Homeಮುಖಪುಟಹಪ್ಪಳ ತಿಂದರೆ ಕೊರೊನಾ ತಡೆಗಟ್ಟಬಹುದು ಎಂದಿದ್ದ ಕೇಂದ್ರ ಸಚಿವನಿಗೆ ಕೊರೊನಾ ಪಾಸಿಟಿವ್!

ಹಪ್ಪಳ ತಿಂದರೆ ಕೊರೊನಾ ತಡೆಗಟ್ಟಬಹುದು ಎಂದಿದ್ದ ಕೇಂದ್ರ ಸಚಿವನಿಗೆ ಕೊರೊನಾ ಪಾಸಿಟಿವ್!

ಅರ್ಜುನ್ ರಾಮ್‌ ಮೇಘಾವಲ್ "ಬಾಬಿ ಜೀ ಪಾಪಡ್" ಬ್ರಾಂಡ್‌ನ ಹಪ್ಪಳವನ್ನು ಊಟದ ಜೊತೆ ತಿಂದರೆ ಅದು ದೇಹದಲ್ಲಿ ಕೊರೊನಾ ವೈರಸ್ ವಿರುದ್ಧ ಹೋರಾಡುವ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದಿದ್ದರು.

- Advertisement -
- Advertisement -

ಬಾಬಿ ಜೀ ಬ್ರಾಂಡ್‌ನ ಹಪ್ಪಳ ತಿಂದರೆ ದೇಹದ ರೋಗನಿರೋಧಕ ಶಕ್ತಿ ಹೆಚ್ಚಳವಾಗಿ ಕೊರೊನಾ ತಡೆಗಟ್ಟಬಹುದು ಎಂದು ಹೇಳಿ ನಗೆಪಾಟಲಿಗೀಡಾಗಿದ್ದ ಕೇಂದ್ರ ಸಚಿವ ಅರ್ಜುನ್ ರಾಮ್‌ ಮೇಘಾವಲ್‌ರವರಿಗೆ ಕೊರೊನಾ ಸೋಂಕು ತಗುಲಿದೆ.

ಶನಿವಾರ ಅವರ ಕೋವಿಡ್ ಪರೀಕ್ಷಾ ಫಲಿತಾಂಶ ಹೊರಬಿದ್ದಿದ್ದು ಕೊರೊನಾ ಪಾಸಿಟಿವ್ ದೃಢವಾದ ನಂತರ ಅವರನ್ನು ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬೃಹತ್ ಕೈಗಾರಿಕೆ ಮತ್ತು ಸಂಸದೀಯ ವ್ಯವಹಾರಗಳ ರಾಜ್ಯಸಚಿವರಾದ ಅರ್ಜುನ್ ರಾಮ್‌ ಮೇಘಾವಲ್‌ಗೆ ಕೊರೊನಾ ರೋಗಲಕ್ಷಣಗಳು ಕಾಣಿಸಿಕೊಂಡ ನಂತರ ಎರಡು ಬಾರಿ ಪರೀಕ್ಷೆ ಮಾಡಿಸಿದ್ದರು. ಎರಡನೇ ಪರೀಕ್ಷೆಯಲ್ಲಿ ಪಾಸಿಟಿವ್ ಕಾಣಿಸಿಕೊಂಡ ನಂತರ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಾನು ಚೆನ್ನಾಗಿದ್ದೇನೆ. ಆದರೆ ನನ್ನ ಎರಡನೇ ವರದಿಯಲ್ಲಿ ಪಾಸಿಟಿವ್ ಬಂದ ನಂತರ ಡಾಕ್ಟರ್‌ಗಳ ಸಲಹೆ ಮೇರೆಗೆ ಏಮ್ಸ್‌ನಲ್ಲಿ ದಾಖಲಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರೆಲ್ಲಾ ದಯವಿಟ್ಟು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಎಂದು ಸಚಿವರು ತಿಳಿಸಿದ್ದಾರೆ.

ಜುಲೈ ತಿಂಗಳಿನಲ್ಲಿ ವೈರಲ್ ಆದ ವಿಡಿಯೋವೊಂದರಲ್ಲಿ ಅರ್ಜುನ್ ರಾಮ್‌ ಮೇಘಾವಲ್ “ಬಾಬಿ ಜೀ ಪಾಪಡ್” ಬ್ರಾಂಡ್‌ನ ಹಪ್ಪಳವನ್ನು ಊಟದ ಜೊತೆ ತಿಂದರೆ ಅದು ದೇಹದಲ್ಲಿ ಕೊರೊನಾ ವೈರಸ್ ವಿರುದ್ಧ ಹೋರಾಡುವ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ” ಎಂದಿದ್ದರು. ಅವರ ಈ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದ ವ್ಯಂಗ್ಯ ಕಂಡುಬಂದಿತ್ತು.

ವೋಕಲ್ ಫಾರ್ ಲೋಕಲ್ ಪ್ರಚಾರಾಂದೋಲನದ ಭಾಗವಾಗಿ ಹಪ್ಪಳ ಸೇವಿಸಬೇಕೆಂದು ಸಚಿವರು ಕರೆ ನೀಡಿದ್ದರು. ಆದರೆ ಈಗ ಅವರಿಗೆ ಕೊರೊನಾ ಬಂದ ಹಿನ್ನೆಲೆಯಲ್ಲಿ ಹಪ್ಪಳ ತಿನ್ನುವುದನ್ನು ಬಿಟ್ಟು ಏಮ್ಸ್‌ಗೆ ಏಕೆ ದಾಖಲಾಗಿದ್ದಾರೆ ಎಂದು ನೆಟ್ಟಿಗರು ಕಾಲೆಳೆದಿದ್ದಾರೆ.


ಇದನ್ನೂ ಓದಿ: ಅಯೋಧ್ಯೆ ಕುರಿತು ಪೋಸ್ಟ್‌: ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿದ ರಮ್ಯಾ ದಿವ್ಯಸ್ಪಂದನ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...