Homeಮುಖಪುಟಯುಪಿ: ಅಪಹರಣದ ಆರೋಪದ ಮೇಲೆ ಬಂಧಿತನಾಗಿದ್ದ 16 ವರ್ಷದ ಬಾಲಕ ಪೊಲೀಸ್ ಕಸ್ಟಡಿಯಲ್ಲಿ ಸಾವು

ಯುಪಿ: ಅಪಹರಣದ ಆರೋಪದ ಮೇಲೆ ಬಂಧಿತನಾಗಿದ್ದ 16 ವರ್ಷದ ಬಾಲಕ ಪೊಲೀಸ್ ಕಸ್ಟಡಿಯಲ್ಲಿ ಸಾವು

- Advertisement -
- Advertisement -

ಬಾಲಕಿಯನ್ನು ಅಪಹರಿಸಿದ ಆರೋಪದ ಮೇಲೆ ಬಂಧಿತನಾಗಿದ್ದ 16 ವರ್ಷದ ಬಾಲಕ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಸಾವಿನ ಹಿನ್ನೆಲೆಯಲ್ಲಿ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಹುಡುಗ ಬಿಜ್ನೋರ್‌ನ ಹುಡುಗಿಯೊಂದಿಗೆ ಓಡಿಹೋಗಿದ್ದನೆಂದು ವರದಿಯಾಗಿದೆ. ನಂತರ ಆಕೆಯ ಕುಟುಂಬವು ಭಾನುವಾರ ಬಿಜ್ನೋರ್‌ನ ಸುಹೋರಾ ಪೊಲೀಸ್ ಠಾಣೆಯಲ್ಲಿ ಅಪಹರಣದ ದೂರು ದಾಖಲಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಭಾನುವಾರ ರಾತ್ರಿ ಅಂಬಾಲಾದಲ್ಲಿ ಪೊಲೀಸ್ ತಂಡವು ಜೋಡಿಯನ್ನು ಪತ್ತೆ ಮಾಡಿದೆ ಎಂದು ಬಿಜ್ನೋರ್ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಹೇಳಿದ್ದಾರೆ. ಬಿಜ್ನೋರ್‌ಗೆ ಹೋಗುವ ಮಾರ್ಗಮಧ್ಯೆ, ಸಬ್‌ಇನ್‌ಸ್ಪೆಕ್ಟರ್ ಸುನೀಲ್ ಕುಮಾರ್ ಅವರನ್ನು ಶಾಮ್ಲಿಯಲ್ಲಿರುವ ತಮ್ಮ ಮನೆಯಲ್ಲಿ ಅಕ್ರಮವಾಗಿ ಇರಿಸಿದ್ದರು, ಅಲ್ಲಿ ಬಾಲಕ ಸಾವನ್ನಪ್ಪಿದ್ದಾನೆ ಎಂದು ಅವರು ಹೇಳಿದರು.

ಸಾವಿನ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಬಾಲಕನ ಶವವನ್ನು ಶಾಮ್ಲಿಯಲ್ಲಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಸರ್ಕಲ್ ಆಫೀಸ್ ಶ್ಯಾಮ್ ಸಿಂಗ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇನ್ನೂ ಯಾವುದೂ ಖಚಿತವಾಗಿಲ್ಲವಾದರೂ, ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.

ಸ್ಥಳೀಯ ಎಸ್‌ಎಚ್‌ಒ ಅವನೀಶ್ ಕುಮಾರ್, ಸಬ್ ಇನ್‌ಸ್ಪೆಕ್ಟರ್ ಸುನೀಲ್ ಕುಮಾರ್, ಮಹಿಳಾ ಕಾನ್‌ಸ್ಟೆಬಲ್ ಅನು ಮತ್ತು ಹೆಡ್ ಕಾನ್‌ಸ್ಟೆಬಲ್ ರಾಜೀವ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

ಇದನ್ನೂ ಓದಿ; ತಮಿಳುನಾಡು| ಕಾರ್ಮಿಕ ಹಕ್ಕು ವಿಚಾರದಲ್ಲಿ ಕೇಂದ್ರದ ಬಿಜೆಪಿಗೂ, ರಾಜ್ಯದ ಡಿಎಂಕೆಗೂ ಯಾವುದೇ ವ್ಯತ್ಯಾಸವಿಲ್ಲ : ನ್ಯಾ. ಚಂದ್ರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...