Homeಕರ್ನಾಟಕ'ಮುಕ್ತ' ವಿಚಾರದ ನೆಪದಲ್ಲಿ ವಿಶ್ವವಿದ್ಯಾನಿಲಯಗಳು 'ಮತೀಯ'ವಾಗಬಾರದು: ಬರಗೂರು ರಾಮಚಂದ್ರಪ್ಪ

‘ಮುಕ್ತ’ ವಿಚಾರದ ನೆಪದಲ್ಲಿ ವಿಶ್ವವಿದ್ಯಾನಿಲಯಗಳು ‘ಮತೀಯ’ವಾಗಬಾರದು: ಬರಗೂರು ರಾಮಚಂದ್ರಪ್ಪ

- Advertisement -
- Advertisement -

ಯಾವುದೇ ವಿಶ್ವವಿದ್ಯಾನಿಲಯಗಳು ಮುಕ್ತ ವಿಚಾರದ ನೆಪದಲ್ಲಿ ಮತೀಯವಾಗಬಾರದು ಎಂದು ಖ್ಯಾತ ಸಾಹಿತಿ, ಸಂಸ್ಕೃತಿ ಚಿಂತಕ ನಾಡೋಜ ಬರಗೂರು ರಾಮಚಂದ್ರಪ್ಪ ಅವರು ಪ್ರತಿಪಾದಿಸಿದರು.

ನಿನ್ನೆಯಷ್ಟೇ ಭಗವದ್ಗೀತೆ ಕುರಿತ ವಿಚಾರ ಸಂಕಿರಣಕ್ಕಾಗಿ ವಿವಾದ ಉಂಟಾಗಿದ್ದ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಇಂದು ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಯಾವುದೇ ವಿಶ್ವವಿದ್ಯಾನಿಲಯ ಮುಕ್ತವಾಗಿ ಬೇರೆ ಬೇರೆ ವಿಚಾರಗಳನ್ನು ಪ್ರಸ್ತಾಪ ಮಾಡಿದರೂ ವಿನಃ, ಅಂತಿಮವಾಗಿ ಅದು ಮತೀಯವಾಗದೆ ಇರುವಂತಹ ವಾತಾವರಣವನ್ನು ನಿರ್ಮಾಣ ಮಾಡುವುದು ನಮ್ಮೆಲ್ಲರ ಸಾಮಾಜಿಕ ಜವಾಬ್ದಾರಿ” ಎಂದು ತಿಳಿದುಕೊಂಡಿದ್ದೇನೆ ಎಂದರು.

“ವಿಶ್ವವಿದ್ಯಾನಿಲಯಗಳು ಅದು ಕೇಳಬೇಕು, ಇದು ಕೇಳಬೇಕು ನಿಜ. ಆದರೆ, ಯಾರು ಸುಂದರವಾದ ಸುಳ್ಳನ್ನು ಹೇಳುತ್ತಾರೋ ಅದನ್ನು ನಂಬಿ ಬಿಡುತ್ತಾರೆ ನಮ್ಮ ಜನ; ಸುಳ್ಳು ಸುಂದರವಾಗಿರುತ್ತೆ. ಸತ್ಯ ಕಠೋರವಾಗಿರುತ್ತದೆ, ಸುಳ್ಳಿಗೆ ಸಾಕ್ಷಿ ಬೇಕಿಲ್ಲ. ಸತ್ಯಕ್ಕೆ ಸಾಕ್ಷಿ ಕೇಳುವ ಕಾಲ ಇದಾಗಿದೆ. ಹಾಗಾಗಿ ವಿಚಾರಗಳನ್ನು ಅರ್ಥಮಾಡಿಕೊಳ್ಳುವುದರಲ್ಲಿ ಮುಕ್ತವಾಗಿರೋಣ, ಆದರೆ ಅದನ್ನು ಪ್ರತಿಪಾದಿಸುವಲ್ಲಿ ನಮಗೊಂದು ನಿರ್ದಿಷ್ಠತೆ ಇರಬೇಕು. ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ವಿಚಾರಗಳಲ್ಲಿ ಮುಕ್ತವಾಗಿರೋಣ. ಆದರೆ ಇಡೀ ಸಮಾಜ ಮತೀಯವಾಗಿರದಂತೆ ನೋಡಿಕೊಳ್ಳೋಣ” ಎಂದು ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ ವಿಚಾರ ಸಂಕಿರಣದ ಕುರಿತು ವಿವಿ ಕುಲಪತಿಗಳು ಪರೋಕ್ಷವಾಗಿ ಕಿವಿಮಾತು ಹೇಳಿದರು.

“ಯಾವುದೇ ವಿಚಾರಗಳ ಬಗ್ಗೆ ನಮಗೆ ನಿರ್ಧಿಷ್ಟವಾದ ನಿಲುವು ಇರಬೇಕಾಗುತ್ತದೆ. ಅನಂತಮೂರ್ತಿ ಅವರೂ ಇದನ್ನೆ ಹೇಳಿದ್ದು, ಬೇರೆಯವರ ವಿಚಾರ ಕೇಳಬಾರದು ಎಂದಲ್ಲ. ಕೇಳುವಾಗ ಸಹ ಮಕ್ಕಳಲ್ಲಿ ಏನು ಪರಿಣಾಮ ಆಗಬಹುದು ಎಂಬುದನ್ನು ಯೋಚಿಸಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು” ಎಂದು ಬರಗೂರು ರಾಮಚಂದ್ರಪ್ಪ ಅವರು, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುವೆಂಪು ವಿಶ್ವವಿದ್ಯಾನಿಲಯದ ಕುಲಪತಿ ಶರತ್ ಅನಂತಮೂರ್ತಿ ಅವರನ್ನು ಆಗ್ರಹಿಸಿದರು.

ಸಮಾರಂಭದ ಮುಖ್ಯಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟೀ ನಿರ್ದೇಶಕರಾದ ಅಶೋಕ್ ಎನ್. ಚಲವಾದಿ ಭಾಗವಹಿಸಿದ್ದರು. ಕನ್ನಡ ಭಾರತಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಕುಲಸಚಿವ ಎ. ಎಲ್ ಮಂಜುನಾಥ್, ಪ್ರೋ. ಶ್ರೀಕಂಠಕೂಡಿಗೆ, ಪ್ರೊ. ಸಣ್ಣರಾಮ, ಪ್ರೊ. ಕೇಶವಶರ್ಮ, ಪ್ರೊ. ಕುಮಾರಚಲ್ಯ ಅವರುಗಳನ್ನು ಗೌರವಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...