Homeಮುಖಪುಟಉತ್ತರಪ್ರದೇಶ: ಯುವತಿಯನ್ನು ಜೀವಂತ ದಹನಕ್ಕೆ ಯತ್ನ

ಉತ್ತರಪ್ರದೇಶ: ಯುವತಿಯನ್ನು ಜೀವಂತ ದಹನಕ್ಕೆ ಯತ್ನ

- Advertisement -
- Advertisement -

ಉತ್ತರಪ್ರದೇಶದ ಹಾಪುರ್ ಜಿಲ್ಲೆಯ ನವಡಾ ಖುರ್ಡ್ ಗ್ರಾಮದಲ್ಲಿ ಯುವತಿಯೊಬ್ಬಳನ್ನು ಆಕೆಯ ಕುಟುಂಬಸ್ಥರು ಬೆಂಕಿ ಹಚ್ಚಿ, ಜೀವಂತ ದಹನಕ್ಕೆ ಯತ್ನಿಸಿದ ಆಘಾತಕಾರಿ ಘಟನೆ ನಡೆದಿದೆ.

ಘಟನೆಯಲ್ಲಿ ಯುವತಿಯ ಸ್ಥಿತಿ ಚಿಂತಾಜನಕವಾಗಿದ್ದು, ಆಕೆಗೆ ಶೇ.70ರಷ್ಟು ಸುಟ್ಟಗಾಯಗಳಾಗಿದೆ.

ಅವಿವಾಹಿತ ಯುವತಿ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದ ಆಕೆಯ ತಾಯಿ ಹಾಗೂ ಸಹೋದರ ಬೆಂಕಿ ಹಚ್ಚಿ ಯುವತಿಗೆ ಜೀವಂತ ದಹನಕ್ಕೆ ಯತ್ನಿಸಿದ್ದಾರೆ. ಯುವತಿಯ ತಾಯಿ ಮತ್ತು ಸಹೋದರ ಆಕೆಯನ್ನು ಮನೆ ಸಮೀಪದ ಕಾಡಿಗೆ ಕರೆದೊಯ್ದು, ಅಲ್ಲಿ ಆಕೆಯ ಮೇಲೆ ಪೆಟ್ರೋಲ್ ಎರಚಿ ಸಜೀವ ದಹನ ಮಾಡಲು ಪ್ರಯತ್ನಿಸಿದ್ದಾರೆ.

ಘಟನೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿರುವ ಯುವತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆ  ದಾಖಲಿಸಲಾಗಿದೆ. ಆಕೆಯ ತಾಯಿ ಹಾಗೂ ಸೋದರನನ್ನು ಪೊಲೀಸರು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಈ ಕುರಿತು ಮಾತನಾಡಿದ ಹಾಪುರ್ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಜಕುಮಾರ್ ಅಗರ್ವಾಲ್, ಸೆ.28ರಂದು ಆರೋಪಿಗಳು ಸಂತ್ರಸ್ತೆಯನ್ನು ಕಾಡೊಂದರ ಸಮೀಪ ಕೊಂಡೊಯ್ದು ಆಕೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಚಿತ್ರದುರ್ಗ ಜಿಲ್ಲೆಯಲ್ಲಿ ಅಮಾನವೀಯ ಘಟನೆ: ಅಂತರ್ಜಾತಿ ವಿವಾಹವಾದ ವಿಕಲಚೇತನ ಜೋಡಿಗೆ ಬಹಿಷ್ಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಿರ್ಗಿಸ್ತಾನ್‌ನಲ್ಲಿ ಹಿಂಸಾಚಾರ: ಮನೆಬಿಟ್ಟು ಹೊರಬರದಂತೆ ಭಾರತೀಯ ವಿದ್ಯಾರ್ಥಿಗಳಿಗೆ ಸೂಚನೆ

0
ಕಿರ್ಗಿಸ್ತಾನ್‌ನ ರಾಜಧಾನಿ ಬಿಷ್ಕೆಕ್‌ನಲ್ಲಿ ವಿದೇಶಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗುಂಪು ಹಿಂಸಾಚಾರದ ವರದಿಗಳ ಮಧ್ಯೆ ಭಾರತ ಮತ್ತು ಪಾಕಿಸ್ತಾನವು ಶನಿವಾರ ಬಿಷ್ಕೆಕ್‌ನಲ್ಲಿರುವ ವಿದ್ಯಾರ್ಥಿಗಳಿಗೆ ತಾವು ತಂಗಿರುವ ಹಾಸ್ಟೆಲ್‌, ಮನೆಗಳಿಂದ ಹೊರಗೆ ಬರದಂತೆ ಸೂಚಿಸಿದೆ. ಕಿರ್ಗಿಸ್ತಾನ್‌ನಲ್ಲಿರುವ ಭಾರತದ...