Homeಮುಖಪುಟಪದವಿ ಮತ್ತು ಸ್ನಾತಕೋತ್ತರ ತರಗತಿಗಳ ಶುಲ್ಕ ಮನ್ನಾ ಘೋಷಿಸಿದ ಕೊಲ್ಕತ್ತಾ ವಿಶ್ವವಿದ್ಯಾಲಯ!

ಪದವಿ ಮತ್ತು ಸ್ನಾತಕೋತ್ತರ ತರಗತಿಗಳ ಶುಲ್ಕ ಮನ್ನಾ ಘೋಷಿಸಿದ ಕೊಲ್ಕತ್ತಾ ವಿಶ್ವವಿದ್ಯಾಲಯ!

- Advertisement -
- Advertisement -

ಕೊರೊನಾದಿಂದಾಗಿ ಜನರು ಎದುರಿಸುತ್ತಿರುವ ಆರ್ಥಿಕ ಬಿಕ್ಕಟ್ಟನ್ನು ಗಮನದಲ್ಲಿ ಇಟ್ಟುಕೊಂಡು ಕೊಲ್ಕತ್ತಾ ವಿಶ್ವವಿದ್ಯಾಲಯವು ಪದವಿ ಮತ್ತು ಸ್ನಾತಕೋತ್ತರ ತರಗತಿಗಳ ಎಲ್ಲಾ ಸೆಮಿಸ್ಟರ್‌ಗಳ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕವನ್ನು ಮನ್ನಾ ಮಾಡಿದೆ.

2021-22ರ ಶೈಕ್ಷಣಿಕ ವರ್ಷಕ್ಕೆ ಪ್ರವೇಶ ಶುಲ್ಕಗಳು, ಬೋಧನಾ ಶುಲ್ಕಗಳು ಮತ್ತು ಪರೀಕ್ಷಾ ಶುಲ್ಕಗಳು ಸೇರಿದಂತೆ ಯಾವುದೇ ಶುಲ್ಕವನ್ನು ವಿಶ್ವವಿದ್ಯಾಲಯವು ಈಗ ತೆಗೆದುಕೊಳ್ಳುವುದಿಲ್ಲ ಎಂದು ಘೋಷಿಸಿದೆ.

ವಿಶ್ವವಿದ್ಯಾಲಯವು ಸೆಮಿಸ್ಟರ್ ಪರೀಕ್ಷೆಗಳ ಅಂಕಪಟ್ಟಿ ಮತ್ತು ಗ್ರೇಡ್ ಶೀಟ್‌ಗಳನ್ನು ಪಡೆಯುವಾಗ ನೀಡಬೇಕಾಗಿದ್ದ ಶುಲ್ಕವನ್ನು ಮನ್ನಾ ಮಾಡಲು ನಿರ್ಧರಿಸಿದೆ. ಅಂತಿಮ ವರ್ಷದ ವಿದ್ಯಾರ್ಥಿಗಳು ಅಂಕಪಟ್ಟಿಯನ್ನು ಪಡೆಯಲು ತಮ್ಮ ಬಾಕಿ ಹಣವನ್ನು ಪಾವತಿಸಬೇಕಾಗಿಲ್ಲ ಎಂದು ವಿಶ್ವವಿದ್ಯಾನಿಲಯವು ಅಧಿಸೂಚನೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಛತ್ತೀಸ್‌ಗಡ: ಅಧಿಕಾರ ಹಸ್ತಾಂತರಕ್ಕೆ ನಿರ್ದೇಶಿಸಿದ ಕಾಂಗ್ರೆಸ್; ಕೊನೆಯ ಪ್ರಯತ್ನದತ್ತ ಭೂಪೇಶ್‌!

“ಪ್ರಸ್ತುತ ದೇಶದಲ್ಲಿರುವ ಕೊರೊನಾ ಸಾಂಕ್ರಾಮಿಕದ ದೃಷ್ಟಿಯಿಂದ, 2021-2022 ರ ವಿವಿಧ ಸೆಮಿಸ್ಟರ್‌ಗಳ ಶೈಕ್ಷಣಿಕ ವರ್ಷದ ಪ್ರವೇಶ ಶುಲ್ಕ, ಬೋಧನಾ ಶುಲ್ಕ ಮತ್ತು ಪರೀಕ್ಷಾ ಶುಲ್ಕಗಳಂತಹ ಎಲ್ಲಾ ಶುಲ್ಕಗಳನ್ನು ವಿಶ್ವವಿದ್ಯಾಲಯವು ಮನ್ನಾ ಮಾಡಿದೆ. ವಿವಿಧ ಸೆಮಿಸ್ಟರ್ ಪರೀಕ್ಷೆಗಳ ಅಂಕಪಟ್ಟಿ/ಗ್ರೇಡ್ ಶೀಟ್‌ಗಳನ್ನು ಪಡೆಯಲು ವಿದ್ಯಾರ್ಥಿಗಳು ಶುಲ್ಕವನ್ನು ಪಾವತಿಸುವ ಅಗತ್ಯವಿಲ್ಲ” ವಿಶ್ವವಿದ್ಯಾನಿಲಯದ ಹಂಗಾಮಿ ರಿಜಿಸ್ಟ್ರಾರ್ ದೇಬಾಸಿಸ್ ದಾಸ್ ಅಧಿಸೂಚನೆ ಹೊರಡಿಸಿದ್ದಾರೆ.

ಪಿಟಿಐ ಜೊತೆ ಮಾತನಾಡಿದ ವಿಶ್ವವಿದ್ಯಾನಿಲಯದ ಉಪಕುಲಪತಿ ಸೊನಾಲಿ ಚಕ್ರವರ್ತಿ ಬಂದೋಪಾಧ್ಯಾಯ, “ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ” ಎಂದು ಹೇಳಿದರು.

“ನಾವು ವಿದ್ಯಾರ್ಥಿಗಳ ಪರವಾಗಿರಲು ಬಯಸುತ್ತೇವೆ. ಸಾಂಕ್ರಾಮಿಕ ರೋಗದಿಂದಾಗಿ ಅವರ ಅಧ್ಯಯನಗಳು ಯಾವುದೇ ರೀತಿಯಲ್ಲಿ ಪರಿಣಾಮ ಬೀರದಂತೆ ನೋಡಿಕೊಳ್ಳಲು ನಾವು ಬಯಸುತ್ತೇವೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ಎಸ್‌ಎಫ್‌ಐ ಸ್ವಾಗತ

ವಿಶ್ವವಿದ್ಯಾಲಯದ ಈ ಕ್ರಮವನ್ನು ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಸ್ವಾಗತಿಸಿದೆ. “ಕಳೆದ ಒಂದೂವರೆ ವರ್ಷಗಳಲ್ಲಿ, ಅನೇಕ ಕುಟುಂಬಗಳು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿವೆ. ಈ ನಿರ್ಧಾರದಿಂದ ಅವರಿಗೆ ಸ್ವಲ್ಪ ಸಹಾಯವಾಗುತ್ತದೆ” ಎಂದು ತನ್ನ ಹೇಳಿಕೆಯಲ್ಲಿ ಹೇಳಿದೆ.

ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಮೈತ್ರಿಗಳು: ಇಲ್ಲಿಂದ ಮುಂದೇನು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಿರ್ಗಿಸ್ತಾನ್‌ನಲ್ಲಿ ಹಿಂಸಾಚಾರ: ಮನೆಬಿಟ್ಟು ಹೊರಬರದಂತೆ ಭಾರತೀಯ ವಿದ್ಯಾರ್ಥಿಗಳಿಗೆ ಸೂಚನೆ

0
ಕಿರ್ಗಿಸ್ತಾನ್‌ನ ರಾಜಧಾನಿ ಬಿಷ್ಕೆಕ್‌ನಲ್ಲಿ ವಿದೇಶಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗುಂಪು ಹಿಂಸಾಚಾರದ ವರದಿಗಳ ಮಧ್ಯೆ ಭಾರತ ಮತ್ತು ಪಾಕಿಸ್ತಾನವು ಶನಿವಾರ ಬಿಷ್ಕೆಕ್‌ನಲ್ಲಿರುವ ವಿದ್ಯಾರ್ಥಿಗಳಿಗೆ ತಾವು ತಂಗಿರುವ ಹಾಸ್ಟೆಲ್‌, ಮನೆಗಳಿಂದ ಹೊರಗೆ ಬರದಂತೆ ಸೂಚಿಸಿದೆ. ಕಿರ್ಗಿಸ್ತಾನ್‌ನಲ್ಲಿರುವ ಭಾರತದ...