Homeಮುಖಪುಟ'ಅವೈಜ್ಞಾನಿಕ’: ಯುಜಿಸಿಯ ಕರಡು ಪಠ್ಯಕ್ರಮ ನೀತಿ ತಿರಸ್ಕರಿಸಿದ ಕೇರಳ ಸರ್ಕಾರ

‘ಅವೈಜ್ಞಾನಿಕ’: ಯುಜಿಸಿಯ ಕರಡು ಪಠ್ಯಕ್ರಮ ನೀತಿ ತಿರಸ್ಕರಿಸಿದ ಕೇರಳ ಸರ್ಕಾರ

- Advertisement -
- Advertisement -

‘ಭಾರತೀಯ ಜ್ಞಾನ ವ್ಯವಸ್ಥೆಯ ಸೋಗಿನಲ್ಲಿ ನಿರ್ದಿಷ್ಟ ಸಿದ್ದಾಂತದ ವಿಷಯಗಳನ್ನು ಹೇರುವ’ ಬಗ್ಗೆ ಗಂಭೀರ ಕಳವಳಗಳನ್ನು ಉಲ್ಲೇಖಿಸಿ ಕೇರಳ ಸರ್ಕಾರ ವಿಶ್ವವಿದ್ಯಾಲಗಳ ಧನಸಹಾಯ ಆಯೋಗದ (ಯುಜಿಸಿ) ಕರಡು ಪಠ್ಯಕ್ರಮ ನೀತಿಯನ್ನು ತಿರಸ್ಕರಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ಶುಕ್ರವಾರ (ಸೆ.26) ವರದಿ ಮಾಡಿದೆ.

ಕಳೆದ ಆಗಸ್ಟ್‌ನಲ್ಲಿ ಯುಜಿಸಿ ಒಂಬತ್ತು ವಿಷಯಗಳಿಗೆ ಕರಡು ನೀತಿಯನ್ನು ಬಿಡುಗಡೆ ಮಾಡಿ ಸಾರ್ವಜನಿಕರಿಂದ ಪ್ರತಿಕ್ರಿಯೆ ಆಹ್ವಾನಿಸಿತ್ತು.

ಯುಜಿಸಿ ಕರಡು ನೀತಿಯು ಹಳೆಯದ್ದು, ಅವೈಜ್ಞಾನಿಕವಾಗಿದೆ ಮತ್ತು ಸಂಘ ಪರಿವಾರದ ಸೈದ್ಧಾಂತಿಕ ಹಿತಾಸಕ್ತಿಗಳ ಪರವಾಗಿದೆ ಎಂದು ಕೇರಳದ ಉನ್ನತ ಶಿಕ್ಷಣ ಸಚಿವೆ ಆರ್ ಬಿಂದು ಹೇಳಿದ್ದಾರೆ.

‘ರಾಮ ರಾಜ್ಯ’ದಂತಹ ವಿಷಯಗಳು—ಅಂದರೆ, ಹಿಂದೂ ದೇವರು ರಾಮನ ಆದರ್ಶಪ್ರಾಯ ಆಡಳಿತ ಎಂಬ ವಿಷಯವನ್ನು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (ಸಿಎಸ್‌ಆರ್) ಮತ್ತು ಪರಿಸರ, ಸಾಮಾಜಿಕ ಹಾಗೂ ಆಡಳಿತ (ಇಎಸ್‌ಜಿ) ವಿಷಯಗಳೊಂದಿಗೆ ಸಂಯೋಜಿಸಿರುವುದು ಸಂಘ ಪರಿವಾರದ ಸಿದ್ದಾಂತ ಹೇರಿಕೆಗೆ ಉದಾಹರಣೆ ಎಂದು ಬಿಂದು ತಿಳಿಸಿದ್ದಾರೆ.

“ಇಂತಹ ವಿಷಯಗಳು ನಮ್ಮ ಶೈಕ್ಷಣಿಕ ಸಂಸ್ಥೆಗಳಲ್ಲಿ ಅಸಹಿಷ್ಣುತೆ ಮತ್ತು ಅಶಾಂತಿಗೆ ಕಾರಣವಾಗಬಹುದು” ಎಂದಿದ್ದಾರೆ.

ಅರ್ಥಶಾಸ್ತ್ರಜ್ಞ ಪ್ರಭಾತ್ ಪಟ್ನಾಯಕ್ ಅಧ್ಯಕ್ಷತೆಯ ಕೇರಳ ರಾಜ್ಯ ಸರ್ಕಾರದ ಸಮಿತಿಯು, ಯುಜಿಸಿಯ ಪ್ರಸ್ತಾವಿತ ಕಲಿಕಾ ಫಲಿತಾಂಶ ಆಧಾರಿತ ಪಠ್ಯಕ್ರಮ ನೀತಿಯು ವಿಶ್ವವಿದ್ಯಾಲಯ ಶಿಕ್ಷಣದಿಂದ ನಿರೀಕ್ಷಿಸಲಾದ ಬೌದ್ಧಿಕ ಮತ್ತು ಶಿಸ್ತಿನ ಮಾನದಂಡಗಳನ್ನು ಪೂರೈಸಲು ವಿಫಲವಾಗಿದೆ ಎಂದು ತೀರ್ಮಾನಿಸಿದೆ.

ರಾಜ್ಯ ಸರ್ಕಾರದ ಸಮಿತಿಯಲ್ಲಿ ಇತಿಹಾಸಕಾರ ರೊಮಿಲಾ ಥಾಪರ್ ಮತ್ತು ಕೇರಳ ರಾಜ್ಯ ಉನ್ನತ ಶಿಕ್ಷಣ ಮಂಡಳಿಯ ಉಪಾಧ್ಯಕ್ಷ ರಾಜನ್ ಗುರುಕ್ಕಲ್ ಇದ್ದರು.

ಕೇಂದ್ರ ಶಿಕ್ಷಣ ಸಚಿವಾಲಯಕ್ಕೆ ವಿವರವಾದ ಆಕ್ಪೇಪವನ್ನು ಸಲ್ಲಿಸಲಾಗಿದ್ದು, ಈ ನೀತಿಯನ್ನು ರಾಜ್ಯದಲ್ಲಿ ಜಾರಿಗೆ ತರುವುದಿಲ್ಲ ಎಂದು ಕೇರಳ ಸರ್ಕಾರ ತಿಳಿಸಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

ಗುರುವಾರ ಸಾರ್ವಜನಿಕಗೊಳಿಸಲಾದ ಸಮಿತಿಯ ವರದಿಯಲ್ಲಿ, ಯುಜಿಸಿ ನೀತಿಯು ‘ವಿಶ್ವದ ಯಾವುದೇ ಪ್ರಮುಖ ದೇಶದಲ್ಲಿ ಅಸ್ತಿತ್ವದಲ್ಲಿ ಇಲ್ಲ. ನಮ್ಮ ದೇಶದಲ್ಲಿಯ ಈ  ರೀತಿಯ ನೀತಿಗಳನ್ನು ಇದುವರೆಗೆ ಕಂಡಿಲ್ಲ. ಈ ನೀತಿಯು ವಿಶ್ವವಿದ್ಯಾಲಯಗಳ ಸ್ವಾಯತ್ತತೆಯನ್ನು ಉಲ್ಲಂಘಿಸುತ್ತದೆ ಎಂದು ಹೇಳಲಾಗಿದೆ.

ಯುಜಿಸಿಯ ಕರಡು ಪಠ್ಯಕ್ರಮ ನೀತಿಯ ದಾಖಲೆಯು ಬ್ರಿಟಿಷ್ ಮತ್ತು ಅಮೆರಿಕನ್ ಪಠ್ಯಪುಸ್ತಕಗಳಿಂದ ತೆಗೆದುಕೊಂಡ ವಿವಿಧ ವಿಷಯಗಳ ಸಂಗ್ರಹವಾಗಿದೆ. ಆದರೆ, ಈ ದಾಖಲೆಯು ಭಾರತದ ಇತಿಹಾಸದಲ್ಲಿ ಸಾಮ್ರಾಜ್ಯಶಾಹಿ (ಉದಾಹರಣೆಗೆ, ಬ್ರಿಟಿಷ್ ಆಳ್ವಿಕೆ) ಯ ಶೋಷಣಾತ್ಮಕ ಪಾತ್ರವನ್ನು ಸ್ಪಷ್ಟವಾಗಿ ಗುರುತಿಸುವುದಿಲ್ಲ ಅಥವಾ ಒತ್ತಿಹೇಳುವುದಿಲ್ಲ ಎಂದು ವರದಿಯಲ್ಲಿ ಸಮಿತಿಯು ಆಕ್ಷೇಪ ವ್ಯಕ್ತಪಡಿಸಿದೆ.

ಕರಡು ಚೌಕಟ್ಟಿನಲ್ಲಿ ‘ಭಾರತೀಯ ಜ್ಞಾನ ವ್ಯವಸ್ಥೆಯ ಹಿಂದೂ-ವಿಶೇಷತಾವಾದಿ ಗ್ರಹಿಕೆ’ ಯನ್ನು ವರದಿ ಟೀಕಿಸಿದೆ.

ಸಮಿತಿಯ ವಿಶೇಷ ಆಹ್ವಾನಿತರಾಗಿರುವ ಥಾಪರ್, ಈ ನೀತಿಯು ಶೈಕ್ಷಣಿಕ ಗುಣಮಟ್ಟವನ್ನು ದುರ್ಬಲಗೊಳಿಸುತ್ತದೆ ಮತ್ತು ಉನ್ನತ ಶಿಕ್ಷಣವನ್ನು ಕೇವಲ ಕಂಠಪಾಠಕ್ಕೆ ಸೀಮಿತಗೊಳಿಸುವ ಅಪಾಯವಿದೆ ಎಂದು ಎಚ್ಚರಿಸಿದ್ದಾರೆ.

ಕರಡು ನೀತಿಯ ಉದ್ದಕ್ಕೂ ‘ಭಾರತೀಯ ಜ್ಞಾನ ವ್ಯವಸ್ಥೆ’ ಎಂಬ ಪದದ ಅಸ್ಪಷ್ಟ ಬಳಕೆಯನ್ನು ಸಮಿತಿ ವಿರೋಧಿಸಿದೆ. ಯಾವುದೇ ಸ್ಪಷ್ಟ ವ್ಯಾಖ್ಯಾನ ಅಥವಾ ವಿಶ್ಲೇಷಣೆಯನ್ನು ಇದಕ್ಕೆ ಕೊಡಲಾಗಿಲ್ಲ ಎಂದಿದ್ದಾರೆ.

ಕೆಲವು ಗ್ರಂಥಗಳು ಸಂಸ್ಕೃತದಲ್ಲಿ ರಚಿತವಾಗಿದ್ದರೂ ಸಹ, ಕ್ರಿ.ಶ. ಮೊದಲನೆಯ ಮತ್ತು ಎರಡನೆಯ ಸಹಸ್ರಮಾನದ ಆರಂಭದಲ್ಲಿ, ಭಾರತ, ಪಶ್ಚಿಮ ಏಷ್ಯಾ, ಮಧ್ಯ ಏಷ್ಯಾ ಮತ್ತು ಚೀನಾದಾದ್ಯಂತ ಪೂರ್ವ-ವಿಜ್ಞಾನದ (ಪ್ರೊಟೊ-ಸೈನ್ಸ್) ಕುರಿತಾದ ಚಿಂತನೆಗಳು ಗಣನೀಯವಾಗಿ ವಿನಿಮಯವಾಗುತ್ತಿದ್ದವು,” ಎಂದು ಥಾಪರ್ ಹೇಳಿದ್ದು, ಈ ಚಿಂತನೆಗಳಿಗೆ ಭೌಗೋಳಿಕ ಗಡಿಗಳನ್ನು ಅಥವಾ ಧಾರ್ಮಿಕ ಮೂಲವನ್ನು ನಿರ್ದಿಷ್ಟಪಡಿಸಲಾಗದು ಎಂದಿದ್ದಾರೆ.

ಕೇಂದ್ರದಿಂದ ಸಂಸದೀಯ ಸ್ಥಾಯಿ ಸಮಿತಿಗಳ ಅವಧಿ ವಿಸ್ತರಣೆ ಸಾಧ್ಯತೆ: ಶಶಿ ತರೂರ್‌ ಸ್ಥಾನ ಅಬಾಧಿತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...