Homeಮುಖಪುಟಮುಂದಿನ ಆದೇಶದವರೆಗೆ ಮೂರು ಕೃಷಿ ಕಾನೂನುಗಳ ಜಾರಿಯನ್ನು ಸ್ಥಗಿತಗೊಳಿಸುತ್ತೇವೆ: ಸುಪ್ರೀಂ ಕೋರ್ಟ್‌

ಮುಂದಿನ ಆದೇಶದವರೆಗೆ ಮೂರು ಕೃಷಿ ಕಾನೂನುಗಳ ಜಾರಿಯನ್ನು ಸ್ಥಗಿತಗೊಳಿಸುತ್ತೇವೆ: ಸುಪ್ರೀಂ ಕೋರ್ಟ್‌

ಇದು ಬ್ರೇಕಿಂಗ್ ಸುದ್ದಿ. ಹೆಚ್ಚಿನ ಮಾಹಿತಿಗಳು ಅಪ್‌ಡೇಟ್‌ ಆಗುತ್ತವೆ. ರಿಫ್ರೆಶ್ ಮಾಡಿ

- Advertisement -
- Advertisement -

ಮುಂದಿನ ಆದೇಶದವರೆಗೆ ನಾವು ಮೂರು ಕೃಷಿ ಕಾನೂನುಗಳ ಅನುಷ್ಠಾನವನ್ನು ಸ್ಥಗಿತಗೊಳಿಸಲಿದ್ದೇವೆ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎಸ್‌.ಎ ಬೋಬ್ಡೆ ಹೇಳಿದ್ದಾರೆ.

ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಕುರಿತ ಪ್ರಕರಣದ ತೀರ್ಪು ನೀಡುವ ವೇಳೆ “ನಾವು ಇಲ್ಲಿರುವುದು ಸಮಸ್ಯೆಯನ್ನು ಬಗೆಹರಿಸಲಿಕ್ಕೆ. ಹಾಗಾಗಿ ಪ್ರತಿಭಟನಾಕಾರರು ಮತ್ತು ಕೇಂದ್ರ ಸರ್ಕಾರದ ನಡುವೆ ಮಾತುಕತೆ ನಡೆಸಲು ಸಮಿತಿಯನ್ನು ರಚಿಸುತ್ತೇವೆ” ಎಂದು ಬೋಬ್ಡೆ ತಿಳಿಸಿದ್ದಾರೆ.

ಕೃಷಿ ಅರ್ಥಶಾಸ್ತ್ರಜ್ಞ ಅಶೋಕ್ ಗುಲಾಟಿ, ಹರ್ಸಿಮ್ರತ್ ಮನ್, ಪ್ರಮೋದ್ ಜೋಶಿ ಸೇರಿದಂತೆ ಹಲವು ಜನ ಸಮಿತಿಯಲ್ಲಿರುತ್ತಾರೆ ಎಂದು ಸಿಜೆಐ ನೇತೃತ್ವದ ನ್ಯಾಯಪೀಠ ಉಲ್ಲೇಖಿಸಿದೆ. ಸುಪ್ರೀಂನ ಪೂರ್ಣ ಆದೇಶ ಸಂಜೆಯ ವೇಳೆಗೆ ಲಭ್ಯವಾಗಲಿದೆ.

“ನಾವು ಸಮಸ್ಯೆಯನ್ನು ಬಗೆಹರಿಸಲು ಇಲ್ಲಿದ್ದೇವೆ. ನೀವು ಅನಿರ್ದಿಷ್ಠಾವಧಿ ಪ್ರತಿಭಟನೆ ಮಾಡಲು ಬಯಸಿದರೆ ಮಾಡಿ. ಈ ಸಮಸ್ಯೆಯನ್ನು ಬಗೆಹರಿಸಬೇಕೆಂಬ ನೈಜ ಕಾಳಜಿಯಿರುವವರು ಸಮಿತಿಯಲ್ಲಿರುತ್ತಾರೆ. ಈ ಸಮಿತಿಯು ಕೃಷಿ ಕಾನೂನುಗಳನ್ನು ಅಧ್ಯಯನ ಮಾಡುತ್ತದೆಯೇ ವಿನಾಃ ನಿಮ್ಮನ್ನು ಶಿಕ್ಷಿಸುವುದಿಲ್ಲ ಅಥವಾ ಯಾವುದೇ ಆದೇಶ ನೀಡುವುದಿಲ್ಲ. ನಾವು ಹೋರಾಟನಿರತ ಸಂಘಟನೆಗಳ ಅಭಿಪ್ರಾಯಗಳನ್ನು ಗಣನೆಗೆ ತೆಗೆದುಕೊಳ್ಳುತ್ತೇವೆ. ಇದರಿಂದ ಕಾಯ್ದೆಗಳ ಬಗ್ಗೆ ಸ್ಪಷ್ಟ ಚಿತ್ರಣ ಸಿಗುತ್ತದೆ” ಎಂದು ಸಿಜೆಐ ಹೇಳಿದ್ದಾರೆ.

ಗೌರವಾನ್ವಿತ ಸುಪ್ರೀಂ ಕೋರ್ಟ್‌ ಕೃಷಿ ಕಾಯ್ದೆಗಳ ಜಾರಿಯನ್ನು ತಡೆಯುವ ಸುಪ್ರೀಂ ಕೋರ್ಟ್‌ ಸಲಹೆಯನ್ನು ಎಲ್ಲ ಸಂಘಟನೆಗಳು ಸ್ವಾಗತ್ತಿಸುತ್ತವೆ. ಆದರೆ ರೈತ ಸಂಘಟನೆಗಳು ಸಾಮೂಹಿಕವಾಗಿ ಹಾಗೂ ವ್ಯಕ್ತಿಗತವಾಗಿ ಸುಪ್ರೀಂ ಕೋರ್ಟ್‌ ನೇಮಿಸಲಿರುವ ಸಮಿತಿಯ ಸಭೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ರೈತ ಮುಖಂಡರ ಹೇಳಿಕೆಯ ಹಿನ್ನೆಲೆಯಲ್ಲಿ ಸಿಜೆಐ ಮೇಲಿನ ಮಾತುಗಳನ್ನಾಡಿದ್ದಾರೆ.

ಗುತ್ತಿಗೆ ಕೃಷಿ ಪದ್ದತಿಯಿಂದ ರೈತರು ಭೂಮಿ ಕಳೆದುಕೊಳ್ಳುವ ಭಯದಲ್ಲಿರುವುದರಿಂದ ಆ ಕಾಯ್ದೆಯ ಜಾರಿಗೆ ಮಧ್ಯಂತರ ತಡೆ ನೀಡುತ್ತಿದ್ದೇವೆ. ನಾವು ಈ ಕಾಯ್ದೆಗಳ ಸಿಂಧುತ್ವದ ಬಗ್ಗೆ ಗಮನವಹಿಸುತ್ತೇವೆ ಜೊತೆಗೆ ಪ್ರತಿಭಟನೆಯಿಂದ ತೊಂದರೆಗೊಳಗಾಗುವ ನಾಗರಿಕರ ಜೀವನ ಮತ್ತು ಅವರ ಆಸ್ತಿಗಳ ಬಗ್ಗೆಯೂ ಕಾಳಜಿ ವಹಿಸುತ್ತೇವೆ. ನಮಗಿರುವ ಅಧಿಕಾರ ಬಳಸಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ನ್ಯಾಯಪೀಠ ಹೇಳಿದೆ.

ಸರ್ಕಾರದ ಪರವಾಗಿ ಹಾಜರಾದ ವಕೀಲ ಹರೀಶ್ ಸಾಳ್ವೆ “ಎಂಎಸ್‌ಪಿ ಕೊನೆಗೊಳ್ಳುವುದಿಲ್ಲ ಹಾಗೂ ಉತ್ತಮ ಗುಣಮಟ್ಟದ ಬೆಳೆ ಬೆಳೆಯಲಾಗದ ರೈತರ ಜಮೀನನ್ನು ಗುತ್ತಿಗೆ ಕೃಷಿಗೆ ತೆಗೆದುಕೊಂಡವರು ಮಾರಲಾಗುವುದಿಲ್ಲ” ಎಂದು ಸ್ಪಷ್ಟನೆ ನೀಡಿದರು.

ಮುಂದುವರಿದು ಈ ವಿಚಾರದ ತೀರ್ಪು ನೀಡುವಾಗ ಇದು ಯಾರಬ್ಬರದೋ ಗೆಲುವು ಎಂದು ಎಂದು ನಿರ್ಧರಿಸಬಾರದು. ಕಾಯ್ದೆಗಳಲ್ಲಿದ್ದ ಕೆಲ ದೋಷಗಳನ್ನು ಸರಿಪಡಿಸಲಾಗುವುದು ಎಂದು ಕರೆಯಬೇಕು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಇದು ನ್ಯಾಯವಂತಿಕೆಯ ಗೆಲುವು ಮಾತ್ರ ಎಂದರು.

ಅಟಾರ್ನಿ ಜನರಲ್ ರವರು ಖಲಿಸ್ತಾನಿ ಚಳವಳಿಗೆ ದೇಣಿಗೆ ಸಂಗ್ರಹಿಸಿದ ಸಿಖ್ಸ್ ಫಾರ್‍ ಜಸ್ಟೀಸ್ ಎಂಬ ಸಂಘಟನೆಯ ಇಲ್ಲಿದೆ ಎಂದು ಬರೆದಿದ್ದೀರಿ. ಅದಕ್ಕೆ ಆಧಾರ ಒದಗಿಸುವಿರಾ ಎಂಬ ಸಿಜೆಐ ಪ್ರಶ್ನೆಗೆ ಹೌದು ಅಫಿಡವಿಟ್ ಸಲ್ಲಿಸುತ್ತೇವೆ ಎಂದಿದ್ದಲ್ಲದೆ ಕಾಯ್ದೆಗೆ ದಕ್ಷಿಣ ಭಾರತದಲ್ಲಿ ಕರ್ನಾಟಕ ಮತ್ತು ಕೇರಳದಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ ಎಂದರು.

ಇದಕ್ಕೆ ಉತ್ತರಿಸಿದ ವಕೀಲ ವಿಲ್ಸನ್ ಕಾಯ್ದೆ ವಿರುದ್ಧ ದೊಡ್ಡ ಪ್ರತಿಭಟನೆಗಳಾಗುತ್ತಿವೆ. ವಿಜಯವಾಡ ಹೊತ್ತಿ ಉರಿಯುತ್ತಿದೆ. ಬೇಕಾದರೆ ನಿಮಗೆ ನಾನು ಚಿತ್ರಗಳನ್ನು ತೋರಿಸುತ್ತೇನೆ. ಅಟಾರ್ನಿ ಜನರಲ್‌ರವರ ಹೇಳಿಕೆ ಸರಿಯಾಗಿಲ್ಲ ಎಂದರು.

ಇನ್ನು ಮಹಿಳೆಯರು, ಮಕ್ಕಳು ಮತ್ತು ವೃದ್ಧರು ಪ್ರತಿಭಟನೆಯಲ್ಲಿ ಭಾಗವಹಿಸುವುದಿಲ್ಲ ಎಂದು ಎಪಿ ಸಿಂಗ್ ಹೇಳಿದ್ದಾರೆ ಎಂದು ಸಿಜೆಐ ಬೋಬ್ಡೆ ಹೇಳಿದ್ದಾರೆ.

ಈ ಕುರಿತು ರೈತ ಮುಖಂಡ ಮತ್ತು ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷರಾದ ಯೋಗೇಂದ್ರ ಯಾದವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು “ಎಪಿ ಸಿಂಗ್ ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳುತ್ತಿದ್ದಾರೆ. ಇದನ್ನು ಓದಿದ ನಂತರ ನಾನು ಬಿಕೆಯು ಅಧ್ಯಕ್ಷ ಭಾನು ಅವರೊಂದಿಗೆ ಮಾತನಾಡಿದೆ. ಅವರು ನಿನ್ನೆ ಅಥವಾ ಇಂದು ಎಪಿ ಸಿಂಗ್‌ರವರೊಂದಿಗೆ ಮಾತನಾಡಲಿಲ್ಲ ಮತ್ತು ಅವರ ಸಂಘಟನೆಯು ಮಹಿಳೆಯರು ಮತ್ತು ಹಿರಿಯರನ್ನು ಪ್ರತಿಭಟನೆಯಿಂದ ಹಿಂತಿರುಗಿ ಎಂದು ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ನನಗೆ ದೃಢಪಡಿಸಿದರು” ಎಂದಿದ್ದಾರೆ.

ಇನ್ನು ವಕೀಲರಾದ ದವೆಯವರು ರೈತರು ಟ್ರಾಕ್ಟರ್‌ ರ್ಯಾಲಿಯನ್ನು ಆಯೋಜಿಸುತ್ತಿಲ್ಲ ಎಂದಿದ್ದಾರೆ. ತಮ್ಮ ಕಕ್ಷಿದಾರರು (ರೈತರು) ಸಮಿತಿಯ ಮುಂದೆ ಹಾಜರಾಗಲಿದ್ದಾರೆ ಎಂದಿದ್ದಾರೆ ಎಂದೂ ಸಿಜೆಐ ಹೇಳಿದ್ದಾರೆ.


ಇದನ್ನೂ ಓದಿ: No appeal only Repeal: ರೈತ ಹೋರಾಟದ ಇಂದಿನ ಹ್ಯಾಷ್‌ಟ್ಯಾಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...