪದಗಳು ಕಾಣೆಯಾಗಿವೆ ಎಂದು ಹೇಳಿದ್ದಾರೆ. ಸಂವಿಧಾನವನ್ನು ರಚಿಸಿದಾಗ ಅದು ಹೀಗಿತ್ತು. ನಂತರ ತಿದ್ದುಪಡಿ ಮಾಡಲಾಯಿತು. ಇದು ಮೂಲ ಪ್ರತಿ ಎಂದು ಅವರು ಸಮಜಾಯಿಸಿ ಹೇಳಿದ್ದರು.

ಜೂನ್ 2023ರಲ್ಲಿ ತೆಲಂಗಾಣ ಸ್ಟೇಟ್ ಕೌನ್ಸಿಲ್ ಫಾರ್ ಎಜುಕೇಷನಲ್ ರಿಸರ್ಚ್ ಅಂಡ್ ಟ್ರೈನಿಂಗ್ (SCERT) 10ನೇ ತರಗತಿಯ ಸಾಮಾಜ ಅಧ್ಯಯನಗಳ ಪಠ್ಯಪುಸ್ತಕಗಳ ಮುಖಪುಟದಲ್ಲಿ ಸಂವಿಧಾನದ ಮೂಲ ಪೀಠಿಕೆಯನ್ನು ಮುದ್ರಿಸಿ ಚರ್ಚೆಯನ್ನು ಹುಟ್ಟು ಹಾಕಿತ್ತು.

2015ರಲ್ಲಿ ಗಣರಾಜ್ಯೋತ್ಸವದಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಟೈಮ್ಸ್ ಆಫ್ ಇಂಡಿಯಾದಲ್ಲಿ ಅರ್ಧ ಪುಟದ ಜಾಹೀರಾತನ್ನು ಗಣರಾಜ್ಯೋತ್ಸವದಂದು ಪ್ರಧಾನ ಮಂತ್ರಿಯ ಸಂದೇಶದೊಂದಿಗೆ ಮೂಲ ಪೀಠಿಕೆಯ ಚಿತ್ರದೊಂದಿಗೆ ಬಿಡುಗಡೆ ಮಾಡಿತ್ತು. ಇದು ವ್ಯಾಪಕ ಖಂಡನೆಗೆ ಕಾರಣವಾಗಿತ್ತು. ಅಂದಿನ ಸಚಿವ ರಾಜ್ಯವರ್ಧನ್ ರಾಥೋಡ್ ಈ ಬಗ್ಗೆ ಪ್ರತಿಕ್ರಿಯಿಸಿ, ಜಾಹೀರಾತಿನ ಸುತ್ತಲಿನ ವಿವಾದವನ್ನು ತಳ್ಳಿಹಾಕಿದ್ದು, ಮೂಲ ಪೀಠಿಕೆಯ ಫೋಟೋ ಸಂವಿಧಾನದ ಪಿತಾಮಹರನ್ನು ಗೌರವಿಸುವ ಸಲುವಾಗಿ ಹಂಚಿಕೊಳ್ಳಲಾಗಿದೆ ಎಂದು ಬರೆಯಲಾಗಿದೆ.

ಇದನ್ನು ಓದಿ: ಅಸ್ಸಾಂನಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆ ಮೇಲೆ ದಾಳಿ ಖಂಡಿಸಿ ಪತ್ರ ಬರೆದ 100 ಮಂದಿ ಚಿಂತಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. india belongs to different religions and region having different celebration it does mean secular, unity and integrity pls don’t try to change ambedkar constitution it will show ur defeat final path

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...