Homeದಲಿತ್ ಫೈಲ್ಸ್ಉನ್ನಾವೋ: ಮುಖ ಗುರುತು ಸಿಗದ ಸ್ಥಿತಿಯಲ್ಲಿ ದಲಿತ ಯವತಿಯ ಶವ ಪತ್ತೆ; ಅತ್ಯಾಚಾರ, ಕೊಲೆ ಆರೋಪ

ಉನ್ನಾವೋ: ಮುಖ ಗುರುತು ಸಿಗದ ಸ್ಥಿತಿಯಲ್ಲಿ ದಲಿತ ಯವತಿಯ ಶವ ಪತ್ತೆ; ಅತ್ಯಾಚಾರ, ಕೊಲೆ ಆರೋಪ

- Advertisement -
- Advertisement -

ಉತ್ತರ ಪ್ರದೇಶದ ಉನ್ನಾವೋದಲ್ಲಿ ಮುಖ ಗುರುತು ಸಿಗದಂತಹ ಸ್ಥಿತಿಯಲ್ಲಿ ದಲಿತ ಯವತಿಯ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಯುವತಿಯ ಪೋಷಕರು, ”ತಮ್ಮ ಮಗಳನ್ನು ಅಪಹರಿಸಿ, ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ” ಎಂದು ಆರೋಪಿಸಿದ್ದಾರೆ.

ಮೃತ ಯುವತಿಯು ಬುಧವಾರ ಉನ್ನಾವೋದಲ್ಲಿನ ತನ್ನ ಮನೆಯಿಂದ ಕಾಣೆಯಾಗಿದ್ದರು. ಕುಟುಂಬಸ್ಥರು ಆಕೆಯ ಹುಡುಕಾಟ ನಡೆಸಿದ್ದರು. ಆ ದಿನ ತಡರಾತ್ರಿ ಯುವತಿ ಊರಾಚೆಗಿನ ಸಾರಾಯಿ ಅಂಗಡಿಯ ಬಳಿ ರಸ್ತೆ ಬದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಪೊಲೀಸರು, ರಸ್ತೆ ಅಪಘಾತದಲ್ಲಿ ಯುವತಿ ಮೃತ ಪಟ್ಟಿರಬಹುದು ಎಂದು ಊಹಿಸಿದ್ದಾರೆ.

”ಉನ್ನಾವೋ ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ಯುವತಿಯ ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದರು. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು. ಘಟನೆ ಬಗ್ಗೆ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ಅದರಲ್ಲಿ ”ಭಾರೀ ವಾಹನದ ಅಡಿಗೆ‌ ಸಿಲುಕಿ ಆಕೆ ಮೃತ ಪಟ್ಟಿರುವ ಸಾಧ್ಯತೆ ಇದೆ” ಎಂದು ಹೇಳಿದ್ದಾರೆ.

ಆದರೆ ಯುವತಿ ಪೋಷಕರು, ”ಪೊಲೀಸರು ಪ್ರಕರಣವನ್ನು ತಿರುಚಲು ಯತ್ನಿಸುತ್ತಿದ್ದಾರೆ” ಎಂದು ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ತಮಿಳುನಾಡು: ಅತ್ಯಾಚಾರಕ್ಕೆ ಯತ್ನ ಪ್ರಕರಣ; ಒಂದೇ ವಾರದಲ್ಲಿ ತೀರ್ಪು ನೀಡಿದ ಕೋರ್ಟ್

”ಮನೆಯ ಕೋಣೆಯಲ್ಲಿ ಮಲಗಿದ್ದ ಮಗಳನ್ನು ಯಾರೋ ಅಪಹರಿಸಿ, ಸಾಮೂಹಿಕವಾಗಿ ಅತ್ಯಚಾರ ಎಸಗಿ, ಭೀಕರವಾಗಿ ಹತ್ಯೆಗೈದಿದ್ದಾರೆ. ಮಗಳ ಮುಖ ಗುರುತು ಹಿಡಿಯುವ ಸ್ಥಿತಿಯಲ್ಲಿ ಇರಲಿಲ್ಲ. ಕಿವಿಯಲ್ಲಿದ್ದ ಓಲೆ ಮತ್ತು‌ ಧರಿಸಿದ್ದ ಬಟ್ಟೆಯ ಆಧಾರದ ಮೇಲೆ ಆಕೆ ನಮ್ಮ ಮಗಳೆಂದು ಗುರುತಿಸಿದೆವು” ಎಂದು ಯುವತಿಯ ಪೋಷಕರು ಹೇಳಿದ್ದಾರೆ.

ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ರಸ್ತೆ ಅಪಘಾತ ಎಂದು ಪೊಲೀಸರು ಹೇಳುತ್ತಿರುವುದನ್ನು ವಿರೋಧಿಸಿ ಯುವತಿಯ ಕುಟುಂಬಸ್ಥರು ಶವ ಪತ್ತೆಯಾದ ಸ್ಥಳದಲ್ಲೇ ಪ್ರತಿಭಟನೆ ನಡೆಸಿದ್ದಾರೆ. ಅಪರಿಚಿತರ ವಿರುದ್ಧ ಕೊಲೆ ಮತ್ತು ಅತ್ಯಾಚಾರ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದ್ದಾರೆ. ಇದೀಗ ಪ್ರತಿಭಟನೆಗೆ ಮಣಿದ ಪೊಲೀಸರು, ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಆರೋಪದಡಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

”ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ಬಳಿಕ ಪೋಷಕರಿಗೆ ಹಸ್ತಾಂತರಿಸಲಾಗಿದೆ. ಯುವತಿಯ ತಂದೆ ವಿದೇಶದಲ್ಲಿರುವ ಕಾರಣ ಅವರ ಬರುವಿಕೆಗಾಗಿ ಕುಟುಂಬಸ್ಥರು ಕಾಯುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ವರದಿಯಲ್ಲೂ ಯುವತಿ ಅಪಘಾತದಿಂದಲೇ ಮೃತ ಪಟ್ಟಿರುವುದಾಗಿ ವೈದ್ಯರು ಸ್ಪಷ್ಟ ಪಡಿಸಿದ್ದಾರೆ. ಸದ್ಯ ಪ್ರಕರಣದ ವಿಚಾರಣೆ ನಡೆಸುತ್ತಿದ್ದೇವೆ. ಈವರೆಗೆ ಯಾವುದೇ ಆರೋಪಿಗಳನ್ನು ಬಂಧಿಸಿಲ್ಲ” ಎಂದು ಉನ್ನಾವೋ ಎಸ್‌ಪಿ ಸಿದ್ಧಾರ್ಥ್‌ ಶಂಕರ್‌ ಮೀನಾ ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮತದಾನ ನಡೆದ 48 ಗಂಟೆಗಳಲ್ಲಿ ಅಂಕಿಅಂಶಗಳ ಬಿಡುಗಡೆ: ಚು.ಆಯೋಗದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

0
ಮತದಾನ ಮುಗಿದ 48 ಗಂಟೆಗಳ ಒಳಗೆ ಮತದಾನ ಕೇಂದ್ರವಾರು ಮತದಾರರ ಅಂಕಿಅಂಶಗಳನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ನಿರ್ದೇಶನ ನೀಡುವಂತೆ ಕೋರಿ ಎನ್‌ಜಿಒ ಎಡಿಆರ್ ಸಲ್ಲಿಸಿದ ಮನವಿಗೆ ಸುಪ್ರೀಂಕೋರ್ಟ್ ಶುಕ್ರವಾರ ಒಂದು ವಾರದೊಳಗೆ ಭಾರತೀಯ...