Homeಮುಖಪುಟದೇಶದ ಐಕ್ಯತೆಗಾಗಿ ಹಲವು ಕಾಂಗ್ರೆಸ್ ನಾಯಕರು ಪ್ರಾಣ ತೆತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ದೇಶದ ಐಕ್ಯತೆಗಾಗಿ ಹಲವು ಕಾಂಗ್ರೆಸ್ ನಾಯಕರು ಪ್ರಾಣ ತೆತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರ ‘ಬಟೇಂಗೆ ತೋ ಕಟೇಂಗೆ’ ಘೋಷಣೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್‌ನ ಹಲವಾರು ನಾಯಕರು ದೇಶವನ್ನು ಒಗ್ಗೂಡಿಸಲು ತಮ್ಮ ಪ್ರಾಣವನ್ನೇ ತೆತ್ತಿದ್ದಾರೆ ಎಂದು ಶನಿವಾರ ಪ್ರತಿಪಾದಿಸಿದ್ದಾರೆ. ದೇಶ ಒಗ್ಗಟ್ಟಾಗಿ ಇರಬೇಕೆಂದು ಬಯಸುವವರು ಎಂದಿಗೂ ಇಂತಹ ವಿಭಜನೆಯ ಹೇಳಿಕೆಗಳನ್ನು ನೀಡುವುದಿಲ್ಲ ಎಂದು ಅವರು ಹೇಳಿದ್ದಾರೆ. ದೇಶದ ಐಕ್ಯತೆಗಾಗಿ

ನವೆಂಬರ್ 20 ರಂದು ವಿಧಾನಸಭೆ ಚುನಾವಣೆ ನಡೆಯಲಿರುವ ಮಹಾರಾಷ್ಟ್ರದ ನಾಗ್ಪುರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಯೋಗಿ ಅವರ ಘೋಷಣೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ‘ಏಕ್ ಹೈ, ತೋ ಸೇಫ್ ಹೈ’ ನಡುವೆ ಯಾವುದು ಬೇಕು ಎಂದು ಬಿಜೆಪಿ ನಿರ್ಧರಿಸುವಂತೆ ಅವರು ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತಮ್ಮ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕೆಂಪು ಹೊದಿಕೆಯಿರುವ ಸಂವಿಧಾನದ ಪ್ರತಿಯನ್ನು ಹಿಡಿದಿದ್ದಕ್ಕಾಗಿ ಟೀಕಿಸಿದ್ದ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಅವರು, ಅದೇ ರೀತಿಯ ಪ್ರತಿಯನ್ನು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪ್ರಧಾನಿ ಮೋದಿ ಉಡುಗೊರೆಯಾಗಿ ನೀಡಿದ ಚಿತ್ರವನ್ನು ತೋರಿಸಿದರು. ದೇಶದ ಐಕ್ಯತೆಗಾಗಿ

ಬಿಜೆಪಿ ಮತ್ತು ಆರ್‌ಎಸ್‌ಎಸ್ ಮತ ಗಳಿಸಲು ಜನರನ್ನು ಪ್ರಚೋದಿಸುತ್ತಿವೆ ಎಂದು ಆರೋಪಿಸಿದ ಅವರು, “ಮೊದಲು ಯಾರ ಘೋಷವಾಕ್ಯವನ್ನು ಅನುಸರಿಸಬೇಕೆಂದು ನೀವೇ ನಿರ್ಧರಿಸಿ. ಯೋಗಿ ಅಥವಾ ಮೋದಿ ಅವರದ್ದೇ?. ಬಿಜೆಪಿ ನಾಯಕರು ಪ್ರಚೋದಿಸುವ ಭಾಷಣಗಳನ್ನು ನೀಡುತ್ತಾರೆ ಮತ್ತು ಸುಳ್ಳುಗಳನ್ನು ಮಾತನಾಡುತ್ತಾರೆ. ಪ್ರಮುಖ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ತಿರುಗಿಸುತ್ತಾರೆ” ಎಂದು ಅವರು ಹೇಳಿದ್ದಾರೆ.

ಶುಕ್ರವಾರ ಉತ್ತರ ಮಹಾರಾಷ್ಟ್ರ ಜಿಲ್ಲೆಯ ಧುಲೆಯಲ್ಲಿ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಮೋದಿ, ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳ ನಡುವೆ ಏಕತೆ ಇರಬೇಕು ಎಂದು ಹೇಳಿದ್ದರು. “ನೆನಪಿಡಿ, ಏಕ್ ಹೈ, ತೋ ಸೇಫ್ ಹೈ (ನಾವು ಒಗ್ಗಟ್ಟಾಗಿದ್ದರೆ ನಾವು ಸುರಕ್ಷಿತರು)” ಎಂದು ಹೇಳಿದ್ದರು.

“ದೇಶವನ್ನು ಒಗ್ಗೂಡಿಸಲು ಹಲವಾರು ದೊಡ್ಡ ಕಾಂಗ್ರೆಸ್‌ ನಾಯಕರು ತಮ್ಮ ಪ್ರಾಣವನ್ನೇ ತೆತ್ತಿದ್ದಾರೆ. ಆದರೆ ನೀವು ಮಾತ್ರ ವಿಭಜಿಸುತ್ತೀರಿ ಜೊತೆಗೆ ಇತರರನ್ನು ದೂಷಿಸುತ್ತೀರಿ. ನೀವು ‘ಬಾಟಂಗೆ ತೋ ಕಟೆಂಗೆ’ ಎಂಬ ವಿಭಜನೆಯ ಘೋಷಣೆಗಳನ್ನು ಹೇಳುತ್ತೀರಿ. ದೇಶ ಒಗ್ಗಟ್ಟಾಗಿ ಉಳಿಯಬೇಕು ಎಂದು ಬಯಸುವವರು ಅದನ್ನು ಎಂದಿಗೂ ಮೀರುವುದಿಲ್ಲ” ಎಂದು ಖರ್ಗೆ ಹೇಳಿದ್ದಾರೆ.

ವಿದರ್ಭದಲ್ಲಿ ಮಹಾ ವಿಕಾಸ್ ಅಘಾಡಿ ಅಲೆ ಇದೆ, ಇಲ್ಲಿ ರಾಜ್ಯದ 288 ಶಾಸಕರ ಪೈಕಿ 62 ಶಾಸಕರನ್ನು ಆಯ್ಕೆ ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್, ಶಿವಸೇನೆ (ಯುಬಿಟಿ), ಮತ್ತು ಎನ್‌ಸಿಪಿ (ಎಸ್‌ಪಿ) ಒಳಗೊಂಡ ಮಹಾ ವಿಕಾಸ್ ಅಘಾಡಿ ಮೈತ್ರಿ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ನಗರ ನಕ್ಸಲರನ್ನು ಬೆಂಬಲಿಸುತ್ತದೆ ಎಂಬ ಬಿಜೆಪಿಯ ಆರೋಪವನ್ನು ತಳ್ಳಿಹಾಕಿದ ಅವರು, “ಸಂವಿಧಾನದ ಪ್ರತಿಯನ್ನು ಕೆಂಪು ಹೊದಿಕೆಯೊಂದಿಗೆ ಪ್ರದರ್ಶಿಸುವುದು ಅಪರಾಧವೇ?” ಎಂದು ಕೇಳಿದ್ದಾರೆ. ಅನೇಕ ಸಾರ್ವಜನಿಕ ಸಭೆಗಳಲ್ಲಿ, ರಾಹುಲ್ ಗಾಂಧಿಯವರು ಕೆಂಪು ಹೊದಿಕೆಯಿರುವ ಸಂವಿಧಾನದ ಪ್ರತಿಯನ್ನು ಪ್ರದರ್ಶಿಸುತ್ತಾರೆ. ಈ ಬಗ್ಗೆ ಬಿಜೆಪಿ ತಕರಾರು ತೆಗೆದಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ ಖರ್ಗೆ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪ್ರಧಾನಿ ಮೋದಿ ಅದೇ ರೀತಿಯ ಪ್ರತಿಯನ್ನು ಉಡುಗೊರೆಯಾಗಿ ನೀಡಿದ ಚಿತ್ರವನ್ನು ಪತ್ರಿಕಾಗೋಷ್ಠಿಯಲ್ಲಿ ತೋರಿಸಿದ್ದಾರೆ. ಪ್ರಧಾನಿ ಮೋದಿ “ಸುಳ್ಳುಗಳನ್ನು ಹೇಳುತ್ತಾರೆ ಮತ್ತು ಅವುಗಳನ್ನು ಜೋರಾಗಿ ಹೇಳುತ್ತಾರೆ” ಎಂದು ಅವರು ಆರೋಪಿಸಿದರು.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್ 20 ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: ಜಾರ್ಖಂಡ್ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ | ಪ್ರಧಾನಿ ಮೋದಿ ಚಿತ್ರಗಳೆ ಹೈಲೈಟ್; ಆದಿವಾಸಿ ನಾಯಕರ ನಿರ್ಲಕ್ಷ್ಯ!

ಜಾರ್ಖಂಡ್ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ | ಪ್ರಧಾನಿ ಮೋದಿ ಚಿತ್ರಗಳೆ ಹೈಲೈಟ್; ಆದಿವಾಸಿ ನಾಯಕರ ನಿರ್ಲಕ್ಷ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...