Homeಮುಖಪುಟಅಪಘಾತಕ್ಕೀಡಾಗಿದ್ದ ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಪರ ವಕೀಲ ಸಾವು

ಅಪಘಾತಕ್ಕೀಡಾಗಿದ್ದ ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಪರ ವಕೀಲ ಸಾವು

ಅತ್ಯಾಚಾರ ಎಸಗಿದ್ದಕ್ಕಾಗಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸೆಂಗಾರ್, ಟ್ರಕ್ ಮತ್ತು ಕಾರು ಅಪಘಾತ ಮಾಡಿ ಕೊಲೆ ಮಾಡಲು ಸಂಚು ರೂಪಿಸಿದ್ದರು ಎಂದು ಆರೋಪಿಸಲಾಗಿದೆ.

- Advertisement -
- Advertisement -

ಟ್ರಕ್ ಮತ್ತು ಕಾರು ಅಫಘಾತದಲ್ಲಿ ಗಾಯಗೊಂಡಿದ್ದ ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಪರ ವಕೀಲ ಮಹೇಂದ್ರ ಸಿಂಗ್ ಸೋಮವಾರ ಮೃತಪಟ್ಟಿದ್ದಾರೆ. ಕಳೆದ ವರ್ಷ ಸಂಭವಿಸಿದ್ದ ಈ ಅಫಘಾತಕ್ಕೆ ಬಿಜೆಪಿ ನಾಯಕ ಕುಲದೀಪ್ ಸಿಂಗ್ ಸೆಂಗಾರ್‌ ಕಾರಣ ಎಂದು ಆರೋಪಿಸಲಾಗಿತ್ತು. ಅಫಘಾತದಲ್ಲಿ ಅತ್ಯಾಚಾರ ಸಂತ್ರಸ್ತೆ ಗಾಯಗೊಂಡಿದ್ದರೆ ಅವರ ಇಬ್ಬರು ಅತ್ತೆಯಂದಿರು ಸಾವಿಗೀಡಾಗಿದ್ದರು.

ಆರು ತಿಂಗಳ ಹಿಂದೆಯೇ ನವದೆಹಲಿಯ ಏಮ್ಸ್‌ನಿಂದ ಡಿಸ್ಚಾರ್ಜ್ ಹೊಂದಿದ್ದ ವಕೀಲರು ಉನ್ನಾವೊದಲ್ಲಿರುವ ತನ್ನ ಮನೆಯಲ್ಲಿ ಬಹು ಅಂಗಾಂಗ ಹಾನಿಗೆ ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರ ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ನಿಧನರಾದರು ಎಂದು ಅವರ ಕುಟುಂಬ ತಿಳಿಸಿದೆ.

2017 ರ ಜೂನ್‌ನಲ್ಲಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದಕ್ಕಾಗಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸೆಂಗಾರ್, ಟ್ರಕ್ ಮತ್ತು ಕಾರು ಅಪಘಾತ ಮಾಡಿ ಕೊಲೆ ಮಾಡಲು ಸಂಚು ರೂಪಿಸಿದ್ದರು ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಉನ್ನಾವೊ: ಅತ್ಯಾಚಾರದ ದೂರು ದಾಖಲಿಸಲು ವಿಫರಾಲದ ಜಿಲ್ಲಾಧಿಕಾರಿ ವಿರುದ್ದ ಕ್ರಮಕ್ಕೆ ಸಿಬಿಐ ಶಿಫಾರಸ್ಸು

ಜುಲೈ 28, 2019 ರಂದು ರಾಯ್ ಬರೇಲಿ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ಸಂತ್ರಸ್ತೆ ಬಾಲಕಿ ಮತ್ತು ಮಹೇಂದ್ರ ಸಿಂಗ್ ಅವರನ್ನು ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿತ್ತು. ಕೆಲವು ತಿಂಗಳ ನಂತರ ಬಾಲಕಿ ಚೇತರಿಸಿಕೊಂಡರೆ, ಆರು ತಿಂಗಳ ಹಿಂದೆ ವಕೀಲ ಮಹೇಂದ್ರ ಸಿಂಗ್ ಅವರನ್ನು ಡಿಸ್ಚಾರ್ಜ್ ಮಾಡಿ ಮನೆ ಚಿಕಿತ್ಸೆಗೆ ಆಸ್ಪತ್ರೆಯು ಸಲಹೆ ನೀಡಿತ್ತು.

ಕಳೆದ ಡಿಸೆಂಬರ್‌ನಲ್ಲಿ ದೆಹಲಿ ನ್ಯಾಯಾಲಯವು ಅತ್ಯಾಚಾರ ಆರೋಪ ಸಾಬೀತಾಗಿದ್ದಕ್ಕೆ ಕುಲದೀಪ್‌ಗೆ ಜೀವಾವದಿ ಶಿಕ್ಷೆ ವಿಧಿಸಲಾಗಿತ್ತು. ನಂತರ ಮಾರ್ಚ್‌ನಲ್ಲಿ ಕುಲದೀಪ್‌ಗೆ ಬಾಲಕಿಯ ತಂದೆಯನ್ನು ಹತ್ಯೆ ಮಾಡಿದ್ದಕ್ಕೆ 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು.

ಅತ್ಯಾಚಾರ ಪ್ರಕರಣವನ್ನು ಹಿಂತೆಗೆದುಕೊಳ್ಳಲು ನಿರಾಕರಿಸಿದ್ದಕ್ಕಾಗಿ ಹುಡುಗಿಯ ತಂದೆ ಮೇಲೆ 2018 ರ ಏಪ್ರಿಲ್‌ರಲ್ಲಿ ಹಲ್ಲೆ ಮಾಡಲಾಗಿತ್ತು ಮತ್ತು ಅವರನ್ನು ಸುಳ್ಳು ಶಸ್ತ್ರಾಸ್ತ್ರ ಪ್ರಕರಣದಲ್ಲಿ ಕೇಸು ದಾಖಲಿಸಿ ಬಂಧಿಸಲಾಗಿತ್ತು. ನಂತರ ಉನ್ನಾವ್ ಜೈಲಿನಲ್ಲಿ ಗಾಯಗಳಿಂದಾಗಿ ಅವರು ಸಾವನ್ನಪ್ಪಿದ್ದರು.

ಟ್ರಕ್ ಡಿಕ್ಕಿ ಕೊಲೆ ಪ್ರಕರಣ ದೆಹಲಿ ನ್ಯಾಯಾಲಯದಲ್ಲಿ ಇನ್ನೂ ಬಾಕಿ ಇದ್ದು, ಅತ್ಯಾಚಾರ ಮತ್ತು ಸಂತ್ರಸ್ಥೆಯ ತಂದೆಯ ಕೊಲೆ ಮತ್ತು ಚಿಕ್ಕಮ್ಮಂದಿರ ಕೊಲೆಗೆ ಸಂಬಂಧಿಸಿದ ಎಲ್ಲಾ ಮೂರು ಪ್ರಕರಣಗಳನ್ನು ಸುಪ್ರೀಂ ಕೋರ್ಟ್ ದೆಹಲಿಗೆ ವರ್ಗಾಯಿಸಿತ್ತು ಮತ್ತು ಅವುಗಳನ್ನು ತನಿಖೆ ಮಾಡಲು ಸಿಬಿಐಗೆ ಸೂಚಿಸಿದೆ.

ಇದನ್ನೂ ಓದಿ: ಉನ್ನಾವ್ ಅತ್ಯಾಚಾರ: ಬಿಜೆಪಿಯ ಮಾಜಿ ಶಾಸಕ ಕುಲದೀಪ್‌ ಸೆಂಗಾರ್‌ಗೆ ಜೀವಾವಧಿ ಶಿಕ್ಷೆ ಘೋಷಿಸಿದ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...