Homeಕರ್ನಾಟಕಬಿಜೆಪಿ ಟಿಕೆಟ್ ಕೊಡಿಸುವುದಾಗಿ ₹ 2 ಕೋಟಿ ಸುಲಿಗೆ ಆರೋಪ : ಕೇಂದ್ರ ಸಚಿವ ಪ್ರಲ್ಹಾದ್...

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ₹ 2 ಕೋಟಿ ಸುಲಿಗೆ ಆರೋಪ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರರ ವಿರುದ್ಧ ಎಫ್‌ಐಆರ್

- Advertisement -
- Advertisement -

ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ ವಿಜಯಪುರ ಜಿಲ್ಲೆ ನಾಗಾಠಾಣ ಕ್ಷೇತ್ರದ ಮಾಜಿ ಶಾಸಕ ದೇವಾನಂದ್ ಫೂಲ್ ಸಿಂಗ್ ಚವ್ಹಾಣ್ ಅವರಿಂದ 2 ಕೋಟಿ ರೂಪಾಯಿ ಸುಲಿಗೆ ಮಾಡಿದ ಆರೋಪದಡಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರರ ವಿರುದ್ದ ಎಫ್‌ಐಆರ್ ದಾಖಲಾಗಿದೆ.

ಪ್ರಲ್ಹಾದ್ ಜೋಶಿ ಅವರ ಅಣ್ಣ ಗೋಪಾಲ ಜೋಶಿ, ತಂಗಿ ವಿಜಯಲಕ್ಷಿ ಜೋಶಿ, ಅವರ ಪುತ್ರ ಅಜಯ್ ಜೋಶಿ ವಿರುದ್ದ ಬೆಂಗಳೂರಿನ ಬಸವೇಶ್ವರನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೇವಾನಂದ್ ಅವರ ಪತ್ನಿ ಸುನಿತಾ ಚವ್ಹಾಣ್ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

ದೇವಾನಂದ್ ಫೂಲ್ ಸಿಂಗ್ ಚವ್ಹಾಣ್ ಅವರು 2018ರಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಜಯಗಳಿಸಿದ್ದರು, 2023ರಲ್ಲಿ ಸೋತಿದ್ದರು. ಆ ಬಳಿಕ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಪ್ರಯತ್ನ ಮಾಡುತ್ತಿದ್ದರು.

ಈ ವೇಳೆ ಬೆಳಗಾವಿ ಜಿಲ್ಲೆ ಅಥಣಿಯ ಇಂಜಿನಿಯರ್ ಶೇಖರ್ ನಾಯಕ್ ಎಂಬವರು ಪರಿಚಯವಾಗಿದ್ದರು. ಶೇಖರ್ ನಾಯಕ್ ಅವರು ಪ್ರಲ್ಹಾದ್ ಜೋಶಿ ಸಹೋದರ ಗೋಪಾಲ ಜೋಶಿ ತನಗೆ ಪರಿಚಯ ಇರುವುದಾಗಿ ಹೇಳಿದ್ದರು. ಜೊತೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡು ಲೋಕಸಭೆ ಚುನಾವಣೆ ಎದುರಿಸುವ ಬಗ್ಗೆ ತಿಳಿಸಿದ್ದರು. ಹುಬ್ಬಳಿಗೆ ಕರೆದೊಯ್ದು ಗೋಪಾಲ ಜೋಶಿಯವರನ್ನು ಭೇಟಿ ಮಾಡಿಸಿದ್ದರು ಎಂದು ದೂರಿನಲ್ಲಿ ಹೇಳಿರುವುದಾಗಿ ವರದಿಯಾಗಿದೆ.

ಕೇಂದ್ರದಲ್ಲಿ ನನ್ನ ಸಹೋದರ ಪ್ರಲ್ಹಾದ್ ಜೋಶಿ ತುಂಬಾ ಪ್ರಭಾವಿ ಇದ್ದಾರೆ. ಅವರು ಹೇಳಿದಂತೆ ಮೋದಿ, ಅಮಿತ್ ಶಾ ಕೇಳುತ್ತಾರೆ. ನನ್ನ ತಮ್ಮನ ಜೊತೆ ಮಾತನಾಡಿ ನಿಮಗೆ ವಿಜಯಪುರ ಕ್ಷೇತ್ರದ ಟಿಕೆಟ್ ಕೊಡಿಸುತ್ತೇನೆ ಎಂದು ಗೋಪಾಲ್ ಜೋಶಿ ಭರವಸೆ ನೀಡಿದ್ದರು. ಅಲ್ಲದೆ 5 ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಅಷ್ಟು ಹಣ ಇಲ್ಲ ಎಂದಾಗ 25 ಲಕ್ಷ ರೂಪಾಯಿಯ ಚೆಕ್ ಪಡೆದಿದ್ದರು. ಆ ಹಣವನ್ನು ಬೆಂಗಳೂರಿನ ಬಸವೇಶ್ವರನಗರದಲ್ಲಿರುವ ವಿಜಯಲಕ್ಷಿ ಅವರ ಮನೆಗೆ ತಲುಪಿಸಲಾಗಿತ್ತು. ನಂತರ ಅಮಿತ್ ಶಾ ಅವರ ಆಪ್ತ ಸಹಾಯಕರ ಜೊತೆ ಮಾತನಾಡಿದ್ದಾಗಿ ಹೇಳಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಆರಂಭದಲ್ಲಿ 25 ಲಕ್ಷ ಪಡೆದುಕೊಂಡಿದ್ದ ಗೋಪಾಲ ಜೋಶಿ ಹಾಗೂ ಮತ್ತಿತರರು ನಂತರ ದಿನಗಳಲ್ಲಿ ಚುನಾವಣೆಯ ಸಂಪೂರ್ಣ ಖರ್ಚು ನೋಡಿಕೊಳ್ಳುವುದಾಗಿ ಹೇಳಿ 1.75 ಕೋಟಿ ರೂಪಾಯಿ ಪಡೆದುಕೊಂಡಿದ್ದಾರೆ ಎಂದೂ ದೂರಿನಲ್ಲಿ ಉಲ್ಲೇಖಿಸಿರುವುದಾಗಿ ವರದಿಗಳು ಹೇಳಿವೆ.

ಎಫ್‌ಐಆರ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೆಸರೂ ಸೇರಿಸಲಾಗಿದೆ ಎಂದು ಕೆಲವೊಂದು ವರದಿಗಳು ಹೇಳಿವೆ. ಆದರೆ, ಈ ಬಗ್ಗೆ ಖಚಿತ ಮಾಹಿತಿ ದೊರೆತಿಲ್ಲ.

ಇದನ್ನೂ ಓದಿ : ಮಾನನಷ್ಟ ಪ್ರಕರಣ | ಶಾಸಕ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರೆಂಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...