Homeಮುಖಪುಟಉನ್ನಾವೋ ಅತ್ಯಾಚಾರಿಯ ಶಿಕ್ಷೆ ಅಮಾನತು : ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಮೊರೆ ಹೋಗಲು...

ಉನ್ನಾವೋ ಅತ್ಯಾಚಾರಿಯ ಶಿಕ್ಷೆ ಅಮಾನತು : ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಮೊರೆ ಹೋಗಲು ಮುಂದಾದ ಸಿಬಿಐ

- Advertisement -
- Advertisement -

ಉನ್ನಾವೋ ಅತ್ಯಾಚಾರ ಅಪರಾಧಿಯ ಶಿಕ್ಷೆ ಅಮಾನತಿನಲ್ಲಿಟ್ಟ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಕೇಂದ್ರ ತನಿಖಾ ದಳ (ಸಿಬಿಐ) ಮುಂದಾಗಿದೆ ಎಂದು ಬುಧವಾರ (ಡಿ.24) ವರದಿಯಾಗಿದೆ.

ಸಿಬಿಐ ಈ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಅದರ ಆಧಾರ ಮೇಲೆ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ಗೆ 2019ರಲ್ಲಿ ಜೀವಾಧಿ ಶಿಕ್ಷೆ ವಿಧಿಸಿತ್ತು.

ಶಿಕ್ಷೆ ಆದೇಶದ ವಿರುದ್ದ ಸೆಂಗಾರ್‌ ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ. ಅದನ್ನು ವಿಚಾರಣೆ ನಡೆಸಿದ ಹೈಕೋರ್ಟ್, ಮೇಲ್ಮನವಿಯ ವಿಚಾರಣೆ ಪೂರ್ಣಗೊಳ್ಳುವವರೆಗೆ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು 2025ರ ಡಿಸೆಂಬರ್ 23ರಂದು ಆದೇಶಿಸಿದೆ.

ಸಾಧ್ಯವಾದಷ್ಟು ಬೇಗ ಸುಪ್ರೀಂ ಕೋರ್ಟ್‌ನಲ್ಲಿ ಎಸ್‌ಎಲ್‌ಪಿ (ರಜಾ ಕಾಲದ ಅರ್ಜಿ) ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಸಿಬಿಐ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಈ ವಿಷಯದಲ್ಲಿ ಸಿಬಿಐ ಸಕಾಲಿಕ ಉತ್ತರಗಳು ಮತ್ತು ಲಿಖಿತ ವಾದಗಳನ್ನು ಸಲ್ಲಿಸಿದೆ. ಬಲಿಪಶುವಿನ ಕುಟುಂಬವು ಸುರಕ್ಷತೆ ಮತ್ತು ಬೆದರಿಕೆಗಳನ್ನು ಉಲ್ಲೇಖಿಸಿ ಅರ್ಜಿಯನ್ನು ವಿರೋಧಿಸಿದೆ. ಸಿಬಿಐ ತಕ್ಷಣವೇ ಈ ಆದೇಶವನ್ನು ಪ್ರಶ್ನಿಸುತ್ತದೆ” ಎಂದು ಸಿಬಿಐ ವಕ್ತಾರರು ಹೇಳಿದ್ದಾರೆ.

ಸಿಬಿಐ ಜೊತೆಗೆ ಸಂತ್ರಸ್ತೆ ಕೂಡ ದೆಹಲಿ ಹೈಕೋರ್ಟ್‌ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುವುದಾಗಿ ತಿಳಿಸಿದ್ದಾರೆ.

ದೆಹಲಿ ಹೈಕೋರ್ಟ್ ಆದೇಶ ಹೊರಬಿದ್ದ ಬಳಿಕ ಸಂತ್ರಸ್ತೆ, ಆಕೆಯ ತಾಯಿ ಮತ್ತು ಸಹೋದರಿ ಇಂಡಿಯಾ ಗೇಟ್‌ ಬಳಿ ಪ್ರತಿಭಟಿಸಿದ್ದರು. ಅವರನ್ನು ಅಲ್ಲಿಂದ ತೆರವುಗೊಳಿಸುವ ವೇಳೆ ಸಿಆರ್‌ಪಿಎಫ್‌ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಈ ನಡುವೆ ಕೇಳಿ ಬಂದಿದೆ. ಇದು ದೇಶದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.

ಡಿಸೆಂಬರ್ 23 ಬುಧವಾರ ಹೈಕೋರ್ಟ್‌ ಆದೇಶ ಹೊರಬಿದ್ದಿದ್ದು, ಅಂದೇ ಸಂಜೆ ಸಂತ್ರಸ್ತೆಯ ಕುಟುಂಬ ಪ್ರತಿಭಟಿಸಿದೆ. ಡಿಸೆಂಬರ್ 24 ನಿನ್ನೆ ಸಂತ್ರಸ್ತೆ ಮತ್ತು ಆಕೆಯ ತಾಯಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಕಾನೂನು ಹೋರಾಟಕ್ಕೆ ಸಹಾಯ ಕೋರಿದ್ದಾರೆ.

ಹಿರಿಯ ವಕೀಲರನ್ನು ನೇಮಿಸಿ ಸಹಾಯ ಮಾಡುವಂತೆ ಮತ್ತು ಸುರಕ್ಷತೆಯ ದೃಷ್ಟಿಯಿಂದ ತಮ್ಮನ್ನು ಕಾಂಗ್ರೆಸ್ ಆಡಳಿತದ ರಾಜ್ಯಕ್ಕೆ ಸ್ಥಳಾಂತರಿಸುವಂತೆ ಸಂತ್ರಸ್ತೆ ರಾಹುಲ್ ಗಾಂಧಿಗೆ ಮನವಿ ಮಾಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ದೆಹಲಿ ಹೈಕೋರ್ಟ್ ಆದೇಶ ನನಗೆ ಸಾವಿಗಿಂತ ಕಡಿಮೆಯೇನಲ್ಲ. ಹೈಕೋರ್ಟ್‌ ಆದೇಶದ ಬಳಿಕ ನಮಗೆ ನೀಡಲಾದ ಭದ್ರತೆ ಹಿಂಪಡೆಯಲಾಗಿದೆ” ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾರೆ.

“ಇಂತಹ ಪ್ರಕರಣಗಳ ಅಪರಾಧಿಗಳಿಗೆ ಜಾಮೀನು ಸಿಕ್ಕರೆ ದೇಶದ ಹೆಣ್ಣು ಮಕ್ಕಳು ಸುರಕ್ಷಿತರಾಗಿಲು ಹೇಗೆ ಸಾಧ್ಯ? ಇದು ನನಗೆ ಸಾವಿಗಿಂತ ಕಡಿಮೆಯೇನಲ್ಲ” ಎಂದು ಆಕೆ ನೋವು ತೋಡಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಶ್ಮೀರ: ಭಯೋತ್ಪಾದನಾ ಪ್ರಕರಣದಲ್ಲಿ ಆಸಿಯಾ ಅಂದ್ರಾಬಿ ಮತ್ತು ಅವರ ಇಬ್ಬರು ಸಹಚರರು ದೋಷಿಗಳು ಎಂದು ತೀರ್ಪು ನೀಡಿದ ದೆಹಲಿ ನ್ಯಾಯಾಲಯ 

ದೆಹಲಿಯ ಎನ್ಐಎ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಬುಧವಾರ ನಿಷೇಧಿತ ಕಾಶ್ಮೀರಿ ಸಂಘಟನೆ ದುಖ್ತರನ್-ಎ-ಮಿಲ್ಲತ್ (ಡಿಇಎಂ) ಮುಖ್ಯಸ್ಥೆ ಆಸಿಯಾ ಅಂದ್ರಾಬಿ ಮತ್ತು ಆಕೆಯ ಇಬ್ಬರು ಸಹಚರರಾದ ಸೋಫಿ ಫೆಹ್ಮಿದಾ...

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ: ಉದ್ಧವ್ ಠಾಕ್ರೆ ಆರೋಪ

ಮಹಾರಾಷ್ಟ್ರದ ನಾಗರಿಕ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಗುರುವಾರ ಆರೋಪಿಸಿದ್ದು, ಇದು ಪ್ರಜಾಪ್ರಭುತ್ವವನ್ನು ಕೊಲೆ ಮಾಡುವ ಪ್ರಯತ್ನ ಎಂದು ಹೇಳಿದ್ದಾರೆ. ನಗರಸಭೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂಬ...

2025ರಲ್ಲಿ ಭಾರತದಲ್ಲಿ 1,318 ದ್ವೇಷ ಭಾಷಣ ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ ಶೇ. 98 ಮುಸ್ಲಿಮರನ್ನು ಗುರಿಯಾಗಿಸಿಕೊಂಡಿವೆ; ವರದಿ

2025ರಲ್ಲಿ ಭಾರತವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು, ವಿಶೇಷವಾಗಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡ ಕನಿಷ್ಠ 1,318 ದ್ವೇಷ ಭಾಷಣ ಘಟನೆಗಳಿಗೆ ಸಾಕ್ಷಿಯಾಗಿದೆ. ದಿನಕ್ಕೆ ಸರಾಸರಿ ನಾಲ್ಕು ದ್ವೇಷ ಭಾಷಣ...

ಪಶ್ಚಿಮ ಬಂಗಾಳ ಎಸ್‌ಐಆರ್ ಪ್ರತಿಭಟನೆ; ಉತ್ತರ ದಿನಾಜ್‌ಪುರದ ಸರ್ಕಾರಿ ಕಚೇರಿ ಧ್ವಂಸ

ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯಲ್ಲಿ ಗುರುವಾರ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಸರ್ಕಾರಿ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಜಾನೆಯಿಂದಲೇ, ಚಾಕುಲಿಯಾದಲ್ಲಿನ ಕಹಾಟಾ...

ಕೇರಳದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್‌ನಲ್ಲಿ ಇಬ್ಬರು ಬಾಲಕಿಯರ ಶವಗಳು ಪತ್ತೆ

ಕೇರಳದ ಕೊಲ್ಲಂನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರ (SAI) ಹಾಸ್ಟೆಲ್‌ನಲ್ಲಿ ತಂಗಿದ್ದ ಇಬ್ಬರು ಹುಡುಗಿಯರು ಗುರುವಾರ ಬೆಳಿಗ್ಗೆ ತಮ್ಮ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಕೋಝಿಕ್ಕೋಡ್ ಜಿಲ್ಲೆಯ ಸಾಂಡ್ರಾ (17) ಮತ್ತು...

ಪಿಎಚ್‌ಡಿ ಪ್ರವೇಶ ನಿರಾಕರಿಸಿದ ಜಾಮಿಯಾ ಯೂನಿವರ್ಸಿಟಿ; ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿ

2025–26 ಶೈಕ್ಷಣಿಕ ಅವಧಿಗೆ ಅಧಿಕೃತ ಪ್ರವೇಶ ಪ್ರಕ್ರಿಯೆಯ ಮೂಲಕ ಆಯ್ಕೆಯಾದ ತನ್ನನ್ನು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ವಿನಾಕಾರಣ ಪ್ರವೇಶ ನಿರಾಕರಿಸಿದೆ ಎಂದು ಆರೋಪಿಸಿ ವಿದ್ಯಾರ್ಥಿಯೊಬ್ಬರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಯುಜಿಸಿ-ನೆಟ್ ವಿನಾಯಿತಿ...

ಮದ್ರಸಾ ನಿರ್ಮಾಣದ ವದಂತಿ : ಖಾಸಗಿ ಶಾಲಾ ಕಟ್ಟಡ ಕೆಡವಿದ ಅಧಿಕಾರಿಗಳು

ಅನಧಿಕೃತವಾಗಿ ಮದ್ರಸಾ ನಿರ್ಮಿಸಲಾಗುತ್ತಿದೆ ಎಂಬ ವದಂತಿ ಹರಡಿದ ಹಿನ್ನೆಲೆ ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡವನ್ನು ಅಧಿಕಾರಿಗಳು ಬುಲ್ಡೋಝರ್ ಬಳಸಿ ಕೆಡವಿದ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...

ಭೋಪಾಲ್‌| ಪುರಸಭೆಯ ಕಸಾಯಿಖಾನೆಯಲ್ಲಿ ಗೋಮಾಂಸ ಪತ್ತೆ; ಕಾಂಗ್ರೆಸ್‌-ಬಿಜೆಪಿ ಪ್ರತಿಭಟನೆ

ಪುರಸಭೆಯ ಕಸಾಯಿಖಾನೆಯಲ್ಲಿ ಗೋಹತ್ಯೆ ನಡೆದಿದೆ ಎಂಬುದನ್ನು ಅಧಿಕಾರಿಗಳು ಮತ್ತೆಹಚ್ಚಿದ ನಂತರ ದೊಡ್ಡ ವಿವಾದ ಭುಗಿಲೆದ್ದಿರುವ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ. ಹಿಂದೂ ಬಲಪಂಥೀಯ ಸಂಘಟನೆಗಳು ಮತ್ತು ವಿರೋಧ ಪಕ್ಷದ ಕಾಂಗ್ರೆಸ್ ಕಾರ್ಯಕರ್ತರಿಂದ...

ಇರಾನ್‌ ದಂಗೆ | ಹತ್ಯೆಗಳು ನಿಂತಿವೆ ಎಂದ ಟ್ರಂಪ್ : ಪ್ರತಿಭಟನಾಕಾರರನ್ನು ಗಲ್ಲಿಗೇರಿಸುವ ವರದಿ ತಳ್ಳಿಹಾಕಿದ ವಿದೇಶಾಂಗ ಸಚಿವ

ಇರಾನ್‌ನಲ್ಲಿ ಆಡಳಿತ ವಿರೋಧಿ ಪ್ರತಿಭಟನಾಕಾರರ 'ಹತ್ಯೆಗಳು ನಿಂತಿವೆ' ಎಂದು ಬುಧವಾರ (ಜ.14) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ಎಂಬಂತೆ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಕೂಡ ಪ್ರತಿಭಟನಾಕಾರರನ್ನು...

ಮುಂಬೈ ಬಿಎಂಸಿ ಚುನಾವಣೆ 2026: ಚುನಾವಣಾ ಆಯೋಗದ ವೆಬ್‌ಸೈಟ್ ಸ್ಥಗಿತ! ಮತದಾನ ಮಾಡಲು ಸಾಧ್ಯವಾಗದೆ ಪರದಾಡಿದ ನಾಗರಿಕರು

ಮುಂಬೈ: ಬಹು ಕುತೂಹಲಕಾರಿ ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಗೆ ಜನವರಿ 15, 2026 ರ ಗುರುವಾರ ಬೆಳಿಗ್ಗೆ 7:30 ಕ್ಕೆ ಮತದಾನ ಪ್ರಾರಂಭವಾಯಿತು, ಮುಂಬೈನಲ್ಲಿ ಚುನಾಯಿತ ನಾಗರಿಕ ಸಂಸ್ಥೆ ಇಲ್ಲದೆ ಸುಮಾರು...