Homeಮುಖಪುಟಬಿಹಾರದ ಕುರಿತ ವಿವಾದಾತ್ಮಕ ಹೇಳಿಕೆ ಹಿಂಪಡೆದ ಕೇಂದ್ರ ಸಚಿವ ಪಿಯೂಶ್ ಗೋಯಲ್

ಬಿಹಾರದ ಕುರಿತ ವಿವಾದಾತ್ಮಕ ಹೇಳಿಕೆ ಹಿಂಪಡೆದ ಕೇಂದ್ರ ಸಚಿವ ಪಿಯೂಶ್ ಗೋಯಲ್

- Advertisement -
- Advertisement -

‘ಇಡೀ ದೇಶವನ್ನು ಬಿಹಾರವನ್ನಾಗಿ ಪರಿವರ್ತಿಸುತ್ತೀರಿ’ ಎಂದು ಬಿಹಾರ ರಾಜ್ಯದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಪಿಯೂಶ್ ಗೋಯಲ್ ಇಂದು ತಮ್ಮ ಹೇಳಿಕೆಗಳನ್ನು ಹಿಂಪಡೆದಿದ್ದಾರೆ.

ರಾಜ್ಯಸಭೆಯಲ್ಲಿ ಆರ್‌ಜೆಡಿ ಪಕ್ಷದ ಸದಸ್ಯರಾದ ಮನೋಜ್ ಝಾ ರವರು ಮಾತನಾಡುತ್ತಿದ್ದ ವೇಳೆ ಅದನ್ನು ತಡೆದು ಪಿಯೂಶ್ ಗೋಯಲ್ “ಇವರು ಈ ರೀತಿ ಮಾತನಾಡಿದರೆ, ಇಡೀ ದೇಶವನ್ನು ಬಿಹಾರವನ್ನಾಗಿ ಪರಿವರ್ತಿಸುತ್ತಾರೆ” ಎಂದು ಹೇಳಿದ್ದರು.

ಇದರಿಂದ ಕೆರಳಿದ ಬಿಹಾರದ ಸದಸ್ಯರು ಬಿಹಾರ ರಾಜ್ಯವನ್ನು ಅವಹೇಳನಕಾರಿ ಪದವಾಗಿ ಬಳಸುವ ಮೂಲಕ ಅವಮಾನಿಸಿದ್ದಾರೆ ಎಂದು ಆರೋಪಿಸಿ ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದರು.

ಬಿಹಾರ ರಾಜ್ಯವನ್ನು ಅವಮಾನಿಸುವ ಪಿಯೂಶ್ ಗೋಯಲ್‌ ಅವರ ಹೇಳಿಕೆಗಳನ್ನು ಸಹಿಸುವುದಿಲ್ಲ ಎಂದು ಹಲವು ರಾಜ್ಯಸಭಾ ಸದಸ್ಯರು ಇಂದು ಪ್ರತಿಭಟನೆ ನಡೆಸಿದ್ದರು.

ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಆ ವಿಡಿಯೋವನ್ನು ಹಂಚಿಕೊಂಡು, “ನೋಡಿ ಕೇಂದ್ರ ಸಚಿವರ ಅವಿವೇಕತನದಿಂದ ಮತ್ತು ಅಹಂಕಾರದಿಂದ ಬಿಹಾರ ಮತ್ತು ಅಲ್ಲಿನ ಜನರನ್ನು ಹಂಗಿಸುತ್ತಿದ್ದಾರೆ. 2.5 ಲಕ್ಷ ಕೋಟಿ ರೂಗಳ ಯೋಜನೆಗಳನ್ನು ಅವರ ಸ್ವಂತ ರಾಜ್ಯ ಮಹಾರಾಷ್ಟ್ರದಿಂದ ಗುಜರಾತ್‌ಗೆ ತಗೆದುಕೊಂಡು ಹೋದಾಗಲೂ ಅವರು ಒಂದು ಮಾತು ಆಡಲಿಲ್ಲ. ಇದು ಅವರ ನಿಲುವನ್ನು ತೋರಿಸುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಮನೋಜ್ ಝಾರವರು ಉಪರಾಷ್ಟ್ರಪತಿ ಜಗದೀಪ್ ಧಂಕರ್‌ರವರಿಗೆ ಪತ್ರ ಬರೆದು ಕೇಂದ್ರ ಸಚಿವರು ಕ್ಷಮೆಯಾಚಿಸಬೇಕು ಮತ್ತು ಶ್ರೇಷ್ಠತೆಯ ವ್ಯಸನದಿಂದ ಕೂಡಿರುವ ಆ ಹೇಳಿಕೆಯನ್ನು ಕಡತದಿಂದ ತೆಗೆಯಬೇಕೆಂದು ಒತ್ತಾಯಿಸಿದ್ದರು.

ಈ ಅಹಂಕಾರಿ ಜನರು ಬಿಹಾರದ ಜನರನ್ನು ಎರಡನೇ ದರ್ಜೆಯ ಪ್ರಜೆಗಳಾಗಿ ಕಾಣುತ್ತಾರೆ. ಹಾಗಾಗಿ ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತಾರೆ. ಭಾರತದ ಎಲ್ಲಾ ರಾಜ್ಯಗಳನ್ನು ಕೇಂದ್ರ ಸರ್ಕಾರ ಸಮಾನವಾಗಿ ಪರಿಗಣಿಸಬೇಕು ಎಂದು ಕಿಡಿಕಾರಿದ್ದರು.

ಈ ಕುರಿತು ಸ್ಪಷ್ಟನೆ ನೀಡಿರುವ ಸಚಿವರು, “ಬಿಹಾರ ರಾಜ್ಯವನ್ನು ಅಥವಾ ಬಿಹಾರದ ಜನರನ್ನು ಅವಮಾನಿಸುವ ಯಾವ ಉದ್ದೇಶವು ನನಗಿಲ್ಲ. ಅದು ಯಾರ ಭಾವನೆಗಾದರೂ ನೋವುಂಟು ಮಾಡಿದರೆ, ನಾನು ಕೂಡಲೇ ನನ್ನ ಹೇಳಿಕೆಗಳನ್ನು ಹಿಂಪಡೆಯುತ್ತೇನೆ” ಎಂದು ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಮೋದಿ ಹೇಳಿದಂತೆ 2002ರ ಮೊದಲು ಅಹಮದಾಬಾದ್ ಜಿಲ್ಲೆಯಲ್ಲಿ ಒಂದೇ ಒಂದು ವಿಶ್ವವಿದ್ಯಾಲಯವಿತ್ತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...