Homeಮುಖಪುಟ"ತಮಿಳುನಾಡಿನಿಂದ ಬಂದು ಬಾಂಬ್ ಹಾಕ್ತಾರೆ" ಎಂದ ಶೋಭಾ ಕರಂದ್ಲಾಜೆ: ತೀವ್ರ ಆಕ್ರೋಶದ ಬಳಿಕ ಕ್ಷಮೆಯಾಚನೆ

“ತಮಿಳುನಾಡಿನಿಂದ ಬಂದು ಬಾಂಬ್ ಹಾಕ್ತಾರೆ” ಎಂದ ಶೋಭಾ ಕರಂದ್ಲಾಜೆ: ತೀವ್ರ ಆಕ್ರೋಶದ ಬಳಿಕ ಕ್ಷಮೆಯಾಚನೆ

- Advertisement -
- Advertisement -

ತಮಿಳರ ವಿರುದ್ದ ದ್ವೇಷಪೂರಿತ ಹೇಳಿಕೆ ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ತಮಿಳುನಾಡಿನಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಮಂಗಳವಾರ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯೊಂದರ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಶೋಭಾ ಕರಂದ್ಲಾಜೆ, “ತರಬೇತಿ ಪಡೆದು ತಮಿಳುನಾಡಿನಿಂದ ಬರುತ್ತಾರೆ. ಇಲ್ಲಿ ಬಂದು ಬಾಂಬ್ ಹಾಕುತ್ತಾರೆ. ತಮಿಳುನಾಡಿನಿಂದ ಬಂದ ವ್ಯಕ್ತಿಯೊಬ್ಬ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಇಟ್ಟಿದ್ದ. ದೆಹಲಿಯಿಂದ ಬಂದ ವ್ಯಕ್ತಿಯೊಬ್ಬ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ. ಕೇರಳದಿಂದ ಬಂದ ವ್ಯಕ್ತಿಯೊಬ್ಬ ವಿದ್ಯಾರ್ಥಿಗಳ ಮೇಲೆ ಆ್ಯಸಿಡ್ ಎರಚಿದ್ದ” ಎಂದು ಹೇಳಿದ್ದರು.

ಈ ಹೇಳಿಕೆ ತಮಿಳುನಾಡಿದಾದ್ಯಂತ ವೈರಲ್ ಆಗಿದ್ದು, ಕೇಂದ್ರ ಸಚಿವೆಯಾಗಿ ತಮ್ಮ ವಿರುದ್ದ ಆಧಾರ ರಹಿತ ಆರೋಪ ಮಾಡಿರುವ ಶೋಭಾ ಕರಂದ್ಲಾಜೆ ವಿರುದ್ದ ತಮಿಳಿಗರು ಕೆಂಡಾಮಂಡಲರಾಗಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು, “ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಹೇಳಿಕೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಇಂತಹ ಹೇಳಿಕೆ ನೀಡಲು ಒಂದಾ ಎನ್‌ಐಎ ಅಧಿಕಾರಿಯಾಗಿರಬೇಕು, ಇಲ್ಲಾ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಅಪರಾಧಿ ಜೊತೆ ನಿಕಟ ಸಂಪರ್ಕ ಹೊಂದಿದವರಾಗಿರಬೇಕು. ಅಲ್ಲದೆ, ಇಂತಹ ಹೇಳಿಕೆ ನೀಡಲು ಶೋಭಾ ಕರಂದ್ಲಾಜೆ ಅವರಿಗೆ ಅಧಿಕಾರ ಇಲ್ಲ. ತಮಿಳರು ಮತ್ತು ಕನ್ನಡಿಗರು ಬಿಜೆಪಿಯ ಈ ವಿಭಜನೆಯ ಮಾತುಗಳನ್ನು ತಿರಸ್ಕರಿಸುತ್ತಾರೆ” ಎಂದು ಹೇಳಿದ್ದಾರೆ.

“ಶಾಂತಿ, ಸೌಹಾರ್ದತೆ ಮತ್ತು ರಾಷ್ಟ್ರೀಯ ಐಕ್ಯತೆಗೆ ಧಕ್ಕೆ ಉಂಟು ಮಾಡಿರುವ ಶೋಭಾ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತೇನೆ. ಪ್ರಧಾನಿಯಿಂದ ಹಿಡಿದು ಕಾರ್ಯಕರ್ತವರೆಗೆ ಬಿಜೆಪಿಯ ಎಲ್ಲರೂ ಈ ಕೊಳಕು ವಿಭಜಣೆ ರಾಜಕಾರಣ ಮಾಡುವುದನ್ನು ನಿಲ್ಲಿಸಬೇಕು. ಚುನಾವಣಾ ಆಯೋಗ ಈ ದ್ವೇಷ ಭಾಷಣ ಗಮನಿಸಬೇಕು ಮತ್ತು ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಕ್ಷಮೆ ಯಾಚಿಸಿದ ಶೋಭಾ ಕರಂದ್ಲಾಜೆ :

ತನ್ನ ಹೇಳಿಕೆಯ ವಿರುದ್ದ ತಮಿಳರಿಂದ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಶೋಭಾ ಕರಂದ್ಲಾಜೆ ಕ್ಷಮೆ ಯಾಚಿಸಿದ್ದಾರೆ. ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಅವರು, ತಮಿಳುನಾಡಿನ ಸಹೋದರ-ಸಹೋದರಿಯರೇ, “ನನ್ನ ಮಾತುಗಳು ಪ್ರಕರಣದ ಬಗ್ಗೆ ಬೆಳಕು ಚೆಲ್ಲುವ ಉದ್ದೇಶ ಹೊಂದಿತ್ತೇ ಹೊರತು, ಆರೋಪ ಹೊರಿಸುವ ಆಶಯ ಇರಲಿಲ್ಲ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಆದರೂ, ನನ್ನ ಹೇಳಿಕೆಗಳು ಕೆಲವರಿಗೆ ನೋವು ತಂದಿರುವುದನ್ನು ಗಮನಿಸಿದ್ದೇನೆ. ಅದಕ್ಕಾಗಿ ನಾನು ಕ್ಷಮೆ ಯಾಚಿಸುತ್ತೇನೆ. ನನ್ನ ಟೀಕೆಗಳು ರಾಮೇಶ್ವರಂ ಕೆಫೆಯ ಸ್ಪೋಟಕ್ಕೆ ಸಂಬಂಧಿಸಿ ಕೃಷ್ಣಗಿರಿ ಅರಣ್ಯದಲ್ಲಿ ತರಬೇತಿ ಪಡೆದವರ ಬಗ್ಗೆ ಹೇಳಿರುವುದಾಗಿತ್ತು. ತಮಿಳುನಾಡಿನ ಎಲ್ಲರಿಗೂ, ನನ್ನ ಹೃದಯದಿಂದ ಕ್ಷಮೆ ಕೇಳುತ್ತೇನೆ. ನಾನು ನನ್ನ ಈ ಹಿಂದಿನ ಮಾತುಗಳನ್ನು ಹಿಂತೆಗೆದುಕೊಳ್ಳುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ಸಿಎಎ: ಮುಸ್ಲಿಂ ಸಮುದಾಯದ ವಿರುದ್ಧದ ಬಿಜೆಪಿಯ ಇನ್ನೊಂದು ಆಯುಧ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೋಕಸಭೆ ಚುನಾವಣೆ-2024: ಕುಗ್ಗಿದ ಮೋದಿ ವರ್ಚಸ್ಸು; ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವಲೋಕನ…

0
2014 ಮತ್ತು 2019ರ ಲೋಕಸಭೆ ಚುನಾವಣೆಗೆ ಹೋಲಿಕೆ ಮಾಡಿದರೆ 2024ರಲ್ಲಿ ದೇಶದಲ್ಲಿ ಮೋದಿ ವರ್ಚಸ್ಸು ಕಡಿಮೆಯಾಗಿದೆ. ಈ ಬಾರಿ ಬ್ರ್ಯಾಂಡ್ ಮೋದಿ ದುರ್ಬಲವಾಗುತ್ತಿದೆ, ಮೋದಿ ಕುರಿತು ನಿರೂಪಣೆಯಲ್ಲಿ ಬದಲಾವಣೆ ಇದೆ, ಜನರಲ್ಲಿ ಮೋದಿ...