Homeಮುಖಪುಟಬಿಡುಗಡೆಯಾಗದ ವಸತಿ ಯೋಜನೆ ಹಣ, ಅಪೂರ್ಣವಾದ ಮನೆಗಳು: ಈಡೇರದ ಗುಡಿಸಲು ಮುಕ್ತ ಭರವಸೆ

ಬಿಡುಗಡೆಯಾಗದ ವಸತಿ ಯೋಜನೆ ಹಣ, ಅಪೂರ್ಣವಾದ ಮನೆಗಳು: ಈಡೇರದ ಗುಡಿಸಲು ಮುಕ್ತ ಭರವಸೆ

ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾದ ಮೇಲೆ ಮಂಜೂರಾಗಿರುವ ಮನೆ ನಿರ್ಮಾಣ ಕಾಮಗಾರಿಗಳು ಸ್ಥಗಿತ ಗೊಂಡಿದ್ದು ವಿವಿಧ ಹಂತದ ನಿರ್ಮಾಣದಲ್ಲೇ ನಿಂತುಹೋಗಿವೆ. ಫಲಾನುಭವಿಗಳಿಗೆ ಹಣ ಬಿಡುಗಡೆಗೊಳಿಸಬೇಕಾದ ಸರ್ಕಾರ ಜವಾಬ್ದಾರಿ ಮತ್ತು ಕರ್ತವ್ಯವನ್ನು ಮರೆತಂತೆ ಕಾಣುತ್ತಿದೆ. 

- Advertisement -
- Advertisement -

ರಾಜ್ಯದಲ್ಲಿ ವಿವಿಧ ವಸತಿ ಯೋಜನೆಗಳಡಿ ಮಂಜೂರಾಗಿರುವ ಮನೆಗಳ ಕಾಮಗಾರಿ ಸ್ಥಗಿತಗೊಂಡಿದೆ. ಹಣ ಬಿಡುಗಡೆಯಾಗದೆ ಕಾಮಗಾರಿಗಳು ಅರ್ಧಕ್ಕೆ ನಿಂತುಹೋಗಿವೆ. ಇಂದಿರಾಗಾಂಧೀ ವಸತಿ ಯೋಜನೆ, ಅಟಲ್ ವಸತಿ ಯೋಜನೆ, ರಾಜೀವ್ ಗಾಂಧಿ ವಸತಿ ಯೋಜನೆ ಹೀಗೆ ವಿವಿಧ ವಸತಿ ಯೋಜನೆಗಳಲ್ಲಿ  2019-20ನೇ ಸಾಲಿನಲ್ಲಿ 9 ಲಕ್ಷಕ್ಕೂ ಹೆಚ್ಚು ಮನೆಗಳು ಮಂಜೂರಾಗಿ ಸರ್ಕಾರ ಹಣ ನೀಡದೆ ಮನೆ ನಿರ್ಮಾಣ ಕಾಮಗಾರಿ ಕುಂಠಿತಗೊಂಡಿದೆ. ವಸತಿ ಸಚಿವರು ಮೇ 14ರಂದು ವಾರದಲ್ಲೇ ಹಣ ಬಿಡುಗಡೆ ಮಾಡುವುದಾಗಿ ನೀಡಿದ್ದ ಭರವಸೆ ಮೂರು ತಿಂಗಳು ಕಳೆದರೂ ಈಡೇರಿಲ್ಲ.

ಸಿದ್ದರಾಮಯ್ಯ ಮತ್ತು ಎಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಮಂಜೂರಾಗಿದ್ದ ಮನೆಗಳು ಪೂರ್ಣಗೊಂಡು ಫಲಾನುಭವಿಗಳು ಮಳೆ-ಗಾಳಿ-ಬಿಸಿಲಿನಿಂದ ರಕ್ಷಣೆ ಪಡೆದಿದ್ದಾರೆ. ಆದರೆ ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾದ ಮೇಲೆ ಮಂಜೂರಾಗಿರುವ ಮನೆ ನಿರ್ಮಾಣ ಕಾಮಗಾರಿಗಳು ಸ್ಥಗಿತ ಗೊಂಡಿದ್ದು ವಿವಿಧ ಹಂತದ ನಿರ್ಮಾಣದಲ್ಲೇ ನಿಂತುಹೋಗಿವೆ. ಫಲಾನುಭವಿಗಳಿಗೆ ಹಣ ಬಿಡುಗಡೆಗೊಳಿಸಬೇಕಾದ ಸರ್ಕಾರ ಜವಾಬ್ದಾರಿ ಮತ್ತು ಕರ್ತವ್ಯವನ್ನು ಮರೆತಂತೆ ಕಾಣುತ್ತಿದೆ.

ನಿವೇಶನರಹಿತ ಮತ್ತು ಮನೆರಹಿತ ಬಡವರಿಗೆ ಸೂರು ಕಲ್ಪಿಸುವ ಭರವಸೆ ನೀಡಿದ ಯಡಿಯೂರಪ್ಪ ಸರ್ಕಾರ ಇದೀಗ ಬಾಕಿ ಹಣ ಬಿಡುಗಡೆ ಮಾಡದೆ ಮೌನಕ್ಕೆ ಜಾರಿದೆ. ಹಾಗಾಗಿ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಮನೆ ನಿರ್ಮಾಣ ಕಾಮಗಾರಿಗಳು ಅಪೂರ್ಣಗೊಂಡಿವೆ. ಸರ್ಕಾರ ಹಣ ಬಿಡುಗಡೆ ಮಾಡುತ್ತದೆ. ನಾವು ಮನೆ ಸೇರಿಕೊಳ್ಳುತ್ತೇವೆ ಎಂದು ಹುಮ್ಮಸ್ಸಿನಿಂದ ಮನೆ ಕಟ್ಟಿಸಲು ಮುಂದಾದ ಜನರು ಸಾಲಸೋಲ ಮಾಡಿ ಹಣ ಹೊಂದಿಸಿದ್ದರು. ಆದರೆ ಕಳೆದ ಒಂದು ವರ್ಷದಿಂದ ಕೇವಲ ಪಾಯದ ಹಂತಕ್ಕೆ ಮಾತ್ರ ಹಣ ಬಿಡುಗಡೆ ಆಗಿದೆ ಎಂದು ಆರೋಪಿಸಿದ್ದಾರೆ.

ಫಲಾನುಭವಿಗಳಿಗೆ ನಾಲ್ಕು ಹಂತದಲ್ಲಿ ಹಣ ಬಿಡುಗಡೆ ಮಾಡಲಾಗುತ್ತದೆ. ಪಾಯದ ಹಂತಕ್ಕೆ 43 ಸಾವಿರ ರೂ ಬಿಡುಗಡೆಯಾಗಿದೆ. ಆದರೆ ನಂತರದ ಹಂತಗಳಿಗೆ ಹಣ ಬಿಡುಗಡೆಯಾಗಿಲ್ಲ. ಫಲನುಭವಿಗಳು ಪಾಯ, ಗೋಡೆ, ಮೇಲ್ಛಾವಣೆ, ಮತ್ತು ಮನೆ ಪೂರ್ಣಗೊಳಿಸಲು ಮೊದಲೇ ಹಣ ಸುರಿಯಬೇಕು. ಬಡವರಾಗಿರುವ ಫಲಾನುಭವಿಗಳು ಇದಕ್ಕಾಗಿ ಸಾಲ ಮಾಡಿದ್ದಾರೆ. ಸಾವಿರಾರು ರೂಪಾಯಿ ಸಾಲ ಮಾಡಿ ತಮ್ಮ ಸಾಮರ್ಥ್ಯಕ್ಕೆ ತಕ್ಕಹಾಗೆ ಪಾಯ, ಗೋಡೆ, ಟಾಪ್ ಹಂತದವರೆಗೂ ಮನೆ ನಿರ್ಮಿಸಿಕೊಂಡಿದ್ದಾರೆ. ಸಾಲ ನೀಡಿದವರು ಸಾಲಕ್ಕೆ ಒತ್ತಡ ಹೇರುತ್ತಿದ್ದಾರೆ. ಇದರಿಂದ ಸಾಲ ಪಡೆದವರು ಹಣ ನೀಡಲು ಬೇರೆ ಮಾರ್ಗಗಳೇ ಇಲ್ಲವಾಗಿದೆ.

ಪ್ರತಿ ಮನೆ ನಿರ್ಮಾಣಕ್ಕೂ ರಾಜ್ಯ ಸರ್ಕಾರ 75 ಸಾವಿರ, ಕೇಂದ್ರ ಸರ್ಕಾರ 50 ಸಾವಿರ ಹೀಗೆ ಒಟ್ಟು 1.25 ಲಕ್ಷ ರೂ ಫಲಾನುಭವಿಗೆ ನೀಡುತ್ತದೆ. ಅಂದರೆ ಈ ಹಣವನ್ನು ನಾಲ್ಕು ಹಂತದಲ್ಲಿ ನೀಡಲಾಗುತ್ತದೆ.

ರಾಜ್ಯ ಸರ್ಕಾರ 9.74ಲಕ್ಷ ಮನೆಗಳನ್ನು 10,194 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಇನ್ನೂ ಒಂದು ಹೆಜ್ಞೆ ಮುಂದೆ ಹೋಗಿರುವ ಸಚಿವ ಸೋಮಣ್ಣ ಮತ್ತೆ 1.25 ಲಕ್ಷ ಮನೆಗಳನ್ನು ಮಂಜೂರು ಮಾಡುತ್ತೇವೆ ಎಂದು ಜೂನ್ 1ರಂದು ಹೇಳಿದ್ದರು. ಆದರೆ ಈಗ ಮಂಜೂರು ಮಾಡಿರುವ ಮನೆಗಳೇ ಪೂರ್ಣಗೊಂಡಿಲ್ಲ. ಹಣವೂ ಬಿಡುಗಡೆ ಮಾಡಿಲ್ಲ. ಮತ್ತೆ ಒಂದು ಲಕ್ಷ ಮನೆಗಳಿಗೆ ಹಣ ಎಲ್ಲಿಂದ ತರುತ್ತಾರೆ ಎಂಬ ಪ್ರಶ್ನೆ ಉದ್ಭವಿಸುತ್ತದೆ.

ಇತ್ತೀಚೆಗೆ ಸಚಿವ ಸಂಪುಟ ಸಭೆಯಲ್ಲಿ ಮನೆಗಳ ನಿರ್ಮಾಣ ಕಾಮಗಾರಿಗೆ 4 ಸಾವಿರ ಕೋಟಿ ಬಿಡುಗಡೆ ಮಾಡುವುದಾಗಿ ಸರ್ಕಾರ ಹೇಳಿತ್ತು. ಸಚಿವ ಸೋಮಣ್ಣನವರು ಮೇ 14, 2020ರಂದು ಪ್ರಜಾವಾಣಿ ಪೋನ್ ಇನ್ ಕಾರ್ಯಕ್ರಮದಲ್ಲಿ ಫಲನುಭವಿಯೊಬ್ಬರ ಕರೆಗೆ ಉತ್ತರಿಸಿ ಇನ್ನೊಂದು ವಾರದಲ್ಲಿ ಹಣ ಬಿಡುಗಡೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದರು. ಮೂರು ತಿಂಗಳು ಕಳೆದರೂ ಹಣ ಬಿಡುಗಡೆಯಾಗಿಲ್ಲ. ಹಣ ಬಿಡುಗಡೆ ಮಾಡುವ ಭರವಸೆ ದೊರೆಯುತ್ತಿದೆಯೇ ಹೊರತು ಕೊಟ್ಟ ಮಾತನ್ನು ಸರ್ಕಾರ ಉಳಿಸಿಕೊಂಡಿಲ್ಲ ಎಂಬುದು ಜನರ ದೂರು.

ಗ್ರಾಮಗಳನ್ನು ಗುಡಿಸಲು ಮುಕ್ತಗೊಳಿಸುವುದಾಗಿ ಸರ್ಕಾರ ಹೇಳಿತ್ತು. ಆದರೆ ಹಟ್ಟಿಗಳಲ್ಲಿ ಇಂದಿಗೂ ಗುಡಿಸಲು ಮನೆಗಳಲ್ಲೇ ಬಡಕುಟುಂಬಗಳು ವಾಸಿಸುತ್ತಿವೆ. ಗೊಲ್ಲರಹಟ್ಟಿಗಳು, ಹಾಡಿಗಳು, ಆದಿವಾಸಿಗಳು, ಕೊಳಗೇರಿಗಳು ವಾಸಿಸುವ ಪ್ರದೇಶಗಳಲ್ಲಿ ಗುಡಿಸಲುಗಳು ಬಿಟ್ಟರೆ ಇಟ್ಟಿಗೆಯ ಮೆನಗಳನ್ನು ನೋಡುವುದು ಅಪರೂಪ. ಗುಡಿಸಲುಗಳಲ್ಲಿ ವಾಸಿಸುವ ಬಡಕುಟುಂಬಗಳು ಮಳೆಗಾಲದಲ್ಲಿ ಸೋರು ಮನೆಗಳಲ್ಲೇ ಜೀವನ ದೂಡುವಂತಹ ಪರಿಸ್ಥಿತಿ ಇದೆ. ಸರ್ಕಾರದ ವಸತಿ ಯೋಜನೆಗಳು ಇಂಥವರ ಬಾಳಿಗೆ ಆಸರೆ ಆಗುವುದು ಗಗನ ಕುಸುಮವಾಗಿದೆ.

ವಸತಿ ಸಚಿವರು ಹಿಂದಿನ ಸರ್ಕಾರಗಳಲ್ಲಾದ ಲೋಪದೋಷಗಳನ್ನು ಮುಂದುಮಾಡಿಕೊಂಡು ಟೀಕಿಸುವುದು ಬಿಟ್ಟು ನಿಜವಾದ ಫಲನುಭರಿಗಳಿಗೆ ಸೂರು ಕಲ್ಪಿಸುವತ್ತ ಮುಂದಾಗಬೇಕು. ಫಲನುಭವಿಗಳಿಗೆ ಶೀಘ್ರ ಹಣ ಬಿಡುಗಡೆ ಮಾಡಿ ಬಡಕುಟುಂಬಗಳ ನೆರವಿಗೆ ಬರಬೇಕು. ಸಾಲದಲ್ಲಿ ನರಳುತ್ತಿರುವ ಕುಟುಂಬಗಳನ್ನು ಪಾರು ಮಾಡುವ ಕೆಲಸ ಸರ್ಕಾರದಿಂದ ಅಗಬೇಕಾಗಿದೆ.


ಇದನ್ನೂ ಓದಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಪಟ್ಟು: ಬೆಳಗಾವಿ, ಬೆಂಗಳೂರಿನಲ್ಲಿ ಭಾರೀ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...