Homeಮುಖಪುಟಕೇಂದ್ರದ ವಿರುದ್ಧ ವಿರೋಧ ಪಕ್ಷಗಳ ಒಗ್ಗಟ್ಟು; ಕೇಜ್ರಿವಾಲ್‌ ಭೇಟಿ ಮಾಡಿದ ನಿತೀಶ್ ಕುಮಾರ್

ಕೇಂದ್ರದ ವಿರುದ್ಧ ವಿರೋಧ ಪಕ್ಷಗಳ ಒಗ್ಗಟ್ಟು; ಕೇಜ್ರಿವಾಲ್‌ ಭೇಟಿ ಮಾಡಿದ ನಿತೀಶ್ ಕುಮಾರ್

- Advertisement -
- Advertisement -

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಎಲ್ಲ ವಿರೋಧ ಪಕ್ಷಗಳು ಒಟ್ಟಾಗುತ್ತಿರುವ ಭಾಗವಾಗಿ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಭಾನುವಾರ ರಾಷ್ಟ್ರ ರಾಜಧಾನಿ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಿವಿಲ್ ಲೈನ್ಸ್ ನಿವಾಸಕ್ಕೆ ಭೇಟಿ ನೀಡಿದ ಮಹತ್ವ ಚರ್ಚೆ ನಡೆಸಿದ್ದಾರೆ.

ಈ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಜಿವಾಲ್, ”ನಾನು ಇಂದು ನಿತೀಶ್ ಜೀ ಅವರೊಂದಿಗೆ ಸಭೆ ನಡೆಸಿದ್ದೇನೆ. ದೆಹಲಿ ಪರವಾಗಿ ಕೇಂದ್ರವು ಸುಪ್ರೀಂಕೋರ್ಟ್ ಆದೇಶವನ್ನು ನಿರಾಕರಿಸುವ ಸುಗ್ರೀವಾಜ್ಞೆಯನ್ನು ತರುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ನಾನು ದೆಹಲಿಯ ಜನರೊಂದಿಗೆ ನಿಲ್ಲುತ್ತೇನೆ” ಎಂದು ಹೇಳಿರುವುದಾಗಿ ತಿಳಿಸಿದ್ದಾರೆ.

”ಒಂದು ವೇಳೆ ಕೇಂದ್ರ ಸರ್ಕಾರ ಈ ಸುಗ್ರೀವಾಜ್ಞೆಯನ್ನು ಮಸೂದೆಯಾಗಿ ತಂದರೆ, ಬಿಜೆಪಿಯೇತರ ಪಕ್ಷಗಳೆಲ್ಲ ಒಗ್ಗೂಡಿದರೆ ರಾಜ್ಯಸಭೆಯಲ್ಲಿ ಬಿಜೆಪಿಗೆ ಹಿನ್ನಡೆ ಉಂಟು ಮಾಡುಬಹುದು. ಅಂತಹದ್ದೇನಾದರೂ ನಡೆದರೆ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬಹುದು ಎಂಬ ಸಂದೇಶ ರವಾನಿಸಬಹುದು” ಎಂದು ಕೇಜಿವಾಲ್ ಹೇಳಿದ್ದಾರೆ.

ಕಳೆದ ಬಾರಿ ಯಾವ ಯಾವ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಏರಿತ್ತೋ ಆ ಎಲ್ಲ ರಾಜ್ಯಗಳಲ್ಲಿ ಒಂದಂದಾಗಿ ಕಾಂಗ್ರೆಸ್ ಪಕ್ಷ ಅಧಿಕಾರ ಪಡೆಯುತ್ತಿದೆ. ಈ ನಿಟ್ಟಿನಲ್ಲಿ ಕರ್ನಾಟಕದಲ್ಲೂ ಸಹ ಕಾಂಗ್ರೆಸ್ 136 ಸ್ಥಾನ ಪಡೆದು ಅಧಿಕಾರಕ್ಕೆ ಬಂದಿದೆ. ಇದೇರೀತಿ ಹಲವು ಕಡೆಗಳಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳುತ್ತಿದೆ.

ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರಮಾಣವಚನ ಸ್ವೀಕಾರಕ್ಕೆ ಬಿಹಾರ ಸಿಎಂ ನಿತೀಶ್ ಕುಮಾರ್, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಸೇರಿದಂತೆ ಬಿಜೆಪಿಯೇತರ ಕೆಲವು ನಾಯಕರು ಭಾಗವಹಿಸಿದ್ದರು. ಇದರ ಬೆನ್ನಲ್ಲೇ ನಿತೀಶ್ ಕುಮಾರ್ ಅವರು ಭಾನುವಾರ ಎಎಪಿ ಮುಖ್ಯಮಂತ್ರಿಯನ್ನು ಭೇಟಿ ಮಾಡಿದ್ದಾರೆ.

2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನೆಲೆ ಈಗಿನಿಂದಲೇ ಪ್ರತಿಪಕ್ಷಗಳ ಒಗ್ಗೂಡಿಸುವ ಪ್ರಯತ್ನ ನಡೆಯುತ್ತಿದ್ದು, ಸಿಎಂ ಅರವಿಂದ ಕೇಜ್ರಿವಾಲ್ ಭೇಟಿ ಮುನ್ನ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮನೋಜ್ ಝಾ ದೆಹಲಿಯಲ್ಲಿರುವ ಬಿಹಾರ ಸಿಎಂ ನಿವಾಸಕ್ಕೆ ಆಗಮಿಸಿದ್ದರು. ರಾಷ್ಟ್ರ ರಾಜಕಾರಣದಲ್ಲಿ ದೇಶದ ಹಿತಾಸಕ್ತಿಗಾಗಿ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಕುರಿತು ಚರ್ಚಿಸಿದರು.

ಈ ವೇಳೆ ಕರ್ನಾಟಕದ ಉದಾಹರಣೆ ನೀಡಿದ ನಿತಿಶ್ ಕುಮಾರ್, ”ಕರ್ನಾಟಕದಲ್ಲಿ ಕಾಂಗ್ರೆಸ್ ಭಾರೀ ಗೆಲುವು ಸಾಧಿಸಿದೆ. ದೇಶದಲ್ಲಿ ಅದೇ ರೀತಿ ವಿರೋಧ ಪಕ್ಷಗಳು ಒಗ್ಗೂಡಿದರೆ, ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬಹುದು. ಅದಕ್ಕಾಗಿ ಎಲ್ಲ ಪ್ರಯತ್ನಗಳು ನಡೆಯುತ್ತಿವೆ” ಎಂದು ಹೇಳಿದರು.

ಇದನ್ನೂ ಓದಿ: ಬಿಜೆಪಿ ಸೋಲಿಸುವ ಉದ್ದೇಶ; ಖರ್ಗೆ, ರಾಹುಲ್‌ರನ್ನು ಭೇಟಿಯಾದ ಶರದ್ ಪವಾರ್

ಇನ್ನೇನು 2024ರ ಲೋಕಸಭೆ ಚುನಾವಣೆ ಸಮೀಪಿಸುತ್ತಿದೆ. ಇದಕ್ಕೂ ಮುನ್ನ ಬಿಜೆಪಿ ವಿರುದ್ಧ ಎಲ್ಲ ವಿರೋಧ ಪಕ್ಷಗಳ ಬಣವನ್ನು ಗಟ್ಟಿಗೊಳಿಸುವ ಉದ್ದೇಶ ಸಂಯುಕ್ತ ಜನತಾ ದಳ (JDU) ಹೊಂದಿದೆ. ಈ ಕಾರಣಕ್ಕೆ ನಾಯಕ ನಿತೀಶ್ ಕುಮಾರ್ ಪ್ರತಿಪಕ್ಷ ನಾಯಕರನ್ನು ಭೇಟಿ ಮಾಡಿ ರಣತಂತ್ರ ಹೆಣೆಯುತ್ತಿದ್ದಾರೆ. ಅದಕ್ಕಾಗಿ ವಿವಿಧ ಪಕ್ಷಗಳ ನಾಯಕ ಸಹಕಾರ ಕೋರಿದ್ದಾರೆ ಎಂದು ತಿಳಿದು ಬಂದಿದೆ.

”2024ರಲ್ಲಿ ಎದರಾಗಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಒಂದೊಳ್ಳೆಯ ಅವಕಾಶ ಕೂಡಿ ಬಂದಿದೆ. ಈ ಸಂಬಂಧ ಪ್ರತಿ ಪಕ್ಷಗಳು ಒಂದಾಗಬೇಕಿದೆ” ಎಂದು ಅವರು ಮಾತುಕತೆ ವೇಳೆ ಹೇಳಿದರು.

ಹೊಸ ಸಂಸತ್ತಿನ ಉದ್ಘಾಟನೆ ಬಗ್ಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಟ್ವೀಟ್ ಮಾಡಿದ್ದು, ”ಹೊಸ ಸಂಸತ್ ಭವನವನ್ನು ರಾಷ್ಟ್ರಪತಿಗಳು ಉದ್ಘಾಟಿಸಬೇಕೇ ಹೊರತು ಪ್ರಧಾನಿಯಲ್ಲ!” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. All Poltical Partys are united it’s ok
    But why you are not calling Assaduddin Owaisi AIMIM?
    Muslim league, ect.
    Who will be destroyed Congress party you are uniting like shared pawar NCP
    mamta Benarji TMC. and much more
    They all are plying with poor peoples

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...