ರಾಜ್ಯದಲ್ಲಿ ಕೊರೊನಾ ಪ್ರಕರಣ ಕಡಿಮೆಯಾಗುತ್ತಿದ್ದಂತೆ ಲಾಕ್‌ಡೌನ್‌ ಅನ್ನು ಹಂತ ಹಂತವಾಗಿ ತೆರವುಗೊಳಿಸಲಾಗುತ್ತಿದೆ. ಸೋಮವಾರದಿಂದ (ಜೂನ್ 21) ಅನ್‌ಲಾಕ್‌ 2.0  ಜಾರಿಯಾಗುತ್ತಿದ್ದು, ಬಿಎಂಟಿಸಿ, ಕೆಸ್‌ಆರ್‌ಟಿಸಿ, ನಮ್ಮ ಮೆಟ್ರೋ ಸಂಚಾರಕ್ಕೆ ಶೇಕಡಾ 50 ರಷ್ಟು ಪ್ರಯಾಣಿಕರ ಮಿತಿಯೊಂದಿಗೆ ಅವಕಾಶ ಮಾಡಿಕೊಡಲಾಗಿದೆ.

ಮೊದಲ ಹಂತದಲ್ಲಿ ಸರ್ಕಾರಿ ಸಾರಿಗೆಗೆ ಅನುಮತಿ ನೀಡದ ಸರ್ಕಾರ ಅನ್‌ಲಾಕ್‌ ಎರಡನೇ  ಹಂತದಲ್ಲಿ ಸಾರ್ವಜನಿಕ ಸಾರಿಗೆ ಸಂಚಾರಕ್ಕೆ ಅವಕಾಶ ನೀಡಿದೆ. ಬೆಂಗಳೂರಿನಲ್ಲಿ ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ  ಮೆಟ್ರೋ ರೈಲು ಕೂಡಾ ಶೇಕಡಾ 50 ರಷ್ಟು ಆಸನ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.

ಬಿಎಂಟಿಸಿಯಲ್ಲಿ 6,400 ಬಸ್ಸುಗಳಿವೆ. ಅನ್‌ಲಾಕ್‌ ಮೊದಲ ಹಂತದಲ್ಲಿ 1,500 ರಿಂದ 2,000 ಸಾವಿರ ಬಸ್ಸುಗಳು ರಸ್ತೆಗಿಳಿಯಲಿದೆ.  ಡ್ರೈವರ್, ಕಂಡಕ್ಟರ್ ವ್ಯಾಕ್ಸಿನ್ ಕಡ್ಡಾಯವಾಗಿ ಪಡೆದುಕೊಂಡಿರಬೇಕು. 2 ಡೋಸ್ ವ್ಯಾಕ್ಸಿನ್ ತೆಗೆದುಕೊಂಡವರಿಗೆ ಮಾತ್ರ ಅವಕಾಶ ನೀಡಬಹುದು. ಇನ್ನೂ ಬಸ್ ನಲ್ಲಿ ಪ್ರಯಾಣಿಕರು ನಿಂತು ಪ್ರಯಾಣ ಮಾಡಲು ಅವಕಾಶ ಇರುವುದಿಲ್ಲ. ಕೊರೊನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸೋಮವಾರದಿಂದ ನಮ್ಮ ಮೆಟ್ರೋ ಕೂಡ ಸೇವೆ ಆರಂಭಿಸಲಿದೆ. ಬಸ್‌ಗಳಂತೆಯೇ ಅರ್ಧದಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಕಾರ್ಡ್ ಬಳಸಿ ಮೆಟ್ರೋ ಸೇವೆ ಪಡೆಯಬಹುದು.

ಇದನ್ನೂ ಓದಿ: ಎಚ್. ಎಸ್. ದೊರೆಸ್ವಾಮಿ ಸದಾ ಜಾಗೃತವಾಗಿರುತ್ತಿದ್ದ ಪ್ರಜ್ಞೆ: ಡಾ. ಎ ಎಸ್ ಪ್ರಭಾಕರ್

ಕೆಎಸ್ಆರ್​ಟಿಸಿ ಯಲ್ಲಿ 8 ಸಾವಿರ ಬಸ್ಸುಗಳಿವೆ. ಅದ್ರಲ್ಲಿ 2500 ರಿಂದ 3000 ಸಾವಿರ ಬಸ್ಸುಗಳು ಮಾತ್ರ ರಸ್ತೆಗಿಳಿಸಲು ಅನುಮತಿ ‌‌ನೀಡಲು ನಿರ್ಧಾರ ಮಾಡಲಾಗಿದ್ದು, ಬಸ್‌ನಲ್ಲಿ ಕೇವಲ 50% ಮಾತ್ರ ಪ್ರಯಾಣಿಕರಿಗೆ ಅವಕಾಶ. ಅತಿ ಹೆಚ್ಚು ಸೋಂಕು ಇರುವ ಜಿಲ್ಲೆಗಳಿಗೆ ಕೆಎಸ್ಆರ್‌ಟಿಸಿ ಬಸ್ ಓಡಾಟ ನಡೆಸಲ್ಲ ಎನ್ನುವ ಮಾಹಿತಿ ಇದೆ. ಹೊರ ರಾಜ್ಯಗಳಿಗೆ ಕೆಎಸ್ಆರ್‌ಟಿಸಿ ಬಸ್ ಸಂಚಾರ ತೀರಾ ಕಡಿಮೆ ಎನ್ನಲಾಗಿದೆ.

ಕೆಎಸ್‌ಆರ್‌ಟಿಸಿ ಎಸಿ, ಸ್ಲೀಪರ್ ಬಸ್ಸುಗಳನ್ನು ರಸ್ತೆಗಿಳಿಸದಿರಲು ತೀರ್ಮಾನ ಮಾಡಲಾಗಿದ್ದು, ಮೂರು ಸೀಟ್ನಲ್ಲಿ ಇಬ್ಬರು ಹಾಗೂ ಎರಡು ಸೀಟ್ನಲ್ಲಿ ಒಬ್ಬ ಪ್ರಯಾಣಿಕರಿಗೆ ಮಾತ್ರ ಅವಕಾಶ. ಡಿಪೋಗಳಿಂದ ಹೊರಗಡೆ ಬರುವ ಬಸ್ಸ್‌ಗಳಿಗೆ ಸ್ಯಾನಿಟೈಸರ್ ಕಡ್ಡಾಯ ಮಾಡಲಾಗಿದೆ.

ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ನೀಡಲಾಗಿದೆ. ನಾನ್‌ ಎಸಿ, ಹವಾ ನಿಯಂತ್ರಣ ಇಲ್ಲದೇ ಹೋಟೆಲ್‌, ಕ್ಲಬ್ಸ್‌, ರೆಸ್ಟೋರೆಂಟ್‌ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ಊಟ ಮಾಡಲು ಸಂಜೆ 5.00 ಗಂಟೆವರೆಗೆ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.

ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ. ಹೊರಾಂಗಣ ಕ್ರೀಡೆಗಳಿಗೆ, ವೀಕ್ಷಕರಿಲ್ಲದೇ ಅನುಮತಿ ನೀಡಲಾಗಿದೆ. ಸರ್ಕಾರಿ/ಖಾಸಗಿ ಕಛೇರಿಗಳಿಗೆ ಶೇ 50 ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ. ರೆಸಾರ್ಟ್ ಮತ್ತು ಲಾಡ್ಜ್ ಗಳಲ್ಲಿ ಶೇ.50ರ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅವಕಾಶವಿದೆ. ಹವಾ ನಿಯಂತ್ರಣ ಇಲ್ಲದೇ ಜಿಮ್‌ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಿದೆ. ಸಿನಿಮಾ ಮಂದಿರ, ದೇಗುಲ, ಮಾಲ್‌ಗಳಲ್ಲಿ ನಿರ್ಬಂಧ ಮುಂದುವರೆಯಲಿದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: 7 ವರ್ಷಗಳ ದುರಾಡಳಿತ, ಏಳಬೇಕೀಗ ಭಾರತ: ಡಾ. ಎಚ್ ವಿ ವಾಸು

ಪ್ರತಿ ದಿನ ರಾತ್ರಿ 7 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ನೈಟ್‌ ಕರ್ಫ್ಯೂ ಇರುತ್ತದೆ. ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗ 5 ಗಂಟೆಯವರೆಗೆ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತದೆ.

ಶೇ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿ.ಬಿ.ಎಂ.ಪಿ ಸೇರಿದಂತೆ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ ಜಿಲ್ಲೆಗಳಿಗೆ ಈ ಅನ್‌ಲಾಕ್‌ ಸಡಿಲಿಕೆಗಳನ್ನು ನೀಡಲಾಗಿದೆ.

ಶೇ.5 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರವಿರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಜೂನ್ 11 ರಂದು ಹೊರಡಿಸಿರುವ ಮಾರ್ಗಸೂಚಿಗಳು ಮುಂದುವರೆಯುತ್ತವೆ ಎಂದು ಅನ್​ಲಾಕ್ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಅನ್​ಲಾಕ್​ ಕುರಿತು ಮಾತನಾಡಿರುವ ಬಿ.ಎಸ್.ಯಡಿಯೂರಪ್ಪ, ಸಾಮಾನ್ಯ ಜನರಿಗೆ ಸಂಕಷ್ಟದ ಸ್ಥಿತಿ ಇದೆ. ಹೀಗಾಗಿ ವಿನಾಯಿತಿ ನೀಡಲಾಗಿದೆ, ಜನರು ಕೂಡ ಸೋಂಕು ಕಡಿಮೆಯಾಗಿದೆ ಎಂದು ಮೈ ಮರೆಯದೇ ಕೊರೊನಾ ನಿಯಮಗಳನ್ನು ಪಾಲಿಸಬೇಕು. ಈ ನಿಯಮಗಳು ಜುಲೈ 5ರವರೆಗೂ ಮುಂದುವರೆಯಲಿವೆ ಎಂದಿದ್ದಾರೆ.


ಇದನ್ನೂ ಓದಿ: ಚುರುಕುಗೊಂಡ ಅನ್‌ಲಾಕ್ ಪ್ರಕ್ರಿಯೆ: ಎಚ್ಚರಿಕೆಯ ಹೆಜ್ಜೆಯಿಡಲು ಕೇಂದ್ರದಿಂದ ರಾಜ್ಯಗಳಿಗೆ ಸೂಚನೆ

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
Avatar
ನಾನು ಗೌರಿ ಡೆಸ್ಕ್
+ posts

LEAVE A REPLY

Please enter your comment!
Please enter your name here