Homeಕರ್ನಾಟಕಹುತಾತ್ಮ ಯೋಧನ ಮನೆ ಎಂದು ಕರ್ತವ್ಯದಲ್ಲಿರುವ ಸೈನಿಕನ ಮನೆಗೆ ತೆರಳಿ ಸಾಂತ್ವನ ಹೇಳಿದ ಸಚಿವ ಎ...

ಹುತಾತ್ಮ ಯೋಧನ ಮನೆ ಎಂದು ಕರ್ತವ್ಯದಲ್ಲಿರುವ ಸೈನಿಕನ ಮನೆಗೆ ತೆರಳಿ ಸಾಂತ್ವನ ಹೇಳಿದ ಸಚಿವ ಎ ನಾರಾಯಣಸ್ವಾಮಿ

- Advertisement -
- Advertisement -

ಒಕ್ಕೂಟ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಅವರು ಶುಕ್ರವಾರ ಎಡವಟ್ಟು ಮಾಡಿರುವ ಘಟನೆ ನಡೆದಿದೆ. ಹುತಾತ್ಮ ಸೈನಿಕನೊಬ್ಬನ ಮನೆಗೆ ತೆರಳಬೇಕಿದ್ದ ಅವರು, ಕರ್ತವ್ಯದಲ್ಲಿದ್ದ ಸೈನಿಕನೊಬ್ಬನ ಮನೆಗೆ ತೆರಳಿ ಸಾಂತ್ವಾನ ಹೇಳಿದ್ದಲ್ಲದೆ, ಕುಟುಂಬಕ್ಕೆ ಸರ್ಕಾರಿ ಉದ್ಯೋಗ ಮತ್ತು ಭೂಮಿ ನೀಡುವುದಾಗಿ ಭರವಸೆ ನೀಡದ್ದಾರೆ.

ಸಚಿವ ನಾರಾಯಣಸ್ವಾಮಿ ತೆರಳಿದ್ದ ಮನೆಯಲ್ಲಿನ ಸೈನಿಕ ರವಿಕುಮಾರ್ ಕಟ್ಟಿಮನಿ ಜಮ್ಮೂ ಕಾಶೀರದಲ್ಲಿ ಕರ್ತವ್ಯದಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಒಂದು ವರ್ಷಗಳ ಹಿಂದೆ ಕರ್ತವ್ಯದಲ್ಲಿದ್ದಾಗ ಮೃತಪಟ್ಟಿದ್ದ ಮುಳಗುಂದದ ಯೋಧ ಬಸವರಾಜ್‌ ಅವರ ಕುಟುಂಬಕ್ಕೆ ಸಾಂತ್ವಾನ ಹೇಳಬೇಕಿದ್ದ ಸಚಿವ ಜೀವಂತ ಇರುವ ಸೈನಿಕನ ಮನೆಗೆ ತೆರಳಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ಇದನ್ನೂ ಓದಿ: ನಿರ್ಮಾಣ ಹಂತದಲ್ಲೆ ಕುಸಿದ ‘ನಮೋ’ ಕಾಲೇಜ್; ‘ಬ್ರಾಂಡ್‌ನೇಮ್‌ ಎಫೆಕ್ಟ್‌‌? – ಮಾಜಿ ಐಎಎಸ್‌ ಪ್ರಶ್ನೆ!

ಬಿಜೆಪಿಯ ಜನ ಆಶೀರ್ವಾದ ಯಾತ್ರೆಯಲ್ಲಿ ಈ ಘಟನೆ ನಡೆದಿದೆ. ಯಾತ್ರೆ ಅಂಗವಾಗಿ ಗದಗ ಜಿಲ್ಲೆಯಲ್ಲಿನ ಮುಳಗುಂದದಲ್ಲಿರುವ ಹುತಾತ್ಮ ಸೈನಿಕನ ನಿವಾಸಕ್ಕೆ ಭೇಟಿ ನೀಡಬೇಕಿತ್ತು. ಆದರೆ ಅವರು ಜಮ್ಮು ಕಾಶ್ಮೀರದಲ್ಲಿ ಕರ್ತವ್ಯದಲ್ಲಿರುವ ರವಿಕುಮಾರ್ ಕಟ್ಟಿಮನಿ ಅವರ ಮನೆಗೆ ತೆರಳಿದ್ದಾರೆ. ಕುಟುಂಬ ಸದಸ್ಯರ ಆರೋಗ್ಯ ಮತ್ತು ಮನೆಯ ಪರಿಸ್ಥಿತಿಯನ್ನು ವಿಚಾರಿಸಿ, ನಂತರ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ಮತ್ತು ಭೂಮಿ ನೀಡುವುದಾಗಿ ಘೋಷಿಸಿದ್ದಾರೆ.

ಇದರಿಂದಾಗಿ ಕುಟುಂಬದ ಸದಸ್ಯರು ಗೊಂದಲಕ್ಕೆ ಸಿಲುಕಿ ಆಘಾತಕ್ಕೊಳಗಾಗಿದ್ದು, ತಕ್ಷಣವೆ ಕುಟುಂಬದ ಪರಿಚಯಸ್ಥರೊಬ್ಬರು ಸೈನಿಕ ರವಿಕುಮಾರ್‌ಗೆ ವಿಡಿಯೋ ಕರೆ ಮಾತನಾಡಿದ್ದಾರೆ. ನಂತರ ಸಚಿವರು ಕೂಡಾ ಅವರೊಂದಿಗೆ ಮಾತನಾಡಿ, ಕುಟುಂಬವನ್ನು ಅಭಿನಂದಿಸಿ ಅಲ್ಲಿಂದ ತೆರಳಿದ್ದಾರೆ.

ಸೈನಿಕನ ನಿವಾಸವನ್ನು ತೊರೆದ ನಂತರ ಸಚಿವರು ಸ್ಥಳೀಯ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ದಿ ಹಿಂದೂ ವರದಿ ಮಾಡಿದೆ. ಸ್ಥಳೀಯ ಬಿಜೆಪಿ ನಾಯಕರು ಸಚಿವರಿಗೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಅದು ತನ್ನ ವರದಿಯಲ್ಲಿ ಹೇಳಿದೆ.

ಇದನ್ನೂ ಓದಿ: ಕೊರೊನಾ ಎದುರಿಸಲು ನೆಹರು-ಇಂದಿರಾ-ಮನಮೋಹನ್‌ ಸಿಂಗ್‌ ಕಟ್ಟಿದ ವ್ಯವಸ್ಥೆಯೆ ದೇಶಕ್ಕೆ ಸಹಾಯ ಮಾಡಿದೆ: ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...