Homeಮುಖಪುಟ"ಮಗಳು ಬೇರೊಬ್ಬರ ಸ್ವತ್ತು, ಕಳುಹಿಸಿ ಕೊಡಲಾಗುವುದು": ವಿವಾದಾತ್ಮಕ ಟ್ವೀಟ್‌ಗೆ ಸ್ಪಷ್ಟನೆ ನೀಡಿದ ಸಚಿವ

“ಮಗಳು ಬೇರೊಬ್ಬರ ಸ್ವತ್ತು, ಕಳುಹಿಸಿ ಕೊಡಲಾಗುವುದು”: ವಿವಾದಾತ್ಮಕ ಟ್ವೀಟ್‌ಗೆ ಸ್ಪಷ್ಟನೆ ನೀಡಿದ ಸಚಿವ

’ಇದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಪೋಸ್ಟ್. ನಾನು ಇದನ್ನು ರಚಿಸಲಿಲ್ಲ, ಇದು ನನ್ನ ಹೇಳಿಕೆಯಲ್ಲ. ನನಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ’- ಬಾಬುಲ್ ಸುಪ್ರಿಯೋ

- Advertisement -
- Advertisement -

ತೃಣಮೂಲ ಕಾಂಗ್ರೆಸ್ ಪಕ್ಷದ ಚುನಾವಣಾ ಘೋಷಣೆಯಾದ “ಬಂಗಾಳವು ತನ್ನ ಮಗಳನ್ನು ಬಯಸಿದೆ” ಎಂಬುದನ್ನು ಕೀಳುಮಟ್ಟದಲ್ಲಿ ಗೇಲಿ ಮಾಡಿ ಟ್ವೀಟ್ (ಈಗ ಅಳಿಸಲಾಗಿದೆ) ಮಾಡಿದ್ದ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ತನ್ನನ್ನು ಟೀಕಿಸಿದವರ ವಿರುದ್ಧ ಇಂದು (ಭಾನುವಾರ) ವಾಗ್ದಾಳಿ ನಡೆಸಿದ್ದಾರೆ.

“ಬಂಗಾಳವು ತನ್ನ ಮಗಳನ್ನು ಬಯಸಿದೆ” ಘೋಷಣೆ ಗೇಲಿ ಮಾಡಿದ ಟ್ವೀಟ್‌ನಲ್ಲಿ ಮಮತಾ ಬ್ಯಾನರ್ಜಿ ಅವರ ಫೋಟೋ ಇದ್ದು, “ಮಗಳು ಬೇರೊಬ್ಬರ ಸ್ವತ್ತು, ಕಳುಹಿಸಿ ಕೊಡಲಾಗುವುದು” ಎಂದು ಹೇಳುವ ಗೃಹ ಸಚಿವ ಅಮಿತ್ ಶಾ ಅವರ ಚಿತ್ರವಿದೆ. ಬಬುಲ್ ಸುಪ್ರಿಯೋ ಅದನ್ನು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಂಡು, “ಹೌದು, ನಾವು ಅವರನ್ನು ಈ ಬಾರಿ ಕಳುಹಿಸಿ ಕೊಡುತ್ತೇವೆ’ ಎಂದು ಬರೆದಿದ್ದರು.

ಟಿಎಂಸಿ ಸೇರಿದಂತೆ ಹಲವು ಪಕ್ಷಗಳ ನಾಯಕರು, ಸಾಮಾಜಿಕ ಹೋರಾಟಗಾರರು, ಇದು ಪುರುಷತ್ವದ ಅಹಂಕಾರ, ಮಹಿಳೆಯರನ್ನು ಕೀಳಾಗಿ ನೋಡುವ ಮನುವಾದ ಎಂದೆಲ್ಲ ಟೀಕಿಸಿದ ನಂತರ ಸುಪ್ರಿಯೋ ಟ್ವೀಟ್ ಡಿಲೀಟ್ ಮಾಡಿದ್ದರು.

ಇದನ್ನೂ ಓದಿ: ಬಂಗಾಳ ಚುನಾವಣೆ :ಬಿಜೆಪಿ ಗೆದ್ದರೆ ಟ್ವಿಟರ್ ಬಿಡುತ್ತೇನೆ ಮಾತು ಮತ್ತೆ ನೆನಪಿಸಿದ ಪ್ರಶಾಂತ್ ಕಿಶೋರ್

ಈ ಟ್ವೀಟ್‌ಗೆ ’ಶೇಮ್’ ಎಂದು ಪ್ರತಿಕ್ರಿಯಿಸಿದ್ದ ಟಿಎಂಸಿ ಸಂಸದ ಡೆರೆಕ್ ಒಬ್ರಿಯೆನ್ ವಿರುದ್ಧ ಇಂದು(ಭಾನುವಾರ) ಸುಪ್ರಿಯೋ ಹರಿ ಹಾಯ್ದಿದ್ದಾರೆ.
ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿರುವ ಸುಪ್ರಿಯೋ, “ಇದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಪೋಸ್ಟ್… ನಾನು ಇದನ್ನು ರಚಿಸಲಿಲ್ಲ ಅಥವಾ ಇದು ನನ್ನ ಹೇಳಿಕೆಯಲ್ಲ. ನನಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ, ಆದ್ದರಿಂದ ಪೂರ್ವಗ್ರಹದ ಕುರಿತು ನನಗೆ ಯಾವುದೇ ’ರಾಜಕೀಯ’ ಪಕ್ಷದ ಬೋಧನೆ ಅಗತ್ಯವಿಲ್ಲ ಎಂದಿದ್ದಾರೆ.

“ನಿಮ್ಮಲ್ಲಿ ಹೆಚ್ಚಿನವರು ನನ್ನ ರಾಜಕೀಯ ಜೀವನವನ್ನು ಬಲ್ಲಿರಿ ಮತ್ತು ನಾನು ಏನು ಹೇಳುತ್ತೇನೆ ಮತ್ತು ನನ್ನ ಮನಸ್ಥಿತಿ ಏನು ಎಂದು ನಿಮಗೆ ತಿಳಿದಿರಬೇಕು .. ನಾವೆಲ್ಲರೂ ನಮ್ಮ ಖಾತೆಗಳನ್ನು ನಿರ್ವಹಿಸುವ ಸಾಮಾಜಿಕ ಮಾಧ್ಯಮ ತಂಡಗಳನ್ನು ಹೊಂದಿದ್ದೇವೆ. ಹೌದು, ಕೆಲವು ಪೋಸ್ಟ್‌ಗಳು ಈ ರೀತಿಯ ವಿವಾದಗಳನ್ನು ಸೃಷ್ಟಿಸುತ್ತವೆ. ಇದನ್ನು ಒಪ್ಪಿದ್ದೇನೆ. ’ಸ್ಪಷ್ಟ ರಾಜಕೀಯ ಉದ್ದೇಶ’ಗಳೊಂದಿಗೆ ಸಂಪೂರ್ಣವಾಗಿ ಅದನ್ನು ತಪ್ಪಾಗಿ ಅರ್ಥೈಸಲಾಗಿದೆ’ ಎಂದಿದ್ದಾರೆ.

ಜೊತೆಗೆ, ’ಟ್ವೀಟ್ ವಿವಾದವನ್ನು ಸೃಷ್ಟಿಸಿದೆ ಎಂದು ನಾನು ಒಪ್ಪುತ್ತೇನೆ. ಈಗ ನನ್ನನ್ನು ನಾನು ಕೊಂದುಕೊಳ್ಳಬೇಕೆ..? ನನಗೆ ಕೆಲವು ಸಲಹೆಗಳನ್ನು ನೀಡಿ” ಎಂದು ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಕೇಳಿದ್ದಾರೆ.

ಮಾರ್ಚ್ 27ರಿಂದ ಪಶ್ಚಿಮ ಬಂಗಾಳದಲ್ಲಿ ಸುಧೀರ್ಘ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಆಡಳಿತರೂಢ ತೃಣಮೂಲ ಕಾಂಗ್ರೆಸ್‌ ಅನ್ನು ಅಧಿಕಾರದಿಂದ ಕೆಳಗಿಳಿಸಲು ಬಿಜೆಪಿ ಹಲವು ತಂತ್ರಗಳನ್ನು ಅನುಸರಿಸುತ್ತಿದೆ. ಬಂಗಾಳದಲ್ಲಿ ಅಧಿಕಾರದ ಗದ್ದುಗೆಯೇರಲು ಬಿಜೆಪಿಯ ಘಟಾನುಘಟಿ ನಾಯಕರು ಹಲವಾರು ರ್‍ಯಾಲಿಗಳನ್ನು ನಡೆಸಿದ್ದಾರೆ.


ಇದನ್ನೂ ಓದಿ: ಬಂಗಾಳದಲ್ಲಿ 8 ಹಂತದ ಚುನಾವಣೆ: ಮೋದಿ, ಶಾ ತಂತ್ರ ಎಂದು ಮಮತಾ ಬ್ಯಾನರ್ಜಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...