Homeಮುಖಪುಟಅನ್ಲಾಕ್ - 04: ಸೆಪ್ಟೆಂಬರ್ 07 ರಿಂದ ಮೆಟ್ರೋ ಸಂಚಾರ ಆರಂಭಕ್ಕೆ ಹಸಿರು ನಿಶಾನೆ

ಅನ್ಲಾಕ್ – 04: ಸೆಪ್ಟೆಂಬರ್ 07 ರಿಂದ ಮೆಟ್ರೋ ಸಂಚಾರ ಆರಂಭಕ್ಕೆ ಹಸಿರು ನಿಶಾನೆ

ಯಾವುದೇ ಪಾಸ್‌ಗಳ ಅಗತ್ಯವಿಲ್ಲದೇ ದೇಶದೊಳಗೆ ಮುಕ್ತ ಸಂಚಾರಕ್ಕೆ ಅವಕಾಶ. ಸಿನಿಮಾ ಹಾಲ್, ಈಜುಕೊಳ, ಮನೋರಂಜನಾ ಪಾರ್ಕ್‌ಗಳಿಗೆ ನಿಷೇಧ ಮುಂದುವರಿಕೆ.

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ನಾಲ್ಕನೇ ಅನ್ಲಾಕ್‌ ಕುರಿತು ಇಂದು ಕೇಂದ್ರ ಸರ್ಕಾರ ಇಂದು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಅದರಂತೆ ಬಹುದಿನದ ಬೇಡಿಕೆಯಾದ ಮೆಟ್ರೋ ಸಂಚಾರಕ್ಕೆ ಕಡೆಗೂ ಕೇಂದ್ರ ಹಸಿರು ನಿಶಾನೆ ತೋರಿದ್ದು, ಸೆಪ್ಟಂಬರ್ 07ರಿಂದ ಕೆಲವು ನಿಬಂಧನೆಗೊಳಪಟ್ಟು ಕಾರ್ಯನಿರ್ವಹಿಸಲಿವೆ.

ಇನ್ನುಳಿದಂತೆ ಯಾವುದೇ ಪಾಸ್‌ಗಳ ಅಗತ್ಯವಿಲ್ಲದೇ ದೇಶದೊಳಗೆ ಮುಕ್ತ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಅನ್ಲಾಕ್ 04 ಮಾರ್ಗಸೂಚಿಯಲ್ಲಿನ ಕೆಲವು ಮುಖ್ಯಾಂಶಗಳು ಈ ಕೆಳಗಿನಂತಿವೆ.

    ಶಿಕ್ಷಣ

    • ಶಾಲೆ ಕಾಲೇಜುಗಳನ್ನು ತೆರೆಯಲು ಮಾರ್ಗಸೂಚಿಯಲ್ಲಿ ಅವಕಾಶ.
    • 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಶಾಲೆಗೆ ಭೇಟಿ ನೀಡಬಹುದು.
    • ಶೇಕಡಾ 50% ಭೋಧಕ ಮತ್ತು ಭೋದಕೇತರ ಸಿಬ್ಬಂದಿಗಳನ್ನು ಬಳಸಿಕೊಂಡು ತರಗತಿಗಳನ್ನು ನಡೆಸಬಹುದು.
    • ಪೋಷಕರ ಒಪ್ಪಿಗೆ ಮೇರೆಗೆ ವಿದ್ಯಾರ್ಥಿಗಳು ಶಾಲೆಗೆ ತೆರಳಬಹುದು.
    • ಕಂಟೈನ್ಮೆಂಟ್ ಝೋನ್ ಹೊರೆತಾದ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ.
    • ಕೌಶಲ್ಯ ಅಥಾವ ಉದ್ಯೋಗ ತರಬೇತಿಗಳಿಗೆ ಅನುಮತಿ.
    • 1 ರಿಂದ 9ರ ವರೆಗಿನ ಶಾಲೆಗಳಿಗೆ ಸೆಪ್ಟೆಂಬರ್ 30 ವರೆಗೂ ನಿರ್ಬಂಧ.
    • ಆನ್‌ಲೈನ್‌ ತರಗತಿಗಳನ್ನು ಮುಂದುವರಿಸಬಹುದು.
    •  ಸಂಶೋಧನೆ ( ಪಿಎಚ್ ಡಿ ) ತಾಂತ್ರಿಕ ಮತ್ತು ವೃತ್ತಿಪರ ಸ್ನಾತಕೋತ್ತರ ಕೋರ್ಸ್ ಗಳು ನಡೆಸಲು ಒಪ್ಪಿಗೆ.
    • ಸಂಚಾರ

    • ಅಂತರರಾಜ್ಯ ಮತ್ತು ರಾಜ್ಯದೊಳಿಗೆ ಸಂಚಾರಿಸಲು ಮುಕ್ತ ಅವಕಾಶ.
    • ಇನ್ನು ಮುಂದೆ ಯಾವುದೇ ಇ ಪಾಸ್‌ಗಳ ಅವಶ್ಯಕತೆ ಇಲ್ಲ
    • ಯಾವುದಕ್ಕೆ ಅವಕಾಶವಿಲ್ಲ?

    • • ಸಿನಿಮಾ ಹಾಲ್, ಈಜುಕೊಳಗಳಿಗೆ ನಿಷೇಧ ಮುಂದುವರಿಕೆ.
      • ಮನೋರಂಜನಾ ಪಾರ್ಕ್‌ಗಳಿಗೆ ಅವಕಾಶವಿಲ್ಲ.
      • ಅಂತರಾಷ್ಟ್ರೀಯ ವಿಮಾನ ಹಾರಾಟಕ್ಕೆ ಅವಕಾಶವಿಲ್ಲ.
      • ಕೇವಲ ಒಂದೇ ಭಾರತ್ ಮಿಷನ್ ಅಡಿಯಲ್ಲಿ ಮಾತ್ರ ಅವಕಾಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...