Homeಮುಖಪುಟರಾಜಕೀಯ ತ್ಯಜಿಸುತ್ತೇನೆ..: ಕೇಂದ್ರ ಸಚಿವ ಬಬುಲ್ ಸುಪ್ರಿಯೋ ಘೋಷಣೆ

ರಾಜಕೀಯ ತ್ಯಜಿಸುತ್ತೇನೆ..: ಕೇಂದ್ರ ಸಚಿವ ಬಬುಲ್ ಸುಪ್ರಿಯೋ ಘೋಷಣೆ

- Advertisement -
- Advertisement -

ಇತ್ತೀಚೆಗೆ ನಡೆದ ಕೇಂದ್ರ ಸಚಿವ ಸಂಪುಟ ಪುನರ್‌ರಚನೆಯಲ್ಲಿ ಗ್ರಾಮೀಣ ಅಭಿವೃದ್ದಿ ಖಾತೆಯಿಂದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆಯ ರಾಜ್ಯ ಸಚಿವರಾಗಿ ಬದಲಾಗಿದ್ದ ಕೇಂದ್ರ ಸಚಿವ ಬಬುಲ್ ಸುಪ್ರಿಯೋ ತಾವು ರಾಜಕೀಯ ಕ್ಷೇತ್ರ ತ್ಯಜಿಸುವುದಾಗಿ ಘೋಷಿಸಿದ್ದಾರೆ.

ಪಶ್ಚಿಮ ಬಂಗಾಳದ ಅಸಾನ್ಸೋಲ್ ಕ್ಷೇತ್ರದ ಸಂಸದರಾದ ಅವರು ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡಿದ್ದರು. ತದನಂತರ ಅವರ ಖಾತೆ ಬದಲಾವಣೆ ಮಾಡಲಾಗಿತ್ತು. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅವರು ಫೇಸ್‌ಬುಕ್‌ನಲ್ಲಿ “ನಾನು ನಿರ್ಗಮಿಸುತ್ತೇನೆ.. ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

ತಂದೆ-ತಾಯಿ-ಹೆಂಡತಿ-ಮಗಳು ಮತ್ತು ಇಬ್ಬರು ಆತ್ಮೀಯ ಸ್ನೇಹಿತರೂ ಸೇರಿದಂತೆ ಎಲ್ಲರ ಮಾತುಗಳನ್ನು ಕೇಳಿದ್ದೇನೆ. ಆದರೆ ನಾನು ಟಿಎಂಸಿ, ಕಾಂಗ್ರೆಸ್, ಸಿಪಿಐಎಂ ಸೇರಿದಂತೆ ಯಾವುದೇ ಪಕ್ಷ ಸೇರುವುದಿಲ್ಲ. ಎಂದು ಅವರು ಇದೇ ವೇಳೆ ತಿಳಿಸಿದ್ದಾರೆ.

ನೀವು ಸಾಮಾಜ ಸೇವೆ ಮಾಡುವುದಾದರೆ ರಾಜಕೀಯಕ್ಕೆ ಸೇರದೆ ಮಾಡಬಹುದು. ನಾನು ಮೊದಲು ನನ್ನನ್ನು ಸಂಘಟಿಸಿಕೊಳ್ಳುತ್ತೇನೆ ಮತ್ತೆ ಕೆಲಸ ಮಾಡುತ್ತೇನೆ ಎಂದು ಅವರು ತಿಳಿಸಿದ್ದಾರೆ.

ನಾನು ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ. ಪ್ರೀತಿಯನ್ನು ತೋರಿಸಿದ್ದಕ್ಕಾಗಿ ಅಮಿತ್ ಶಾ ಮತ್ತು ಜೆ.ಪಿ ನಡ್ಡಾರವರಿಗೆ ಧನ್ಯವಾದ ತಿಳಿಸುತ್ತೇನೆ. “ನಾನು ಯಾವುದೇ ಬ್ಲಾಕ್‌ಮೇಲ್ ಮಾಡಲು ಅತವಾ ಉನ್ನತ ಅಧಿಕಾರ ಪಡೆಯಲು ಈ ನಿರ್ಣಯ ತೆಗೆದುಕೊಂಡಿಲ್ಲ. ದಯವಿಟ್ಟು ನನ್ನನ್ನು ಕ್ಷಮಿಸಿ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬಾಲಿವುಡ್ ಗಾಯಕರಾದ ಅವರು 2014 ರಲ್ಲಿ ಬಿಜೆಪಿ ಸೇರಿದ್ದರು. ನರೇಂದ್ರ ಮೋದಿ ಸಂಪುಟದಲ್ಲಿ ಗ್ರಾಮೀಣ ಅಭಿವೃದ್ದಿ ರಾಜ್ಯ ಸಚಿವರಾಗಿದ್ದ ಅವರನ್ನು ಇತ್ತೀಚೆಗೆ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆಯ ರಾಜ್ಯ ಸಚಿವರಾಗಿ ಬದಲಾವಣೆ ಮಾಡಲಾಗಿತ್ತು. ಇದೇ ಅವರ ರಾಜೀನಾಮೆಗೆ ಕಾರಣವಿರಬಹುದು ಎಂಬ ಚರ್ಚೆಗಳು ಆರಂಭವಾಗಿವೆ.


ಇದನ್ನೂ ಓದಿ; ಬೇಡಿಕೆ ಈಡೇರುವವರೆಗೂ ಜಿಎಸ್‌ಟಿ ಪಾವತಿಸಬೇಡಿ: ವರ್ತಕರಿಗೆ ಪ್ರಧಾನಿ ಸಹೋದರನ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...