Homeಕರ್ನಾಟಕರಾಜ್ಯದಲ್ಲಿ ಸೋಮವಾರದಿಂದ ಅನ್‌ಲಾಕ್‌, 11 ಜಿಲ್ಲೆಗಳಲ್ಲಿ ಲಾಕ್‌ಡೌನ್ ಮುಂದುವರಿಕೆ

ರಾಜ್ಯದಲ್ಲಿ ಸೋಮವಾರದಿಂದ ಅನ್‌ಲಾಕ್‌, 11 ಜಿಲ್ಲೆಗಳಲ್ಲಿ ಲಾಕ್‌ಡೌನ್ ಮುಂದುವರಿಕೆ

- Advertisement -
- Advertisement -

ರಾಜ್ಯದಲ್ಲಿ ಸೋಮವಾರದಿಂದ 19 ಜಿಲ್ಲೆಗಳಲ್ಲಿ ಅನ್‌ಲಾಕ್‌ ಪ್ರಕ್ರಿಯೆ ಆರಂಭವಾಗಲಿದ್ದು, ಈ ಜಿಲ್ಲೆಗಳಲ್ಲಿ ಜನರು ಸಹಜ ಜೀವನಕ್ಕೆ ತೆರೆದುಕೊಳ್ಳಲಿದ್ದಾರೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಲಾಕ್‌ಡೌನ್ ಮುಂದುವರೆಯಲಿದೆ. ಅನ್‌ಲಾಕ್ ಮೊದಲ ಹಂತದಲ್ಲಿ ಕೆಲವು ರಿಲೀಫ್ ಅಷ್ಟೇ ದೊರೆಯಲಿದೆ.

ಕೊರೊನಾ 2ನೇ ಅಲೆ ನಿಯಂತ್ರಣಕ್ಕೆ ಕಳೆದೆರಡು ತಿಂಗಳಿಂದ ಜಾರಿಗೊಳಿಸಲಾಗಿದ್ದ ಲಾಕ್‌ಡೌನ್ ಸೋಮವಾರದಿಂದ ಮೊದಲ ಹಂತದಲ್ಲಿ ಅನ್‌ಲಾಕ್ ಆಗಲಿದೆ. ಆದರೂ ಕಠಿಣ ನಿಯಮಗಳು ಜಾರಿಯಲ್ಲಿರಲಿವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಹಿಂದೆ ಘೋಷಿಸಿದ್ದರು.

ಕೊರೊನಾ ಸೋಂಕಿನ ಪಾಸಿಟಿವಿಟಿ ರೇಟ್ ಕಡಿಮೆಯಾಗಿರೋ ಬೆಂಗಳೂರು ಸೇರಿ 19 ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಡಿಲಿಕೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ 6 ಗಂಟೆಯಿಂದ ಈ ಜಿಲ್ಲೆಗಳಲ್ಲಿ ಖರೀದಿ ಸಮಯ ವಿಸ್ತರಣೆ, ಕೆಲ ಕ್ಷೇತ್ರಗಳಿಗೆ ಅನುಮತಿ ಸೇರಿದಂತೆ ಹಲವು ಬದಲಾವಣೆಗಳೊಂದಿಗೆ ಹೊಸ ರೂಲ್ಸ್ ಜಾರಿಗೆ ಬರಲಿದೆ.

ಇದನ್ನೂ ಓದಿ: ಕೊರೋನಾಗೆ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥವಾದ ರಾಜ್ಯದ 42 ಮಕ್ಕಳು

19 ಜಿಲ್ಲೆಗಳಲ್ಲಿ ಅಗತ್ಯ ವಸ್ತುಗಳ ಖರೀದಿ ಸಮಯ ವಿಸ್ತರಣೆ ಮಾಡಲಾಗಿದೆ. ಅಗತ್ಯ ವಸ್ತು ಖರೀದಿಗೆ ಬೆಳಗ್ಗೆ 6ರಿಂದ ಮಧ್ಯಾಹ್ನ 2ರವರೆಗೆ ಅನುಮತಿ ಅವಕಾಶ ನೀಡಲಾಗಿದೆ. ಅನ್‌ಲಾಕ್‌ ಎಂದು ಬೇಕಾ ಬಿಟ್ಟಿ ಈಡಾಡುವ ಹಾಗಿಲ್ಲ. ಓಡಾಟಕ್ಕೆ ಸೂಕ್ತ ಕಾರಣ ಇಲ್ಲವೆಂದರೇ ದಂಡ ಕಟ್ಟಬೇಕಾಗುತ್ತೆ. ಅನಗತ್ಯ ಓಡಾಟಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ.

ಬಿಎಂಟಿಸಿ, ಕೆಎಸ್ಆರ್ಟಿಸಿ, ನಮ್ಮ ಮೆಟ್ರೋ ಸಂಚಾರಕ್ಕೂ ಗ್ರೀನ್ ಸಿಗ್ನಲ್ ಇಲ್ಲ. ಸೋಮವಾರದಿಂದ ಆಟೋ, ಟ್ಯಾಕ್ಸಿ ಓಡಾಟಕ್ಕೆ ಸರ್ಕಾರ ಅವಕಾಶ ನೀಡಿದೆ. ಆಟೋ, ಟ್ಯಾಕ್ಸಿಗಳಲ್ಲಿ ಇಬ್ಬರು ಮಾತ್ರ ಪ್ರಯಾಣಿಸಬೇಕು.  ಅಂತರ್ ಜಿಲ್ಲೆ ಹಾಗೂ ಅಂತರ್ ರಾಜ್ಯ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಕೊರೊನಾ ನಿಯಂತ್ರಣಕ್ಕೆ ಬಾರದ ರಾಜ್ಯದ 11 ಜಿಲ್ಲೆಗಳಲ್ಲಿ ಸೋಮವಾರದಿಂದ ಜೂನ್ 21ರವರೆಗೂ ಅಂದರೆ ಒಂದು ವಾರ  ಲಾಕ್‌ಡೌನ್ ಮುಂದುವರಿಯಲಿದೆ. ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಮಂಡ್ಯ, ಚಿಕ್ಕಮಗಳೂರು, ಬೆಳಗಾವಿ, ಕೊಡಗು ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ ಜೂನ್ 21ರ ವರೆಗೂ ಲಾಕ್‌ಡೌನ್ ಮುಂದುವರಿಯಲಿದೆ.


ಇದನ್ನೂ ಓದಿ: ಎಲ್ಬಿಜಿಟಿಕ್ಯೂ+ ಸಮುದಾಯದ ‘ಪ್ರೈಡ್ ವಾಕ್’ ಜಾಥಾದಲ್ಲಿ ಭಾಗವಹಿಸಿದ ಅಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...