Homeಮುಖಪುಟಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಅಪಹಾಸ್ಯ : ಮಾಧ್ಯಮಗಳ ಮುಂದೆ ವ್ಯಂಗ್ಯವಾಗಿ ನಕ್ಕ ಯುಪಿ ಸಚಿವ

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಅಪಹಾಸ್ಯ : ಮಾಧ್ಯಮಗಳ ಮುಂದೆ ವ್ಯಂಗ್ಯವಾಗಿ ನಕ್ಕ ಯುಪಿ ಸಚಿವ

- Advertisement -
- Advertisement -

ದೆಹಲಿಯ ಇಂಡಿಯಾ ಗೇಟ್ ಬಳಿ ಪ್ರತಿಭಟಿಸಿದ ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ಸಚಿವ ಓಂ ಪ್ರಕಾಶ್ ರಾಜ್‌ಭರ್ ಅಪಹಾಸ್ಯ ಮಾಡಿದ್ದು, “ಆಕೆಯ ಮನೆ ಉನ್ನಾವೋದಲ್ಲಿರುವಾಗ ದೆಹಲಿಯಲ್ಲಿ ಏಕಿದ್ದಾಳೆ?” ಎಂದು ಪ್ರಶ್ನಿಸಿ ಮಾಧ್ಯಮಗಳ ಮುಂದೆ ವ್ಯಂಗ್ಯವಾಗಿ ನಕ್ಕಿದ್ದಾರೆ.

ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ವಿಚಾರಣಾ ನ್ಯಾಯಾಲಯ 2019ರಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದೆ. ಈ ಶಿಕ್ಷೆಯನ್ನು 2025 ಡಿಸೆಂಬರ್ 23ರಂದು ದೆಹಲಿ ಹೈಕೋರ್ಟ್ ಅಮಾನತುಗೊಳಿಸಿದೆ.

ಹೈಕೋರ್ಟ್‌ ಆದೇಶದ ಬೆನ್ನಲ್ಲೇ ದೆಹಲಿಯ ಇಂಡಿಯಾ ಗೇಟ್ ಬಳಿ ಸಂತ್ರಸ್ತೆ, ಆಕೆಯ ತಾಯಿ ಮತ್ತು ಸಹೋದರಿ ಪ್ರತಿಭಟಿಸಿದ್ದರು. ಈ ವೇಳೆ ಭದ್ರತಾ ಸಿಬ್ಬಂದಿ ಅವರನ್ನು ಎಳೆದೊಯ್ದು ತಮ್ಮ ವಾಹನಗಳಿಗೆ ಹತ್ತಿಸಿದ್ದರು.

ಈ ಕುರಿತು ಬುಧವಾರ (ಡಿ.24) ಮಾಧ್ಯಮದವರು ಸಚಿವ ರಾಜ್‌ಭರ್ ಅವರನ್ನು ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ ರಾಜ್‌ಭರ್, “ಇಂಡಿಯಾ ಗೇಟ್? ಆಕೆಯ ಮನೆ ಇರುವುದು ಉನ್ನಾವೋದಲ್ಲಿ” (“India Gate? Ghar to unka Unnao hai”)ಎಂದು ಹೇಳಿದ್ದಾರೆ. ಮಾಧ್ಯಮಗಳ ಮುಂದೆ ವ್ಯಂಗ್ಯವಾಗಿ ಗಹಗಹಿಸಿ ನಕ್ಕಿದ್ದಾರೆ.

“ಕುಲದೀಪ್ ಸಿಂಗ್ ಸೆಂಗಾರ್ ಸಂತ್ರಸ್ತೆಯ ಮನೆಯಿಂದ 5 ಕಿ.ಮೀ ದೂರ ಇರಬೇಕು ಎಂದು ನ್ಯಾಯಾಲಯ ನಿರ್ದೇಶನ ನೀಡಿದೆ. ಆಕೆಗೆ ಭದ್ರತೆ ಒದಗಿಸುವಂತೆ ಸೂಚಿಸಿದೆ. ಹೀಗಿರುವಾಗ ದೆಹಲಿಯಲ್ಲಿ ಏಕೆ ಪ್ರತಿಭಟಿಸುತ್ತಿದ್ದಾರೆ? ಇಲ್ಲಿ ಭದ್ರತೆ ಕೊರತೆಯ ಪ್ರಶ್ನೆ ಎಲ್ಲಿದೆ? ಎಂದು ಕೇಳಿದ್ದಾರೆ.

ಉತ್ತರ ಪ್ರದೇಶ ಬಿಜೆಪಿಯ ಮಿತ್ರಪಕ್ಷ ಸುಹೇಲದೇವ್ ಭಾರತೀಯ ಸಮಾಜ ಪಾರ್ಟಿಯ (ಎಸ್ಬಿಎಸ್ಪಿ) ಮುಖ್ಯಸ್ಥರಾಗಿರುವ ಸಚಿವ ಓಂ ಪ್ರಕಾಶ್ ರಾಜ್‌ಭರ್‌ನ ಬೇಜವಬ್ದಾರಿ ಹೇಳಿಕೆ ಕುರಿತು ಪ್ರಶ್ನಿಸಲು ಸುದ್ದಿ ಸಂಸ್ಥೆಗಳು ಕರೆ ಮಾಡಿವೆ. ಆದರೆ, ಅವರು ಪ್ರತಿಕ್ರಿಯಿಸಿಲ್ಲ ಎನ್ನಲಾಗಿದೆ. ರಾಜ್‌ಭರ್ ಅವರ ಮಗ ಹಾಗೂ ಎಸ್ಬಿಎಸ್ಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ ರಾಜಭರ್ ಮಾತನಾಡಿ, ಹಾಗಾದರೆ ಓಂ ಪ್ರಕಾಶ್ ರಾಜಭರ್ ಅವರು ಈ ಬಗ್ಗೆ ಅಳಬೇಕು, ಅಂದರೆ ಸರಿಯಾಗುತ್ತದೆ. ಪ್ರಕರಣದಲ್ಲಿ ತನಿಖೆಯನ್ನು ಈಗಾಗಲೇ ನಡೆಸಲಾಗಿದೆ. ಕುಟುಂಬಕ್ಕೆ ಭದ್ರತೆಯ ಕುರಿತು ನ್ಯಾಯಾಲಯವು ನಿರ್ದೇಶನಗಳನ್ನು ನೀಡಿದೆ. ಹೇಳುವುದೇನೂ ಬಾಕಿಯಿಲ್ಲ” ಎಂದಿರುವುದಾಗಿ ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...