Homeಮುಖಪುಟಟಿವಿ ನ್ಯೂಸ್ ಚಾನೆಲ್‌ಗಳಲ್ಲಿ ಅನಗತ್ಯ ಯುದ್ಧೋನ್ಮಾದ, ಸುಳ್ಳು ವರದಿ : ನಾಲ್ಕು ವಾರ TRP ಸ್ಥಗಿತಕ್ಕೆ...

ಟಿವಿ ನ್ಯೂಸ್ ಚಾನೆಲ್‌ಗಳಲ್ಲಿ ಅನಗತ್ಯ ಯುದ್ಧೋನ್ಮಾದ, ಸುಳ್ಳು ವರದಿ : ನಾಲ್ಕು ವಾರ TRP ಸ್ಥಗಿತಕ್ಕೆ ಕೇಂದ್ರ ಆದೇಶ

- Advertisement -
- Advertisement -

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದ ಕುರಿತು ಟಿವಿ ನ್ಯೂಸ್‌ ಚಾನೆಲ್‌ಗಳು ಅನಗತ್ಯ ಯುದ್ಧೋನ್ಮಾದ ಸೃಷ್ಟಿಸುತ್ತಿರುವ ಹಾಗೂ ಸುಳ್ಳು ವರದಿಗಳನ್ನು ಪ್ರಸಾರ ಮಾಡುತ್ತಿರುವ ಹಿನ್ನೆಲೆ, ಮುಂದಿನ ನಾಲ್ಕು ವಾರಗಳ ಕಾಲ ಟೆಲಿವಿಷನ್ ರೇಟಿಂಗ್ ಪಾಯಿಂಟ್‌ಗಳ (ಟಿಆರ್‌ಪಿ) ಪ್ರಕಟಣೆಯನ್ನು ಸ್ಥಗಿತಗೊಳಿಸುವಂತೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಬ್ರಾಡ್‌ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್‌ಗೆ (ಬಿಎಆರ್‌ಸಿ-ಬಾರ್ಕ್) ಶುಕ್ರವಾರ (ಮಾ.6) ನಿರ್ದೇಶನ ನೀಡಿದೆ.

ಇಸ್ರೇಲ್ ಮತ್ತು ಅಮೆರಿಕವು ಇರಾನ್ ಮೇಲೆ ನಡೆಸಿದ ದಾಳಿಯಿಂದ ಉಂಟಾದ ಉದ್ವಿಗ್ನತೆಯ ಕುರಿತಾದ ವರದಿಗಾರಿಕೆಯಲ್ಲಿ, ಸುದ್ದಿ ವಾಹಿನಿಗಳು ತೋರುತ್ತಿರುವ “ಉದ್ರೇಕಕಾರಿ ಮತ್ತು ಊಹಾತ್ಮಕ” ಧೋರಣೆಯ ಬಗ್ಗೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ತೀವ್ರ ಕಳವಳ ವ್ಯಕ್ತಪಡಿಸಿದೆ.

“ಇಸ್ರೇಲ್-ಇರಾನ್ ನಡುವಿನ ಸಂಘರ್ಷದ ಸಂದರ್ಭದಲ್ಲಿ, ಕೆಲವು ಸುದ್ದಿ ವಾಹಿನಿಗಳು ಅನಗತ್ಯವಾದ ಉದ್ರೇಕಕಾರಿ ಮತ್ತು ಊಹಾತ್ಮಕ ವಿಷಯಗಳನ್ನು ಬಿತ್ತರಿಸುತ್ತಿರುವುದನ್ನು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಗಮನಿಸಿದೆ. ಇದು ಸಾರ್ವಜನಿಕರಲ್ಲಿ, ವಿಶೇಷವಾಗಿ ಪೀಡಿತ ಪ್ರದೇಶಗಳಲ್ಲಿ ವಾಸಿಸುತ್ತಿರುವವರಲ್ಲಿ ಅಥವಾ ಆ ಪ್ರದೇಶಗಳಲ್ಲಿ ಸ್ನೇಹಿತರು ಮತ್ತು ಕುಟುಂಬ ಸದಸ್ಯರನ್ನು ಹೊಂದಿರುವವರಲ್ಲಿ ಭೀತಿಯನ್ನು ಉಂಟುಮಾಡುವ ಸಾಧ್ಯತೆಯಿದೆ ಎಂದು ಸಚಿವಾಲಯವು ತನ್ನ ನಿರ್ದೇಶನದಲ್ಲಿ ತಿಳಿಸಿದೆ”

ಮುಂದುವರಿದು, “ಸಾರ್ವಜನಿಕ ಹಿತದೃಷ್ಟಿಯಿಂದ, ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಇದೀಗ ಬಾರ್ಕ್ ಸಂಸ್ಥೆಗೆ ಸುದ್ದಿ ದೂರದರ್ಶನ ವಾಹಿನಿಗಳ ರೇಟಿಂಗ್ (ಟಿಆರ್‌ಪಿ) ವರದಿ ಮಾಡುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಾಲ್ಕು (4) ವಾರಗಳ ಕಾಲ ಅಥವಾ ಮುಂದಿನ ಆದೇಶದವರೆಗೆ, ಇವೆರಡರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ತಡೆಹಿಡಿಯುವಂತೆ ನಿರ್ದೇಶಿಸಿದೆ” ಎಂದು ಹೇಳಿದೆ.

ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಕ್ಲಿಪ್‌ ಒಂದರಲ್ಲಿ, “ಇರಾನ್ ತನ್ನಲ್ಲಿರುವ ಅಮೆರಿಕ ರಾಯಭಾರ ಕಚೇರಿಯಲ್ಲಿ 66 ಅಮೆರಿಕನ್ ಪ್ರಜೆಗಳನ್ನು ಒತ್ತೆಯಾಳಾಗಿ ಇರಿಸಿಕೊಂಡಿದೆ” ಎಂದು ಆಜ್ ತಕ್ (Aaj Tak) ವಾಹಿನಿಯ ನಿರೂಪಕಿ ಸುಳ್ಳು ಪ್ರತಿಪಾದನೆ ಮಾಡಿರುವುದು ಕಂಡುಬಂದಿದೆ. ಆ ಸಮಯದಲ್ಲಿ ಚರ್ಚೆಯಲ್ಲಿದ್ದ ಪ್ಯಾನಲಿಸ್ಟ್ ಒಬ್ಬರು, ಇರಾನ್‌ನಲ್ಲಿ ಅಮೆರಿಕದ ರಾಯಭಾರ ಕಚೇರಿಯೇ ಇಲ್ಲ ಎಂಬ ಸತ್ಯವನ್ನು ತಿಳಿಸುವ ಮೂಲಕ ನಿರೂಪಕಿಯನ್ನು ತಿದ್ದಿದ್ದಾರೆ. ಈ ತಪ್ಪಾದ ವರದಿಗಾಗಿ ನಿರೂಪಕಿ ನಂತರ ಕ್ಷಮೆಯಾಚಿಸಿದ್ದಾರೆ.

ಆಲ್ಟ್‌ ನ್ಯೂಸ್‌ನ ಫ್ಯಾಕ್ಟ್‌ ಚೆಕ್ಕರ್ ಮೊಹಮ್ಮದ್ ಝುಬೈರ್ ಅವರು ಆಜ್‌ತಕ್ ವಾಹಿನಿಯ ಸುಳ್ಳು ವರದಿಯ ವಿಡಿಯೋ ಕ್ಲಿಪ್ ಅನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. 

ಆಲ್ಟ್ ನ್ಯೂಸ್ ವರದಿಯ ಪ್ರಕಾರ, ಆಕಾಶದಿಂದ ಸ್ಫೋಟಕಗಳನ್ನು ಹೋಲುವ ವಸ್ತುಗಳು ಬೀಳುತ್ತಿರುವ 15 ಸೆಕೆಂಡುಗಳ ದೃಶ್ಯಾವಳಿಯು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇದು ದುಬೈ ಮೇಲೆ ಇರಾನ್ ನಡೆಸಿದ ದಾಳಿ ಎಂದು ನೆಟ್ಟಿಗರು ಪ್ರತಿಪಾದಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ದುಬೈ ಪೊಲೀಸರು, ಇಂತಹ ನಕಲಿ ವಿಡಿಯೋಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಅಧಿಕೃತ ಪ್ರಕಟಣೆಗಳಿಗೆ ವಿರುದ್ಧವಾದ ಅಥವಾ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುವ ವದಂತಿ ಹಾಗೂ ಸುಳ್ಳು ಮಾಹಿತಿಯನ್ನು ಹಂಚಿಕೊಳ್ಳುವುದು ಯುಎಇ ಕಾನೂನಿನ ಅಡಿಯಲ್ಲಿ ನಿಷೇಧಿಸಲಾಗಿದೆ ಎಂದು ಅವರು ಎಚ್ಚರಿಸಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC ಅಕ್ರಮ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ತನಿಖೆಗೆ ಹೈಕೋರ್ಟ್ ಆದೇಶ

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಇತ್ತೀಚೆಗೆ ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಅತ್ಯಂತ ಮಹತ್ವದ ಆದೇಶ ಹೊರಡಿಸಿದೆ. ಈ ಬಹುಕೋಟಿ ನೇಮಕಾತಿ...

ಲಕ್ನೋದಲ್ಲಿ ಮುಸ್ಲಿಂ ವ್ಯಾಪಾರಿ ಮೇಲೆ ಹಲ್ಲೆ, ಮಾಂಸದ ಅಂಗಡಿಗಳ ವಿರುದ್ಧ ಪ್ರತಿಭಟನೆ: ತೀವ್ರಗೊಂಡ ಬಜರಂಗದಳದ ‘ಆಹಾರ ಭಯೋತ್ಪಾದನೆ’

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಮಾಂಸ ಸಾಗಿಸುತ್ತಿದ್ದ ಬಿರಿಯಾನಿ ಅಂಗಡಿ ಮಾಲೀಕರೊಬ್ಬರ ಮೇಲೆ ಮೂವರು ಯುವಕರು ಹಲ್ಲೆ ನಡೆಸಿ, ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ....

ಟಿಎಂಸಿ ಹೆಸರು – ಚಿಹ್ನೆ ‘ಫ್ರೀಜ್‌’ ಪ್ರಶ್ನಿಸಿ ಮಮತಾ ಬ್ಯಾನರ್ಜಿ ಅರ್ಜಿ; ತುರ್ತು ವಿಚಾರಣೆಗೆ ಒಪ್ಪಿಗೆ ಸುಪ್ರೀಂ ಕೋರ್ಟ್‌

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಎರಡು ಬಣಗಳ ನಡುವಿನ ವಿವಾದದ ನಡುವೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಫ್ರೀಜ್ ಮಾಡಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ...

ಸೌಜನ್ಯ ಪ್ರಕರಣ: ಸುಪ್ರೀಂ ಆದೇಶದ ಪ್ರತಿ ಸಿಕ್ಕ ತಕ್ಷಣ SIT ರಚನೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅವರ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮರುತನಿಖೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅಧಿಕೃತ ಆದೇಶದ ಪ್ರತಿ ಕೈ ಸೇರಿದ ತಕ್ಷಣ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ...

ದೆಹಲಿ| ಸಾಮೂಹಿಕ ಮತಾಂತರ ಆರೋಪ; ಕ್ರಿಶ್ಚಿಯನ್ನರ ವಾರಾಂತ್ಯದ ಪ್ರಾರ್ಥನೆಗೆ ಅಡ್ಡಿಪಡಿಸಿದ ಹಿಂದುತ್ವ ಗುಂಪು

ದೆಹಲಿಯ ಜನಕಪುರಿಯಲ್ಲಿರುವ ಹಯಾತ್ ಸೆಂಟ್ರಿಕ್ ಹೋಟೆಲ್‌ನಲ್ಲಿ ನಡೆಯುತ್ತಿದ್ದ (ಸೆಪ್ಟೆಂಬರ್ 20 ರಂದು) ಕ್ರಿಶ್ಚಿಯನ್ನರ ಭಾನುವಾರದ ವಾಡಿಕೆಯ ಪ್ರಾರ್ಥನಾ ಸಭೆಗೆ ನುಗ್ಗಿದ ಹಿಂದುತ್ವ ಗುಂಪು ಪ್ರಾರ್ಥನೆಗೆ ಅಡ್ಡಪಿಡಿಸಿದೆ. ಹಿಂದೂಗಳ ಸಾಮೂಹಿಕ ಮತಾಂತರ ನಡೆಯುತ್ತಿದೆ...

ಕಸ್ತೂರಿ ರಂಗನ್ ವರದಿ ತಿರಸ್ಕಾರ, ಮಲೆನಾಡಿನ ಜನರ ಬದುಕಿಗೆ ಶಾಶ್ವತ ಪರಿಹಾರ : ಡಾ. ಜಿ. ಪರಮೇಶ್ವರ್

ಪಶ್ಚಿಮ ಘಟ್ಟದ ಜೀವ ವೈವಿಧ್ಯ ಮತ್ತು ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಕೇಂದ್ರ ಸರ್ಕಾರವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಗಳನ್ನು ಪದೇ ಪದೇ ಹೊರಡಿಸುತ್ತಿರುವುದು ಮಲೆನಾಡಿನ ಜನರ ನೆಮ್ಮದಿ ಕೆಡಿಸಿದೆ. ರಾಜ್ಯ ಸರ್ಕಾರವು...

‘ಇದು ಸಂಸ್ಕೃತಿಯಲ್ಲ, ಪಿತೃಪ್ರಭುತ್ವ’: ಜಮುಯಿ ಅಪ್ರಾಪ್ತ ಬಾಲಕಿ ಮೇಲಿನ ಕಿರುಕುಳದ ವಿಡಿಯೋಗೆ ರಾಹುಲ್ ಗಾಂಧಿ ಆಕ್ರೋಶ 

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಅಪ್ರಾಪ್ತ ಬಾಲಕ ಮತ್ತು ಬಾಲಕಿಯನ್ನು ರಸ್ತೆಯಲ್ಲಿ ತಡೆದು ಪುರುಷರ ಗುಂಪೊಂದು ಕಿರುಕುಳ ನೀಡಿದೆ ಎಂದು ಆರೋಪಿಸಲಾದ ವೈರಲ್ ವಿಡಿಯೋ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ...

ನಕಲಿ ಔಷಧಗಳ ವಿತರಣೆ ಜಾಲದೊಂದಿಗೆ ನಂಟು; 16 ಫಾರ್ಮಸಿಗಳ ಪರವಾನಗಿ ರದ್ದು

ಬಿಡದಿಯ ಫಾರ್ಮ್‌ಹೌಸ್ (ತೋಟದ ಮನೆ) ಒಂದರಲ್ಲಿ ಪತ್ತೆಯಾದ ನಕಲಿ ಔಷಧಗಳ ವಿತರಣೆಯ ಜಾಲದೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್‌ಡಿಎ) ಸಂಸ್ಥೆಯು 16 ಫಾರ್ಮಸಿಗಳ...

ಚಾಮರಾಜನಗರ: ಬಂಡಿ ಪೂಜೆ ಹಬ್ಬದಲ್ಲಿ ದಲಿತ ಮಕ್ಕಳಿಗೆ ಅಸ್ಪೃಶ್ಯತೆ ಆಚರಣೆ – ಊಟ ನೀಡದೆ ಅಪಮಾನಿಸಿದ ಆರೋಪ

ಸಮಾಜದಲ್ಲಿ ಜಾತಿಪದ್ದತಿ ಇಂದಿಗೂ ಜೀವಂತವಾಗಿದೆಯೇ ಎಂದು ಪ್ರಶ್ನಿಸುವವರಿಗೇನು ಕಡಿಮೆ ಇಲ್ಲ.ಆದರೆ ಜಾತಿ ಕಾರಣಕ್ಕೆ ಪುಟಾಣಿ ಮಕ್ಕಳಿಗೆ ಊಟವನ್ನು ನಿರಾಕರಿಸಿ ಅಸ್ಪೃಶ್ಯತೆ ಆಚರಣೆ ಮಾಡಿರುವುದು ನಾಗರಿಕ ಸಮಾಜ ನಿಜಕ್ಕೂ ತಲೆತಗ್ಗಿಸುವಂತೆ ಮಾಡಿದೆ. ಹೌದು ಚಾಮರಾಜನಗರ ಜಿಲ್ಲೆಯ...

ಥಾಣೆ ಗಣೇಶೋತ್ಸವ 2026: ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ವೇಳೆ 2 ಗುಂಪುಗಳ ಘರ್ಷಣೆ, ಬಿಜೆಪಿ ಮಾಜಿ ಉಪಮೇಯರ್ ಸೇರಿ 70-80 ಜನರ ವಿರುದ್ಧ ಪ್ರಕರಣ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಉಪಮೇಯರ್ ಹಾಗೂ ಹಾಲಿ ಕಾರ್ಪೊರೇಟರ್ ಉಪೇಕ್ಷಾ ಭೋಯಿರ್...