Homeಮುಖಪುಟಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

- Advertisement -
- Advertisement -

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ ವರದಿಯೊಂದರಿಂದ ಬಹಿರಂಗಗೊಂಡಿದ್ದು, ಇದರ ಬೆನ್ನಲ್ಲೇ ತಮ್ಮ ಮೇಲಿನ ಭ್ರಷ್ಟಾಚಾರದ ಆರೋಪಗಳನ್ನು ಅವರು ತಳ್ಳಿಹಾಕಿದ್ದಾರೆ.

ರಾಜಕೀಯಕ್ಕೆ ಬರುವ ಮುನ್ನವೇ ತಾವೊಬ್ಬ ಕೃಷಿಕರಾಗಿದ್ದರಿಂದ ಈ ಸಬ್ಸಿಡಿ ಪಡೆದುಕೊಳ್ಳುವಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಚೌಧರಿ ಸಮರ್ಥಿಸಿಕೊಂಡಿದ್ದಾರೆ. ನಾನೊಬ್ಬ ರೈತ ಮತ್ತು ಬಾಲ್ಯದಿಂದಲೂ ಕೃಷಿಯಲ್ಲಿ ತೊಡಗಿಸಿಕೊಂಡಿದ್ದೇನೆ. ನಾನು ಯಾವುದನ್ನೂ ಮುಚ್ಚಿಟ್ಟಿಲ್ಲ” ಎಂದು ಎಎನ್‌ಐ (ANI) ಸುದ್ದಿ ಸಂಸ್ಥೆಗೆ ತಿಳಿಸಿದ ಚೌಧರಿ, ತಾವು 2018 ರಲ್ಲೇ ಸಬ್ಸಿಡಿಗಾಗಿ ಅರ್ಜಿ ಸಲ್ಲಿಸಿದ್ದು, ಈ ಯೋಜನೆಗಾಗಿ ಪಡೆದ ಸಾಲ ಮತ್ತು ಸಬ್ಸಿಡಿಯ ವಿವರಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿರುವುದಾಗಿ ಹೇಳಿದ್ದಾರೆ.

ಇದರ ಜೊತೆಗೆ, ತಾವೊಬ್ಬ ಬಿಜೆಪಿ ನಾಯಕರಾಗಿದ್ದರೂ ತಮ್ಮ ಜಮೀನನ್ನು ಇತರ ರೈತರಿಗೆ ಆಧುನಿಕ ಕೃಷಿ ಪದ್ಧತಿ ಹಾಗೂ ನೈಸರ್ಗಿಕ ಕೃಷಿ ಕುರಿತು ತರಬೇತಿ ನೀಡಲು ಬಳಸುತ್ತಿರುವುದಾಗಿ ತಿಳಿಸಿದ ಅವರು, “ಸಾವಿರಾರು ರೈತರು ಪಾಲಿಹೌಸ್‌ಗಳನ್ನು ನಿರ್ಮಿಸಿಕೊಂಡು ಸಬ್ಸಿಡಿ ಪಡೆಯುತ್ತಾರೆ, ಹಾಗೆಯೇ ನಾನೂ ಕೂಡ ಪಡೆದಿದ್ದೇನೆ. ಸ್ಥಳೀಯ ಅಧಿಕಾರಿಗಳು ಜಮೀನಿಗೆ ಬಂದು ಯೋಜನೆಯ ಪರಿಶೀಲನೆ ನಡೆಸಿದ್ದಾರೆ” ಎಂದಿದ್ದಾರೆ.

ರಾಷ್ಟ್ರೀಯ ತೋಟಗಾರಿಕಾ ಮಂಡಳಿ (NHB) ಉಸ್ತುವಾರಿ ಇಲಾಖೆಯ ಯೋಜನೆಯಡಿಯಲ್ಲೇ ಚೌಧರಿ ಸಬ್ಸಿಡಿ ಪಡೆದಿದ್ದಾರೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದ ನಂತರ ಈ ವಿವಾದ ಭುಗಿಲೆದ್ದಿದೆ. ವಿಶೇಷವೆಂದರೆ, ಸಚಿವ ಸ್ಥಾನದ ಕಾರಣದಿಂದಾಗಿ ಚೌಧರಿ ಅವರೇ ಈ ಮಂಡಳಿಯ ಪದನಿಮಿತ್ತ ಉಪಾಧ್ಯಕ್ಷರಾಗಿದ್ದಾರೆ.

ಆಯ್ದ ತರಕಾರಿಗಳು ಮತ್ತು ಹೂವುಗಳ ದೊಡ್ಡ ಪ್ರಮಾಣದ ವಾಣಿಜ್ಯ ಬೇಸಾಯವನ್ನು ಉತ್ತೇಜಿಸಲು 2014-15 ರಲ್ಲಿ ಪ್ರಾರಂಭಿಸಲಾದ ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಮಿಷನ್ ಫಾರ್ ಇಂಟಿಗ್ರೇಟೆಡ್ ಡೆವಲಪ್‌ಮೆಂಟ್ ಆಫ್ ಹಾರ್ಟಿಕಲ್ಚರ್’ (MIDH) ಅಡಿಯಲ್ಲಿ ಈ ಸಬ್ಸಿಡಿಯನ್ನು ಮಂಜೂರು ಮಾಡಲಾಗಿದೆ.

ರಾಜಸ್ಥಾನದ ದೀದ್ವಾನಾ-ಕುಚಾಮನ್ ಜಿಲ್ಲೆಯ ಪೀಹ್ ಗ್ರಾಮದಲ್ಲಿರುವ ಚೌದರಿ ಅವರು ಕಲ್ಲಿನ ಕೌಂಪೌಂಡ್‌, ಮುಳ್ಳುತಂತಿ ಬೇಲಿಗಳು, ಕೃತಕ ಹೊಂಡಗಳು ಹಾಗೂ ನಾಲ್ಕು ದೊಡ್ಡ ಪಾಲಿಹೌಸ್‌ಗಳಿರುವ 16,592 ಚದರ ಮೀಟರ್‌ ವಿಸ್ತೀರ್ಣದ ಜಮೀನು ಹೊಂದಿದ್ದಾರೆ. ಈ ವಿಶಾಲವಾದ ಕೃಷಿ ಭೂಮಿಯಲ್ಲಿ ಬಿಳಿ ಬಣ್ಣದ ಅಧಿಕೃತ ನಾಮಫಲಕವೊಂದನ್ನು ಅಳವಡಿಸಲಾಗಿದೆ. ಅದರಲ್ಲಿ “ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ರಾಷ್ಟ್ರೀಯ ತೋಟಗಾರಿಕಾ ಮಂಡಳಿಯಿಂದ ಸಹಾಯ ಪಡೆದಿದೆ” ಎಂದು ಸ್ಪಷ್ಟವಾಗಿ ಬರೆಯಲಾಗಿದೆ. ಫಲಾನುಭವಿಯ ಹೆಸರು ‘ಭಗೀರಥ್ ಚೌಧರಿ’ ಎಂದಿದ್ದು, 50%ರಷ್ಟು ಅಂದರೆ 99,60,000 ರೂ. ಸಬ್ಸಿಡಿ ಮೊತ್ತವನ್ನು ಉಲ್ಲೇಖಿಸಲಾಗಿದೆ.

NHB ನಿರ್ವಹಿಸುವ ಈ ಯೋಜನೆಯು ಸೌತೆಕಾಯಿ, ದಪ್ಪಮೆಣಸಿನಕಾಯಿ (Capsicum), ಟೊಮೆಟೊ ಮತ್ತು ಕೆಲವು ಹೂವುಗಳ ಕೃಷಿಗಾಗಿ ಒಟ್ಟು ಯೋಜನಾ ವೆಚ್ಚದ ಶೇ. 50 ರಷ್ಟು ಸಬ್ಸಿಡಿಯನ್ನು ನೀಡುತ್ತದೆ. ಇದರ ಗರಿಷ್ಠ ಮಿತಿ ಒಂದು ಕುಟುಂಬಕ್ಕೆ 1 ಕೋಟಿ ರೂಪಾಯಿ ಆಗಿದೆ.

ಎನ್‌ಹೆಚ್‌ಬಿ (NHB) ವೆಬ್‌ಸೈಟ್ ಪ್ರಕಾರ, ಈ ಮಂಡಳಿಗೆ ಕೇಂದ್ರ ಕೃಷಿ ಸಚಿವರು ಪದನಿಮಿತ್ತ ಅಧ್ಯಕ್ಷರಾಗಿದ್ದರೆ, ಕೃಷಿ ಖಾತೆ ರಾಜ್ಯ ಸಚಿವರು ಪದನಿಮಿತ್ತ ಉಪಾಧ್ಯಕ್ಷರಾಗಿರುತ್ತಾರೆ. ಆದರೆ, ಅಧಿಕೃತ ದಾಖಲೆಗಳ ಪ್ರಕಾರ, ಸಬ್ಸಿಡಿ ಪ್ರಸ್ತಾಪಗಳನ್ನು ಪ್ರತ್ಯೇಕವಾದ ‘NHB ಪ್ರಾಜೆಕ್ಟ್ ಅಪ್ರೂವಲ್ ಕಮಿಟಿ’ ಅಂಗೀಕರಿಸುತ್ತದೆ. ಈ ಸಮಿತಿಯಲ್ಲಿ ಮಂಡಳಿಯ ಅಧ್ಯಕ್ಷರಾಗಲಿ ಅಥವಾ ಉಪಾಧ್ಯಕ್ಷರಾಗಲಿ ಸದಸ್ಯರಾಗಿರುವುದಿಲ್ಲ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...