Homeಮುಖಪುಟಉತ್ತರ ಪ್ರದೇಶ: ದಲಿತ ಯುವಕನೊಂದಿಗೆ ಸಂಬಂಧ ಹೊಂದಿದ್ದಾಳೆಂದು ತನ್ನ ಅಕ್ಕನನ್ನೇ ಕೊಲೆಗೈದ ಅಪ್ರಾಪ್ತ ಬಾಲಕ

ಉತ್ತರ ಪ್ರದೇಶ: ದಲಿತ ಯುವಕನೊಂದಿಗೆ ಸಂಬಂಧ ಹೊಂದಿದ್ದಾಳೆಂದು ತನ್ನ ಅಕ್ಕನನ್ನೇ ಕೊಲೆಗೈದ ಅಪ್ರಾಪ್ತ ಬಾಲಕ

- Advertisement -
- Advertisement -

15 ವರ್ಷದ ಬಾಲಕಿಯೊಬ್ಬಳು ದಲಿತ ಯುವಕನೊಂದಿಗೆ ಸಂಬಂಧ ಹೊಂದಿದ್ದಾಳೆ ಎನ್ನುವ ಕಾರಣಕ್ಕೆ ಆಕೆಯನ್ನು ಅವರ ತಮ್ಮನೇ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.

ಈ ಘಟನೆ ಆಗಸ್ಟ್ 25ರಂದು ನಡೆದಿದ್ದು, ಮರುದಿನ 14 ವರ್ಷದ ಬಾಲಕ ಪೊಲೀಸರ ಮುಂದೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪ್ರಾಪ್ತ ಬಾಲಕಿಯು ಒಬಿಸಿ ವರ್ಗಕ್ಕೆ ಸೇರಿದವಳಾಗಿದ್ದು, ದಲಿತ ಹುಡುಗನೊಂದಿಗಿನ ಸಂಬಂಧವನ್ನು ಆಕೆಯ ಮನೆಯವರು ವಿರೋಧಿಸಿದ್ದರು ಎಂದು ತಿಳಿದುಬಂದಿದೆ.

”ಶುಕ್ರವಾರ ರಾತ್ರಿ, ತನ್ನ ಸಹೋದರಿ ದಲಿತ ಯುವಕರೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿರುವುದನ್ನು ನೋಡಿದ್ದೇನೆ ಎಂದು ಬಾಲಕ ತನ್ನ ಕುಟುಂಬ ಸದಸ್ಯರಿಗೆ ತಿಳಿಸಿದ್ದಾನೆ. ಕುಟುಂಬದ ಸದಸ್ಯರು ಹುಡುಗಿಯನ್ನು ಪ್ರಶ್ನಿಸಿದ್ದಾರೆ, ಅವಳು ತನ್ನ ಬಳಿ ಯಾವುದೇ ಸೆಲ್‌ಫೋನ್ ಇಲ್ಲ ಎಂದು ಹೇಳಿದ್ದಾಳೆ. ನಂತರ ಹುಡುಗಿಯ ತಾಯಿ ಅವಳ ಬಟ್ಟೆಗಳಲ್ಲಿ ಹುಡುಕಿ ಮೊಬೈಲ್‌ನ್ನು ಕಿತ್ತುಕೊಂಡಿದ್ದಾರೆ. ಆನಂತರ ಕುಟುಂಬದ ಸದಸ್ಯರು ಆಕೆಯ ಕೈಗಳನ್ನು ಕಟ್ಟಿ ಥಳಿಸಲು ಆರಂಭಿಸಿದ್ದಾರೆ. ಆಕೆಯ ಸಹೋದರರು ಕೊಡಲಿ ಮತ್ತು ಸುತ್ತಿಗೆಯಿಂದ ಹೊಡೆದಿದ್ದಾರೆ ಎಂದು” ಎಂದು ಸ್ಥಳೀಯ ಪೋಲೀಸ್ ಉಸ್ತುವಾರಿ ಸ್ಟೇಷನ್ ಹೌಸ್ ಹೇಳಿದ್ದಾರೆ.

ಮರುದಿನ ಬೆಳಗ್ಗೆ ಅಪ್ರಾಪ್ತ ಸಹೋದರ ಪೊಲೀಸ್ ಠಾಣೆಗೆ ಬಂದು ತನ್ನ ಅಕ್ಕನನ್ನು ಕೊಂದಿರುವುದಾಗಿ ಹೇಳಿದ್ದಾನೆ. ಪೊಲೀಸ್ ತಂಡವು ಬಾಲಕಿಯ ಮನೆಗೆ ತೆರಳಿ ಶವವನ್ನು ಪರೀಕ್ಷಗೆ ಕಳುಹಿಸಿದ್ದಾರೆ. ಕುಟುಂಬದ ಇತರ ಮೂವರು ಸದಸ್ಯರು – ಬಾಲಕನ ತಂದೆ, ತಾಯಿ ಮತ್ತು 19 ವರ್ಷದ ಸಹೋದರನನ್ನು ಸಹ ಪೊಲೀಸರು ಬಂಧಿಸಿದ್ದಾರೆ.

”ಬಾಲಕನ ತಂದೆ ಮತ್ತು ಹಿರಿಯ ಸಹೋದರ ತಪ್ಪೊಪ್ಪಿಕೊಂಡಿದ್ದಾರೆ. ಅಪ್ರಾಪ್ತ ಬಾಲಕನನ್ನು ಬಾಲನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗುವುದು” ಎಂದು ಪೊಲೀಸ್ ವರಿಷ್ಠಾಧಿಕಾರಿ ಬ್ರಿಜೇಶ್ ಕುಮಾರ್ ಶ್ರೀವಾಸ್ತವ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...