Homeಮುಖಪುಟಪತ್ನಿಯ ಒಪ್ಪಿಗೆಯಿಲ್ಲದೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ಅಪರಾಧವಲ್ಲ: ಛತ್ತೀಸ್‌ಗಢ ಹೈಕೋರ್ಟ್

ಪತ್ನಿಯ ಒಪ್ಪಿಗೆಯಿಲ್ಲದೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ಅಪರಾಧವಲ್ಲ: ಛತ್ತೀಸ್‌ಗಢ ಹೈಕೋರ್ಟ್

- Advertisement -
- Advertisement -

‘ಒಪ್ಪಂದದೊಂದಿಗೆ ಅಥವಾ ಒಪ್ಪಿಗೆಯಿಲ್ಲದೆ ಪ್ರಾಪ್ತ ಪತ್ನಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದಕ್ಕಾಗಿ ಗಂಡನ ಮೇಲೆ ಅತ್ಯಾಚಾರ ಅಥವಾ ಅಸ್ವಾಭಾವಿಕ ಲೈಂಗಿಕತೆಯ ಆರೋಪ ಹೊರಿಸಲಾಗುವುದಿಲ್ಲ’ ಎಂದು ಛತ್ತೀಸ್‌ಗಢ ಹೈಕೋರ್ಟ್ ಸೋಮವಾರ ಅಭಿಪ್ರಾಯಪಟ್ಟಿದೆ.

ಲೈಂಗಿಕ ಸಂಭೋಗ/ಅಸ್ವಾಭಾವಿಕ ಸಂಭೋಗದಲ್ಲಿ ಹೆಂಡತಿಯ ‘ಸಮ್ಮತಿ’ ಹೊಂದಿರುವುದು ಅತ್ಯಲ್ಪ ಎಂದು ನ್ಯಾಯಮೂರ್ತಿ ನರೇಂದ್ರ ಕುಮಾರ್ ವ್ಯಾಸ್ ಅವರ ಏಕ ಪೀಠವು ಹೇಳಿದೆ ಎಂದು ‘ಲೈವ್ ಲಾ’ ವರದಿ ಮಾಡಿದೆ.

“ಹೀಗಾಗಿ, ಹೆಂಡತಿಯ ವಯಸ್ಸು 15 ವರ್ಷಕ್ಕಿಂತ ಕಡಿಮೆಯಿಲ್ಲದಿದ್ದರೆ, ಗಂಡ ತನ್ನ ಹೆಂಡತಿಯೊಂದಿಗೆ ನಡೆಸುವ ಯಾವುದೇ ಲೈಂಗಿಕ ಸಂಭೋಗ ಅಥವಾ ಲೈಂಗಿಕ ಕ್ರಿಯೆಯನ್ನು ಈ ಸಂದರ್ಭಗಳಲ್ಲಿ ಅತ್ಯಾಚಾರ ಎಂದು ಕರೆಯಲಾಗುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಏಕೆಂದರೆ, ಅಸ್ವಾಭಾವಿಕ ಕೃತ್ಯಕ್ಕೆ ಹೆಂಡತಿಯ ಒಪ್ಪಿಗೆ ಇಲ್ಲದಿರುವುದು ಅದರ ಪ್ರಾಮುಖ್ಯತೆಯನ್ನು ಕಳೆದುಕೊಳ್ಳುತ್ತದೆ. ಆದ್ದರಿಂದ, ಮೇಲ್ಮನವಿದಾರನ ವಿರುದ್ಧ ಐಪಿಸಿಯ ಸೆಕ್ಷನ್ 376 ಮತ್ತು 377 ರ ಅಡಿಯಲ್ಲಿ ಅಪರಾಧವನ್ನು ಮಾಡಲಾಗುವುದಿಲ್ಲ ಎಂದು ಈ ನ್ಯಾಯಾಲಯವು ಪರಿಗಣಿಸುತ್ತದೆ” ಎಂದು ಪೀಠವು ವೆಬ್‌ಸೈಟ್‌ನ ಪ್ರಕಾರ ಹೇಳಿದೆ.

ಪ್ರಕರಣ ಹಿನ್ನೆಲೆ ಏನು?

11.12.2017 ರ ರಾತ್ರಿ ಒಬ್ಬ ಗಂಡನೊಬ್ಬ ತನ್ನ ಹೆಂಡತಿಯನ್ನು ಅವಳ ಇಚ್ಛೆಗೆ ವಿರುದ್ಧವಾಗಿ ಅಸ್ವಾಭಾವಿಕ ಲೈಂಗಿಕತೆಗೆ ಒಳಪಡಿಸಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ, ಮಹಿಳೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಬೇಕಾಯಿತು.

ಚಿಕಿತ್ಸೆ ಫಲಿಸದೆ ಮಹಿಳೆ ಸಾವನ್ನಪ್ಪಿದಳು. ತನ್ನ ಜೊನೆ ಹೇಳಿಕೆಯಲ್ಲಿ, ಗಂಡ ತನ್ನ ಮೇಲೆ ಬಲವಂತದ ಲೈಂಗಿಕ ಸಂಭೋಗ ನಡೆಸಿದ್ದಾನೆ ಎಂದು ಅವರು ಹೇಳಿದರು. ನಂತರ, ವೈದ್ಯರು ಮಹಿಳೆ ಪೆರಿಟೋನಿಟಿಸ್ ಮತ್ತು ಗುದನಾಳದ ರಂಧ್ರದ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ ಎಂದು ನಿರ್ಧರಿಸಿದರು.

ಆಕೆ ಅಪ್ರಾಪ್ತೆ ಅಲ್ಲದಿದ್ದರೆ ತನ್ನ ಹೆಂಡತಿಯೊಂದಿಗೆ ಲೈಂಗಿಕ ಸಂಭೋಗ ಅಥವಾ ಲೈಂಗಿಕ ಕ್ರಿಯೆಗಳು ಅತ್ಯಾಚಾರವಲ್ಲ ಎಂದು ನ್ಯಾಯಾಲಯವು ತೀರ್ಪು ನೀಡಿತು. ಯಾವುದೇ ಅಸ್ವಾಭಾವಿಕ ಲೈಂಗಿಕತೆಯನ್ನು ಅಪರಾಧವೆಂದು ಪರಿಗಣಿಸಲಾಗುವುದಿಲ್ಲ ಎಂದು ಅದು ಹೇಳಿದೆ.

ವಿಚಾರಣಾ ನ್ಯಾಯಾಲಯದಿಂದ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲ್ಪಟ್ಟ ಪತಿಯನ್ನು ಎಲ್ಲ ಆರೋಪಗಳಿಂದ ಖುಲಾಸೆಗೊಳಿಸಲಾಯಿತು.

ಇದನ್ನೂ ಓದಿ; ಮಹಾರಾಷ್ಟ್ರ | ಅತ್ಯಾಚಾರ ಎಸಗಿ ವಿಡಿಯೊ ವೈರಲ್ ಮಾಡಿದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...