Homeಮುಖಪುಟವಿಶ್ವವಿದ್ಯಾನಿಲಯಗಳ ಅಂತಿಮ ವರ್ಷದ ಪರೀಕ್ಷೆ ರದ್ದತಿ: ಸುಪ್ರೀಂ ನಿಂದ ನಾಳೆ ಮಹತ್ವದ ತೀರ್ಪು!

ವಿಶ್ವವಿದ್ಯಾನಿಲಯಗಳ ಅಂತಿಮ ವರ್ಷದ ಪರೀಕ್ಷೆ ರದ್ದತಿ: ಸುಪ್ರೀಂ ನಿಂದ ನಾಳೆ ಮಹತ್ವದ ತೀರ್ಪು!

ಸೆಪ್ಟೆಂಬರ್ 30 ರೊಳಗೆ ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸುವಂತೆ ಯುಜಿಸಿ ಜುಲೈ 6 ರಂದು ದೇಶಾದ್ಯಂತದ ವಿಶ್ವವಿದ್ಯಾಲಯಗಳಿಗೆ ನಿರ್ದೇಶನ ನೀಡಿತ್ತು.

- Advertisement -
- Advertisement -

ಸೆಪ್ಟೆಂಬರ್ 30 ರೊಳಗೆ ನಡೆಸಬೇಕಾಗಿರುವ ಅಂತಿಮ ವರ್ಷದ/ಮಧ್ಯಂತರ ಸೆಮಿಸ್ಟರ್ ನ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯೊಂದರ ಕುರಿತಂತೆ ಸುಪ್ರೀಂ ಕೋರ್ಟ್ ಶುಕ್ರವಾರ ತನ್ನ ತೀರ್ಪನ್ನು ಪ್ರಕಟಿಸಲಿದೆ.

ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ 3 ನ್ಯಾಯಾಧೀಶರ ಪೀಠವು ಬೆಳಿಗ್ಗೆ 10.30 ಕ್ಕೆ ಅದರ ತೀರ್ಪನ್ನು ನೀಡಲಿದೆ ಎಂದು ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.

ಸೆಪ್ಟೆಂಬರ್ 30 ರೊಳಗೆ ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸುವಂತೆ ಯುಜಿಸಿ ಜುಲೈ 6 ರಂದು ದೇಶಾದ್ಯಂತದ ವಿಶ್ವವಿದ್ಯಾಲಯಗಳಿಗೆ ನಿರ್ದೇಶನ ನೀಡಿತ್ತು. ಪರೀಕ್ಷೆಗಳು ನಡೆಯದಿದ್ದರೆ ವಿದ್ಯಾರ್ಥಿಗಳ ಭವಿಷ್ಯವು ಅಪಾಯಕ್ಕೆ ಸಿಲುಕುತ್ತದೆ ಎಂದು ಯುಜಿಸಿ ಈ ನಿರ್ಧಾರವನ್ನು ಸಮರ್ಥಿಸಿಕೊಂಡಿತ್ತು.

ಕೊರೊನಾ ರೋಗವನ್ನು ಗಮನದಲ್ಲಿಟ್ಟುಕೊಂಡು ಆನ್‌ಲೈನ್/ಆಫ್‌ಲೈನ್ ಪರೀಕ್ಷೆಗಳನ್ನು ರದ್ದುಗೊಳಿಸಿ ಎಂದು ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಒತ್ತಾಯಿಸಿದ್ದಾರೆ. ವಿದ್ಯಾರ್ಥಿಗಳ ಹಿಂದಿನ ಸಾಧನೆ ಮತ್ತು ಆಂತರಿಕ ಮೌಲ್ಯಮಾಪನದ ಆಧಾರದ ಮೇಲೆ ಫಲಿತಾಂಶಗಳನ್ನು ಘೋಷಿಸಲು ಯುಜಿಸಿಗೆ ನಿರ್ದೇಶನ ನೀಡುವಂತೆ ಕೋರಿದ್ದಾರೆ.

ಇದನ್ನೂ ಓದಿ: ಅಂತಿಮ ಸೆಮಿಸ್ಟರ್ ಬಿಟ್ಟು ಉಳಿದೆಲ್ಲಾ‌ ವಿದ್ಯಾರ್ಥಿಗಳು ಪಾಸ್: ಸರ್ಕಾರದ ಮಹತ್ವದ ನಿರ್ಧಾರ

ದೆಹಲಿ, ಮಹಾರಾಷ್ಟ್ರ, ಒಡಿಶಾ, ಪಂಜಾಬ್, ಹರಿಯಾಣ ಮತ್ತು ಮಧ್ಯಪ್ರದೇಶ ರಾಜ್ಯಗಳು ಅಂತಿಮ ವರ್ಷದ ಪರೀಕ್ಷೆಗಳು ಸೇರಿದಂತೆ ವಿಶ್ವವಿದ್ಯಾಲಯದ ಎಲ್ಲಾ ಪರೀಕ್ಷೆಗಳನ್ನು ರದ್ದುಗೊಳಿಸಿವೆ.

ಆದಾಗ್ಯೂ, ಯುಜಿಸಿಯು, ಕೊನೆಯ ವರ್ಷದ ಪರೀಕ್ಷೆಗಳನ್ನು ನಡೆಸದೆ ವಿದ್ಯಾರ್ಥಿಗಳಿಗೆ ಪದವಿ ನೀಡಲು ಸಾಧ್ಯವಿಲ್ಲ. ಅದಾಗ್ಯೂ ಪರೀಕ್ಷೆಗಳನ್ನು ರದ್ದುಗೊಳಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಮಾತ್ರ ಕರೆ ನೀಡಬಹುದು.

“ರಾಜ್ಯ ಸರ್ಕಾರಗಳು ಪರೀಕ್ಷೆಗಳನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಆ ಅಧಿಕಾರ ಯುಜಿಸಿಗೆ ಮಾತ್ರ ಇದೆ” ಎಂದು ಯುಜಿಸಿ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಆಗಸ್ಟ್ 8 ರಂದು ಉನ್ನತ ನ್ಯಾಯಾಲಯಕ್ಕೆ ತಿಳಿಸಿದರು.

ಕೊನೆಯ ವರ್ಷದ ಪರೀಕ್ಷೆಗಳನ್ನು ನಡೆಸಲು ದೇಶಾದ್ಯಂತ ಶಿಕ್ಷಣ ಸಂಸ್ಥೆಗಳನ್ನು ಸೀಮಿತ ವ್ಯಾಪ್ತಿಯಲ್ಲಿ ತೆರೆಯಲು ಅನುಮತಿ ನೀಡಿದೆ ಎಂದು ಗೃಹ ವ್ಯವಹಾರಗಳ ಸಚಿವಾಲಯವು ಯುಜಿಸಿಯನ್ನು ಬೆಂಬಲಿಸಿ, ಆಗಸ್ಟ್ 13 ರಂದು ಸುಪ್ರೀಂ ಕೋರ್ಟ್ ಮುಂದೆ ಅಫಿಡವಿಟ್ ಸಲ್ಲಿಸಿತ್ತು.


ಇದನ್ನೂ ಓದಿ: ಕೇಂದ್ರ ವಿವಿ ಮತ್ತು ದೆಹಲಿ ವಿವಿಯ ಅಂತಿಮ ವರ್ಷದ ಪರೀಕ್ಷೆಯನ್ನು ರದ್ದುಗೊಳಿಸಿ: ಕೇಜ್ರಿವಾಲ್ 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಹಾರದಲ್ಲಿ ಜೆಡಿಯು ಮುಖಂಡನ ಗುಂಡಿಟ್ಟು ಹತ್ಯೆ: ಭುಗಿಲೆದ್ದ ಪ್ರತಿಭಟನೆ

0
ಜೆಡಿಯು ಯುವ ಮುಖಂಡನನ್ನು ಅಪರಿಚಿತ ದಾಳಿಕೋರರು ಗುಂಡಿಕ್ಕಿ  ಹತ್ಯೆ ಮಾಡಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಬೀದಿಗಿಳಿದು ಪ್ರತಿಭಟನೆಯನ್ನು ನಡೆಸಿದ್ದಾರೆ. ಸೌರಭ್ ಕುಮಾರ್ ಹತ್ಯೆಗೀಡಾದ ಜೆಡಿಯು ಯುವ ಮುಖಂಡ....