Homeಕರ್ನಾಟಕಬಾಕಿ ಪಾವತಿಸದ ರಾಜ್ಯ ಸರ್ಕಾರ | ದಯಾಮರಣ ಕೋರಿದ ಹಾವೇರಿ ಗುತ್ತಿಗೆದಾರರು!

ಬಾಕಿ ಪಾವತಿಸದ ರಾಜ್ಯ ಸರ್ಕಾರ | ದಯಾಮರಣ ಕೋರಿದ ಹಾವೇರಿ ಗುತ್ತಿಗೆದಾರರು!

- Advertisement -
- Advertisement -

ಕಳೆದ ಕೆಲವು ವರ್ಷಗಳಲ್ಲಿ ಹಾವೇರಿ ಜಿಲ್ಲೆಯಲ್ಲಿ ಕೈಗೊಂಡ ಕಾಮಗಾರಿಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಗುತ್ತಿಗೆದಾರರ 738 ಕೋಟಿ ರೂ.ಗಳ ಬಾಕಿ ಹಣವನ್ನು ಪಾವತಿಸಿಲ್ಲ ಎಂದು ಹಾವೇರಿ ಜಿಲ್ಲಾ ಗುತ್ತಿಗೆದಾರರ ಸಂಘ ಆರೋಪಿಸಿದೆ. ಭಾನುವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಹಾವೇರಿ ಜಿಲ್ಲಾ ಗುತ್ತಿಗೆದಾರರ ಸಂಘದ ತಾಲ್ಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಹಾವೇರಿ, ಏಪ್ರಿಲ್ ಅಂತ್ಯದ ವೇಳೆಗೆ ಸರ್ಕಾರ ಬಾಕಿ ಹಣವನ್ನು ಪಾವತಿಸದಿದ್ದರೆ ಜಿಲ್ಲೆಯ ಗುತ್ತಿಗೆದಾರರು ದಯಾಮರಣಕ್ಕೆ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಹೇಳಿದ್ದಾರೆ. ಬಾಕಿ ಪಾವತಿಸದ

“ಹಲವಾರು ಇಲಾಖೆಗಳಲ್ಲಿ ಕಮಿಷನ್ ಹಾವಳಿ ಮಿತಿಮೀರಿದೆ. ಹಲವಾರು ಅಧಿಕಾರಿಗಳು ಮತ್ತು ಮಧ್ಯವರ್ತಿಗಳು ಕಾಮಗಾರಿಗಳಿಗೆ ಶೇ. 10 ರಿಂದ 15 ರಷ್ಟು ಕಮಿಷನ್ ಪಡೆದಿದ್ದಾರೆ. ಇಲ್ಲಿಯವರೆಗೆ, 10 ಮಂದಿ ಗುತ್ತಿಗೆದಾರರು ತೊಂದರೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.” ಎಂದು ಅವರು ಹೇಳಿದ್ದಾರೆ.

“ಕರ್ನಾಟಕ ನೀರಾವರಿ ನಿಗಮ ಲಿಮಿಟೆಡ್ ಮತ್ತು ಗ್ರಾಮೀಣಾಭಿವೃದ್ಧಿ – ಪಂಚಾಯತ್ ರಾಜ್ ಸೇರಿದಂತೆ ಹಲವಾರು ಇಲಾಖೆಗಳಲ್ಲಿ ಕಮಿಷನ್ ಹಾವಳಿ ವ್ಯಾಪಕವಾಗಿದೆ. ಕಾಮಗಾರಿಗಳನ್ನು ನಿರ್ವಹಿಸಲು ಗುತ್ತಿಗೆದಾರರು ಹೆಚ್ಚಿನ ಬಡ್ಡಿಗೆ ಹಣವನ್ನು ಎರವಲು ಪಡೆಯುತ್ತಿದ್ದಾರೆ. ಅವರು ನಮ್ಮ ಬಾಕಿ ಹಣವನ್ನು ಪಾವತಿಸುತ್ತಾರೆ ಎಂಬ ಆಶಯದೊಂದಿಗೆ ನಾವು ಕಮಿಷನ್ ಪಾವತಿಸಿದ್ದೇವೆ. ಮಧ್ಯವರ್ತಿಗಳು ಗುತ್ತಿಗೆದಾರರ ರಕ್ತವನ್ನು ಹೀರುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

“ಹಾವೇರಿ ಜಿಲ್ಲೆಯ ಲೋಕೋಪಯೋಗಿ ಇಲಾಖೆಯಲ್ಲಿ 200 ಕೋಟಿ ರೂ.ಗಳ ಬಿಲ್‌ಗಳು ಬಾಕಿ ಉಳಿದಿದೆ. ಆರ್‌ಡಿಪಿಆರ್ ಗುತ್ತಿಗೆದಾರರಿಗೆ 138 ಕೋಟಿ ರೂ.ಗಳು ಬಾಕಿ ಇಟ್ಟಿದ್ದು ಮತ್ತು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಘೋಷಿಸಲಾದ ಕಾಮಗಾರಿಗಳಿಗೆ 400 ಕೋಟಿ ರೂ.ಗಳನ್ನು ಪಾವತಿಸಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

“ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನ ನಡೆಯುತ್ತಿರುವಾಗ ಬೆಳಗಾವಿಯಲ್ಲಿ ಗುತ್ತಿಗೆದಾರರು ಪ್ರತಿಭಟನೆ ನಡೆಸಿದ್ದರು. ಆಗ ಲೋಕೋಪಯೋಗಿ ಸಚಿವರು ಮಾರ್ಚ್ ಅಂತ್ಯದ ವೇಳೆಗೆ ಹಂತ ಹಂತವಾಗಿ ಬಿಲ್‌ಗಳನ್ನು ತೆರವುಗೊಳಿಸುವುದಾಗಿ ಭರವಸೆ ನೀಡಿದ್ದರು”

“ಅದಾಗ್ಯೂ, ಆರ್‌ಡಿಪಿಆರ್, ಕೆಎನ್‌ಎನ್‌ಎಲ್ ಮತ್ತು ಸಣ್ಣ ನೀರಾವರಿ ಇಲಾಖೆಗಳು ಕೋಟಿಗಟ್ಟಲೆ ಮೊತ್ತದ ಬಿಲ್‌ಗಳನ್ನು ತೆರವುಗೊಳಿಸಿಲ್ಲ. ಸರ್ಕಾರವು ತಮ್ಮ ಬಿಲ್‌ಗಳನ್ನು ತೆರವುಗೊಳಿಸಬೇಕು ಅಥವಾ ಅವರಿಗೆ ದಯಾಮರಣ ನೀಡಬೇಕೆಂದು ಗುತ್ತಿಗೆದಾರರು ಬಯಸುತ್ತಿದ್ದಾರೆ” ಎಂದು ಮಲ್ಲಿಕಾರ್ಜುನ ಹಾವೇರಿ ಹೇಳಿದ್ದಾರೆ. ಬಾಕಿ ಪಾವತಿಸದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಂಬೇಡ್ಕರ್ ಜನ್ಮದಿನ ವಿಶೇ‍ಷ: ಅಂಬೇಡ್ಕರ್ ಪರಿಭಾವಿಸಿದ ಭಾರತ V/s ವರ್ತಮಾನ ಭಾರತ

ಅಂಬೇಡ್ಕರ್ ಜನ್ಮದಿನ ವಿಶೇ‍ಷ: ಅಂಬೇಡ್ಕರ್ ಪರಿಭಾವಿಸಿದ ಭಾರತ V/s ವರ್ತಮಾನ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...