Homeಕರ್ನಾಟಕರಾಜ್ಯದಲ್ಲಿ ಜೀವಂತವಾಗಿರುವ ಅಸ್ಪೃಷ್ಯತೆ ಆಚರಣೆ: ಸದನಕ್ಕೆ ವರದಿ ನೀಡಿದ ಸಮಿತಿ

ರಾಜ್ಯದಲ್ಲಿ ಜೀವಂತವಾಗಿರುವ ಅಸ್ಪೃಷ್ಯತೆ ಆಚರಣೆ: ಸದನಕ್ಕೆ ವರದಿ ನೀಡಿದ ಸಮಿತಿ

- Advertisement -
- Advertisement -

ರಾಜ್ಯದಲ್ಲಿ ಅಸ್ಪೃಷ್ಯತೆ ಆಚರಣೆ ಇನ್ನೂ ಜೀವಂತವಾಗಿಯೇ ಇದೆ. ರಾಜ್ಯದ ಕೆಲವು ಗ್ರಾಮಗಳಲ್ಲಿ ದಲಿತರಿಗೆ ದೇವಸ್ಥಾನ, ಅಂಗನವಾಡಿಗಳಿಗೆ ಪ್ರವೇಶಕ್ಕೆ ನಿರಾಕರಿಸುವುದು, ಕುಡಿಯುವ ನೀರು, ಪಡಿತರ ಪಡೆಯಲು ಅಡ್ಡಿ ಪಡಿಸುವುದು ನಡೆಯುತ್ತಲೇ ಇದೆ. ಜಾತಿ ಕಾರಣಕ್ಕೆ ಈ ಅವಮಾನ, ದೌರ್ಜನ್ಯಗಳು ನಿರಂತವಾಗಿ ನಡೆಯುತ್ತಿದ್ದರೂ ಅವುಗಳಲ್ಲಿ ಕೆಲವು ಮಾತ್ರ ಬಯಲಾಗುತ್ತದೆ.

ಈ ಹಿಂದೆ ಬಿಜೆಪಿ ಶಾಸಕರಾಗಿದ್ದ ಗೂಳಿಹಟ್ಟಿ ಡಿ. ಶೇಖರ್ ಸದನದಲ್ಲಿ ಮಾತನಾಡುತ್ತಾ, ಹಲವು ಗ್ರಾಮಗಳಿಗೆ ದಲಿತ ಅಧಿಕಾರಿಗಳಿಗೆ ಪ್ರವೇಶವಿಲ್ಲ. ದಲಿತ ಎಂಬ ಕಾರಣಕ್ಕಾಗಿ ಊರ ಒಳಗಡೆ ಬಿಡುತ್ತಿಲ್ಲ ಎಂದು ಉನ್ನತ ಮಟ್ಟದ ಅಧಿಕಾರಿಗಳೇ ಅಳಲು ತೋಡಿಕೊಂಡಿದ್ದರು. ಅಷ್ಟು ಮಾತ್ರವಲ್ಲ ರಾಜಕಾರಣಿಗಳಿಗೂ ಪ್ರವೇಶ ನಿರಾಕರಣೆ ಮಾಡಿದ ಪ್ರಸಂಗಗಳು ನಡೆದಿವೆ ಎಂದು ಹೇಳಿಕೊಂಡಿದ್ದರು. ಇದಲ್ಲದೆ ಈ ಹಿಂದೆ ಹಲವು ದಲಿತ ಸಮುದಾಯದ ಶಾಸಕರು, ಸಚಿವರುಗಳು ಕೂಡ ಜಾತಿ ಕಾರಣಕ್ಕೆ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶಕ್ಕೆ ನಿರಾಕರಣೆಯಿಂದ ಅವಮಾನ ಅನುಭವಿಸಿದ ಉದಾಹರಣೆಗಳು ಕೂಡ ಇವೆ.

ಕರ್ನಾಟಕದ ಹಲವಾರು ಭಾಗಗಳಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ ಎಂದು ಶಾಸಕಾಂಗ ಸಮಿತಿಯು ತನ್ನ ವರದಿಯಲ್ಲಿ ಹೇಳಿದೆ. ಮಳವಳ್ಳಿ ಕಾಂಗ್ರೆಸ್ ಶಾಸಕ ಪಿ.ಎಂ.ನರೇಂದ್ರಸ್ವಾಮಿ ನೇತೃತ್ವದ ಪರಿಶಿಷ್ಟ ಜಾತಿ-ಪಂಗಡಗಳ ಕಲ್ಯಾಣ ಸಮಿತಿಯು ತನ್ನ ಮಧ್ಯಂತರ ವರದಿಯನ್ನು ವಿಧಾನಸಭೆಯಲ್ಲಿ ಬುಧವಾರ ಮಂಡಿಸಿದೆ. ಇಂದಿಗೂ ಹಲವಾರು ಸ್ಥಳಗಳಲ್ಲಿ ಅಸ್ಪೃಶ್ಯತೆ ಆಚರಣೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲಾಗಿಲ್ಲ ಎಂದು ಸಮಿತಿಯು ವರದಿಯಲ್ಲಿ ಉಲ್ಲೇಖಿಸಿದೆ.

ಶಾಸಕಾಂಗ ಸಮಿತಿಯು ತನ್ನ ವರದಿಯಲ್ಲಿ ಎಸ್ಸಿ-ಎಸ್ಟಿಗಳಿಗೆ ಮೀಸಲಿರಿಸಿದ 2.5 ಲಕ್ಷ ಕೋಟಿ ರೂಪಾಯಿಗಳ ಅನುದಾನದಲ್ಲಿ ಎಷ್ಟು ತಲುಪಿದೆ? ಮತ್ತು ಹಣವನ್ನು ಸರಿಯಾಗಿ ಬಳಸಲಾಗಿದೆಯಾ ಎಂಬುವುದನ್ನು ಖಚಿತಪಡಿಸಿಕೊಳ್ಳಲು ಹೊಸ ಕಾರ್ಯವಿಧಾನವನ್ನು ಜಾರಿಗೆ ತರುವಂತೆ ಕೋರಿದೆ.

ವರದಿಯ ಪ್ರಕಾರ ಕರ್ನಾಟಕದಲ್ಲಿ 1.8 ಕೋಟಿ ಎಸ್ಸಿ-ಎಸ್ಟಿ ಸಮುದಾಯದ ಜನರಿದ್ದಾರೆ. 2013ರಿಂದ ಪರಿಶಿಷ್ಟ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆ (SCSP-TSP) ಅಡಿಯಲ್ಲಿ SC/ST ಗಳಿಗೆ ಸರ್ಕಾರ 2.5 ಲಕ್ಷ ಕೋಟಿ ರೂ. ಅನುದಾನ ನೀಡುತ್ತಿದೆ. ಹಣ ಸಮುದಾಯದ ಜನರಿಗೆ ತಲುಪುತ್ತಿಲ್ಲ ಅಥವಾ ಬಳಕೆಯಾಗುತ್ತಿಲ್ಲ. ಹಣವನ್ನು ಸರಿಯಾಗಿ ಬಳಸಿಕೊಳ್ಳುವಂತೆ ನೋಡಿಕೊಳ್ಳಲು ಹೊಸ ಕಾರ್ಯವಿಧಾನ ರೂಪಿಸುವ ಅಗತ್ಯವಿದೆ ಎಂದು ವರದಿ ಹೇಳಿದೆ.

ಇದಲ್ಲದೆ ಸಮಿತಿಯು ನಕಲಿ ಎಸ್ಸಿ-ಎಸ್ಟಿ ಜಾತಿ ಪ್ರಮಾಣ ಪತ್ರಗಳ ಸಮಸ್ಯೆ ಅವ್ಯಾಹತವಾಗಿ ಮುಂದುವರಿದಿದ್ದು, 175 ತಹಶೀಲ್ದಾರ್‌ಗಳು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದು ಗಮನಿಸಿದೆ. ಕುರುಬರು, ಬ್ರಾಹ್ಮಣರು, ವೀರಶೈವರು, ಮುದಲಿಯಾರುಗಳು ಮತ್ತು ಇತರರು ಎಸ್ಸಿ-ಎಸ್ಟಿ ಪ್ರಮಾಣಪತ್ರಗಳನ್ನು ಪಡೆದುಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಇದಲ್ಲದೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸೊಸೈಟಿ (ಕೆಆರ್‌ಇಐಎಸ್) ನಡೆಸುತ್ತಿರುವ ಶಾಲೆಗಳಲ್ಲಿ ಕಳೆದ ಐದು ವರ್ಷಗಳಲ್ಲಿ 92 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಸಮಿತಿಯು ಹೇಳಿದೆ. ಇದರಲ್ಲಿ 29 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಮತ್ತು ಮನೆಗೆ ಹೋಗುವಾಗ ನಿಗೂಢ ಪರಿಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ. ಈ ಸಾವುಗಳ ಬಗ್ಗೆ ಸರಿಯಾದ ತನಿಖೆ ನಡೆದಿಲ್ಲ ಎಂದು ನರೇಂದ್ರಸ್ವಾಮಿ ಹೇಳಿದ್ದಾರೆ.

ಕೆಆರ್‌ಇಐಎಸ್ ಅಧೀನದಲ್ಲಿನ ಶಾಲೆಗಳಲ್ಲಿ ಮಹಿಳಾ ವಾರ್ಡನ್‌ಗಳು ಕೊರತೆ ಇದ್ದು ಸಮಿತಿಯು ಕೆಆರ್‌ಇಐಎಸ್ ಶಾಲೆಗಳಲ್ಲಿ ಬಾಲಕಿಯರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಪ್ರತಿ ಶಾಲೆಗೆ ಮಹಿಳಾ ಹೋಂಗಾರ್ಡ್‌ಗಳನ್ನು ನೇಮಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದೆ.

ಸಮಾಜ ಕಲ್ಯಾಣ ಇಲಾಖೆಯು ನಡೆಸುತ್ತಿರುವ ಹಲವಾರು ವಸತಿ ನಿಲಯಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು ಅವುಗಳು ಭಯಾನಕ ಸ್ಥಿತಿಯಲ್ಲಿವೆ. ಸರಿಯಾದ ಶೌಚಾಲಯಗಳು ಮತ್ತು ಸ್ನಾನಗೃಹಗಳಿಲ್ಲದೆ ವಿದ್ಯಾರ್ಥಿಗಳಿಗೆ ಬಯಲಿನಲ್ಲಿ ಸ್ನಾನ ಮಾಡಲು ಒತ್ತಾಯಿಸಲಾಗುತ್ತಿದೆ ಎಂದು ವರದಿಯಲ್ಲಿ ಉಲ್ಲೇಖಿಸಿದ್ದಾರೆ.

ಇದಲ್ಲದೆ ಮದ್ಯದಂಗಡಿಗಳ ಪರವಾನಗಿಗಳನ್ನು ನೀಡಲು ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಜನರಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಬೇಕು. ಹೊಸ ಸಿಎಲ್-2, ಸಿಎಲ್-7, ಸಿಎಲ್‌-9 ಮತ್ತು ಸಿಎಲ್-11 ಮದ್ಯದಂಗಡಿಗಳ ಪರವಾನಗಿಯಲ್ಲಿ ಪರಿಶಿಷ್ಟರಿಗೆ ಮೀಸಲಾತಿ ನೀಡಬೇಕು ಎಂದು ಸಮಿತಿ ಶಿಫಾರಸು ಮಾಡಿದೆ.

ಇದನ್ನು ಓದಿ: ಬಾಬರಿ ಮಸೀದಿ ಧ್ವಂಸಕ್ಕೆ 31 ವರ್ಷ: ಅಜೆಂಡಾ ಯಶಸ್ವಿಗೊಳಿಸುವತ್ತ ಬಿಜೆಪಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...