Homeಮುಖಪುಟಯಶಸ್ಸಿನತ್ತ ಒಗ್ಗಟ್ಟು ಮತ್ತು ನ್ಯಾಯ: ಕೃಷಿ ಕಾಯ್ದೆಗಳ ರದ್ಧತಿಗೆ ಸಂಯುಕ್ತ ಕಿಸಾನ್ ಮೋರ್ಚಾ ಪ್ರತಿಕ್ರಿಯೆ

ಯಶಸ್ಸಿನತ್ತ ಒಗ್ಗಟ್ಟು ಮತ್ತು ನ್ಯಾಯ: ಕೃಷಿ ಕಾಯ್ದೆಗಳ ರದ್ಧತಿಗೆ ಸಂಯುಕ್ತ ಕಿಸಾನ್ ಮೋರ್ಚಾ ಪ್ರತಿಕ್ರಿಯೆ

ಹೋರಾಟವನ್ನು ಮುನ್ನೆಡಿಸಿದ ನೂರಾರು ರೈತ ಸಂಘಟನೆಗಳ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾ 'ಯಶಸ್ಸಿನತ್ತ ಒಗ್ಗಟ್ಟು ಮತ್ತು ನ್ಯಾಯ ಮುನ್ನುಗ್ಗುತ್ತಿದೆ' ಎಂದು ಹೇಳಿದೆ.

- Advertisement -
- Advertisement -

ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳು ರದ್ದಾಗಬೇಕೆಂದು ಮತ್ತು ಎಂಎಸ್‌ಪಿ ಖಾತ್ರಿಗಾಗಿ ಹೊಸ ಕಾನೂನಿಗೆ ಒತ್ತಾಯಿಸಿ ಸತತ ಒಂದು ವರ್ಷದಿಂದ ದೆಹಲಿಯ ಗಡಿಗಳಲ್ಲಿ ಮತ್ತು ದೇಶಾದ್ಯಂತ ನಡೆದ ಚಾರಿತ್ರಿಕ ರೈತ ಹೋರಾಟಕ್ಕೆ ಜಯ ಲಭಿಸಿದೆ. ದಿಟ್ಟ ರೈತ ಹೋರಾಟ ಎದುರು ಮಂಡಿಯೂರಿರುವ ನರೇಂದ್ರ ಮೋದಿ ಸರ್ಕಾರ ಕೊನೆಗೂ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಹೋರಾಟವನ್ನು ಮುನ್ನೆಡಿಸಿದ ನೂರಾರು ರೈತ ಸಂಘಟನೆಗಳ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾ ‘ಯಶಸ್ಸಿನತ್ತ ಒಗ್ಗಟ್ಟು ಮತ್ತು ನ್ಯಾಯ ಮುನ್ನುಗ್ಗುತ್ತಿದೆ’ ಎಂದು ಹೇಳಿದೆ.

“ಇದು ಜಯ, ಸುದೀರ್ಘ ಒಂದು ವರ್ಷದ ಬಳಿಕ! ಮೋದಿ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ನಿರ್ಧರಿಸಿರುವುದಾಗಿ ಘೋಷಿಸಿದೆ. ಯಶಸ್ಸಿನತ್ತ ಒಗ್ಗಟ್ಟು ಮತ್ತು ನ್ಯಾಯ” ಎಂದು ಕಿಸಾನ್ ಏಕ್ತಾ ಮೋರ್ಚಾ ಟ್ವೀಟ್ ಮಾಡಿದೆ. #ರೈತರಿಗೆ_ಗೆಲುವು #ರೈತ_ಕಾರ್ಮಿಕರ_ಐಕ್ಯತೆ_ಜಿಂದಾಬಾದ್ ಎಂಬ ಹ್ಯಾಸ್‌ಟ್ಯಾಗ್‌ ಗಳನ್ನು ಬಳಸಿದೆ.

ದೇಶವನ್ನು ಉದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, “ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದು ಮಾಡಲಾಗುವುದು. ದೆಹಲಿ ಗಡಿಯಲ್ಲಿ ಹೋರಾಟ ಮಾಡುತ್ತಿರುವ ರೈತರು ಮನೆಗೆ ಹಿಂತಿರುಗಬೇಕು” ಎಂದು ಮನವಿ ಮಾಡಿದ್ದಾರೆ.

ಒಂದು ವರ್ಗದ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ನಮಗೆ ಸಾಧ್ಯವಾಗಲಿಲ್ಲ ಎಂದು ನಾನು ದೇಶವಾಸಿಗಳಲ್ಲಿ ಕ್ಷಮೆಯಾಚಿಸುತ್ತೇನೆ ಎಂದು ಪ್ರಧಾನಿ ತಿಳಿಸಿದ್ದಾರೆ. ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಸಾಂವಿಧಾನಿಕ ಪ್ರಕ್ರಿಯೆಯು ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ಪ್ರಧಾನಿ ಹೇಳಿದ್ದಾರೆ.


ಇದನ್ನೂ ಓದಿ; ವಿವಾದಿತ ಕೃಷಿ ಕಾಯ್ದೆಗಳು ರದ್ದು: ಕ್ಷಮೆಯಾಚಿಸಿದ ಮೋದಿ, ರೈತರ ಹೋರಾಟಕ್ಕೆ ಗೆಲುವು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಹಾರದಲ್ಲಿ ಜೆಡಿಯು ಮುಖಂಡನ ಗುಂಡಿಟ್ಟು ಹತ್ಯೆ: ಭುಗಿಲೆದ್ದ ಪ್ರತಿಭಟನೆ

0
ಜೆಡಿಯು ಯುವ ಮುಖಂಡನನ್ನು ಅಪರಿಚಿತ ದಾಳಿಕೋರರು ಗುಂಡಿಕ್ಕಿ  ಹತ್ಯೆ ಮಾಡಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಬೀದಿಗಿಳಿದು ಪ್ರತಿಭಟನೆಯನ್ನು ನಡೆಸಿದ್ದಾರೆ. ಸೌರಭ್ ಕುಮಾರ್ ಹತ್ಯೆಗೀಡಾದ ಜೆಡಿಯು ಯುವ ಮುಖಂಡ....